ಭಾರತದಲ್ಲಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಸಿಟ್ರನ್ ಇಂಡಿಯಾ ಕಂಪನಿಯು ಸಿ5 ಏರ್‌ಕ್ರಾಸ್ ಐಷಾರಾಮಿ ಎಸ್‌ಯುವಿ ಬಿಡುಗಡೆಯ ಬಹುನೀರಿಕ್ಷಿತ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯ ಬಿಡುಗಡೆಯ ತಯಾರಿ ನಡೆಸುತ್ತಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾದರಗಳಲ್ಲೇ ವಿಶೇಷ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ.

ಭಾರತದಲ್ಲಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಐಷಾರಾಮಿ ಸೌಲಭ್ಯಗಳೊಂದಿಗೆ ತುಸು ದುಬಾರಿಯಾಗಿದ್ದರೂ ಸಿ5 ಏರ್‌ಕ್ರಾಸ್ ಏಸ್‌ಯುವಿ ಕಾರು ಮಾದರಿಯು ಫುಲ್ ಸೈಜ್ ಎಸ್‌ಯುವಿ ವಿಭಾಗದಲ್ಲಿ ಉತ್ತಮ ತಾಂತ್ರಿಕ ಅಂಶಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಇದೀಗ ಹೊಸದಾಗಿ ಬಿಡುಗಡೆಯಾಗುತ್ತಿರುವ ಸಿ3 ಏರೋಕ್ರಾಸ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಮಧ್ಯಮ ವರ್ಗದ ಗ್ರಾಹಕರನ್ನು ಗುರಿಯಾಗಿಸಿಕೊಂಡು ಬಿಡುಗಡೆ ಮಡಲಾಗುತ್ತಿದೆ.

ಭಾರತದಲ್ಲಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಸಿಟ್ರನ್ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಎಸ್‌ಯುವಿ, ಕಂಪ್ಯಾಕ್ಟ್ ಎಸ್‌ಯುವಿ, ಎಂಪಿವಿ ಮತ್ತು ಹ್ಯಾಚ್‌ಬ್ಯಾಕ್ ಕಾರುಗಳನ್ನು ಮಾರಾಟ ಮಾಡುವ ಯೋಜನೆಯಲ್ಲಿದ್ದು, ಎಸ್‌ಯುವಿ ಬಿಡುಗಡೆಯ ನಂತರ ಇದೀಗ ಕಂಪ್ಯಾಕ್ಟ್ ಎಸ್‌ಯುವಿ ಕಾರಿನ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಹಂತ-ಹಂತವಾಗಿ ಪೂರ್ಣಗೊಳಿಸುತ್ತಿದೆ.

ಭಾರತದಲ್ಲಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಭಾರತದಲ್ಲಿ ಹೊಸ ಸಬ್ ಫೋರ್ ಮೀಟರ್(4 ಮೀಟರ್ ಉದ್ದಳತೆಗಿಂತಲೂ ಕಡಿಮೆ) ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಿಗೆ ಉತ್ತಮ ಬೇಡಿಕೆಯಿದ್ದು, ಸಿ21 ಕೋಡ್ ನೆಮ್ ಆಧರಿಸಿರುವ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಸಿಟ್ರನ್ ಕಂಪನಿಯು 2022ರ ಆರಂಭದಲ್ಲಿ ಬಿಡುಗಡೆ ಮಾಡುವುದು ಬಹುತೇಕ ಖಚಿತವಾಗಿದೆ.

ಭಾರತದಲ್ಲಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಾರು ಭಾರತ ಸೇರಿದಂತೆ ವಿಶ್ವದ ಪ್ರಮುಖ ಮಾರುಕಟ್ಟೆಗಳನ್ನು ಪ್ರವೇಶಿಸುವ ಸಿದ್ದತೆಯಲ್ಲಿದ್ದು, ಹೊಸ ಕಾರಿನ ಕುರಿತಾದ ಅಧಿಕೃತ ಡಿಸೈನ್ ಕುರಿತಾದ ವಿನ್ಯಾಸವು ಈಗಾಗಲೇ ಬಹಿರಂಗವಾಗಿದೆ. ರೋಡ್ ಟೆಸ್ಟಿಂಗ್ ಮಾದರಿಯಲ್ಲಿನ ಬಹುತೇಕ ವಿನ್ಯಾಸವನ್ನು ಉತ್ಪಾದನಾ ಮಾದರಿಯಲ್ಲೂ ಪಡೆದುಕೊಂಡಿದ್ದು, ಹೊಸ ಕಾರು ಮುಂಬರುವ ಸಂಕ್ರಾಂತಿ ಹೊತ್ತಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಭಾರತದಲ್ಲಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಸದ್ಯ ಸಿ5 ಏರ್‌ಕ್ರಾಸ್ ಬಿಡುಗಡೆಯೊಂದಿಗೆ ಭಾರತದಲ್ಲಿ ಕಾರು ಮಾರಾಟ ಮಳಿಗೆಗಳನ್ನು ವಿಸ್ತರಣೆ ಮಾಡುತ್ತಿರುವ ಸಿಟ್ರನ್ ಕಂಪನಿಯು ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆಯ ಹೊತ್ತಿಗೆ ಮತ್ತಷ್ಟು ಹೊಸ ಶೋರೂಂ ತೆರೆಯುವ ಸಿದ್ದತೆಯಲ್ಲಿದ್ದು, ಹೊಸ ಕಾರುಗಳ ಅಭಿವೃದ್ದಿಗೆ ಶೇ.90 ರಷ್ಟು ಸ್ಥಳೀಯ ಸಂಪನ್ಮೂಲ ಬಳಕೆ ಮಾಡುವ ಗುರಿಹೊಂದಿದೆ.

ಭಾರತದಲ್ಲಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಸಿ5 ಏರ್‌ಕ್ರಾಸ್ ಕಾರು ಮಾದರಿಯಲ್ಲಿ 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆ ಮಾತ್ರ ನೀಡಿರುವ ಸಿಟ್ರನ್ ಕಂಪನಿಯ ಹೊಸ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಎರಡು ಪ್ರಮುಖ ಪೆಟ್ರೋಲ್ ಎಂಜಿನ್ ಆಯ್ಕೆಗಳನ್ನು ಮಾತ್ರವೇ ಬಿಡುಗಡೆ ಮಾಡುತ್ತಿದೆ.

ಭಾರತದಲ್ಲಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಪೂರ್ವ ನಿಗದಿಯೆಂತೆ ಸಿ5 ಏರ್‌ಕ್ರಾಸ್ ಮಾದರಿಗಾಗಿ ಮಾತ್ರವೇ ಡೀಸೆಲ್ ಎಂಜಿನ್ ಆಯ್ಕೆ ನೀಡಿರುವ ಸಿಟ್ರನ್ ಕಂಪನಿಯು ಮುಂಬರುವ ಹೊಸ ಕಾರುಗಳಲ್ಲಿ ಪೆಟ್ರೋಲ್ ಮತ್ತು ಎಲೆಕ್ಟ್ರಿಕ್ ಮಾದರಿಗಳನ್ನು ಮಾತ್ರ ಮಾರಾಟ ಮಾಡುವುದಾಗಿ ನಿರ್ಣಯ ಪ್ರಕಟಿಸಿದೆ.

ಭಾರತದಲ್ಲಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಹೀಗಾಗಿ ಬಿಡುಗಡೆಯಾಗಲಿರುವ ಸಿ3 ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೊ ಪೆಟ್ರೋಲ್ ಮಾದರಿಗಳನ್ನು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಎರಡು ಗೇರ್‌ಬಾಕ್ಸ್ ಆಯ್ಕೆಗಳಿರಲಿವೆ.

ಭಾರತದಲ್ಲಿ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಬಿಡುಗಡೆ ಮಾಹಿತಿ ಬಹಿರಂಗ

ಈ ಮೂಲಕ ಸಿಟ್ರನ್ ಹೊಸ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 8 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.13 ಲಕ್ಷ ಬೆಲೆ ಅಂತರದಲ್ಲಿ ಮಾರಾಟವಾಗುವ ನೀರಿಕ್ಷೆಯಿದ್ದು, ಹೊಸ ಕಾರು ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ವೆನ್ಯೂ, ಕಿಯಾ ಸೊನೆಟ್, ಟಾಟಾ ನೆಕ್ಸಾನ್, ಮಹೀಂದ್ರಾ ಎಕ್ಸ್‌ಯುವಿ300 ಕಾರುಗಳಿಗೆ ಉತ್ತಮ ಪೈಟೋಟಿ ನೀಡಲಿದೆ.

More from DriveSpark

Article Published On: Monday, July 12, 2021, 16:03 [IST]
English summary
Citroen C3 Compact SUV Could Be Launched Next Year. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+