ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಇಂಧನ ಚಾಲಿತ ವಾಹನಗಳಿಂದಾಗಿ ಹೆಚ್ಚುತ್ತಿರುವ ಮಾಲಿನ್ಯ ಮತ್ತು ಇಂಧನಗಳ ಬೆಲೆ ಏರಿಕೆ ಪರಿಣಾಮ ವಿವಿಧ ರಾಷ್ಟ್ರಗಳು 2030ರಿಂದಲೇ ಸಂಪೂರ್ಣವಾಗಿ ಇಂಧನ ಚಾಲಿತ ವಾಹನಗಳ ಮಾರಾಟವನ್ನು ಪೂರ್ಣಪ್ರಮಾಣದಲ್ಲಿ ಸ್ಥಗಿತಗೊಳಿಸುವ ನಿರ್ಣಯ ಕೈಗೊಂಡಿದ್ದು, ಇದಕ್ಕೆ ಪೂರಕವಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸುತ್ತಿರುವುದು ಮಹತ್ವದ ಬದಲಾವಣೆಗೆ ಕಾರಣವಾಗುತ್ತಿದೆ.

ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಭಾರತದಲ್ಲೂ ಈಗಾಗಲೇ ಟಾಟಾ, ಹ್ಯುಂಡೈ, ಎಂಜಿ ಸೇರಿದಂತೆ ಪ್ರಮುಖ ಕಾರು ಕಂಪನಿಗಳು ವಿವಿಧ ಮಾದರಿಯ ಎಲೆಕ್ಟ್ರಿಕ್ ಕಾರು ಮಾದರಿಗಳನ್ನು ಬಿಡುಗಡೆ ಮಾಡಿದ್ದು, 2022ರ ಆರಂಭದಲ್ಲಿ ಮತ್ತಷ್ಟು ಹೊಸ ಎಲೆಕ್ಟ್ರಿಕ್ ಕಾರುಗಳು ರಸ್ತೆಗಿಳಿಯಲು ಸಜ್ಜುಗೊಂಡಿವೆ. ಹಾಗಾದ್ರೆ ಬಿಡುಗಡೆಯಾಗಲಿರುವ ಇವಿ ಕಾರುಗಳು ಯಾವುವು? ಅವುಗಳ ವಿಶೇಷತೆ ಏನು ಎನ್ನುವುದನ್ನು ಈ ಲೇಖನದಲ್ಲಿ ತಿಳಿಯೋಣ.

ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಮಹೀಂದ್ರಾ ಇಕೆಯುವಿ100

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಬಿಡುಗಡೆಗೊಂಡಿದ್ದ ಮಹೀಂದ್ರಾ ಇಕೆಯುವಿ100 ಎಲೆಕ್ಟ್ರಿಕ್ ಕಾರು ಮಾದರಿಯು ಮುಂದಿನ ಕೆಲವೇ ದಿನಗಳಲ್ಲಿ ಮಾರುಕಟ್ಟೆ ಪ್ರವೇಶಿಸಲು ಸಜ್ಜಾಗುತ್ತಿದ್ದು, ಹೊಸ ಎಲೆಕ್ಟ್ರಿಕ್ ಕಾರು ಬಿಡುಗಡೆಗೊಂಡಿದ್ದರೂ ಕರೋನಾ ವೈರಸ್ ಪರಿಣಾಮ ಕಾರಿನ ವಿತರಣೆಯನ್ನು ಮುಂದೂಡಿಕೆ ಮಾಡಲಾಗಿತ್ತು.

ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಇದೀಗ ಹೊಸ ಕಾರಿನ ವಿತರಣೆಯನ್ನು ಆರಂಭಿಸುತ್ತಿರುವ ಮಹೀಂದ್ರಾ ಕಂಪನಿಯು ಇಕೆಯುವಿ100 ಎಲೆಕ್ಟ್ರಿಕ್ ಕಾರಿನ ಬೆಲೆಯನ್ನು ಎಕ್ಸ್‌ಶೋರೂಂ ಪ್ರಕಾರ ರೂ. 8.25 ಲಕ್ಷಕ್ಕೆ ನಿಗದಿಪಡಿಸಿದ್ದು, ಹೊಸ ಕಾರು 40kW ಎಲೆಕ್ಟ್ರಿಕ್ ಮೋಟಾರ್ ಪ್ರತಿ ಚಾರ್ಜ್‌ಗೆ 150 ಕಿ.ಮೀ ರಿಂದ 180 ಕಿ.ಮೀ ಮೈಲೇಜ್ ಹಿಂದಿರುಗಿಸಬಹುದಾಗಿದೆ.

ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಟಾಟಾ ಆಲ್‌ಟ್ರೊಜ್ ಇವಿ

ಎಲೆಕ್ಟ್ರಿಕ್ ನೆಕ್ಸಾನ್ ಎಲೆಕ್ಟ್ರಿಕ್ ಮೂಲಕ ಇವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿರುವ ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೆ ಆಲ್‌ಟ್ರೊಜ್ ಇವಿ ಮಾದರಿಯನ್ನು ಸಹ ಬಿಡುಗಡೆ ಮಾಡಲಿದೆ.

ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಹೊಸ ಕಾರು ಈ ವರ್ಷದ ಕೊನೆಯಲ್ಲಿ ಇಲ್ಲವೇ 2022ರ ಆರಂಭದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಕಾರು ಆಕರ್ಷಕ ಬೆಲೆಯೊಂದಿಗೆ ಒಂದು ಬಾರಿ ಚಾರ್ಜ್ ಮಾಡಿದರೆ ಕನಿಷ್ಠ 300 ರಿಂದ ಗರಿಷ್ಠ 350 ಕಿ.ಮೀ ಪ್ರಯಾಣ ಮಾಡಬಹುದಾಗಿದೆ.

ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಮಹೀಂದ್ರಾ ಇಎಕ್ಸ್‌ಯುವಿ300

ಇಕೆಯುವಿ100 ಎಲೆಕ್ಟ್ರಿಕ್ ಕಾರಿನ ನಂತರ ಎಕ್ಸ್‌ಯುವಿ300 ಎಲೆಕ್ಟ್ರಿಕ್ ಮಾದರಿಯ ಬಿಡುಗಡೆ ಸಿದ್ದವಾಗಿರುವ ಮಹೀಂದ್ರಾ ಕಂಪನಿಯು ಹೊಸ ಕಾರಿನ ಮೂಲಕ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದ್ದು, ಹೊಸ ಕಾರು ತುಸು ದುಬಾರಿ ಬೆಲೆಯೊಂದಿಗೆ ಅತಿ ಹೆಚ್ಚು ಮೈಲೇಜ್ ಪ್ರೇರಿತ ಲೀಥಿಯಂ ಅಯಾನ್ ಬ್ಯಾಟರಿ ಬಳಕೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ.

ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಎಕ್ಸ್‌ಯುವಿ300 ಎಲೆಕ್ಟ್ರಿಕ್ ಕಾರು ಮಾದರಿಯು ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಮತ್ತು ಎಂಜಿ ಜೆಡ್ಎಸ್ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿದ್ದು, ಪ್ರತಿ ಚಾರ್ಜ್‌ಗೆ 350 ಕಿ.ಮೀ ನಿಂದ 370ಕಿ.ಮೀ ಮೈಲೇಜ್ ರೇಂಜ್‌ನೊಂದಿಗೆ ರೂ. 14 ಲಕ್ಷದಿಂದ ರೂ.18 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಟಾಟಾ ಪಂಚ್ ಇವಿ ವರ್ಷನ್

ಟಾಟಾ ಮೋಟಾರ್ಸ್ ಕಂಪನಿಯು ಭಾರತದಲ್ಲಿ ಇದೇ ತಿಂಗಳು ಪಂಚ್ ಮೈಕ್ರೊ ಎಸ್‌ಯುವಿಯ ಪೆಟ್ರೋಲ್ ಮಾದರಿಯನ್ನು ಬಿಡುಗಡೆ ಮಾಡುತ್ತಿದ್ದು, ಕಂಪನಿಯು ಪಂಚ್ ಮಾದರಿಯಲ್ಲಿ ಮುಂಬರುವ ದಿನಗಳಲ್ಲಿ ಎಲೆಕ್ಟ್ರಿಕ್ ಆವೃತ್ತಿಯನ್ನು ಸಹ ಬಿಡುಗಡೆ ಮಾಡಲಿದೆ ಎನ್ನುವ ವರದಿಗಳಾಗಿವೆ.

ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಆದರೆ ಪಂಚ್ ಇವಿ ಕುರಿತು ಕಂಪನಿಯಿಂದ ಯಾವುದೇ ಅಧಿಕೃತ ಮಾಹಿತಿ ಇಲ್ಲವಾದರೂ ಬಜೆಟ್ ಬೆಲೆ ಇವಿ ಕಾರು ಬಿಡುಗಡೆ ಮಾಡುವ ಯೋಜನೆಯಲ್ಲಿರುವ ಟಾಟಾ ಕಂಪನಿಗೆ ಪಂಚ್ ಮಾದರಿಯು ಇವಿ ಆವೃತ್ತಿಯಾಗಿ ಪರಿಚಯಿಸುವ ಎಲ್ಲಾ ಸಾಧ್ಯತೆಗಳಿದ್ದು, ಪಂಚ್ ಪೆಟ್ರೋಲ್ ಮಾದರಿಯ ಬಿಡುಗಡೆಯ ವೇಳೆ ಇವಿ ಮಾದರಿಯ ಕುರಿತಂತೆ ಮಹತ್ವದ ಮಾಹಿತಿಗಳು ಬಹಿರಂಗವಾಗುವ ನೀರಿಕ್ಷೆಯಿದೆ.

ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಟೆಸ್ಲಾ ಮಾಡೆಲ್ 3

ಅಮೆರಿಕದ ಜನಪ್ರಿಯ ಎಲೆಕ್ಟ್ರಿಕ್ ಕಾರು ತಯಾರಿಕಾ ಕಂಪನಿಯಾಗಿರುವ ಟೆಸ್ಲಾ ಇದೇ ವರ್ಷಾಂತ್ಯಕ್ಕೆ ಭಾರತದಲ್ಲಿ ತನ್ನ ಮೊದಲ ಎಲೆಕ್ಟ್ರಿಕ್ ಕಾರು ಮಾದರಿಯನ್ನು ಮಾರಾಟ ಮಾಡುವ ಯೋಜನೆಯಲ್ಲಿದ್ದು, ಹೊಸ ಕಾರುಗಳ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗೆ ಈಗಾಗಲೇ ಚಾಲನೆ ನೀಡಿದೆ.

ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಕೇಂದ್ರ ಸಾರಿಗೆ ಇಲಾಖೆಯಿಂದ ಪಡೆದುಕೊಂಡಿರುವ ಅನುಮತಿ ಪತ್ರದಲ್ಲಿ ಪ್ರಮುಖ ನಾಲ್ಕು ವೆರಿಯೆಂಟ್‌ಗಳನ್ನು ಬಿಡುಗಡೆ ಮಾಡುವ ಸುಳಿವು ನೀಡಿರುವ ಟೆಸ್ಲಾ ಕಂಪನಿಯು ಆರಂಭಿಕವಾಗಿ ಮಾಡೆಲ್ 3 ಮಾದರಿಯನ್ನು ರಸ್ತೆಗಿಳಿಸುವ ಸಾಧ್ಯತೆಗಳಿವೆ. ಎಂಟ್ರಿ ಲೆವಲ್ ಮಾದರಿಯಾದ ಮಾಡೆಲ್ 3 ಮಾದರಿಯೇ ಮೊದಲ ಹಂತದಲ್ಲಿ ಬಿಡುಗಡೆಯಾಗಲಿದ್ದು, ಮಾಡೆಲ್ 3 ನಂತರ ಮಾಡೆಲ್ ವೈ, ಮಾಡೆಲ್ ಎಸ್ ಸರಣಿ ಎಲೆಕ್ಟ್ರಿಕ್ ಕಾರು ಮಾದರಿಗಳು ಭಾರತವನ್ನು ಪ್ರವೇಶಿಸುವ ಸಾಧ್ಯತೆಗಳಿವೆ.

ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ವೊಲ್ವೊ ಎಕ್ಸ್‌ಸಿ40 ರೀಚಾರ್ಜ್

ಹೈಬ್ರಿಡ್ ಎಂಜಿನ್ ವಾಹನ ಉತ್ಪಾದನೆಯಲ್ಲಿ ಈಗಾಗಲೇ ಮುಂಚೂಣಿ ಹೊಂದಿರುವ ವೊಲ್ವೊ ಕಂಪನಿಯು 2023ರ ವೇಳೆಗೆ ಒಟ್ಟು 6 ಕಾರು ಮಾದರಿಗಳನ್ನು ಎಲೆಕ್ಟ್ರಿಕ್ ರೂಪಾಂತರದಲ್ಲಿ ಮಾರಾಟಮಾಡುವ ಗುರಿಹೊಂದಿದ್ದು, ಇದೇ ವರ್ಷದ ಮಧ್ಯಂತರದಲ್ಲಿ ಭಾರತದಲ್ಲಿ ಮೊದಲ ಇವಿ ಕಾರು ಮಾದರಿಯಾಗಿ ಎಕ್ಸ್‌ಸಿ40 ರೀಚಾರ್ಜ್ ಎಲೆಕ್ಟ್ರಿಕ್ ಮಾದರಿಯನ್ನು ಬಿಡುಗಡೆಗಡೆಗೊಳಿಸುತ್ತಿದೆ.

ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಈ ವರ್ಷದ ಅಂತ್ಯದಲ್ಲಿ ಇಲ್ಲವೇ 2022ರ ಆರಂಭದಲ್ಲಿ ಹೊಸ ಕಾರಿನ ವಿತರಣೆಯು ಆರಂಭವಾಗಲಿದ್ದು, ಹೊಸ ಕಾರು ಸಂಪೂರ್ಣವಾಗಿ ವಿದೇಶಿ ಮಾರುಕಟ್ಟೆಯಿಂದಲೇ ಆಮದುಗೊಳ್ಳಲಿದೆ. ಹೊಸ ಕಾರಿನಲ್ಲಿ ಕಂಪನಿಯು 78kWh ಲೀಥಿಯಂ ಅಯಾನ್ ಬ್ಯಾಟರಿ ಜೋಡಣೆ ಮಾಡಿದ್ದು,ಪ್ರತಿ ಚಾರ್ಜ್‌ಗೆ ಗರಿಷ್ಠ 418 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಮರ್ಸಿಡಿಸ್ ಬೆಂಝ್ ಇಕ್ಯೂಎಸ್ ಸೆಡಾನ್

ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಮರ್ಸಿಡಿಸ್ ಬೆಂಝ್ ಕೂಡಾ ಈಗಾಗಲೇ ಇಕ್ಯೂಸಿ 400, ಇಕ್ಯೂಎ ಎಲೆಕ್ಟ್ರಿಕ್ ಎಸ್‌ಯುವಿಯೊಂದಿಗೆ ಹಲವು ಹೊಸ ದಾಖಲೆಗಳಿಗೆ ಕಾರಣವಾಗಿದ್ದು, ಶೀಘ್ರದಲ್ಲೇ ಕಂಪನಿಯು ಇಕ್ಯೂಎಸ್ ಸೆಡಾನ್ ಮಾದರಿಯು ಬಿಡುಗಡೆ ಮಾಡುತ್ತಿದೆ.

ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಲೆಕ್ಟ್ರಿಕ್ ಕಾರು ಮಾದರಿಗಳಿವು!

ಇಕ್ಯೂಸಿ 400, ಇಕ್ಯೂಎ ಮಾದರಿಗಿಂತಲೂ ಹೆಚ್ಚಿನ ಮಟ್ಟದ ಫೀಚರ್ಸ್ ಹೊಂದಿರುವ ಹೊಸ ಇಕ್ಯೂಎಸ್ ಮಾದರಿಯು ಮೈಲೇಜ್‌ನಲ್ಲೂ ಗಮನಸೆಳೆಯಲಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಹೊಸ ಕಾರು ಪ್ರಮುಖ ಅಂತರ್‌ರಾಷ್ಟ್ರೀಯ ಮಾರುಕಟ್ಟೆಗಳಲ್ಲಿ ಖರೀದಿಗೆ ಲಭ್ಯವಾಗಲಿದೆ.

More from DriveSpark

Article Published On: Sunday, October 3, 2021, 8:45 [IST]
English summary
Upcoming electric cars in india tata altroz ev mahindra exuv 300 and more
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+