ಎಕ್ಸ್‌ಪ್ರೆಸ್‌ವೇ ನಿರ್ಮಿಸಿದ ಗುತ್ತಿಗೆದಾರರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಸಾರಿಗೆ ಸಚಿವ

ಇತ್ತೀಚೆಗೆ ಸಾರ್ವಜನಿಕ ಬಳಕೆಗೆ ಆರಂಭವಾದ ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ವಾಹನ ಸವಾರರಿಗೆ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಕ್ಸ್‌ಪ್ರೆಸ್‌ವೇ ನಿರ್ಮಿಸಿದ ಗುತ್ತಿಗೆದಾರರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಸಾರಿಗೆ ಸಚಿವ

ನಿತಿನ್ ಗಡ್ಕರಿ, ಗುತ್ತಿಗೆದಾರರು ಮಾಡಿರುವ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿದ್ದಾರೆ. ಹೆದ್ದಾರಿ ಬದಿಯಲ್ಲಿ ನಿರ್ಮಿಸಲಾದ ಶೌಚಾಲಯಗಳು ಕಳಪೆ ಗುಣಮಟ್ಟದಿಂದ ಕೂಡಿವೆ ಎಂದು ಗಡ್ಕರಿ ಹೇಳಿದ್ದಾರೆ. ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯನ್ನು ಏಪ್ರಿಲ್ 1ರಂದು ಸಾರ್ವಜನಿಕರ ಬಳಕೆಗೆ ತೆರೆಯಲಾಯಿತು.

ಎಕ್ಸ್‌ಪ್ರೆಸ್‌ವೇ ನಿರ್ಮಿಸಿದ ಗುತ್ತಿಗೆದಾರರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಸಾರಿಗೆ ಸಚಿವ

ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯ ಬದಿಯಲ್ಲಿರುವ ಶೌಚಾಲಯವು ಕಳಪೆಯಾಗಿದ್ದು, ಅದು ಬಳಸಲು ಯೋಗ್ಯವಾಗಿಲ್ಲವೆಂದು ನಿತಿನ್ ಗಡ್ಕರಿ ಹೇಳಿದ್ದಾರೆ. ಗುತ್ತಿಗೆದಾರರ ಹೆಸರನ್ನು ಹೇಳಲು ಬಯಸದ ಅವರು, ಸಂಬಂಧಪಟ್ಟ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಎಕ್ಸ್‌ಪ್ರೆಸ್‌ವೇ ನಿರ್ಮಿಸಿದ ಗುತ್ತಿಗೆದಾರರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಸಾರಿಗೆ ಸಚಿವ

ದೆಹಲಿ-ಮೀರತ್ ಎಕ್ಸ್‌ಪ್ರೆಸ್ ಹೆದ್ದಾರಿಯ ಒಟ್ಟು ಉದ್ದ 82 ಕಿ.ಮೀಗಳಾಗಿದೆ. ಇದರಲ್ಲಿ 60 ಕಿ.ಮೀ ಎಕ್ಸ್‌ಪ್ರೆಸ್ ಹೆದ್ದಾರಿಯಾದರೆ, 22 ಕಿ.ಮೀ ರಾಷ್ಟ್ರೀಯ ಹೆದ್ದಾರಿಯಾಗಿದೆ. ರೂ.8,346 ಕೋಟಿ ವೆಚ್ಚದಲ್ಲಿ ಈ ಯೋಜನೆಯನ್ನು ಅಭಿವೃದ್ಧಿಪಡಿಸಲಾಗಿದೆ.

ಎಕ್ಸ್‌ಪ್ರೆಸ್‌ವೇ ನಿರ್ಮಿಸಿದ ಗುತ್ತಿಗೆದಾರರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಸಾರಿಗೆ ಸಚಿವ

ಈ ಎಕ್ಸ್‌ಪ್ರೆಸ್‌ವೇನಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲವಾಗುವಂತೆ ಆಂಬ್ಯುಲೆನ್ಸ್, ಕ್ರೇನ್‌, ಪೆಟ್ರೋಲ್ ಬಂಕ್, ರೆಸ್ಟೋರೆಂಟ್‌ ಸೇರಿದಂತೆ ಹಲವಾರು ಸೌಲಭ್ಯಗಳನ್ನು ನಿರ್ಮಿಸಲಾಗಿದೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಎಕ್ಸ್‌ಪ್ರೆಸ್‌ವೇ ನಿರ್ಮಿಸಿದ ಗುತ್ತಿಗೆದಾರರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಸಾರಿಗೆ ಸಚಿವ

ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇ ನಿರ್ಮಿಸಿದ ಕಾರಣಕ್ಕೆ ಹಲವಾರು ಜನರು ಧನ್ಯವಾದ ಅರ್ಪಿಸುತ್ತಿದ್ದಾರೆ. ಆದರೆ ಕಳಪೆ ಗುಣಮಟ್ಟದ ಬಗ್ಗೆ ದೂರನ್ನು ಸಹ ನೀಡುತ್ತಿದ್ದಾರೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

ಎಕ್ಸ್‌ಪ್ರೆಸ್‌ವೇ ನಿರ್ಮಿಸಿದ ಗುತ್ತಿಗೆದಾರರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಸಾರಿಗೆ ಸಚಿವ

ದೆಹಲಿ-ಮೀರತ್ ಹೆದ್ದಾರಿಯನ್ನು ನಿರ್ಮಿಸಿದ ಗುತ್ತಿಗೆದಾರರು ಸಮರ್ಪಕ ಸೌಲಭ್ಯಗಳನ್ನು ನಿರ್ಮಿಸಲು ವಿಫಲವಾಗಿದ್ದಾರೆ. ಇದರಿಂದ ಜನರಿಗೆ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಎಕ್ಸ್‌ಪ್ರೆಸ್‌ವೇ ನಿರ್ಮಿಸಿದ ಗುತ್ತಿಗೆದಾರರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಸಾರಿಗೆ ಸಚಿವ

ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇ ನಿರ್ಮಾಣದಿಂದ ದೆಹಲಿ - ಮೀರತ್ ನಡುವಿನ ಪ್ರಯಾಣ ಅವಧಿಯು 2.5 ಗಂಟೆಗಳಿಂದ ಕೇವಲ 45 ನಿಮಿಷಗಳಿಗೆ ಇಳಿದಿದೆ. 2018ರ ಮೇ ತಿಂಗಳಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಈ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ಶಂಕು ಸ್ಥಾಪನೆ ಮಾಡಿದ್ದರು.

ಎಕ್ಸ್‌ಪ್ರೆಸ್‌ವೇ ನಿರ್ಮಿಸಿದ ಗುತ್ತಿಗೆದಾರರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಸಾರಿಗೆ ಸಚಿವ

ಶಂಕು ಸ್ಥಾಪನೆ ನೆರವೇರಿಸಿದ ಮೂರು ವರ್ಷಗಳಲ್ಲಿ ಈ ಎಕ್ಸ್‌ಪ್ರೆಸ್‌ವೇ ಕಾಮಗಾರಿ ಪೂರ್ಣಗೊಂಡಿದೆ. ಈ ಎಕ್ಸ್‌ಪ್ರೆಸ್‌ವೇಯಲ್ಲಿ ಒಟ್ಟು 24 ಸಣ್ಣ ಹಾಗೂ ದೊಡ್ಡ ಸೇತುವೆಗಳಿವೆ. ಇದರ ಜೊತೆಗೆ ಈ ಎಕ್ಸ್‌ಪ್ರೆಸ್‌ವೇಯಲ್ಲಿ 10 ಫ್ಲೈಓವರ್‌, 3 ರೈಲ್ವೆ ಸೇತುವೆ, 95 ಅಂಡರ್‌ಪಾಸ್‌ ಹಾಗೂ ಪಾದಚಾರಿಗಳಿಗಾಗಿ ಹಲವಾರು ಓವರ್‌ಬ್ರಿಡ್ಜ್‌ಗಳನ್ನು ನಿರ್ಮಿಸಲಾಗಿದೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಎಕ್ಸ್‌ಪ್ರೆಸ್‌ವೇ ನಿರ್ಮಿಸಿದ ಗುತ್ತಿಗೆದಾರರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಸಾರಿಗೆ ಸಚಿವ

ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯನ್ನು ನಾಲ್ಕು ವಿಭಿನ್ನ ಹಂತಗಳಲ್ಲಿ ನಿರ್ಮಿಸಲಾಗಿದೆ. ಮೊದಲ ಹಂತವು ನಿಜಾಮುದ್ದೀನ್ ಸೇತುವೆಯಿಂದ ಉತ್ತರ ಪ್ರದೇಶ ಗಡಿಯವರೆಗೆ ಸಂಪರ್ಕ ಕಲ್ಪಿಸುತ್ತದೆ.

ಎಕ್ಸ್‌ಪ್ರೆಸ್‌ವೇ ನಿರ್ಮಿಸಿದ ಗುತ್ತಿಗೆದಾರರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಸಾರಿಗೆ ಸಚಿವ

ಎರಡನೇ ಹಂತವು ಉತ್ತರ ಪ್ರದೇಶ ಗಡಿ ಹಾಗೂ ದಸ್ನಾ ನಡುವೆ, ಮೂರನೇ ಹಂತವು ದಸ್ನಾ ಹಾಗೂ ಹಾಪುರ್ ನಡುವೆ, ಕೊನೆಯ ಹಂತವು ಹಾಪುರ ಹಾಗೂ ಮೀರತ್ ನಡುವೆ ಸಂಪರ್ಕ ಕಲ್ಪಿಸುತ್ತದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಎಕ್ಸ್‌ಪ್ರೆಸ್‌ವೇ ನಿರ್ಮಿಸಿದ ಗುತ್ತಿಗೆದಾರರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಸಾರಿಗೆ ಸಚಿವ

ಈ ಎಕ್ಸ್‌ಪ್ರೆಸ್‌ವೇಯಲ್ಲಿ ವಿವಿಧ ವಾಹನಗಳಿಗೆ ಗರಿಷ್ಠ ವೇಗದ ಮಿತಿಯನ್ನು ಪ್ರತಿ ಗಂಟೆಗೆ 80 ಕಿ.ಮೀಗಳಿಂದ 100 ಕಿ.ಮೀಗಳಿಗೆ ನಿಗದಿಪಡಿಸಲಾಗಿದೆ. ಪ್ರತಿ ವಾಹನದ ವೇಗವನ್ನು ತೋರಿಸಲು ಪ್ರತಿ 10 ಕಿ.ಮೀಗೆ ಡಿಸ್ ಪ್ಲೇ ಸ್ಕ್ರೀನ್ ಅಳವಡಿಸಲಾಗಿದೆ.

ಎಕ್ಸ್‌ಪ್ರೆಸ್‌ವೇ ನಿರ್ಮಿಸಿದ ಗುತ್ತಿಗೆದಾರರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಸಾರಿಗೆ ಸಚಿವ

ಪ್ರಯಾಣಿಕರ ಸುರಕ್ಷತೆಗಾಗಿ ಈ ಎಕ್ಸ್‌ಪ್ರೆಸ್‌ವೇಯಾದ್ಯಂತ 4,500ಕ್ಕೂ ಹೆಚ್ಚು ಲೈಟ್ ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಈ ಎಕ್ಸ್‌ಪ್ರೆಸ್‌ವೇಯಲ್ಲಿ ಸೈಕಲ್ ಹಾಗೂ ಪಾದಚಾರಿಗಳಿಗಾಗಿ ಪ್ರತ್ಯೇಕ ಟ್ರ್ಯಾಕ್ ನಿರ್ಮಿಸಲಾಗಿದೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಎಕ್ಸ್‌ಪ್ರೆಸ್‌ವೇ ನಿರ್ಮಿಸಿದ ಗುತ್ತಿಗೆದಾರರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಸಾರಿಗೆ ಸಚಿವ

ಎಕ್ಸ್‌ಪ್ರೆಸ್‌ವೇಯಲ್ಲಿ 2.5 ಮೀಟರ್ ಸೈಕಲ್ ಕಾರಿಡಾರ್ ನಿರ್ಮಿಸಲಾಗಿದ್ದರೆ, ಮೊದಲ ಹಂತ ಹಾಗೂ ಎರಡನೇ ಹಂತಗಳಲ್ಲಿ 2 ಮೀಟರ್ ಅಗಲದ ಫುಟ್‌ಪಾತ್ ನಿರ್ಮಿಸಲಾಗಿದೆ.

ಎಕ್ಸ್‌ಪ್ರೆಸ್‌ವೇ ನಿರ್ಮಿಸಿದ ಗುತ್ತಿಗೆದಾರರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಸಾರಿಗೆ ಸಚಿವ

ದೆಹಲಿ-ಮೀರತ್ ಎಕ್ಸ್‌ಪ್ರೆಸ್‌ವೇಯಲ್ಲಿ ಮೊದಲ ಆಟೋಮ್ಯಾಟಿಕ್ ನಂಬರ್ ಪ್ಲೇಟ್ ರೀಡರ್ (ಎಎನ್‌ಪಿಆರ್) ಹೊಂದಿರುವ ಫಾಸ್ಟ್‌ಟ್ಯಾಗ್ ಆಧಾರಿತ ಮಲ್ಟಿ ಲೇನ್ ಫ್ರೀ ಫ್ಲೋ ಟೋಲಿಂಗ್ ಸಿಸ್ಟಂ ಸ್ಥಾಪಿಸಲಾಗಿದೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಎಕ್ಸ್‌ಪ್ರೆಸ್‌ವೇ ನಿರ್ಮಿಸಿದ ಗುತ್ತಿಗೆದಾರರ ವಿರುದ್ದ ಅಸಮಾಧಾನ ವ್ಯಕ್ತಪಡಿಸಿದ ಸಾರಿಗೆ ಸಚಿವ

ಈ ಸಿಸ್ಟಂನಿಂದಾಗಿ ವಾಹನಗಳು ಟೋಲ್ ಪ್ಲಾಜಾಗಳಲ್ಲಿ ಪಾವತಿಸುವ ಅಗತ್ಯವಿಲ್ಲ. ಶುಲ್ಕವು ಫಾಸ್ಟ್‌ಟ್ಯಾಗ್ ಖಾತೆಯಿಂದ ಆಟೋಮ್ಯಾಟಿಕ್ ಆಗಿ ಕಡಿತಗೊಳ್ಳುತ್ತದೆ. ತುರ್ತು ಸನ್ನಿವೇಶವನ್ನು ಎದುರಿಸಲು ಈ ಎಕ್ಸ್‌ಪ್ರೆಸ್‌ವೇಯಾದ್ಯಂತ ವಿಶೇಷ ಎಮರ್ಜೆನ್ಸಿ ಕಾಲ್ ಬಾಕ್ಸ್'ಗಳನ್ನು (ಇಸಿಬಿ) ಸ್ಥಾಪಿಸಲಾಗಿದೆ.

Most Read Articles

Kannada
English summary
Union Transport minister unhappy about poor quality construction in Delhi Meerut Expressway. Read in Kannada.
Story first published: Sunday, April 25, 2021, 10:18 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X