ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಿ‌ಎನ್‌ಜಿ ಕಾರುಗಳಿವು

ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿವೆ. ಈ ಹಿನ್ನೆಲೆಯಲ್ಲಿ ವಾಹನ ಸವಾರರು ಪರ್ಯಾಯ ಇಂಧನಗಳಲ್ಲಿ ಚಲಿಸುವ ವಾಹನಗಳತ್ತ ಮುಖ ಮಾಡಿದ್ದಾರೆ. ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳಿಗಿಂತ ಸಿಎನ್‌ಜಿ ವಾಹನಗಳಿಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಎಲೆಕ್ಟ್ರಿಕ್ ವಾಹನಗಳು ಪೆಟ್ರೋಲ್, ಡೀಸೆಲ್ ವಾಹನಗಳಿಗಿಂತ ದುಬಾರಿ ಎಂಬುದು ಇದಕ್ಕೆ ಪ್ರಮುಖ ಕಾರಣ.

ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಿ‌ಎನ್‌ಜಿ ಕಾರುಗಳಿವು

ಬಹುತೇಕ ಎಲ್ಲಾ ಪ್ರಮುಖ ವಾಹನ ತಯಾರಕ ಕಂಪನಿಗಳು ಸಿಎನ್‌ಜಿ ವಾಹನಗಳನ್ನು ಬಿಡುಗಡೆಗೊಳಿಸುವಲ್ಲಿ ನಿರತವಾಗಿವೆ. ಭಾರತದಲ್ಲಿ ಈಗಾಗಲೇ ಹಲವು ಕಂಪನಿಗಳ ಸಿಎನ್‌ಜಿ ಕಾರುಗಳು ಮಾರಾಟವಾಗುತ್ತಿವೆ. ಮುಂಬರುವ ದಿನಗಳಲ್ಲಿ ಇನ್ನೂ ಹಲವು ಸಿಎನ್‌ಜಿ ಕಾರುಗಳು ಬಿಡುಗಡೆಯಾಗಲಿವೆ. ಅವು ಯಾವುವು ಎಂಬುದನ್ನು ಈ ಲೇಖನದಲ್ಲಿ ನೋಡೋಣ.

ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಿ‌ಎನ್‌ಜಿ ಕಾರುಗಳಿವು

Maruti Suzuki Dzire

Maruti Suzuki ಭಾರತದ ನಂ 1 ಕಾರು ತಯಾರಕ ಕಂಪನಿಯಾಗಿದೆ. ಕಂಪನಿಯ ಪೆಟ್ರೋಲ್, ಡೀಸೆಲ್ ಕಾರುಗಳು ಭಾರತದಲ್ಲಿ ಹೆಚ್ಚು ಜನಪ್ರಿಯವಾಗಿವೆ. Maruti Suzuki ಕಂಪನಿಯು ಕೆಲವು ಸಿಎನ್‌ಜಿ ಕಾರುಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ. Maruti Suzuki Dzire ಕಾರು ಭಾರತದ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ.

ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಿ‌ಎನ್‌ಜಿ ಕಾರುಗಳಿವು

Maruti Suzuki ಕಂಪನಿಯು Dzire ಕಾರಿನ ಸಿಎನ್‌ಜಿ ಆವೃತ್ತಿಯನ್ನು ಪರೀಕ್ಷಿಸುತ್ತಿದೆ. Maruti Suzuki ಕಂಪನಿಯು ಈಗ ಇರುವ ಎಂಜಿನ್‌ಗಳೊಂದಿಗೆ ಈ ಕಾರ್ ಅನ್ನು ಮಾರಾಟ ಮಾಡಲಿದೆ. ಈ ಎಂಜಿನ್ ಗರಿಷ್ಠ 80 ಬಿ‌ಹೆಚ್‌ಪಿ ಪವರ್ ಹಾಗೂ 113 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಆದರೆ ಸಿಎನ್‌ಜಿ ಆವೃತ್ತಿಯಲ್ಲಿರುವ ಎಂಜಿನ್ 67 ಬಿ‌ಹೆಚ್‌ಪಿ ಪವರ್ ಹಾಗೂ 95 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಿ‌ಎನ್‌ಜಿ ಕಾರುಗಳಿವು

Maruti Suzuki Vitara Brezza

Maruti Suzuki Vitara Brezza ಸಿಎನ್‌ಜಿ ಎಂಜಿನ್ ನೊಂದಿಗೆ ಮಾರಾಟವಾಗಿವ ಮೊದಲ ಕಾಂಪ್ಯಾಕ್ಟ್ ಎಸ್‌ಯುವಿಯಾಗಿರಬಹುದು. ಈ ಕಾರು ಅದೇ 1.5-ಲೀಟರ್ ನಾಲ್ಕು ಸಿಲಿಂಡರ್ ನೈಸರ್ಗಿಕವಾಗಿ ಆಸ್ಪಿರೇಟೆಡ್ ಎಂಜಿನ್‌ನೊಂದಿಗೆ ಲಭ್ಯವಿರುತ್ತದೆ. ಈ ಎಂಜಿನ್ ಗರಿಷ್ಠ 101 ಬಿ‌ಹೆಚ್‌ಪಿ ಪವರ್ ಹಾಗೂ 138 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ.

ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಿ‌ಎನ್‌ಜಿ ಕಾರುಗಳಿವು

ಆದರೆ ಈ ಎಂಜಿನ್ ಸಿಎನ್‌ಜಿ ಯೊಂದಿಗೆ ಕಾರ್ಯನಿರ್ವಹಿಸುವಾಗ ಎಲೆಕ್ಟ್ರಿಕ್ ಉತ್ಪಾದನೆಯು 90 ಬಿ‌ಹೆಚ್‌ಪಿ ಪವರ್ ಹಾಗೂ 122 ಎನ್ಎಂ ಟಾರ್ಕ್ ನಷ್ಟಾಗುತ್ತದೆ. Maruti Suzuki Vitara Brezza ಸಿಎನ್‌ಜಿ ಆವೃತ್ತಿಯು 5 ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಆಯ್ಕೆಯೊಂದಿಗೆ ಲಭ್ಯವಿರಲಿದೆ. ಬಹು ನಿರೀಕ್ಷಿತ ಸಿಎನ್‌ಜಿ ಕಾರುಗಳಲ್ಲಿ ಈ ಕಾರು ಸಹ ಸೇರಿದೆ.

ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಿ‌ಎನ್‌ಜಿ ಕಾರುಗಳಿವು

Tata Nexon

Tata Nexon ಕಾರು ಪುಣೆ ಬಳಿ ಪರೀಕ್ಷಾರ್ಥ ಚಾಲನೆ ನಡೆಸುವಾಗ ಕ್ಯಾಮರಾ ಕಣ್ಣಿಗೆ ಬಿದ್ದಿತ್ತು. ಇದು Tata Nexon ಕಾರಿನ ಹೊಸ ಸಿಎನ್‌ಜಿ ಆವೃತ್ತಿಯೆಂದು ನಂಬಲಾಗಿದೆ. Tata Nexon ಸಿಎನ್‌ಜಿ ಕಾರು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ನಂತರ Maruti Suzuki Vitara Brezza ಸಿಎನ್‌ಜಿ ಕಾರಿಗೆ ಪೈಪೋಟಿ ನೀಡಲಿದೆ.

ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಿ‌ಎನ್‌ಜಿ ಕಾರುಗಳಿವು

Tata Motors ಕಂಪನಿಯು ಈ ಕಾರಿನಲ್ಲಿ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಬಳಸುತ್ತದೆಯೇ ಅಥವಾ ನ್ಯಾಚುರಲಿ ಆಸ್ಪಿರೇಟೆಡ್ ಎಂಜಿನ್ ಬಳಸಲಿದೆಯೇ ಎಂಬುದು ಖಚಿತವಾಗಿಲ್ಲ. ಆದರೆ ಸಾಕಷ್ಟು ಸಂಖ್ಯೆಯ ಜನರು ಈಗಾಗಲೇ ತಮ್ಮ Tata Nexon ಕಾರುಗಳಲ್ಲಿ ಸಿಎನ್‌ಜಿ ಕಿಟ್ ಗಳನ್ನು ಬಳಸುತ್ತಿದ್ದಾರೆ. ಸದ್ಯಕ್ಕೆ Tata Nexon ಸಿಎನ್‌ಜಿ ಕಾರಿನ ಬಗ್ಗೆ ಹೆಚ್ಚು ಮಾಹಿತಿ ಲಭ್ಯವಾಗಿಲ್ಲ.

ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಿ‌ಎನ್‌ಜಿ ಕಾರುಗಳಿವು

Tata Tiago

Tata Motors ಕಂಪನಿಯು ತನ್ನ Tiago ಕಾರಿನ ಸಿಎನ್‌ಜಿ ಆವೃತ್ತಿಯನ್ನು ಬಿಡುಗಡೆಗೊಳಿಸುವ ಪ್ರಕ್ರಿಯೆಯಲ್ಲಿ ನಿರತವಾಗಿದೆ. Tiago ಕಾರಿನ ಸಿಎನ್‌ಜಿ ಮಾದರಿಯಲ್ಲಿ ಯಾವುದೇ ಕಾಸ್ಮೆಟಿಕ್ ಬದಲಾವಣೆಗಳನ್ನು ಮಾಡುವ ಸಾಧ್ಯತೆಗಲಿಲ್ಲ. ಈ ಹೊಸ ಆವೃತ್ತಿಯು ಈಗ ಇರುವ 1.2 ಲೀಟರ್ ಮೂರು ಸಿಲಿಂಡರ್ ನ್ಯಾಚುರಲಿ ಆಸ್ಪಿರೇಟೆಡ್ ಎಂಜಿನ್‌ನೊಂದಿಗೆ ಲಭ್ಯವಿರಲಿದೆ.

ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಿ‌ಎನ್‌ಜಿ ಕಾರುಗಳಿವು

ಈ ಎಂಜಿನ್ ಗರಿಷ್ಠ 83 ಬಿ‌ಹೆಚ್‌ಪಿ ಪವರ್ ಹಾಗೂ 113 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಆದರೆ ಸಿಎನ್‌ಜಿ ಮಾದರಿಯಲ್ಲಿ ಈ ಎಂಜಿನ್ ಇದಕ್ಕಿಂತ ಕಡಿಮೆ ಪ್ರಮಾಣದ ಪವರ್ ಉತ್ಪಾದಿಸಲಿದೆ ಎಂದು ಹೇಳಲಾಗಿದೆ. Tata Tiago ದೇಶಿಯ ಮಾರುಕಟ್ಟೆಯ ಬಹು ನಿರೀಕ್ಷಿತ ಸಿಎನ್‌ಜಿ ಕಾರುಗಳಲ್ಲಿ ಒಂದಾಗಿದೆ.

ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಿ‌ಎನ್‌ಜಿ ಕಾರುಗಳಿವು

Toyota Innova Crysta

Toyota ಕಂಪನಿಯು ತನ್ನ Innova Crysta ಕಾರಿನ ಸಿಎನ್‌ಜಿ ಆವೃತ್ತಿಯನ್ನು ಬಿಡುಗಡೆಗೊಳಿಸುವ ಪ್ರಕ್ರಿಯೆಯಲ್ಲಿ ನಿರತವಾಗಿದೆ ಎಂದು ವರದಿಯಾಗಿದೆ. ಈ ಕಾರು 2.7 ಲೀಟರ್ ಪೆಟ್ರೋಲ್ ಎಂಜಿನ್ ಫ್ಯಾಕ್ಟರಿ ಫಿಟ್ಟೆಡ್ ಸಿಎನ್‌ಜಿ ಯೊಂದಿಗೆ ಬಿಡುಗಡೆಯಾಗಲಿದೆ. ಈ ಆವೃತ್ತಿಯನ್ನು 5 ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ನೊಂದಿಗೆ ಬಿಡುಗಡೆಗೊಳಿಸುವ ನಿರೀಕ್ಷೆಗಳಿವೆ.

ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಿ‌ಎನ್‌ಜಿ ಕಾರುಗಳಿವು

ಪೆಟ್ರೋಲ್ ಎಂಜಿನ್ ನೊಂದಿಗೆ ಚಲಿಸುವಾಗ, ಈ ಎಂಜಿನ್ ಗರಿಷ್ಠ 163 ಬಿ‌ಹೆಚ್‌ಪಿ ಪವರ್ ಹಾಗೂ 245 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಆದರೆ ಸಿಎನ್‌ಜಿ ಎಂಜಿನ್ ನೊಂದಿಗೆ ಚಲಿಸುವಾಗ ಪವರ್ ಹಾಗೂ ಟಾರ್ಕ್ ಉತ್ಪಾದನೆ ಕಡಿಮೆಯಾಗುತ್ತದೆ. Toyota Innova Crysta ದೇಶಿಯ ಮಾರುಕಟ್ಟೆಯಲ್ಲಿರುವ ಅತ್ಯಂತ ಜನಪ್ರಿಯ ಎಂಪಿವಿಗಳಲ್ಲಿ ಒಂದಾಗಿದೆ ಎಂಬುದು ಗಮನಾರ್ಹ.

ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Upcoming cng cars in domestic market details
Story first published: Monday, October 18, 2021, 12:56 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X