ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದ ಕೇಂದ್ರ ಸಚಿವ

ಕೇಂದ್ರ ಸರ್ಕಾರವು ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಕೇಂದ್ರ ಸಚಿವ ಆರ್‌ಕೆ ಸಿಂಗ್ ರವರು ಈಗ ಕೇಂದ್ರ ಸಚಿವರು ಹಾಗೂ ರಾಜ್ಯಗಳ ಮುಖ್ಯ ಮಂತ್ರಿಗಳಿಗೆ ಹೊಸ ಮನವಿ ಮಾಡಿದ್ದಾರೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದ ಕೇಂದ್ರ ಸಚಿವ

ಕೇಂದ್ರ ಸಚಿವರು ಹಾಗೂ ರಾಜ್ಯಗಳ ಮುಖ್ಯ ಮಂತ್ರಿಗಳು ತಮ್ಮ ಅಧಿಕೃತ ಕರ್ತವ್ಯಗಳಿಗಾಗಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ. ಆರ್‌ಕೆ ಸಿಂಗ್ ಅವರು ತಮ್ಮ ಕ್ಯಾಬಿನೆಟ್ ಸಹೋದ್ಯೋಗಿಗಳು ಹಾಗೂ ಎಲ್ಲಾ ರಾಜ್ಯಗಳ ಮುಖ್ಯ ಮಂತ್ರಿಗಳಿಗೆ ಈ ಸಂಬಂಧ ಪತ್ರ ಬರೆದಿದ್ದಾರೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದ ಕೇಂದ್ರ ಸಚಿವ

ವಿದ್ಯುತ್ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಆರ್‌ಕೆ ಸಿಂಗ್, ಎಲ್ಲಾ ಕೇಂದ್ರ ಮಂತ್ರಿಗಳು, ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತದ ಮುಖ್ಯ ಮಂತ್ರಿಗಳಿಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಸರ್ಕಾರಗಳು ಯೋಜನೆ ರೂಪಿಸುವಂತೆ ಪತ್ರ ಬರೆದಿದ್ದಾರೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದ ಕೇಂದ್ರ ಸಚಿವ

ವಿದ್ಯುತ್ ಹಾಗೂ ನವೀಕರಿಸಬಹುದಾದ ಇಂಧನ ಇಲಾಖೆಯು ಬಿಡುಗಡೆಗೊಳಿಸಿರುವ ಪತ್ರಿಕಾ ಹೇಳಿಕೆಯಲ್ಲಿ ಈ ಬಗ್ಗೆ ಹೇಳಲಾಗಿದೆ. ಈಗ ಭಾರತದ ಬಹುತೇಕ ಎಲ್ಲಾ ಸರ್ಕಾರಿ ಇಲಾಖೆಗಳು ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಹೊಂದಿರುವ ವಾಹನಗಳನ್ನು ಬಳಸುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದ ಕೇಂದ್ರ ಸಚಿವ

ಈ ವಾಹನಗಳನ್ನು ಎಲೆಕ್ಟ್ರಿಕ್ ವಾಹನಗಳಿಗೆ ಬದಲಿಸುವಂತೆ ಕೇಂದ್ರ ಸಚಿವರು ಹಾಗೂ ಮುಖ್ಯ ಮಂತ್ರಿಗಳು ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸಚಿವ ಆರ್‌ಕೆ ಸಿಂಗ್ ಮನವಿ ಮಾಡಿದ್ದಾರೆ. ಕೇಂದ್ರ ಸಚಿವರು ಹಾಗೂ ರಾಜ್ಯಗಳ ಮುಖ್ಯ ಮಂತ್ರಿಗಳು ತಮ್ಮ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಇಲಾಖೆಗಳು ಹಾಗೂ ಅಧಿಕಾರಿಗಳಿಗೆ ಈ ಬಗ್ಗೆ ಸಲಹೆ ನೀಡಬೇಕು ಎಂಬುದು ಅವರ ಕೋರಿಕೆಯಾಗಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದ ಕೇಂದ್ರ ಸಚಿವ

ಕೇಂದ್ರ ಸಚಿವ ಆರ್‌ಕೆ ಸಿಂಗ್ ರವರು ಈ ರೀತಿ ಮನವಿ ಮಾಡುವ ಮುನ್ನವೇ ಭಾರತದ ವಿವಿಧ ರಾಜ್ಯಗಳ ಸರ್ಕಾರಿ ಇಲಾಖೆಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಹೊಂದಿರುವ ವಾಹನಗಳ ಬದಲಿಗೆ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗುತ್ತಿತ್ತು. ಕೇಂದ್ರ ಸಚಿವರ ಮನವಿಯ ನಂತರ ಈ ಕಾರ್ಯವು ಮತ್ತಷ್ಟು ವೇಗವನ್ನು ಪಡೆದುಕೊಳ್ಳುವ ನಿರೀಕ್ಷೆಗಳಿವೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದ ಕೇಂದ್ರ ಸಚಿವ

ಸಚಿವರ ಈ ಕ್ರಮವು ಸಾರ್ವಜನಿಕರಿಗೆ ಒಂದು ಪೂರ್ವ ನಿದರ್ಶನವನ್ನು ನೀಡಲಿದೆ. ಈ ಕ್ರಮವು ಸಾರ್ವಜನಿಕರಲ್ಲಿ ತಾವು ಸಹ ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಗಬೇಕು ಎಂಬ ಅಭಿಪ್ರಾಯವನ್ನು ಸೃಷ್ಟಿಸುವ ನಿರೀಕ್ಷೆಗಳಿವೆ. ಕೇಂದ್ರ ಸರ್ಕಾರವು ಕಚ್ಚಾ ತೈಲಕ್ಕಾಗಿ ವಿದೇಶಗಳ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಮುಂದಾಗುತ್ತಿದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದ ಕೇಂದ್ರ ಸಚಿವ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೇರಿದಂತೆ ಹಲವರು ದೀರ್ಘಕಾಲದಿಂದ ಈ ಬಗ್ಗೆ ಒತ್ತಿ ಹೇಳುತ್ತಿದ್ದಾರೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುವುದರಿಂದ ಭಾರತವು ವಿದೇಶದಿಂದ ಆಮದು ಮಾಡಿಕೊಳ್ಳುವ ಕಚ್ಚಾ ತೈಲದ ಆಮದು ಪ್ರಮಾಣವನ್ನು ಕಡಿಮೆ ಮಾಡಬಹುದು.

ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದ ಕೇಂದ್ರ ಸಚಿವ

ಇದರಿಂದ ವಾಯು ಮಾಲಿನ್ಯದ ಸಮಸ್ಯೆಯನ್ನು ಸಹ ನಿಯಂತ್ರಿಸಬಹುದು. ಇದರ ಜೊತೆಗೆ ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳನ್ನು ನಿರ್ವಹಿಸುವುದಕ್ಕಿಂತ ಎಲೆಕ್ಟ್ರಿಕ್ ವಾಹನಗಳನ್ನು ನಿರ್ವಹಿಸುವುದು ಕಡಿಮೆ ವೆಚ್ಚದಾಯಕವಾಗಿದೆ. ಸಾರ್ವಜನಿಕರಲ್ಲಿ ಅನೇಕರು ಈಗ ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಯಿಸಲು ಆಸಕ್ತಿ ತೋರುತ್ತಿದ್ದಾರೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದ ಕೇಂದ್ರ ಸಚಿವ

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳು ಗಗನಕ್ಕೇರಿವೆ. ಇದರಿಂದ ವಾಹನ ಸವಾರರು ಅನಿವಾರ್ಯವಾಗಿ ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಹಾಗಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುಂಬರುವ ವರ್ಷಗಳಲ್ಲಿ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಮಾರಾಟವು ಗಮನಾರ್ಹವಾಗಿ ಹೆಚ್ಚಾಗುತ್ತದೆ ಎಂದು ನಿರೀಕ್ಷಿಸುತ್ತಿವೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದ ಕೇಂದ್ರ ಸಚಿವ

ಭಾರತದಲ್ಲಿ ಎಲೆಕ್ಟ್ರಿಕ್ ದ್ವಿ ಚಕ್ರ ವಾಹನಗಳು ಅದರಲ್ಲೂ ವಿಶೇಷವಾಗಿ ಎಲೆಕ್ಟ್ರಿಕ್ ಸ್ಕೂಟರ್‌ಗಳ ಮಾರಾಟವು ಹೆಚ್ಚುತ್ತಿದೆ. ಇದರ ಜೊತೆಗೆ ದೇಶಿಯ ಮಾರುಕಟ್ಟೆಯಲ್ಲಿ ವಿವಿಧ ಎಲೆಕ್ಟ್ರಿಕ್ ಕಾರುಗಳನ್ನು ಸಹ ಬಿಡುಗಡೆಗೊಳಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಭಾರತದ ರಸ್ತೆಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚಾಗುವುದು ಖಚಿತ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದ ಕೇಂದ್ರ ಸಚಿವ

ಹಲವು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನ ನೀತಿಯನ್ನು ಜಾರಿಗೊಳಿಸಿವೆ. ಈ ನೀತಿಯನ್ವಯ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಹಲವು ಕೊಡುಗೆಗಳನ್ನು ನೀಡಲಾಗುತ್ತದೆ. ಈ ಕೊಡುಗೆಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ನೋಂದಣಿ ಶುಲ್ಕದಿಂದ ವಿನಾಯಿತಿ, ರಸ್ತೆ ತೆರಿಗೆಯಲ್ಲಿ ವಿನಾಯಿತಿಯಂತಹ ಕೊಡುಗೆಗಳು ಸೇರಿವೆ. ಇದರ ಜೊತೆಗೆ ಕೇಂದ್ರ ಸರ್ಕಾರವು ಸಹ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ತನ್ನ ಫೇಮ್ 2 ಯೋಜನೆಯಡಿಯಲ್ಲಿ ಸಬ್ಸಿಡಿ ನೀಡುತ್ತದೆ.

ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಿಸುವಂತೆ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದ ಕೇಂದ್ರ ಸಚಿವ

ರಾಜ್ಯ ಸರ್ಕಾರಗಳು ಸಹ ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಸಬ್ಸಿಡಿ ನೀಡುತ್ತಿವೆ. ದೆಹಲಿ ರಾಜ್ಯ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನಿಡುವುದರಲ್ಲಿ ಇತರ ಎಲ್ಲಾ ರಾಜ್ಯ ಸರ್ಕಾರಗಳಿಗಿಂತ ಒಂದು ಹೆಜ್ಜೆ ಮುಂದಿದೆ. ದೆಹಲಿಯಲ್ಲಿ ಸಾರ್ವಜನಿಕ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಕೇಂದ್ರಗಳನ್ನು ತೆರೆಯಲು ಕ್ರಮ ಕೈಗೊಳ್ಳಲಾಗಿದೆ. ಇದರ ಜೊತೆಗೆ ದೆಹಲಿಯ ಹಲವು ಇಲಾಖೆಗಳು ಈಗಾಗಲೇ ಎಲೆಕ್ಟ್ರಿಕ್ ವಾಹನಗಳನ್ನು ಬಳಸುತ್ತಿವೆ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Union minister chief ministers to use electric vehicles details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X