ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಯಾಗಲಿರುವ ಟಾಪ್ 5 ಕಾರುಗಳಿವು..!

ಕೋವಿಡ್ ನಂತರ ಬೆಳವಣಿಗೆ ಹಾದಿಯಲ್ಲಿರುವ ಆಟೋ ಉದ್ಯಮವು ಕಳೆದ ತಿಂಗಳಿನಿಂದ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ವಾಹನಗಳ ಬಿಡುಗಡೆ ಪ್ರಕ್ರಿಯೆ ಜೋರಾಗಿದೆ. ಹಾಗಾದ್ರೆ ಮಾರ್ಚ್ ಅವಧಿಯಲ್ಲಿ ಬಿಡುಗಡೆಯಾಗಲಿರುವ ಪ್ರಮುಖ ಕಾರುಗಳ ಬಗೆಗೆ ಈ ಲೇಖನದಲ್ಲಿ ತಿಳಿಯೋಣ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಗೆಯಾಗಲಿರುವ ಟಾಪ್ 5 ಕಾರುಗಳಿವು..!

ಸಿಟ್ರನ್ ಸಿ5 ಏರ್‌ಕ್ರಾಸ್ ಎಸ್‌ಯುವಿ

ಭಾರತದಲ್ಲಿ ಮೊದಲ ಬಾರಿಗೆ ಕಾರು ಮಾರಾಟ ಆರಂಭಿಸುತ್ತಿರುವ ಸಿಟ್ರನ್ ಕಂಪನಿಯ ಮೊದಲ ಕಾರು ಮಾದರಿಯಾಗಿ ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯನ್ನು ಇದೇ ತಿಂಗಳು ಮಧ್ಯಂತರದಲ್ಲಿ ಬಿಡುಗಡೆ ಮಾಡುತ್ತಿದ್ದು, ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ. ಹೊಸ ಕಾರಿನ ಬುಕ್ಕಿಂಗ್ ಪ್ರಕ್ರಿಯೆಯನ್ನು ಇಂದಿನಿಂದಲೇ ಆರಂಭಿಸಲಿರುವ ಸಿಟ್ರನ್ ಕಂಪನಿಯು ಮುಂದಿನ ಕೆಲವೇ ವಾರಗಳಲ್ಲಿ ಹೊಸ ಕಾರಿನ ಮಾರಾಟಕ್ಕೆ ಅಧಿಕೃತ ಚಾಲನೆ ನೀಡಲಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಗೆಯಾಗಲಿರುವ ಟಾಪ್ 5 ಕಾರುಗಳಿವು..!

ಸಿ5 ಏರ್‌ಕ್ರಾಸ್ ಕಾರು 4,500 ಎಂಎಂ ಉದ್ದ, 2,099 ಎಂಎಂ ಅಗಲ, 1,710 ಎಂಎಂ ಎತ್ತರ ಮತ್ತು 2,730 ಎಂಎಂ ವೀಲ್ಹ್‌ಬೆಸ್‌ನೊಂದಿಗೆ ಪ್ರತಿಸ್ಪರ್ಧಿ ಕಾರುಗಳಿಂತಲೂ ಅತ್ಯುತ್ತಮ ಒಳಾಂಗಣ ವಿನ್ಯಾಸ ಹೊಂದಿದೆ. ಕಂಪನಿಯು ಹೊಸ ಕಾರಿನಲ್ಲಿ 2.0-ಲೀಟರ್(1,997ಸಿಸಿ) ಡೀಸೆಲ್ ಎಂಜಿನ್ ಆಯ್ಕೆಯನ್ನು ಮಾತ್ರವೇ ನೀಡುತ್ತಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 25 ಲಕ್ಷದಿಂದ ರೂ. 28 ಲಕ್ಷ ಬೆಲೆ ಅಂತರದಲ್ಲಿ ಮಾರಾಟಗೊಳ್ಳುವ ಸಾಧ್ಯತೆಗಳಿವೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಗೆಯಾಗಲಿರುವ ಟಾಪ್ 5 ಕಾರುಗಳಿವು..!

ಸ್ಕೋಡಾ ಕುಶಾಕ್

2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಕುಶಾಕ್ ಹೆಸರಿನೊಂದಿಗೆ ಇದೇ ತಿಂಗಳು 18ರಂದು ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳುತ್ತಿದ್ದು, ಅನಾವರಣಗೊಂಡ ಕೆಲವೇ ದಿನಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಗೆಯಾಗಲಿರುವ ಟಾಪ್ 5 ಕಾರುಗಳಿವು..!

ಕುಶಾಕ್ ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಯ ಆದ್ಯತೆ ಮೇರೆಗೆ 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಮಾದರಿಯಾಗಿ 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪರಿಚಯಿಸುತ್ತಿದ್ದು,ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆ ಅಂತರದೊಂದಿಗೆ ಮಾರಾಟಗೊಳ್ಳಬಹುದಾಗಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಗೆಯಾಗಲಿರುವ ಟಾಪ್ 5 ಕಾರುಗಳಿವು..!

ಮರ್ಸಿಡಿಸ್ ಬೆಂಝ್ ಎ-ಕ್ಲಾಸ್ ಲಿಮೋಸಿನ್

ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಮರ್ಸಿಡಿಸ್ ಬೆಂಝ್ ತನ್ನ ಎಂಟ್ರಿ ಲೆವಲ್ ಎ-ಕ್ಲಾಸ್ ಲಿಮೋಸಿನ್ ಆವೃತ್ತಿಯನ್ನು ಭಾರತದಲ್ಲಿ ಮೊದಲ ಬಾರಿಗೆ ಪರಿಚಯಿಸುತ್ತಿದ್ದು, ಹೊಸ ಕಾರು ಬಿಡುಗಡೆಗೂ ಮುನ್ನ ಕಾರಿನ ಕಾರ್ಯಕ್ಷಮತೆ ಕುರಿತಂತೆ ಫಸ್ಟ್ ಡ್ರೈವ್ ಆಯೋಜಿಸಿತ್ತು. ಹೊಸ ಕಾರು ಇದೇ ತಿಂಗಳು 25ರಂದು ಮಾರುಕಟ್ಟೆ ಪ್ರವೇಶಿಸುವುದು ಖಚಿತವಾಗಿದ್ದು, ಎಂಟ್ರಿ ಲೆವಲ್ ಐಷಾರಾಮಿ ಕಾರುಗಳಲ್ಲೇ ಅತ್ಯುತ್ತಮ ಫೀಚರ್ಸ್ ಹೊಂದಿರುವ ಎ-ಕ್ಲಾಸ್ ಲಿಮೋಸಿನ್ ಕಾರು ಹಲವಾರು ಸುಧಾರಿತ ತಂತ್ರಜ್ಞಾನ ಪ್ರೇರಿತ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಗೆಯಾಗಲಿರುವ ಟಾಪ್ 5 ಕಾರುಗಳಿವು..!

ಹೊಸ ಎ-ಕ್ಲಾಸ್ ಕಾರಿನಲ್ಲಿ 1.3-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.0-ಲೀಟರ್ ಟರ್ಬೊ ಡೀಸೆಲ್ ಎಂಜಿನ್ ಆಯ್ಕೆಗಳನ್ನು ನೀಡಲಾಗಿದ್ದು, ಸ್ಟ್ಯಾಂಡರ್ಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಹೊಂದಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಗೆಯಾಗಲಿರುವ ಟಾಪ್ 5 ಕಾರುಗಳಿವು..!

2021ರ ಜೀಪ್ ರ‍್ಯಾಂಗ್ಲರ್ ಎಸ್‍ಯುವಿ

ಮೇಡ್ ಇನ್ ಇಂಡಿಯಾ 2021ರ ಜೀಪ್ ರ‍್ಯಾಂಗ್ಲರ್ ಎಸ್‍ಯುವಿಯು ಈ ತಿಂಗಳು ಮಧ್ಯಂತರದಲ್ಲಿ ದೇಶಿಯ ಮಾರುಕಟ್ಟೆಗೆ ಲಗ್ಗೆಯಿಡಲು ಸಜ್ಜಾಗಿದ್ದು, ಹೊಸ ರ‍್ಯಾಂಗ್ಲರ್ ಎಸ್‍ಯುವಿಯನ್ನು ಮೊದಲ ಬಾರಿಗೆ ಸ್ಥಳೀಯವಾಗಿ ಉತ್ಪಾದನೆ ಮಾಡಿರುವುದರಿಂದ ಹೊಸ ಕಾರಿನ ಬೆಲೆ ಇಳಿಮುಖವಾಗುವ ಸಾಧ್ಯತೆಗಳಿವೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಗೆಯಾಗಲಿರುವ ಟಾಪ್ 5 ಕಾರುಗಳಿವು..!

268-ಬಿಎಚ್‌ಪಿ ಪ್ರೇರಿತ 2.0-ಲೀಟರ್ ಹೈ ಪವರ್ ಪೆಟ್ರೋಲ್ ಎಂಜಿನ್ ಹೊಂದಿರುವ ಹೊಸ ರ‍್ಯಾಂಗ್ಲರ್ ಎಸ್‍ಯುವಿ ಫ್ಹೋರ್ ವ್ಹೀಲ್ ಡ್ರೈವ್ ಹೈ ಮತ್ತು ಲೋ ಮೋಡ್ ಗಳನ್ನು ಹೊಂದಿದ್ದು, ಈ ಹೊಸ ಫ್ಹೋರ್ ವ್ಹೀಲ್ ಡ್ರೈವ್ ಆಟೋ ಮೋಡ್ ಜೊತೆಗೆ ಟ್ರ್ಯಾಕ್ಷನ್ ಸ್ಲಿಪ್ ಸೆನ್ಸಾರ್ ಗಳನ್ನು ಒಳಗೊಂಡಿರಲಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಗೆಯಾಗಲಿರುವ ಟಾಪ್ 5 ಕಾರುಗಳಿವು..!

ಜಾಗ್ವಾರ್ ಐ-ಪೇಸ್ ಎಲೆಕ್ಟ್ರಿಕ್ ಎಸ್‍ಯುವಿ

ಜೆಎಲ್ಆರ್ ಕಂಪನಿಯು ತನ್ನ ಮೊದಲ ಆಲ್-ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯಾದ ಜಾಗ್ವಾರ್ ಐ-ಪೇಸ್ ಎಸ್‌ಯುವಿ ಕಾರು ಮಾದರಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇದೇ ತಿಂಗಳು 9ರಂದು ಬಿಡುಗಡೆಗೊಳಿಸಲು ಸಜ್ಜಾಗಿದ್ದು, 90 ಕಿ.ವ್ಯಾಟ್ ಲಿಥಿಯಂ-ಐಯಾನ್ ಬ್ಯಾಟರಿ ಪ್ಯಾಕ್‌ ಹೊಂದಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಗೆಯಾಗಲಿರುವ ಟಾಪ್ 5 ಕಾರುಗಳಿವು..!

ಹೊಸ ಕಾರು 395 ಬಿಹೆಚ್‍ಪಿ ಪವರ್ ಮತ್ತು 696 ಎನ್ಎಂ ಟಾರ್ಕ್ ಅನ್ನು ಉತ್ಪಾದನೆಯೊಂದಿಗೆ ಪ್ರತಿ ಚಾರ್ಜ್‌ಗೆ 470 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ. ಈ ಎಲೆಕ್ಟ್ರಿಕ್ ಎಸ್‌ಯುವಿ ಕೇವಲ 4.8 ಸೆಕೆಂಡುಗಳಲ್ಲಿ 0 ರಿಂದ 100 ಕಿ.ಮೀ ವೇಗವನ್ನು ಪಡೆದುಕೊಳ್ಳಲಿದ್ದು, ಸಾಮಾನ್ಯ ಕಾರು ಮಾದರಿಗಿಂತಲೂ ಶೇ.20ರಷ್ಟು ಹೆಚ್ಚು ದುಬಾರಿಯಾಗಬಹುದಾಗಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಗೆಯಾಗಲಿರುವ ಟಾಪ್ 5 ಕಾರುಗಳಿವು..!

ಬಿಎಂಡಬ್ಲ್ಯು ಎಂ340ಐ

ಜರ್ಮನ್ ಮೂಲದ ಐಷಾರಾಮಿ ಕಾರು ತಯಾರಕ ಕಂಪನಿಯಾದ ಬಿಎಂಡಬ್ಲ್ಯು ತನ್ನ ಹೊಸ ಎಂ340ಐ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದ್ದು, ಹೊಸ ಕಾರು ಮಾರ್ಚ್ 10 ರಂದು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ.

ಮಾರ್ಚ್ ತಿಂಗಳಿನಲ್ಲಿ ಬಿಡುಗಡೆಗೆಯಾಗಲಿರುವ ಟಾಪ್ 5 ಕಾರುಗಳಿವು..!

ಹೊಸ ಕಾರಿನಲ್ಲಿ ಎಂ ಪರ್ಫಾರ್ಮೆನ್ಸ್ ನಂತೆ ಡೈನಾಮಿಕ್ಸ್ ನೀಡುವುದರೊಂದಿಗೆ ಉತ್ತಮ ಕಾರ್ಯಕ್ಷಮತೆಯನ್ನು ಒದಗಿಸುವ ಮಾದರಿಯಂತೆ ರೀ ಟ್ಯೂನ್ ಮಾಡಲಾಗಿದ್ದರೂ ಸಾಮಾನ್ಯ ಮಾದರಿಯಲ್ಲಿರುವ 3.0-ಲೀಟರ್, ಆರು ಸಿಲಿಂಡರ್ ಮೋಟಾರ್ ಎಂಜಿನ್ ಅನ್ನು ಅಳವಡಿಸಲಾಗುತ್ತಿದೆ.

Article Published On: Monday, March 1, 2021, 10:57 [IST]
English summary
Upcoming Car Launches In March 2021. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+