2030ರ ವೇಳೆಗೆ ರಸ್ತೆ ಅಪಘಾತಗಳ ಸಂಖ್ಯೆಯನ್ನು ಶೂನ್ಯಕ್ಕಿಳಿಸುವ ಗುರಿ ಹೊಂದಿರುವ ಕೇಂದ್ರ ಸರ್ಕಾರ

ದೇಶದಲ್ಲಿ ಸಂಭವಿಸುವ ರಸ್ತೆ ಅಪಘಾತ ಹಾಗೂ ಸಾವಿನ ಪ್ರಮಾಣವನ್ನು 50%ನಷ್ಟು ಕಡಿಮೆಗೊಳಿಸಲಾಗುವುದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ರಸ್ತೆ ಅಪಘಾತದಲ್ಲಿ ಗಾಯಗೊಳ್ಳುವ ಜನರ ಪ್ರಾಣ ಉಳಿಸುವಲ್ಲಿ ಸರ್ಕಾರ ಯಾವುದೇ ರೀತಿಯ ನಿರ್ಲಕ್ಷ್ಯ ವಹಿಸುತ್ತಿಲ್ಲವೆಂದು ಅವರು ಹೇಳಿದ್ದಾರೆ.

2030ರ ವೇಳೆಗೆ ರಸ್ತೆ ಅಪಘಾತಗಳ ಸಂಖ್ಯೆಯನ್ನು ಶೂನ್ಯಕ್ಕಿಳಿಸುವ ಗುರಿ ಹೊಂದಿರುವ ಕೇಂದ್ರ ಸರ್ಕಾರ

ದೇಶದಲ್ಲಿ ಪ್ರತಿ ದಿನ 415 ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಈ ಅಂಕಿಅಂಶಗಳನ್ನು ಕಡಿಮೆಗೊಳಿಸುವ ಸಲುವಾಗಿ, ರಸ್ತೆ ಸುರಕ್ಷತೆಯ ಬಗ್ಗೆ ಸರ್ಕಾರವು ತನ್ನ ನೀತಿಯಲ್ಲಿ ಸಮಗ್ರ ಬದಲಾವಣೆಯನ್ನು ತರಲಿದೆ. ಜನರ ಜೀವ ಉಳಿಸುವ ಕಾರ್ಯವನ್ನು ಚುರುಕುಗೊಳಿಸುವ ಅವಶ್ಯಕತೆಯಿದೆ ಎಂದು ಗಡ್ಕರಿ ಹೇಳಿದ್ದಾರೆ.

2030ರ ವೇಳೆಗೆ ರಸ್ತೆ ಅಪಘಾತಗಳ ಸಂಖ್ಯೆಯನ್ನು ಶೂನ್ಯಕ್ಕಿಳಿಸುವ ಗುರಿ ಹೊಂದಿರುವ ಕೇಂದ್ರ ಸರ್ಕಾರ

ಕಳೆದ ವರ್ಷ ಕೇಂದ್ರ ಸರ್ಕಾರವು ಸ್ವೀಡನ್‌ನಲ್ಲಿ ನಡೆದಿದ್ದ ಸಮಾವೇಶದಲ್ಲಿ ಭಾಗವಹಿಸಿತ್ತು. ಈ ಸಮಾವೇಶದಲ್ಲಿ 2030ರ ವೇಳೆಗೆ ಭಾರತದಲ್ಲಿ ಶೂನ್ಯ ರಸ್ತೆ ಅಪಘಾತಗಳ ಗುರಿ ಹೊಂದಲಾಗಿದೆ ಎಂದು ಸಚಿವರು ಹೇಳಿದರು.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

2030ರ ವೇಳೆಗೆ ರಸ್ತೆ ಅಪಘಾತಗಳ ಸಂಖ್ಯೆಯನ್ನು ಶೂನ್ಯಕ್ಕಿಳಿಸುವ ಗುರಿ ಹೊಂದಿರುವ ಕೇಂದ್ರ ಸರ್ಕಾರ

ತಮಿಳುನಾಡಿನಲ್ಲಿ ರಸ್ತೆ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಅಪಘಾತ ಹಾಗೂ ಸಾವಿನ ಪ್ರಮಾಣವನ್ನು 53%ನಷ್ಟು ಕಡಿಮೆಗೊಳಿಸಲಾಗಿದೆ ಎಂದು ಅವರು ಹೇಳಿದರು. 2025ಕ್ಕಿಂತ ಮೊದಲು ದೇಶದಲ್ಲಿ ಸಾವು ಹಾಗೂ ಅಪಘಾತಗಳ ಪ್ರಮಾಣವನ್ನು 50%ನಷ್ಟು ಕಡಿಮೆಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ಸಚಿವರು ಹೇಳಿದರು.

2030ರ ವೇಳೆಗೆ ರಸ್ತೆ ಅಪಘಾತಗಳ ಸಂಖ್ಯೆಯನ್ನು ಶೂನ್ಯಕ್ಕಿಳಿಸುವ ಗುರಿ ಹೊಂದಿರುವ ಕೇಂದ್ರ ಸರ್ಕಾರ

ರಸ್ತೆಗಳ ಸ್ಥಿತಿಗತಿಯನ್ನು ತಿಳಿಯಲು ಹಾಗೂ ಅವುಗಳನ್ನು ಸರಿಪಡಿಸಲು ಸರ್ಕಾರವು ರೂ.14,000 ಕೋಟಿಗಳ ಪ್ಯಾಕೇಜ್ ಘೋಷಿಸಲಿದೆ ಎಂದು ಗಡ್ಕರಿ ಹೇಳಿದರು. ವಿಶ್ವ ಬ್ಯಾಂಕ್ ಹಾಗೂ ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಎರಡು ಯೋಜನೆಗೆ ರೂ.7,000 ಕೋಟಿ ನೀಡಲಿವೆ ಎಂದು ಹೇಳಿದರು.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

2030ರ ವೇಳೆಗೆ ರಸ್ತೆ ಅಪಘಾತಗಳ ಸಂಖ್ಯೆಯನ್ನು ಶೂನ್ಯಕ್ಕಿಳಿಸುವ ಗುರಿ ಹೊಂದಿರುವ ಕೇಂದ್ರ ಸರ್ಕಾರ

ಹಣಕಾಸು ಸಚಿವಾಲಯದಿಂದ ಅನುಮೋದನೆ ಪಡೆದ ಕೂಡಲೇ ಈ ಯೋಜನೆಯ ಕಾಮಗಾರಿ ಆರಂಭವಾಗುವ ನಿರೀಕ್ಷೆಗಳಿವೆ. ಈ ಯೋಜನೆಯಲ್ಲಿ ಕೆಟ್ಟ ರಸ್ತೆ ಹಾಗೂ ಅಪಾಯಕಾರಿ ರಸ್ತೆಗಳನ್ನು ಕಂಡುಹಿಡಿಯಲಾಗುತ್ತದೆ.

2030ರ ವೇಳೆಗೆ ರಸ್ತೆ ಅಪಘಾತಗಳ ಸಂಖ್ಯೆಯನ್ನು ಶೂನ್ಯಕ್ಕಿಳಿಸುವ ಗುರಿ ಹೊಂದಿರುವ ಕೇಂದ್ರ ಸರ್ಕಾರ

ಮಾರ್ಚ್ ಅಂತ್ಯದ ವೇಳೆಗೆ ದಿನಕ್ಕೆ 40 ಕಿ.ಮೀ ರಸ್ತೆ ನಿರ್ಮಾಣದ ಗುರಿಯನ್ನು ಸಾಧಿಸಲಾಗುವುದು ಎಂದು ಅವರು ಹೇಳಿದರು. ಈ ಬಾರಿ ನಾವು ರಸ್ತೆ ನಿರ್ಮಾಣದ ದಾಖಲೆಯನ್ನು ಮುರಿದಿದ್ದೇವೆ. ಮಾರ್ಚ್ ಅಂತ್ಯದ ವೇಳೆಗೆ ದಿನಕ್ಕೆ 40 ಕಿ.ಮೀ ರಸ್ತೆ ನಿರ್ಮಾಣದ ಗುರಿಯನ್ನು ತಲುಪುತ್ತೇವೆ ಎಂದು ಗಡ್ಕರಿ ಹೇಳಿದರು.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

2030ರ ವೇಳೆಗೆ ರಸ್ತೆ ಅಪಘಾತಗಳ ಸಂಖ್ಯೆಯನ್ನು ಶೂನ್ಯಕ್ಕಿಳಿಸುವ ಗುರಿ ಹೊಂದಿರುವ ಕೇಂದ್ರ ಸರ್ಕಾರ

ಈ ಸಂದರ್ಭದಲ್ಲಿ ಹಾಜರಿದ್ದ ರಕ್ಷಣಾ ಸಚಿವ ರಾಜನಾಥ್ ಸಿಂಗ್'ರವರು ಮಾತನಾಡಿ, ರಸ್ತೆ ಅಪಘಾತಗಳಿಂದಾಗುವ ಸಾವುಗಳು ದೇಶದ ಆರ್ಥಿಕತೆಯ ಮೇಲೂ ಪರಿಣಾಮ ಬೀರುತ್ತವೆ. ರಾಷ್ಟ್ರೀಯ ರಸ್ತೆ ಸುರಕ್ಷತಾ ತಿಂಗಳಂತಹ ಕಾರ್ಯಕ್ರಮಗಳು ಜನರಲ್ಲಿ ವಿಶ್ವಾಸವನ್ನು ಹೆಚ್ಚಿಸುವುದಲ್ಲದೆ ಜಾಗೃತಿ ಮೂಡಿಸಲು ನೆರವಾಗುತ್ತವೆ ಎಂದು ಹೇಳಿದರು.

2030ರ ವೇಳೆಗೆ ರಸ್ತೆ ಅಪಘಾತಗಳ ಸಂಖ್ಯೆಯನ್ನು ಶೂನ್ಯಕ್ಕಿಳಿಸುವ ಗುರಿ ಹೊಂದಿರುವ ಕೇಂದ್ರ ಸರ್ಕಾರ

ವಿವಿಧ ಕಾರಣಗಳಿಂದ ಪ್ರತಿ ವರ್ಷ ಸುಮಾರು 1.5 ಲಕ್ಷ ಜನರು ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪುತ್ತಿದ್ದಾರೆ ಎಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ರಾಜ್ಯ ಸಚಿವ ವಿ.ಕೆ.ಸಿಂಗ್ ಹೇಳಿದರು. ಸುರಕ್ಷತೆಯನ್ನು ಉತ್ತೇಜಿಸಲು ರಾಷ್ಟ್ರೀಯ ರಸ್ತೆ ಸುರಕ್ಷತಾ ತಿಂಗಳ ಬಳಕೆಯಾಗಬೇಕು ಎಂದು ಅವರು ಹೇಳಿದರು.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

2030ರ ವೇಳೆಗೆ ರಸ್ತೆ ಅಪಘಾತಗಳ ಸಂಖ್ಯೆಯನ್ನು ಶೂನ್ಯಕ್ಕಿಳಿಸುವ ಗುರಿ ಹೊಂದಿರುವ ಕೇಂದ್ರ ಸರ್ಕಾರ

ಹೆಚ್ಚುತ್ತಿರುವ ಅಪಘಾತಗಳನ್ನು ಬಗೆಹರಿಸಲು ಇಲಾಖೆಯು ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಹೇಳಿದರು. ನೀತಿ ಆಯೋಗದ ಸಿಇಒ ಅಮಿತಾಭ್ ಕಾಂತ್ ಮಾತನಾಡಿ ಭಾರತದಲ್ಲಿ 85%ನಷ್ಟು ಜನರು ಹಾಗೂ 65%ನಷ್ಟು ಸರಕುಗಳು ರಸ್ತೆ ಮೂಲಕ ಸಾಗುತ್ತವೆ ಎಂದು ಹೇಳಿದರು.

Most Read Articles

Kannada
English summary
Union Transport Minister assures 50 percent reduction in road accident before 2025. Read in Kannada.
Story first published: Tuesday, January 19, 2021, 19:39 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X