ಡಿಸೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

ಕಾರು ತಯಾರಕ ಕಂಪನಿಗಳು ಡಿಸೆಂಬರ್ ತಿಂಗಳಿನಲ್ಲಿಯೂ ಕಾರುಗಳನ್ನು ಬಿಡುಗಡೆಗೊಳಿಸಲಿವೆ. ಕಂಪನಿಗಳು ಹಬ್ಬದ ಸಂದರ್ಭದಲ್ಲಿಯೂ ಹೆಚ್ಚಿನ ವಾಹನಗಳನ್ನು ಬಿಡುಗಡೆ ಮಾಡಿದ್ದವು. Volkswagen ಕಂಪನಿಯ Taigun, Audi ಕಂಪನಿಯ e tron GT, BMW ಕಂಪನಿಯ iX ಎಲೆಕ್ಟ್ರಿಕ್‌ ಸೇರಿದಂತೆ ಹಲವು ಕಾರುಗಳು ಮುಂದಿನ ತಿಂಗಳು ಭಾರತದಲ್ಲಿ ಬಿಡುಗಡೆಯಾಗಲಿವೆ. ಈ ಕಾರುಗಳ ಬಗೆಗಿನ ಮತ್ತಷ್ಟು ವಿವರಗಳನ್ನು ಈ ಲೇಖನದಲ್ಲಿ ನೋಡೋಣ.

ಡಿಸೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

1. ಹೊಸ Volkswagen Taigun

Volkswagen ಇಂಡಿಯಾ ತನ್ನ ಹೊಸ Tiguan ಎಸ್‌ಯು‌ವಿಯ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸಿದೆ, ಕಂಪನಿಯು ಈ ಎಸ್‌ಯು‌ವಿಯನ್ನು ಡಿಸೆಂಬರ್ 7 ರಂದು ಭಾರತದಲ್ಲಿ ಬಿಡುಗಡೆಗೊಳಿಸಲಿದೆ. Volkswagen Taigun ಉತ್ಪಾದನೆಯನ್ನು ಭಾರತದಲ್ಲಿಯೂ ಆರಂಭಿಸಲಾಗಿದೆ. Volkswagen Taigun ಗಾಗಿ ಬುಕ್ಕಿಂಗ್‌ಗಳನ್ನು ಆರಂಭಿಸಲಾಗಿಲ್ಲ.

ಡಿಸೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

ಆದರೆ ಈ ಎಸ್‌ಯು‌ವಿಯನ್ನು ಖರೀದಿಸಲು ಬಯಸುವವರು ಕಂಪನಿಯ ವೆಬ್‌ಸೈಟ್‌ಗೆ ಭೇಟಿ ನೀಡುವ ಮೂಲಕ ತಮ್ಮ ಆಸಕ್ತಿಯನ್ನು ನೋಂದಾಯಿಸಿಕೊಳ್ಳಬಹುದು. Volkswagen Taigun ಎಸ್‌ಯು‌ವಿಯನ್ನು ಕಂಪನಿಯ MQB ಪ್ಲಾಟ್‌ಫಾರಂನಲ್ಲಿ ನಿರ್ಮಿಸಲಾಗಿದೆ. ಈ ಎಸ್‌ಯು‌ವಿ 5 ಸೀಟುಗಳ ಮಾದರಿಯಾಗಿದೆ. ಈ ಎಸ್‌ಯು‌ವಿಯು ತೀಕ್ಷ್ಣವಾದ ವಿನ್ಯಾಸ, ಉತ್ತಮ ಕಾರ್ಯಕ್ಷಮತೆ, ಸುರಕ್ಷತೆಗಾಗಿ ಹಲವು ಫೀಚರ್ ಗಳನ್ನು ಹೊಂದಿದೆ.

ಡಿಸೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

ಡಿಸೆಂಬರ್ ಆರಂಭದಲ್ಲಿ ಈ ಎಸ್‌ಯು‌ವಿಯನ್ನು ಮಾರುಕಟ್ಟೆಗೆ ತರಲಾಗುವುದು ಎಂದು Volkswagen ಕಂಪನಿ ಹೇಳಿದೆ. ಭಾರತದಲ್ಲಿಯೇ ಉತ್ಪಾದನೆಯಾಗುವುದರಿಂದ ಈ ಎಸ್‌ಯು‌ವಿಯ ಬೆಲೆ ಕಡಿಮೆಯಾಗಲಿದೆ. ಹೊಸ Taigun ಎಸ್‌ಯು‌ವಿಯನ್ನು 2020 ರಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಪರಿಚಯಿಸಲಾಯಿತು. ಇದೀಗ ಈ ಎಸ್‌ಯು‌ವಿ ದೇಶಿಯ ಮಾರುಕಟ್ಟೆಗೆ ಪ್ರವೇಶಿಸಲು ಸಿದ್ಧವಾಗಿದೆ.

ಡಿಸೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

ಭಾರತದಲ್ಲಿ ಬಿಡುಗಡೆಯಾದ ನಂತರ ಈ ಪ್ರೀಮಿಯಂ ಎಸ್‌ಯು‌ಯು ಜೀಪ್ ಕಂಪಾಸ್ ಫೇಸ್‌ಲಿಫ್ಟ್, ಹುಂಡೈ ಟಕ್ಸನ್ ಹಾಗೂ ಸಿಟ್ರೊಯೆನ್ C5 ಏರ್‌ಕ್ರಾಸ್‌ನಂತಹ ಎಸ್‌ಯು‌ವಿಗಳಿಗೆ ಪೈಪೋಟಿ ನೀಡಲಿದೆ. ಕಂಪನಿಯು ಎಸ್‌ಯು‌ವಿ ಮಾರುಕಟ್ಟೆಯಲ್ಲಿ ತನ್ನ ಪ್ರಾಬಲ್ಯವನ್ನು ಹೊಂದಲು ಬಯಸಿದೆ. ಈ ಕಾರಣಕ್ಕೆ Volkswagen ಕಂಪನಿಯು ಹೊಸ ಹೊಸ ಮಾದರಿಗಳನ್ನು ಬಿಡುಗಡೆಗೊಳಿಸುತ್ತಿದೆ.

ಡಿಸೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

2. Audi e-tron GT

ಐಷಾರಾಮಿ ಕಾರು ತಯಾರಕ ಕಂಪನಿಯಾದ Audi ಇಂಡಿಯಾ ತನ್ನ ಹೊಸ e-tron GT ಎಲೆಕ್ಟ್ರಿಕ್ ಕಾರ್ ಅನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಲಿದೆ. ಕಂಪನಿಯು ಕೆಲವು ದಿನಗಳ ಹಿಂದೆ ಈ ಕಾರಿನ ಟೀಸರ್ ಅನ್ನು ಬಿಡುಗಡೆ ಮಾಡಿತ್ತು, ಕಂಪನಿಯು ಈ ಕಾರಿನ ಬುಕ್ಕಿಂಗ್ ಗಳನ್ನು ಆರಂಭಿಸಿದೆ. Audi e-tron GT ಎಲೆಕ್ಟ್ರಿಕ್ ಕಾರ್ ಅನ್ನು ಕಂಪನಿಯ ವೆಬ್‌ಸೈಟ್‌ನಿಂದ ಬುಕ್ ಮಾಡಬಹುದು.

ಡಿಸೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

Audi e-tron GT ಕಾರಿನ ಬಗ್ಗೆ ಹೇಳುವುದಾದರೆ, ಕಂಪನಿಯು ಈಗಾಗಲೇ ಈ ಎಲೆಕ್ಟ್ರಿಕ್ ಸೆಡಾನ್ ಕಾರ್ ಅನ್ನು ಜಾಗತಿಕ ಮಾರುಕಟ್ಟೆಗಳಲ್ಲಿ ಮಾರಾಟ ಮಾಡುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಕಾರ್ ಅನ್ನು ಸ್ಟಾಂಡರ್ಡ್ ಹಾಗೂ ಆರ್‌ಎಸ್ ಎಂಬ ಎರಡು ಮಾದರಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ.

ಡಿಸೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

ಆದರೆ Audi ಕಂಪನಿಯು e-tron GT ಸೆಡಾನ್‌ ಕಾರಿನ ಯಾವ ಮಾದರಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ ಎಂಬ ಬಗ್ಗೆ ಇದುವರೆಗೂ ಮಾಹಿತಿ ನೀಡಿಲ್ಲ. Audi ಕಂಪನಿಯ ಕಾರುಗಳು ಐಷಾರಾಮಿತನಕ್ಕೆ ಹೆಸರುವಾಸಿಯಾಗಿವೆ. ಭಾರತದಲ್ಲಿ ಬಿಡುಗಡೆಯಾದ ನಂತರ ಈ ಎಲೆಕ್ಟ್ರಿಕ್ ಸೆಡಾನ್ ಕಾರು ಯಾವ ರೀತಿ ಗ್ರಾಹಕರನ್ನು ಮೋಡಿ ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಡಿಸೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

3. BMW iX ಎಲೆಕ್ಟ್ರಿಕ್ ಎಸ್‌ಯು‌ವಿ

ಜರ್ಮನಿ ಮೂಲದ ಪ್ರೀಮಿಯಂ ಕಾರು ತಯಾರಕ ಕಂಪನಿಯಾದ ಬಿಎಂಡಬ್ಲ್ಯು ಇಂಡಿಯಾ ಶೀಘ್ರದಲ್ಲೇ ದೇಶದಲ್ಲಿ ಬಿಎಂಡಬ್ಲ್ಯು ಐಎಕ್ಸ್ ಆಲ್ ಎಲೆಕ್ಟ್ರಿಕ್ ಎಸ್‌ಯುವಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಕಂಪನಿಯು ವರ್ಷಾಂತ್ಯದೊಳಗೆ ಈ ಕಾರ್ ಅನ್ನು ಭಾರತದಲ್ಲಿ ಬಿಡುಗಡೆಗೊಳಿಸುವುದಾಗಿ ತಿಳಿಸಿದೆ.

ಡಿಸೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

ಇತ್ತೀಚಿನ ಮಾಹಿತಿಯ ಪ್ರಕಾರ, BMW iX ಎಲೆಕ್ಟ್ರಿಕ್ ಎಸ್‌ಯು‌ವಿಯು ಡಿಸೆಂಬರ್ 13 ರಂದು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. BMW iX ಎಲೆಕ್ಟ್ರಿಕ್ ಎಸ್‌ಯು‌ವಿ ಹೊಸ ಮಾಡ್ಯುಲರ್, ಸ್ಕೇಲೆಬಲ್ ಟೂಲ್‌ಕಿಟ್ ಅನ್ನು ಆಧರಿಸಿದ ಕಂಪನಿಯ ಮೊದಲ ಕಾರ್ ಆಗಿದ್ದು, ಭವಿಷ್ಯದ BMW ಮಾದರಿಗಳ ಆಧಾರವಾಗಿದೆ.

ಡಿಸೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

ಈ ಎಲೆಕ್ಟ್ರಿಕ್ ಎಸ್‌ಯು‌ವಿಯು ಐದನೇ ತಲೆಮಾರಿನ ಇ-ಡ್ರೈವ್ ತಂತ್ರಜ್ಞಾನವನ್ನು ಹೊಂದಿದ್ದು, ಎರಡು ಎಲೆಕ್ಟ್ರಿಕ್ ಮೋಟಾರ್‌ಗಳೊಂದಿಗೆ ಬರುತ್ತದೆ. ಈ ಕಾರು ಒಂದು ಬಾರಿ ಪೂರ್ತಿಯಾಗಿ ಚಾರ್ಜ್ ಆದ ನಂತರ 600 ಕಿ.ಮೀಗಳಿಗೂ ಹೆಚ್ಚು ದೂರ ಚಲಿಸುತ್ತದೆ.

ಡಿಸೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

ನವೆಂಬರ್ ತಿಂಗಳಿನಲ್ಲಿ ಹಲವು ಹೊಸ ಕಾರುಗಳು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಿದ್ದವು. ಕೆಲವು ತಿಂಗಳುಗಳಿಂದ ಕಾರು ತಯಾರಕ ಕಂಪನಿಗಳು ಹೊಸ ಕಾರುಗಳನ್ನು ಬಿಡುಗಡೆಗೊಳಿಸಲು ಮುಂದಾಗುತ್ತಿಲ್ಲ. ಆದರೆ ಮುಂದಿನ ವರ್ಷದ ಫೆಬ್ರವರಿಯಿಂದ ಹೊಸ ಕಾರುಗಳು ಹೆಚ್ಚಿನ ಸಂಖ್ಯೆಯಲ್ಲಿ ಬಿಡುಗಡೆಯಾಗಬಹುದು. ಸದ್ಯ ದೇಶಿಯ ಮಾರುಕಟ್ಟೆಯಲ್ಲಿ ಹೊಸ ಕಾರುಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಇದರಿಂದ ಕಂಪನಿಗಳು ಎಲೆಕ್ಟ್ರಿಕ್ ಸೇರಿದಂತೆ ಎಲ್ಲಾ ರೀತಿಯ ಕಾರುಗಳನ್ನು ಬಿಡುಗಡೆಗೊಳಿಸಲು ಮುಂದಾಗುತ್ತಿವೆ.

ಡಿಸೆಂಬರ್ ತಿಂಗಳಿನಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಕಾರುಗಳಿವು

ವಿಶ್ವದಾದ್ಯಂತ ಸೆಮಿಕಂಡಕ್ಟರ್ ಗಳಿಗೆ ಕೊರತೆ ಎದುರಾಗಿದೆ. ಈ ಕಾರಣಕ್ಕೆ ಕೆಲವು ಕಾರು ತಯಾರಕ ಕಂಪನಿಗಳು ತಮ್ಮ ಕಾರುಗಳ ಉತ್ಪಾದನೆಯನ್ನು ಕಡಿಮೆ ಮಾಡಿವೆ. ಕಾರು ಉತ್ಪಾದನೆ ಕುಸಿದಿರುವ ಹಿನ್ನೆಲೆಯಲ್ಲಿ ಕಾರುಗಳನ್ನು ಬುಕ್ ಮಾಡಿರುವ ಗ್ರಾಹಕರು ಅವುಗಳ ವಿತರಣೆಯನ್ನು ಪಡೆಯಲು ಹಲವು ತಿಂಗಳವರೆಗೆ ಕಾಯಬೇಕಾದ ಪರಿಸ್ಥಿತಿ ಎದುರಾಗಿದೆ.

Most Read Articles

Kannada
English summary
Upcoming car launches in domestic market during december 2021 details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X