ಎಲೆಕ್ಟ್ರಿಕ್ ವಾಹನಗಳಿಗೆ ರಿಜಿಸ್ಟ್ರೇಷನ್ ಶುಲ್ಕದಿಂದ ವಿನಾಯಿತಿ ನೀಡಲು ನಿರ್ಧರಿಸಿದ ಸಾರಿಗೆ ಇಲಾಖೆ

ಭಾರತದಲ್ಲಿ ದಿನೇ ದಿನೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಇದರ ಜೊತೆಗೆ ಪೆಟ್ರೋಲ್, ಡೀಸೆಲ್ ವಾಹನಗಳಿಂದ ಪರಿಸರವು ಹದಗೆಡುತ್ತಿದೆ. ಈ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ.

ಎಲೆಕ್ಟ್ರಿಕ್ ವಾಹನಗಳಿಗೆ ರಿಜಿಸ್ಟ್ರೇಷನ್ ಶುಲ್ಕದಿಂದ ವಿನಾಯಿತಿ ನೀಡಲು ನಿರ್ಧರಿಸಿದ ಸಾರಿಗೆ ಇಲಾಖೆ

ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆಯು ಕರಡು ಅಧಿಸೂಚನೆಯನ್ನು ಹೊರಡಿಸಿದೆ. ಈ ಅಧಿಸೂಚನೆಯಲ್ಲಿ ಎಲೆಕ್ಟ್ರಿಕ್ ವಾಹನಗಳ ನೋಂದಣಿ ಹಾಗೂ ನವೀಕರಣಕ್ಕೆ ಶುಲ್ಕ ವಿನಾಯಿತಿ ನೀಡುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಈ ಕರಡು ಅಧಿಸೂಚನೆ ಹೊರಡಿಸಿದ ಮೂವತ್ತು ದಿನಗಳಲ್ಲಿ ಆಕ್ಷೇಪಣೆ ಸಲ್ಲಿಸುವಂತೆ ಸಾರ್ವಜನಿಕರಿಗೆ ಹಾಗೂ ಸಂಬಂಧಪಟ್ಟವರಿಗೆ ಸೂಚಿಸಲಾಗಿದೆ.

ಎಲೆಕ್ಟ್ರಿಕ್ ವಾಹನಗಳಿಗೆ ರಿಜಿಸ್ಟ್ರೇಷನ್ ಶುಲ್ಕದಿಂದ ವಿನಾಯಿತಿ ನೀಡಲು ನಿರ್ಧರಿಸಿದ ಸಾರಿಗೆ ಇಲಾಖೆ

ಈ ಅಧಿಸೂಚನೆಯನ್ನು ಮೇ 27ರಂದು ಹೊರಡಿಸಲಾಗಿದ್ದು, ಜೂನ್ 27ರವರೆಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಆಕ್ಷೇಪಣೆಗಳನ್ನು ಸ್ವೀಕರಿಸಿದ ನಂತರ ಇಲಾಖೆಯು ಅವುಗಳ ಬಗ್ಗೆ ಆಂತರಿಕ ಸಮಾಲೋಚನೆಗಳನ್ನು ನಡೆಸಲಿದೆ.

MOST READ: ವಿಮಾನಗಳು ಹಾರಾಟ ನಡೆಸುವಾಗ, ಲ್ಯಾಂಡಿಂಗ್ ಆಗುವಾಗ ಉಂಟಾಗುವ ಶಬ್ದಗಳಿವು

ಎಲೆಕ್ಟ್ರಿಕ್ ವಾಹನಗಳಿಗೆ ರಿಜಿಸ್ಟ್ರೇಷನ್ ಶುಲ್ಕದಿಂದ ವಿನಾಯಿತಿ ನೀಡಲು ನಿರ್ಧರಿಸಿದ ಸಾರಿಗೆ ಇಲಾಖೆ

ಸಮಾಲೋಚನೆಯಲ್ಲಿ ಬದಲಾವಣೆ ಅವಶ್ಯಕವೆಂದು ಕಂಡು ಬಂದಲ್ಲಿ ಕೆಲವು ಬದಲಾವಣೆಗಳನ್ನು ಮಾಡಲಾಗುತ್ತದೆ. ನಂತರ ಕೇಂದ್ರ ಮೋಟಾರು ವಾಹನ ಕಾಯ್ದೆ 1989ರ ತಿದ್ದುಪಡಿಗಾಗಿ ಸಚಿವ ಸಂಪುಟದ ಅನುಮೋದನೆ ಪಡೆಯಲಾಗುತ್ತದೆ.

ಎಲೆಕ್ಟ್ರಿಕ್ ವಾಹನಗಳಿಗೆ ರಿಜಿಸ್ಟ್ರೇಷನ್ ಶುಲ್ಕದಿಂದ ವಿನಾಯಿತಿ ನೀಡಲು ನಿರ್ಧರಿಸಿದ ಸಾರಿಗೆ ಇಲಾಖೆ

ಈಗ ಇರುವ ಕಾಯ್ದೆಯ ಪ್ರಕಾರ ಕಮರ್ಷಿಯಲ್ ವಾಹನಗಳನ್ನು ಪ್ರತಿ ಐದು ವರ್ಷಗಳ ನಂತರ ಹಾಗೂ ಖಾಸಗಿ ವಾಹನಗಳನ್ನು 15 ವರ್ಷಗಳ ನಂತರ ಮರುನೋಂದಾಯಿಸಬೇಕಾಗುತ್ತದೆ.

MOST READ: ಪ್ರವಾಸದ ಹುಚ್ಚಿಗಾಗಿ ವಾಹನ ಕದಿಯುತ್ತಿದ್ದ ಎಂಜಿನಿಯರಿಂಗ್ ಪದವೀಧರ ಕೊನೆಗೂ ಲಾಕ್

ಎಲೆಕ್ಟ್ರಿಕ್ ವಾಹನಗಳಿಗೆ ರಿಜಿಸ್ಟ್ರೇಷನ್ ಶುಲ್ಕದಿಂದ ವಿನಾಯಿತಿ ನೀಡಲು ನಿರ್ಧರಿಸಿದ ಸಾರಿಗೆ ಇಲಾಖೆ

ಈ ಮರು ನೋಂದಣಿಗಾಗಿ ವಾಹನ ಮಾಲೀಕರು ಭಾರಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈಗ ಈ ನಿಯಮವು ಎಲ್ಲಾ ವಾಹನಗಳಿಗೆ ಅನ್ವಯಿಸುತ್ತಿದೆ. ಆದರೆ ಕೇಂದ್ರ ಸಾರಿಗೆ ಇಲಾಖೆಯು ಎಲೆಕ್ಟ್ರಿಕ್ ವಾಹನಗಳ ನೋಂದಣಿ ಶುಲ್ಕವನ್ನು ಮನ್ನಾ ಮಾಡಲು ನಿರ್ಧರಿಸಿದೆ.

ಎಲೆಕ್ಟ್ರಿಕ್ ವಾಹನಗಳಿಗೆ ರಿಜಿಸ್ಟ್ರೇಷನ್ ಶುಲ್ಕದಿಂದ ವಿನಾಯಿತಿ ನೀಡಲು ನಿರ್ಧರಿಸಿದ ಸಾರಿಗೆ ಇಲಾಖೆ

ಈಗ ವಾಹನಗಳನ್ನು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವರ್ಗಾಯಿಸಿದರೂ ಸಹ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಎಲೆಕ್ಟ್ರಿಕ್ ವಾಹನಗಳಿಗೆ ಈ ಶುಲ್ಕದಿಂದ ವಿನಾಯಿತಿ ನೀಡಲಾಗುತ್ತದೆ.

MOST READ: ಭಾರತದಲ್ಲಿ ಹೆಚ್ಚು ಕಾರು ಮಾರಾಟವಾಗುವ ಹತ್ತು ಪ್ರಮುಖ ನಗರಗಳಿವು

ಎಲೆಕ್ಟ್ರಿಕ್ ವಾಹನಗಳಿಗೆ ರಿಜಿಸ್ಟ್ರೇಷನ್ ಶುಲ್ಕದಿಂದ ವಿನಾಯಿತಿ ನೀಡಲು ನಿರ್ಧರಿಸಿದ ಸಾರಿಗೆ ಇಲಾಖೆ

ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಕೈಗೊಂಡಿರುವ ಕ್ರಮ ಉತ್ತಮವಾಗಿದೆ ಎಂದು ಬಸ್ ಹಾಗೂ ಕಾರ್ ಆಪರೇಟರ್ಸ್ ಕಾನ್ಫೆಡರೇಷನ್ ಆಫ್ ಇಂಡಿಯಾ (ಸಿಎಂವಿಆರ್) ಅಧ್ಯಕ್ಷ ಗುರ್ಮೀತ್ ಸಿಂಗ್ ತನೇಜಾ ಹೇಳಿದ್ದಾರೆ.

ಎಲೆಕ್ಟ್ರಿಕ್ ವಾಹನಗಳಿಗೆ ರಿಜಿಸ್ಟ್ರೇಷನ್ ಶುಲ್ಕದಿಂದ ವಿನಾಯಿತಿ ನೀಡಲು ನಿರ್ಧರಿಸಿದ ಸಾರಿಗೆ ಇಲಾಖೆ

ಈ ಕ್ರಮಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುತ್ತವೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.

MOST READ: ಕರೋನಾ ಸೋಂಕಿತರ ಪಾಲಿಗೆ ದೇವರಾದ ಕರೋನಾ ಸೋಂಕಿನಿಂದ ಗುಣಮುಖರಾದ ವ್ಯಕ್ತಿ

ಎಲೆಕ್ಟ್ರಿಕ್ ವಾಹನಗಳಿಗೆ ರಿಜಿಸ್ಟ್ರೇಷನ್ ಶುಲ್ಕದಿಂದ ವಿನಾಯಿತಿ ನೀಡಲು ನಿರ್ಧರಿಸಿದ ಸಾರಿಗೆ ಇಲಾಖೆ

ವಾಹನ ತಯಾರಕ ಕಂಪನಿಗಳು ಕಳೆದ ಕೆಲವು ವರ್ಷಗಳಿಂದ ದೇಶಿಯ ಮಾರುಕಟ್ಟೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಿಡುಗಡೆಗೊಳಿಸುತ್ತಿವೆ. ಈಗ ಕೇಂದ್ರ ಸರ್ಕಾರದ ಬಹುತೇಕ ಎಲ್ಲಾ ಇಲಾಖೆಗಳಲ್ಲಿ ಅಧಿಕೃತ ಉದ್ದೇಶಗಳಿಗಾಗಿ ಎಲೆಕ್ಟ್ರಿಕ್ ವಾಹನಗಳನ್ನೇ ಬಳಸಲಾಗುತ್ತಿದೆ.

Most Read Articles

Kannada
English summary
Union transport ministry to give fees exemption for electric vehicles registration. Read in Kannada.
Story first published: Wednesday, June 2, 2021, 12:27 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X