Just In
- 24 min ago
ಮಕ್ಕಳಿಗಾಗಿ 60-70 ಕಿ.ಮೀ ಮೈಲೇಜ್ ನೀಡುವ ಮಿನಿ ಎಲೆಕ್ಟ್ರಿಕ್ ಜೀಪ್ ತಯಾರಿಸಿದ ತಂದೆ
- 1 hr ago
ಮಿನಿ ಎಂಪಿವಿ ಕಾರು ಮಾರಾಟದಲ್ಲಿ ರೆನಾಲ್ಟ್ ಟ್ರೈಬರ್ ಹೊಸ ಮೈಲಿಗಲ್ಲು
- 2 hrs ago
ಎಕ್ಸ್‌ಯುವಿ700 ಬಿಡುಗಡೆಯ ನಂತರ ತಾತ್ಕಾಲಿಕವಾಗಿ ಮಾರಾಟದಿಂದ ಸ್ಥಗಿತವಾಗಲಿದೆ ಎಕ್ಸ್‌ಯುವಿ500
- 3 hrs ago
ಭಾರತದಲ್ಲಿ ಬಿಡುಗಡೆಗೆ ಸಜ್ಜಾಗುತ್ತಿದೆ ಬಹುನಿರೀಕ್ಷಿತ ರಾಯಲ್ ಎನ್ಫೀಲ್ಡ್ ಹಂಟರ್ ಬೈಕ್
Don't Miss!
- News
ವರ್ಷಕ್ಕೆ 850 ಮಿಲಿಯನ್ ಸ್ಪುಟ್ನಿಕ್ V ಲಸಿಕೆ ತಯಾರಿಸಲಿದೆ ಭಾರತ
- Sports
ಐಪಿಎಲ್ : ಈ ದಾಖಲೆ ಮಾಡಿದ್ದು ಕೊಹ್ಲಿ ಬಿಟ್ರೆ ಸಂಜು ಸ್ಯಾಮ್ಸನ್
- Lifestyle
ಅಧ್ಯಯನ: ಸ್ಥೂಲಕಾಯದವರ ಸ್ಮರಣಾ ಶಕ್ತಿ ಕಾಪಾಡುತ್ತೆ ಬೆಣ್ಣೆಹಣ್ಣು
- Finance
ಏಪ್ರಿಲ್ 13ರ ಬಿಟ್ಕಾಯಿನ್ ರೇಟ್ ಎಷ್ಟಿದೆ?
- Movies
ಸಾಮಾಜಿಕ ಜಾಲತಾಣಕ್ಕೆ ಅದ್ಧೂರಿಯಾಗಿ ಎಂಟ್ರಿ ಕೊಟ್ಟ ಕನಸುಗಾರ
- Education
WCL Recruitment 2021: 44 ಮೆಡಿಕಲ್ ಸ್ಪೆಷಲಿಸ್ಟ್ ಮತ್ತು ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶೀಘ್ರದಲ್ಲೇ ಬಿಡುಗಡೆಯಾಗಲಿವೆ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರುಗಳಿವು!
ಇಂಧನ ಚಾಲಿತ ವಾಹನಗಳಿಂದಾಗಿ ಹೆಚ್ಚುತ್ತಿರುವ ಮಾಲಿನ್ಯ ಮತ್ತು ಇಂಧನಗಳ ಬೆಲೆ ಏರಿಕೆ ಪರಿಣಾಮ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುತ್ತಿರುವುದು ಮಹತ್ವದ ಬದಲಾವಣೆಗೆ ಕಾರಣವಾಗಿದೆ.

ಎಲೆಕ್ಟ್ರಿಕ್ ವಾಹನಗಳಿಗೆ ಪೂರಕವಾಗಿ ಯುರೋಪ್ ಒಕ್ಕೂಟದಲ್ಲಿನ ಪ್ರಮುಖ ರಾಷ್ಟ್ರಗಳ ನಿರ್ಣಯದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಮಾರಾಟವು ಸಾಕಷ್ಟು ಇಳಿಕೆಯಾಗುತ್ತಿದ್ದು, ಹೈಬ್ರಿಡ್ ಮತ್ತು ಪೂರ್ಣ ಪ್ರಮಾಣದ ಎಲೆಕ್ಟ್ರಿಕ್ ವಾಹನಗಳ ಮಾರಾಟವದಲ್ಲಿ ಸಾಕಷ್ಟು ಬೆಳವಣಿಗೆ ಕಂಡುಬಂದಿದೆ. 2020ರಲ್ಲೇ ಯುರೋಪಿನ ಪ್ರಮುಖ ರಾಷ್ಟ್ರಗಳಲ್ಲಿ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಬರೋಬ್ಬರಿ 5 ಲಕ್ಷ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಮುಂಬರುವ ದಿನಗಳಲ್ಲಿ ವಿವಿಧ ಕಾರು ಕಂಪನಿಗಳು ವಿಶ್ವಾದ್ಯಂತ ಮತ್ತಷ್ಟು ಇವಿ ಮಾರಾಟವನ್ನು ಹೆಚ್ಚಿಸಲು ಸಜ್ಜಾಗುತ್ತಿವೆ.

ಭಾರತದಲ್ಲೂ ಈಗಾಗಲೇ ಪ್ರಮುಖ ಕಾರು ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಿಡುಗಡೆ ಮಾಡಿದ್ದು, 2021ರ ಅವಧಿಯಲ್ಲಿ ಮತ್ತಷ್ಟು ಎಲೆಕ್ಟ್ರಿಕ್ ಕಾರುಗಳು ರಸ್ತೆಗಿಳಿಯಲು ಸಜ್ಜುಗೊಂಡಿವೆ. ಹಾಗಾದ್ರೆ ಬಿಡುಗಡೆಯಾಗಲಿರುವ ಇವಿ ಕಾರುಗಳು ಯಾವುವು? ಅವುಗಳ ವಿಶೇಷತೆ ಏನು ಎನ್ನುವುದನ್ನು ಈ ಲೇಖನದಲ್ಲಿ ತಿಳಿಯೋಣ.

ಮಹೀಂದ್ರಾ ಇಕೆಯುವಿ100
2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಬಿಡುಗಡೆಗೊಂಡಿದ್ದ ಮಹೀಂದ್ರಾ ಇಕೆಯುವಿ100 ಎಲೆಕ್ಟ್ರಿಕ್ ಕಾರು ಮಾದರಿಯು ಮುಂದಿನ ಕೆಲವೇ ದಿನಗಳಲ್ಲಿ ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗುತ್ತಿದ್ದು, ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆಗೊಂಡಿದ್ದರೂ ಕರೋನಾ ವೈರಸ್ ಪರಿಣಾಮ ಕಾರಿನ ವಿತರಣೆಯನ್ನು ಮುಂದೂಡಿಕೆ ಮಾಡಲಾಗಿತ್ತು.

ಇದೀಗ ಹೊಸ ಕಾರಿನ ವಿತರಣೆಯನ್ನು ಆರಂಭಿಸುತ್ತಿರುವ ಮಹೀಂದ್ರಾ ಕಂಪನಿಯು ಇಕೆಯುವಿ100 ಎಲೆಕ್ಟ್ರಿಕ್ ಕಾರಿನ ಬೆಲೆಯನ್ನು ಎಕ್ಸ್‌ಶೋರೂಂ ಪ್ರಕಾರ ರೂ. 8.25 ಲಕ್ಷಕ್ಕೆ ನಿಗದಿಪಡಿಸಿದ್ದು, ಹೊಸ ಕಾರು 40kW ಎಲೆಕ್ಟ್ರಿಕ್ ಮೋಟಾರ್ ಪ್ರತಿ ಚಾರ್ಜ್‌ಗೆ 150 ಕಿ.ಮೀ ರಿಂದ 180 ಕಿ.ಮೀ ಮೈಲೇಜ್ ಹಿಂದಿರುಗಿಸಬಹುದಾಗಿದೆ.

ಟಾಟಾ ಆಲ್‌ಟ್ರೊಜ್ ಇವಿ
ಎಲೆಕ್ಟ್ರಿಕ್ ನೆಕ್ಸಾನ್ ಎಲೆಕ್ಟ್ರಿಕ್ ಮೂಲಕ ಇವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೆ ಆಲ್‌ಟ್ರೊಜ್ ಇವಿ ಮಾದರಿಯನ್ನು ಸಹ ಬಿಡುಗಡೆ ಮಾಡಲಿದೆ.

ಹೊಸ ಕಾರು ಈ ವರ್ಷದ ಮಧ್ಯಂತರದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಕಾರು ಆಕರ್ಷಕ ಬೆಲೆಯೊಂದಿಗೆ ಒಂದು ಬಾರಿ ಚಾರ್ಜ್ ಮಾಡಿದರೆ ಕನಿಷ್ಠ 200 ರಿಂದ ಗರಿಷ್ಠ 250 ಕಿ.ಮೀ ಪ್ರಯಾಣ ಮಾಡಬಹುದಾಗಿದೆ.

ಮಹೀಂದ್ರಾ ಇಎಕ್ಸ್‌ಯುವಿ300
ಇಕೆಯುವಿ100 ಎಲೆಕ್ಟ್ರಿಕ್ ಕಾರಿನ ನಂತರ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಮಾದರಿಯ ಬಿಡುಗಡೆ ಸಿದ್ದವಾಗಿರುವ ಮಹೀಂದ್ರಾ ಕಂಪನಿಯು ಹೊಸ ಕಾರಿನ ಮೂಲಕ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದ್ದು, ಹೊಸ ಕಾರು ತುಸು ದುಬಾರಿ ಬೆಲೆಯೊಂದಿಗೆ ಅತಿ ಹೆಚ್ಚು ಮೈಲೇಜ್ ಪ್ರೇರಿತ ಲೀಥಿಯಂ ಅಯಾನ್ ಬ್ಯಾಟರಿ ಬಳಕೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರು ಮಾದರಿಯು ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಮತ್ತು ಎಂಜಿ ಜೆಡ್ಎಸ್ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದ್ದು, ಪ್ರತಿ ಚಾರ್ಜ್‌ಗೆ 350 ಕಿ.ಮೀ ನಿಂದ 370ಕಿ.ಮೀ ಮೈಲೇಜ್ ರೇಂಜ್‌ನೊಂದಿಗೆ ರೂ. 14 ಲಕ್ಷದಿಂದ ರೂ.18 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

ವೊಲ್ವೊ ಎಕ್ಸ್‌ಸಿ40 ರೀಚಾರ್ಜ್
ಹೈಬ್ರಿಡ್ ಎಂಜಿನ್ ವಾಹನ ಉತ್ಪಾದನೆಯಲ್ಲಿ ಈಗಾಗಲೇ ಮುಂಚೂಣಿ ಹೊಂದಿರುವ ವೊಲ್ವೊ ಕಂಪನಿಯು 2023ರ ವೇಳೆಗೆ ಒಟ್ಟು 6 ಕಾರು ಮಾದರಿಗಳನ್ನು ಎಲೆಕ್ಟ್ರಿಕ್ ರೂಪಾಂತರದಲ್ಲಿ ಮಾರಾಟಮಾಡುವ ಗುರಿಹೊಂದಿದ್ದು, ಇದೇ ವರ್ಷದ ಮಧ್ಯಂತರದಲ್ಲಿ ಭಾರತದಲ್ಲಿ ಮೊದಲ ಇವಿ ಕಾರು ಮಾದರಿಯಾಗಿ ಎಕ್ಸ್‌ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಮಾದರಿಯನ್ನು ಬಿಡುಗಡೆಗಡೆಗೊಳಿಸುತ್ತಿದೆ.

ಅಕ್ಟೊಬರ್ ಆರಂಭದಲ್ಲಿ ಹೊಸ ಕಾರಿನ ವಿತರಣೆಯು ಆರಂಭವಾಗಲಿದ್ದು, ಹೊಸ ಕಾರು ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಯಿಂದಲೇ ಆಮದುಗೊಳ್ಳಲಿದೆ. ಹೊಸ ಕಾರಿನಲ್ಲಿ ಕಂಪನಿಯು 78kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು,ಪ್ರತಿ ಚಾರ್ಜ್‌ಗೆ ಗರಿಷ್ಠ 418 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಆಡಿ ಇ-ಟ್ರಾನ್
ಯುರೋಪ್ ಮಾರುಕಟ್ಟೆಯಲ್ಲಿ ಪ್ರಸ್ತುಕ ವರ್ಷದ ಹಣಕಾಸು ಅವಧಿಯಲ್ಲಿ ಒಟ್ಟು 18 ಸಾವಿರ ಯುನಿಟ್ ಮಾರಾಟಗೊಳ್ಳುವ ಮೂಲಕ ಬೆಸ್ಟ್ ಸೆಲ್ಲಿಂಗ್ ಎಲೆಕ್ಟ್ರಿಕ್ ಎಸ್‌ಯುವಿ ಕಾರು ಮಾದರಿಯಾಗಿ ಹೊರಹೊಮ್ಮಿರುವ ಇ-ಟ್ರಾನ್ ಕಾರು ಭಾರತದಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುವ ವಿಶ್ವಾಸದಲ್ಲಿದೆ.

95kWh ಲೀಥಿಯಂ ಅಯಾನ್ ಬ್ಯಾಟರಿ ಸೌಲಭ್ಯದೊಂದಿಗೆ ಪ್ರತಿ ಗಂಟೆಗೆ 200ಕಿ.ಮಿ ಟಾಪ್ ಸ್ಪೀಡ್ ಪಡೆದುಕೊಂಡಿರುವ ಇ-ಟ್ರಾನ್ ಕಾರು ತಿ ಚಾರ್ಜ್‌ಗೆ 430ಕಿ.ಮೀ ಅಧಿಕ ಮೈಲೇಜ್ ಹಿಂದಿರುಗಿಸುತ್ತದೆ. ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 80 ಲಕ್ಷದಿಂದ ರೂ. 90 ಲಕ್ಷ ಇರಬಹುದೆಂದು ಅಂದಾಜಿಸಲಾಗಿದೆ.

ಮರ್ಸಿಡಿಸ್ ಬೆಂಝ್ ಇಕ್ಯೂಎಸ್ ಸೆಡಾನ್
ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಮರ್ಸಿಡಿಸ್ ಬೆಂಝ್ ಕೂಡಾ ಈಗಾಗಲೇ ಇಕ್ಯೂಸಿ 400, ಇಕ್ಯೂಎ ಎಲೆಕ್ಟ್ರಿಕ್ ಎಸ್‌ಯುವಿಯೊಂದಿಗೆ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ಶೀಘ್ರದಲ್ಲೇ ಕಂಪನಿಯು ಇಕ್ಯೂಎಸ್ ಸೆಡಾನ್ ಮಾದರಿಯು ಬಿಡುಗಡೆ ಮಾಡುತ್ತಿದೆ.

ಇಕ್ಯೂಸಿ 400, ಇಕ್ಯೂಎ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಹೊಸ ಇಕ್ಯೂಎಸ್ ಮಾದರಿಯು ಮೈಲೇಜ್‌ನಲ್ಲೂ ಗಮನಸೆಳೆಯಲಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಹೊಸ ಕಾರು ಪ್ರಮುಖ ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.