ಭಾರತದ ರಸ್ತೆಗಳು ಯುರೋಪ್ ರಸ್ತೆಗಳಂತಾಗಲಿವೆ ಎಂದ ಸಾರಿಗೆ ಸಚಿವ

ಮುಂದಿನ ಕೆಲವೇ ವರ್ಷಗಳಲ್ಲಿ ಭಾರತದ ರಸ್ತೆಗಳು ಅಮೆರಿಕಾದ ರಸ್ತೆಗಳಿಗೆ ಸಮಾನಾಂತರವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಹೇಳಿದ್ದಾರೆ. ಮುಂದಿನ 3 ವರ್ಷಗಳಲ್ಲಿ ಜಮ್ಮು ಮತ್ತು ಕಾಶ್ಮೀರದ ರಸ್ತೆಗಳು ಪಶ್ಚಿಮ ಯುರೋಪ್‌ನ ರಸ್ತೆಗಳಿಗೆ ಸಮಾನಾಂತರವಾಗಲಿದೆ ಎಂದು ಅವರು ಹೇಳಿದರು.

ಭಾರತದ ರಸ್ತೆಗಳು ಯುರೋಪ್ ರಸ್ತೆಗಳಂತಾಗಲಿವೆ ಎಂದ ಸಾರಿಗೆ ಸಚಿವ

ಜಮ್ಮು ಮತ್ತು ಕಾಶ್ಮೀರದಲ್ಲಿ 25 ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಶಿಲಾನ್ಯಾಸ ಸಮಾರಂಭದಲ್ಲಿ ಸಚಿವ ನಿತಿನ್ ಗಡ್ಕರಿ ಹೇಳಿದರು. ಈ ಯೋಜನೆಗೆ ಅಂದಾಜು ರೂ. 11,721 ಕೋಟಿ ವೆಚ್ಚವಾಗಲಿದೆ. ಈ ಯೋಜನೆಯಡಿಯಲ್ಲಿ 259 ಕಿ.ಮೀ ರಸ್ತೆ ನಿರ್ಮಾಣವಾಗಲಿದೆ. ಈ ಹೆದ್ದಾರಿಗಳು ಹಾಗೂ ಸುರಂಗಗಳು ಅಮೆರಿಕಾದ ಗುಣಮಟ್ಟಕ್ಕೆ ಸಮನಾಗಿರಲಿದ್ದು, ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸೋದ್ಯಮವನ್ನು ಹೆಚ್ಚಿಸುತ್ತವೆ ಎಂದು ಗಡ್ಕರಿ ಹೇಳಿದರು.

ಭಾರತದ ರಸ್ತೆಗಳು ಯುರೋಪ್ ರಸ್ತೆಗಳಂತಾಗಲಿವೆ ಎಂದ ಸಾರಿಗೆ ಸಚಿವ

ಈ ಹೊಸ ರಸ್ತೆಗಳಿಂದ ಜಮ್ಮುವಿನಿಂದ ಶ್ರೀನಗರಕ್ಕೆ ಕೇವಲ 4 ಗಂಟೆಗಳಲ್ಲಿ ಹಾಗೂ ದೆಹಲಿಯಿಂದ ಶ್ರೀನಗರಕ್ಕೆ ಕೇವಲ 8 ಗಂಟೆಗಳಲ್ಲಿ ಪ್ರಯಾಣಿಸಲು ಸಾಧ್ಯವಾಗಲಿದೆ. ಇತರ ರಾಜ್ಯಗಳ ರಾಷ್ಟ್ರೀಯ ಹೆದ್ದಾರಿಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ಇದರಿಂದ ಪ್ರಮುಖ ನಗರಗಳ ನಡುವಿನ ಪ್ರಯಾಣದ ಅವಧಿ ಕಡಿಮೆಯಾಗುತ್ತದೆ ಎಂದು ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಭಾರತದ ರಸ್ತೆಗಳು ಯುರೋಪ್ ರಸ್ತೆಗಳಂತಾಗಲಿವೆ ಎಂದ ಸಾರಿಗೆ ಸಚಿವ

ಸಚಿವ ನಿತಿನ್ ಗಡ್ಕರಿ ರವರು ರಸ್ತೆಗಳ ಬಗ್ಗೆ ಮಾತ್ರವಲ್ಲದೇ ಎಲೆಕ್ಟ್ರಿಕ್ ವಾಹನಗಳ ಬಗ್ಗೆಯೂ ಮಾತನಾಡಿದ್ದಾರೆ. ಅವರ ಪ್ರಕಾರ, ಮುಂದಿನ ಕೆಲವು ವರ್ಷಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೆಲೆ ಪೆಟ್ರೋಲ್ ವಾಹನಗಳ ಬೆಲೆಗೆ ಸಮನಾಗಿರಲಿದೆ. ಇದು ನಿಜವಾದರೆ ಸಾರ್ವಜನಿಕರು ಸಂತಸಪಡುವುದರಲ್ಲಿ ಸಂಶಯವಿಲ್ಲ. ಈಗ ಎಲೆಕ್ಟ್ರಿಕ್ ವಾಹನಗಳು ದುಬಾರಿ ಬೆಲೆಯನ್ನು ಹೊಂದಿವೆ.

ಭಾರತದ ರಸ್ತೆಗಳು ಯುರೋಪ್ ರಸ್ತೆಗಳಂತಾಗಲಿವೆ ಎಂದ ಸಾರಿಗೆ ಸಚಿವ

ಈ ಕಾರಣಕ್ಕೆ ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಹಿಂಜರಿಯುತ್ತಿದ್ದಾರೆ. ಒಂದು ವೇಳೆ ಎಲೆಕ್ಟ್ರಿಕ್ ವಾಹನಗಳ ಬೆಲೆ ಕಡಿಮೆಯಾದರೆ, ಎಲೆಕ್ಟ್ರಿಕ್ ವಾಹನಗಳನ್ನು ಪೆಟ್ರೋಲ್ ವಾಹನಗಳ ರೀತಿಯಲ್ಲಿ ಖರೀದಿಸಲು ಜನರು ಮುಂದಾಗುತ್ತಾರೆ. ಇದರಿಂದ ಕಚ್ಚಾ ತೈಲದ ಮೇಲಿನ ಅವಲಂಬನೆ ಕಡಿಮೆಯಾಗುವುದರ ಜೊತೆಗೆ ಭಾರತದ ಪರಿಸರಕ್ಕೂ ಅನುಕೂಲವಾಗಲಿದೆ.

ಭಾರತದ ರಸ್ತೆಗಳು ಯುರೋಪ್ ರಸ್ತೆಗಳಂತಾಗಲಿವೆ ಎಂದ ಸಾರಿಗೆ ಸಚಿವ

ಈಗ ಭಾರತದ ಹಲವು ನಗರಗಳು ವಾಯು ಮಾಲಿನ್ಯ ಸಮಸ್ಯೆಯನ್ನು ಎದುರಿಸುತ್ತಿವೆ. ಅದರಲ್ಲೂ ದೇಶದ ರಾಜಧಾನಿ ದೆಹಲಿಯಲ್ಲಿ ಪರಿಸ್ಥಿತಿ ಭೀಕರವಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರವು ಕೆಲವು ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾದಂತೆ ವಾಯು ಮಾಲಿನ್ಯದ ಸಮಸ್ಯೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಲಿದೆ.

ಭಾರತದ ರಸ್ತೆಗಳು ಯುರೋಪ್ ರಸ್ತೆಗಳಂತಾಗಲಿವೆ ಎಂದ ಸಾರಿಗೆ ಸಚಿವ

ಈ ಕಾರಣಕ್ಕಾಗಿಯೇ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ ಜನರು ಈಗ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಮುಂದಾಗುತ್ತಿದ್ದಾರೆ. ಎಲೆಕ್ಟ್ರಿಕ್ ವಾಹನಗಳ ಬೆಲೆ ಕಡಿಮೆಯಾದರೆ ಇನ್ನೂ ಹೆಚ್ಚಿನ ಸಂಖ್ಯೆಯ ಎಲೆಕ್ಟ್ರಿಕ್ ವಾಹನಗಳನ್ನು ಭಾರತದ ರಸ್ತೆಗಳಲ್ಲಿ ಕಾಣಬಹುದು.

ಭಾರತದ ರಸ್ತೆಗಳು ಯುರೋಪ್ ರಸ್ತೆಗಳಂತಾಗಲಿವೆ ಎಂದ ಸಾರಿಗೆ ಸಚಿವ

ಇದರ ಜೊತೆಗೆ ಎಕ್ಸ್‌ಪ್ರೆಸ್‌ವೇಯಲ್ಲಿ ಚಲಿಸುವ ವಾಹನಗಳ ವೇಗವನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಕೆಲವು ದಿನಗಳ ಹಿಂದಷ್ಟೇ ಮಾತನಾಡಿದ್ದ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿರವರು ಶೀಘ್ರದಲ್ಲೇ ಹೆದ್ದಾರಿ ಹಾಗೂ ಎಕ್ಸ್‌ಪ್ರೆಸ್‌ವೇಗಳಲ್ಲಿ ಚಲಿಸುವ ವಾಹನಗಳ ವೇಗವನ್ನು ಹೆಚ್ಚಿಸುವ ತಿದ್ದುಪಡಿ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸಲಾಗುವುದು ಎಂದು ಹೇಳಿದ್ದರು.

ಭಾರತದ ರಸ್ತೆಗಳು ಯುರೋಪ್ ರಸ್ತೆಗಳಂತಾಗಲಿವೆ ಎಂದ ಸಾರಿಗೆ ಸಚಿವ

ನಾವು ವೇಗದ ಮಿತಿಯನ್ನು ಹೆಚ್ಚಿಸುವುದರ ಪರವಾಗಿದ್ದೇವೆ ಆದರೆ ಸುಪ್ರೀಂ ಕೋರ್ಟ್ ಹಾಗೂ ಕೆಲವು ಹೈಕೋರ್ಟ್‌ಗಳಿಂದ ಕೆಲವು ಅಡೆ ತಡೆಗಳಿವೆ. ಇದರಿಂದಾಗಿ ನಾವು ಬಯಸಿದರೂ ವೇಗದ ಮಿತಿಯನ್ನು ಹೆಚ್ಚಿಸಲು ಸಾಧ್ಯವಾಗುತ್ತಿಲ್ಲ. ಈ ಕಾರಣಕ್ಕೆ ಸಂಸತ್ತಿನಲ್ಲಿ ಮಸೂದೆಯ ಮೂಲಕ ವೇಗದ ಮಿತಿಯನ್ನು ಹೆಚ್ಚಿಸಲು ಸರ್ಕಾರವು ಸಿದ್ಧತೆ ನಡೆಸುತ್ತಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ಭಾರತದ ರಸ್ತೆಗಳು ಯುರೋಪ್ ರಸ್ತೆಗಳಂತಾಗಲಿವೆ ಎಂದ ಸಾರಿಗೆ ಸಚಿವ

ವಾಹನಗಳ ವೇಗದ ಮಿತಿಯ ಭಾರತದ ದೊಡ್ಡ ಸವಾಲುಗಳಲ್ಲಿ ಒಂದಾಗಿದೆ ಎಂದು ಅವರು ಹೇಳಿದರು. ವಾಹನಗಳ ವೇಗದ ಮಿತಿಯನ್ನು ಹೆಚ್ಚಿಸಿದರೆ ಹೆಚ್ಚಿನ ಸಂಖ್ಯೆಯ ರಸ್ತೆ ಅಪಘಾತಗಳು ಸಂಭವಿಸುತ್ತವೆ ಎಂದು ಹೇಳಲಾಗುತ್ತದೆ. ನಾವು ಈ ಮನಸ್ಥಿತಿಯಿಂದ ಹೊರ ಬರಬೇಕು. ಹೆದ್ದಾರಿಗಳು ಹಾಗೂ ಎಕ್ಸ್‌ಪ್ರೆಸ್‌ವೇಗಳಲ್ಲಿ ವಾಹನಗಳ ವೇಗದ ಮಿತಿ ಪ್ರತಿ ಗಂಟೆಗೆ 140 ಕಿ.ಮೀ ಆಗಿರಬೇಕು ಎಂದು ತಾನು ವೈಯಕ್ತಿಕವಾಗಿ ನಂಬುತ್ತೇನೆ ಎಂದು ಗಡ್ಕರಿ ಹೇಳಿದ್ದರು.

ಭಾರತದ ರಸ್ತೆಗಳು ಯುರೋಪ್ ರಸ್ತೆಗಳಂತಾಗಲಿವೆ ಎಂದ ಸಾರಿಗೆ ಸಚಿವ

ರಾಷ್ಟ್ರೀಯ ಹೆದ್ದಾರಿಗಳ ನಾಲ್ಕು ಪಥದ ರಸ್ತೆಗಳಲ್ಲಿ ಚಲಿಸುವ ವಾಹನಗಳ ವೇಗದ ಮಿತಿ ಕನಿಷ್ಠ 100 ಕಿ.ಮೀ ಆಗಿರಬೇಕು. ಎರಡು ಪಥದ ರಸ್ತೆಗಳು 80 ಕಿ.ಮೀಗಳಿಗೆ ಹಾಗೂ ನಗರ ರಸ್ತೆಗಳ ವೇಗದ ಮಿತಿಯನ್ನು 75 ಕಿ.ಮೀಗಳಿಗೆ ಹೆಚ್ಚಿಸಬೇಕು ಎಂದು ನಿತಿನ್ ಗಡ್ಕರಿ ಹೇಳಿದರು. ರಾಷ್ಟ್ರೀಯ ಹೆದ್ದಾರಿ ಹಾಗೂ ಎಕ್ಸ್‌ಪ್ರೆಸ್‌ವೇಯ ಎರಡೂ ಬದಿಗಳಲ್ಲಿ ಒಂದು ಬ್ಯಾರಿಕೇಡಿಂಗ್‌ ಮಾಡಲಾಗಿದ್ದು, ಒಂದು ಪ್ರಾಣಿಯೂ ಪ್ರವೇಶಿಸಲು ಸಾಧ್ಯವಿಲ್ಲವೆಂದು ಅವರು ಹೇಳಿದರು.

ಭಾರತದ ರಸ್ತೆಗಳು ಯುರೋಪ್ ರಸ್ತೆಗಳಂತಾಗಲಿವೆ ಎಂದ ಸಾರಿಗೆ ಸಚಿವ

ವಿವಿಧ ವಾಹನಗಳಿಗೆ ವಿವಿಧ ರೀತಿಯ ಗರಿಷ್ಠ ವೇಗದ ಮಿತಿಯನ್ನು ನಿಗದಿಪಡಿಸಲಾಗುವುದು ಎಂದು ಗಡ್ಕರಿ ಹೇಳಿದರು. ನ್ಯಾಯಾಲಯಗಳ ಕುರಿತು ಪ್ರತಿಕ್ರಿಯೆ ನೀಡಿದ ನಿತಿನ್ ಗಡ್ಕರಿರವರು, ಪ್ರಜಾಪ್ರಭುತ್ವದಲ್ಲಿ ನಮಗೆ ಕಾನೂನುಗಳನ್ನು ಮಾಡುವ ಹಕ್ಕಿದೆ ಹಾಗೂ ನ್ಯಾಯಾಧೀಶರಿಗೆ ಕಾನೂನನ್ನು ಅರ್ಥೈಸುವ ಹಕ್ಕಿದೆ. ಭಾರತೀಯ ರಸ್ತೆಗಳಲ್ಲಿ ವಾಹನಗಳ ವೇಗದ ಮಿತಿಯನ್ನು ಪರಿಷ್ಕರಿಸಲು ಶೀಘ್ರದಲ್ಲೇ ಸಂಸತ್ತಿನಲ್ಲಿ ಮಸೂದೆಯನ್ನು ಮಂಡಿಸಲಾಗುವುದು ಎಂದು ಅವರು ತಿಳಿಸಿದ್ದರು.

ಭಾರತದ ರಸ್ತೆಗಳು ಯುರೋಪ್ ರಸ್ತೆಗಳಂತಾಗಲಿವೆ ಎಂದ ಸಾರಿಗೆ ಸಚಿವ

ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳಿಗೆ ಮೂಲ ಸೌಕರ್ಯ ಒದಗಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರ ಭಾಗವಾಗಿ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ರವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು, ಹೆದ್ದಾರಿಗಳಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ಚಾರ್ಜಿಂಗ್ ಕೇಂದ್ರಗಳನ್ನು ಒದಗಿಸುವ ಸಲುವಾಗಿ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸುವ ಕೆಲಸ ಮಾಡುತ್ತಿದೆ ಎಂದು ಹೇಳಿದ್ದಾರೆ.

ಭಾರತದ ರಸ್ತೆಗಳು ಯುರೋಪ್ ರಸ್ತೆಗಳಂತಾಗಲಿವೆ ಎಂದ ಸಾರಿಗೆ ಸಚಿವ

ಚಾರ್ಜಿಂಗ್ ಕೇಂದ್ರಗಳು ಕಡಿಮೆ ಸಂಖ್ಯೆಯಲ್ಲಿ ಇರುವುದರಿಂದ ಹಲವಾರು ಜನರು ಬೇರೆ ದಾರಿ ಕಾಣದೇ ಅನಿವಾರ್ಯವಾಗಿ ಪೆಟ್ರೋಲ್, ಡೀಸೆಲ್ ವಾಹನಗಳನ್ನೇ ಬಳಸುತ್ತಿದ್ದಾರೆ. ಸಚಿವ ನಿತಿನ್ ಗಡ್ಕರಿ ರವರ ಈ ಹೇಳಿಕೆಯು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸ ಬಯಸುವವರಿಗೆ ಸಂತಸವನ್ನುಂಟು ಮಾಡಿದೆ.

ಭಾರತದ ರಸ್ತೆಗಳು ಯುರೋಪ್ ರಸ್ತೆಗಳಂತಾಗಲಿವೆ ಎಂದ ಸಾರಿಗೆ ಸಚಿವ

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯುವ ಮೂಲಕ ಇವಿಗಳಿಗೆ ಅಗತ್ಯವಾದ ಮೂಲ ಸೌಕರ್ಯವನ್ನು ಸುಧಾರಿಸುವ ಕೆಲಸ ಮಾಡುತ್ತಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Article Published On: Friday, November 26, 2021, 12:20 [IST]
English summary
Union transport minister says indian roads will become like europe roads details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+