15 ವರ್ಷ ಹಳೆಯ ಸರ್ಕಾರಿ ವಾಹನಗಳ ಮರು ನೋಂದಣಿ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ

ವಾಯುಮಾಲಿನ್ಯವನ್ನು ನಿಯಂತ್ರಿಸಲು ಕೇಂದ್ರ ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಇತ್ತೀಚೆಗಷ್ಟೇ ಇಂಧನದೊಂದಿಗೆ ಎಥೆನಾಲ್ ಬೆರೆಸುವ ಪ್ರಮಾಣವನ್ನು ಹೆಚ್ಚಿಸುವ ನಿರ್ಧಾರವನ್ನು ಕೈಗೊಳ್ಳಲಾಗಿದೆ.

15 ವರ್ಷ ಹಳೆಯ ಸರ್ಕಾರಿ ವಾಹನಗಳ ಮರು ನೋಂದಣಿ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ

ಈ ಹಿಂದೆ 90% ಇಂಧನದೊಂದಿಗೆ 10%ನಷ್ಟು ಎಥೆನಾಲ್ ಬೆರೆಸಲಾಗುತ್ತಿತ್ತು. ಈಗ ಈ ಪ್ರಮಾಣವನ್ನು 20%ಗಳಿಗೆ ಹೆಚ್ಚಿಸಲಾಗಿದೆ. ಇದು ಮಾತ್ರವಲ್ಲದೇ ವಾಯುಮಾಲಿನ್ಯವನ್ನು ನಿಯಂತ್ರಿಸುವ ಸಲುವಾಗಿ ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್, 2021-22ರ ಬಜೆಟ್‌ನಲ್ಲಿ ಹಳೆಯ ವಾಹನ ಸ್ಕ್ರ್ಯಾಪಿಂಗ್ ನೀತಿಯನ್ನು ಘೋಷಿಸಿದ್ದಾರೆ.

15 ವರ್ಷ ಹಳೆಯ ಸರ್ಕಾರಿ ವಾಹನಗಳ ಮರು ನೋಂದಣಿ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ

ಹೊಸ ನಿಯಮದ ಅನ್ವಯ 15 ವರ್ಷ ಹಳೆಯ ಕಮರ್ಷಿಯಲ್ ಹಾಗೂ 20 ವರ್ಷ ಹಳೆಯ ಖಾಸಗಿ ವಾಹನಗಳು ಫಿಟ್‌ನೆಸ್ ಪ್ರಮಾಣಪತ್ರವನ್ನು ಪಡೆಯಬೇಕು. ಫಿಟ್‌ನೆಸ್ ಪರೀಕ್ಷೆಯಲ್ಲಿ ವಿಫಲವಾಗುವ ವಾಹನಗಳಿಗೆ ದಂಡ ವಿಧಿಸುವುದರ ಜೊತೆಗೆ, ವಾಹನಗಳನ್ನು ಜಪ್ತಿ ಮಾಡಲಾಗುತ್ತದೆ ಎಂದು ಹೇಳಲಾಗಿದೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

15 ವರ್ಷ ಹಳೆಯ ಸರ್ಕಾರಿ ವಾಹನಗಳ ಮರು ನೋಂದಣಿ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ

ಈ ಕ್ರಮಗಳನ್ನು ಕೈಗೊಳ್ಳುವ ಮುನ್ನ ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಮಾಡುವಂತೆ ಸೂಚಿಸಲಾಗಿದೆ. ಕೇಂದ್ರ ಸರ್ಕಾರದ ಹೊಸ ಸ್ಕ್ರ್ಯಾಪಿಂಗ್ ನೀತಿಯಿಂದಾಗಿ ಕಮರ್ಷಿಯಲ್ ಹಾಗೂ ಹಳೆಯ ಖಾಸಗಿ ವಾಹನ ಮಾಲೀಕರು ಕಂಗಾಲಾಗಿದ್ದಾರೆ.

15 ವರ್ಷ ಹಳೆಯ ಸರ್ಕಾರಿ ವಾಹನಗಳ ಮರು ನೋಂದಣಿ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ

ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು 15 ವರ್ಷ ಹಳೆಯದಾದ ಸರ್ಕಾರಿ ವಾಹನಗಳನ್ನು ಬಳಸಬಾರದು ಎಂದು ತನ್ನ ಹೊಸ ಆದೇಶದಲ್ಲಿ ತಿಳಿಸಿದೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

15 ವರ್ಷ ಹಳೆಯ ಸರ್ಕಾರಿ ವಾಹನಗಳ ಮರು ನೋಂದಣಿ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ

ಹೊಸ ಆದೇಶವು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು, ಸ್ಥಳೀಯ ಸರ್ಕಾರಿ ಇಲಾಖೆಗಳು ಹಾಗೂ ಸ್ವಾಯತ್ತ ಸರ್ಕಾರಿ ಸಂಸ್ಥೆಗಳು ಸೇರಿದಂತೆ ಎಲ್ಲಾ ಸರ್ಕಾರಿ ಅಂಗಸಂಸ್ಥೆಗಳಿಗೆ ಅನ್ವಯಿಸುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆಯು ಹೇಳಿದೆ.

15 ವರ್ಷ ಹಳೆಯ ಸರ್ಕಾರಿ ವಾಹನಗಳ ಮರು ನೋಂದಣಿ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ

ಹೊಸ ಸ್ಕ್ರ್ಯಾಪಿಂಗ್ ನೀತಿಯು ಸರ್ಕಾರಿ ಇಲಾಖೆಗಳಲ್ಲಿ ಬಳಕೆಯಲ್ಲಿರುವ 15 ವರ್ಷ ಹಳೆಯ ವಾಹನಗಳಿಗೆ ಸಮಸ್ಯೆಗಳನ್ನು ತಂದೊಡ್ಡಿದೆ. ಈ ಹೊಸ ನೀತಿಯು 2022ರ ಏಪ್ರಿಲ್ 1ರಿಂದ ಜಾರಿಗೆ ಬರಲಿದೆ ಎಂದು ಇಲಾಖೆಯು ತಿಳಿಸಿದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

15 ವರ್ಷ ಹಳೆಯ ಸರ್ಕಾರಿ ವಾಹನಗಳ ಮರು ನೋಂದಣಿ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ

ಇದರಿಂದ 15 ವರ್ಷ ಹಳೆಯ ಸರ್ಕಾರಿ ವಾಹನಗಳನ್ನು ಇನ್ನು ಮುಂದೆ ರಿ ರಿಜಿಸ್ಟರ್ ಮಾಡಲು ಸಾಧ್ಯವಾಗದ ವಾತಾವರಣ ನಿರ್ಮಾಣವಾಗಿದೆ. ವಾಯುಮಾಲಿನ್ಯವನ್ನು ನಿಯಂತ್ರಿಸಲು ಕೇಂದ್ರ ಸಾರಿಗೆ ಇಲಾಖೆಯು ಈ ಕ್ರಮ ಕೈಗೊಂಡಿದೆ.

15 ವರ್ಷ ಹಳೆಯ ಸರ್ಕಾರಿ ವಾಹನಗಳ ಮರು ನೋಂದಣಿ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ

ಭಾರತದಲ್ಲಿ 10 ದಶಲಕ್ಷಕ್ಕೂ ಹೆಚ್ಚು ಹಳೆಯ ವಾಹನಗಳು ಬಳಕೆಯಲ್ಲಿವೆ. ಇವುಗಳಲ್ಲಿ ಪೊಲೀಸ್ ವ್ಯಾನ್‌ಗಳು, ಪೋಸ್ಟ್ ವ್ಯಾನ್‌ಗಳು, ರಾಜ್ಯ ಸರ್ಕಾರಗಳ ಬಸ್‌ಗಳು ಹಾಗೂ ಆಂಬ್ಯುಲೆನ್ಸ್‌ಗಳು ಸೇರಿವೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

15 ವರ್ಷ ಹಳೆಯ ಸರ್ಕಾರಿ ವಾಹನಗಳ ಮರು ನೋಂದಣಿ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರ

ವಾಯುಮಾಲಿನ್ಯವನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರವು ಸ್ಕ್ರ್ಯಾಪಿಂಗ್ ನೀತಿಯನ್ನು ಜಾರಿಗೊಳಿಸುತ್ತಿರುವುದು ಮಾತ್ರವಲ್ಲದೆ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಸಹ ಉತ್ತೇಜಿಸುತ್ತಿದೆ ಎಂಬುದು ಗಮನಾರ್ಹ.

Most Read Articles

Kannada
English summary
Union transport ministry says no re registration of 15 years old government vehicles. Read in Kannada.
Story first published: Saturday, March 13, 2021, 18:47 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X