ಟೆಸ್ಲಾ ಕಂಪನಿಯ ಕಾರುಗಳಿಗೂ ವಿನಾಯಿತಿ ನೀಡಲು ಮುಂದಾದ ಕೇಂದ್ರ ಸರ್ಕಾರ

ಭಾರತದಲ್ಲಿ ಐಷಾರಾಮಿ ಟೆಸ್ಲಾ ಎಲೆಕ್ಟ್ರಿಕ್ ಕಾರು ಬಿಡುಗಡೆಯಾಗುವ ಬಗ್ಗೆ ಹಲವು ದಿನಗಳಿಂದ ಸುದ್ದಿಗಳು ಹರಿದಾಡುತ್ತಿವೆ. ಇತ್ತೀಚೆಗೆ ಟೆಸ್ಲಾ ಕಂಪನಿ ಸಿಇಒ ಎಲಾನ್ ಮಸ್ಕ್ ಟ್ವಿಟರ್ ಮೂಲಕ ಭಾರತದಲ್ಲಿ ಕಾರು ಬಿಡುಗಡೆಗೊಳಿಸುವ ಬಗ್ಗೆ ಮಾಹಿತಿ ನೀಡಿದ್ದರು.

ಟೆಸ್ಲಾ ಕಂಪನಿಯ ಕಾರುಗಳಿಗೂ ವಿನಾಯಿತಿ ನೀಡಲು ಮುಂದಾದ ಕೇಂದ್ರ ಸರ್ಕಾರ

ಗಮನಿಸಬೇಕಾದ ಸಂಗತಿಯೆಂದರೆ ಟೆಸ್ಲಾ ಕಂಪನಿಯು ಈ ವರ್ಷದ ಜನವರಿಯಲ್ಲಿ ತನ್ನ ಕಚೇರಿಯನ್ನು ನಮ್ಮ ಬೆಂಗಳೂರಿನಲ್ಲಿ ನೋಂದಾಯಿಸಿತ್ತು. ಭಾರತೀಯ ಗ್ರಾಹಕರು ಟೆಸ್ಲಾ ಕಾರು ಭಾರತದಲ್ಲಿ ಬಿಡುಗಡೆಯಾಗುವುದನ್ನು ಎದುರು ನೋಡುತ್ತಿದ್ದಾರೆ.

ಟೆಸ್ಲಾ ಕಂಪನಿಯ ಕಾರುಗಳಿಗೂ ವಿನಾಯಿತಿ ನೀಡಲು ಮುಂದಾದ ಕೇಂದ್ರ ಸರ್ಕಾರ

ಟೆಸ್ಲಾ ಕಂಪನಿಯ ಮಾಡೆಲ್ 3 ಕಾರ್ ಅನ್ನು ಭಾರತದ ರಸ್ತೆಗಳಲ್ಲಿ ಹಲವು ಬಾರಿ ಪರೀಕ್ಷಿಸಲಾಗಿದೆ. ಇತ್ತೀಚೆಗೆ ಎಲಾನ್ ಮಸ್ಕ್'ರವರು ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದರು.

ಟೆಸ್ಲಾ ಕಂಪನಿಯ ಕಾರುಗಳಿಗೂ ವಿನಾಯಿತಿ ನೀಡಲು ಮುಂದಾದ ಕೇಂದ್ರ ಸರ್ಕಾರ

ಭಾರತದಲ್ಲಿ ಟೆಸ್ಲಾ ಕಂಪನಿಯ ಕಾರುಗಳಿಗೆ ವಿಶ್ವದಲ್ಲೇ ಅತಿ ಹೆಚ್ಚು ಆಮದು ಸುಂಕ ವಿಧಿಸಲಾಗುತ್ತಿದೆ ಎಂದು ಎಲಾನ್ ಮಸ್ಕ್ ಟ್ವೀಟ್ ಮಾಡುವ ಮೂಲಕ ಮಾಹಿತಿ ನೀಡಿದ್ದರು. ಟೆಸ್ಲಾ ಕಂಪನಿಯ ಕಾರುಗಳು ದುಬಾರಿ ಬೆಲೆಯನ್ನು ಹೊಂದಿವೆ.

ಟೆಸ್ಲಾ ಕಂಪನಿಯ ಕಾರುಗಳಿಗೂ ವಿನಾಯಿತಿ ನೀಡಲು ಮುಂದಾದ ಕೇಂದ್ರ ಸರ್ಕಾರ

ಟೆಸ್ಲಾ ಕಂಪನಿಯ ಕಾರುಗಳ ಮೇಲೆ ವಿಧಿಸಲಾಗುವ ಆಮದು ಸುಂಕವನ್ನು ಕಡಿಮೆ ಮಾಡಲು ಪರಿಗಣಿಸಬಹುದು ಎಂದು ಕೇಂದ್ರ ಸರ್ಕಾರವು ಹೇಳಿದೆ. ಇದರಿಂದ ಟೆಸ್ಲಾ ಎಲೆಕ್ಟ್ರಿಕ್ ಕಾರುಗಳ ಮಾರಾಟವು ಶೀಘ್ರದಲ್ಲೇ ಭಾರತದಲ್ಲಿ ಆರಂಭವಾಗಬಹುದು ಎಂದು ನಿರೀಕ್ಷಿಸಲಾಗಿದೆ.

ಟೆಸ್ಲಾ ಕಂಪನಿಯ ಕಾರುಗಳಿಗೂ ವಿನಾಯಿತಿ ನೀಡಲು ಮುಂದಾದ ಕೇಂದ್ರ ಸರ್ಕಾರ

ಎಲಾನ್ ಮಸ್ಕ್'ರವರು ಭಾರತದಲ್ಲಿ ಹೆಚ್ಚಿನ ಆಮದು ಸುಂಕವನ್ನು ವಿಧಿಸುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ್ದರು. ಟೆಸ್ಲಾ ಕಾರುಗಳು ಭಾರತದಲ್ಲಿಯೇ ಉತ್ಪಾದನೆಯಾದಾಗ ಮಾತ್ರ ಭಾರತೀಯ ಮಾರುಕಟ್ಟೆಗೆ ಪ್ರವೇಶಿಸುವ ಆಲೋಚನೆಯನ್ನು ಪರಿಗಣಿಸಬಹುದು ಎಂದು ಕಂಪನಿ ಹೇಳಿದೆ.

ಟೆಸ್ಲಾ ಕಂಪನಿಯ ಕಾರುಗಳಿಗೂ ವಿನಾಯಿತಿ ನೀಡಲು ಮುಂದಾದ ಕೇಂದ್ರ ಸರ್ಕಾರ

ತಮ್ಮ ಕಾರುಗಳನ್ನು ಐಷಾರಾಮಿ ಕಾರುಗಳಂತೆ ಪರಿಗಣಿಸಬಾರದು ಎಂದು ಟೆಸ್ಲಾ ಕಂಪನಿಯು ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ಎಕನಾಮಿಕ್ ಟೈಮ್ಸ್'ಗೆ ಮಾಹಿತಿ ನೀಡಿದ್ದಾರೆ.

ಟೆಸ್ಲಾ ಕಂಪನಿಯ ಕಾರುಗಳಿಗೂ ವಿನಾಯಿತಿ ನೀಡಲು ಮುಂದಾದ ಕೇಂದ್ರ ಸರ್ಕಾರ

ಈ ಬಗ್ಗೆ ಮಾತನಾಡಿರುವ ಅವರು, ಟೆಸ್ಲಾ ಕಂಪನಿಯು ಭಾರತದಲ್ಲಿ ಉತ್ಪಾದನಾ ಘಟಕವನ್ನು ಸ್ಥಾಪಿಸುವುದನ್ನು ಪರಿಗಣಿಸಲು ನಾವು ಸಿದ್ಧರಿದ್ದೇವೆ.ಆದರೆ ಈ ವಿಷಯದ ಬಗ್ಗೆ ತೆಗೆದುಕೊಳ್ಳುವ ಯಾವುದೇ ನಿರ್ಧಾರವು ಒಂದು ನಿರ್ದಿಷ್ಟ ಕಂಪನಿಗೆ ಮಾತ್ರವಲ್ಲದೆ ಇಡೀ ವಲಯಕ್ಕೆ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ.

ಟೆಸ್ಲಾ ಕಂಪನಿಯ ಕಾರುಗಳಿಗೂ ವಿನಾಯಿತಿ ನೀಡಲು ಮುಂದಾದ ಕೇಂದ್ರ ಸರ್ಕಾರ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇವುಗಳಲ್ಲಿ ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳಿಗೆ ಸಬ್ಸಿಡಿ ನೀಡುವುದು ಸಹ ಸೇರಿದೆ.

ಟೆಸ್ಲಾ ಕಂಪನಿಯ ಕಾರುಗಳಿಗೂ ವಿನಾಯಿತಿ ನೀಡಲು ಮುಂದಾದ ಕೇಂದ್ರ ಸರ್ಕಾರ

ಎಲೆಕ್ಟ್ರಿಕ್ ವಾಹನಗಳ ಮೇಲಿನ ಸರಕು ಮತ್ತು ಸೇವಾ ತೆರಿಗೆಯನ್ನು (ಜಿಎಸ್‌ಟಿ) 12% ರಿಂದ 5% ಗಳಿಗೆ ಇಳಿಸಲಾಗಿದೆ. ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಸ್ಥಳೀಯ ಉತ್ಪಾದನೆಗೆ ಉತ್ತೇಜನ ನೀಡುತ್ತಿದೆ.

ಟೆಸ್ಲಾ ಕಂಪನಿಯ ಕಾರುಗಳಿಗೂ ವಿನಾಯಿತಿ ನೀಡಲು ಮುಂದಾದ ಕೇಂದ್ರ ಸರ್ಕಾರ

ಇದರ ಜೊತೆಗೆ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸುವವರಿಗೆ ವಿನಾಯಿತಿಯನ್ನು ಸಹ ನೀಡುತ್ತಿದೆ. ಆದರೆ ಆಮದು ಮಾಡಿದ ವಾಹನಗಳನ್ನು ಮಾರಾಟ ಮಾಡಲು ಅಥವಾ ಖರೀದಿಸಲು ಯಾವುದೇ ಪ್ರೋತ್ಸಾಹವನ್ನು ನೀಡುತ್ತಿಲ್ಲ.

Most Read Articles

Kannada
Read more on ಟೆಸ್ಲಾ tesla
English summary
Union government plans to offer incentives to tesla electric cars. Read in Kannada.
Story first published: Wednesday, July 28, 2021, 20:50 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X