ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಣ್ಣ ಕಾರುಗಳಿವು

ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚೆಗೆ ಸಣ್ಣ ಕಾರುಗಳ ಬೇಡಿಕೆ ಹೆಚ್ಚಾಗಿದೆ. ಇದಕ್ಕಾಗಿ ಹಲವು ಜನಪ್ರಿಯ ಕಾರು ತಯಾರಕ ಕಂಪನಿಗಳು ಸಣ್ಣ ಕಾರುಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಸಣ್ಣ ಕಾರುಗಳ ಮಾಹಿತಿ ಇಲ್ಲಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಣ್ಣ ಕಾರುಗಳಿವು

ಮಾರುತಿ ಸೆಲೆರಿಯೊ

ಮೊದಲಿಗೆ ದೇಶದ ಅತಿ ದೊಡ್ಡ ಕಾರು ತಯಾರಕ ಕಂಪನಿಯಾದ ಮಾರುತಿ ಸುಜುಕಿ ಕಂಪನಿಯು ತನ್ನ ಬಹುನಿರೀಕ್ಷಿತ ನ್ಯೂ ಜನರೇಷನ್ ಸೆಲೆರಿಯೊ ಕಾರನ್ನು ದೇಶಿಯ ಮಾರುಕಟ್ಟೆಯಲ್ಲಿ ಪರಿಚಯಿಸಲು ಸಜ್ಜಾಗಿದೆ. ಈ ಹೊಸ ಮಾರುತಿ ಸೆಲೆರಿಯೊ ಮಾದರಿಯು ಪ್ರಮುಖ ಬದಲಾವಣೆಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿದೆ.ಮಾರುತಿ ಸುಜುಕಿ ಕಂಪನಿಯು ಭಾರತದಲ್ಲಿ ಸೆಲೆರಿಯೊ ಹ್ಯಾಚ್‌ಬ್ಯಾಕ್ ಅನ್ನು ಮೊದಲ ಬಾರಿಗೆ 2014ರಲ್ಲಿ ಬಿಡುಗಡೆಗೊಳಿಸಿದರು.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಣ್ಣ ಕಾರುಗಳಿವು

ಆದರೆ ಇತರ ಮಾದರಿಗಳ ಮಾದರಿಯಂತೆ ದೊಡ್ಡ ಯಶ್ವಸಿಯನ್ನು ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ಆದರೆ ಇದೀಗ ಹೊಸ ವಿನ್ಯಾಸದಲ್ಲಿ ನ್ಯೂ ಜನರೇಷನ್ ಸೆಲೆರಿಯೊ ಕಾರನ್ನು ಮಾರುತಿ ಸುಜುಕಿ ಕಂಪನಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಇತ್ತೀಚೆಗೆ ಈ ಹೊಸ ಮಾರುತಿ ಸೆಲೆರಿಯೊ ಕಾರು ಇತ್ತೀಚೆಗೆ ಟಿವಿಸಿ ಚಿತ್ರೀಕರಣದ ವೇಳೆ ಕಾಣಿಸಿಕೊಂಡಿದ್ದು, ಇದರ ಸ್ಪೈ ಚಿತ್ರಗಳು ಬಹಿರಂಗವಾಗಿದೆ. ಇನ್ನು ಮಾರುತಿ ಸುಜುಕಿ ಕಂಪನಿಯು ಈ ಹೊಸ ಸೆಲೆರಿಯೊ ಕಾರಿನ ಬಿಡುಗಡೆಯ ದಿನಾಂಕದ ಬಗ್ಗೆ ಅಧಿಕೃತ ಮಾಹಿತಿಯನ್ನು ಬಹಿರಂಗಪಡಿಸಿಲ್ಲ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಣ್ಣ ಕಾರುಗಳಿವು

ನ್ಯೂ ಜನರೇಷನ್ ಮಾರುತಿ ಸೆಲೆರಿಯೊ ಒಂದು ಪ್ರಮುಖ ಬದಲಾವಣೆಯೆಂದರೆ ಹೊಸ ಹಿಯರ್‌ಟೆಕ್ಟ್ ಪ್ಲಾಟ್‌ಫಾರ್ಮ್ ಅಡಿಯಲ್ಲಿ ಇದನ್ನು ತಯಾರಿಸಿದೆ. ಈ ಹೊಸ ಕಾರಿನಲ್ಲಿ ಎಂಜಿನ್ ಅನ್ನು ಬದಲಾಯಿಸಲಾಗುತ್ತದೆ, ಇದರಲ್ಲಿ ಹೊಸ 1.2ಎಲ್, 4-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಬಹುದು, ಈ ಎಂಜಿನ್ 83 ಬಿಹೆಚ್‍ಪಿ ಪವರ್ ಮತ್ತು 113 ಎನ್ಎಂ ಟಾರ್ಜ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿರುತ್ತದೆ. ಇದರೊಂದಿಗೆ 1.0ಎಲ್, 3-ಸಿಲಿಂಡರ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ನೀಡಬಹುದು.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಣ್ಣ ಕಾರುಗಳಿವು

ನ್ಯೂ ಜನರೇಷನ್ ಮಾರುತಿ ಆಲ್ಟೋ

ನ್ಯೂ ಜನರೇಷನ್ ಮಾರುತಿ ಸುಜುಕಿ ಆಲ್ಟೋ ಕಾರನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ, ವರದಿಗಳ ಪ್ರಕಾರ, ಮುಂದಿನ ವರ್ಷದ ಪ್ರಾರಂಭದಲ್ಲಿ ಹೊಸ ಆಲ್ಟೋ ಕಾರು ಜಾಗತಿಕವಾಗಿ ಬಿಡುಗಡೆಯಾಗಲಿದೆ. ಇದರ ಭಾರತ ಬಿಡುಗಡೆ ಮುಂದಿನ ವರ್ಷದಲ್ಲಿ ಸಂಭವಿಸುವ ಸಾಧ್ಯತೆಯಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಣ್ಣ ಕಾರುಗಳಿವು

ಈ ನ್ಯೂ ಜನರೇಷನ್ ಮಾರುತಿ ಆಲ್ಟೋ ಕಾರು 769 ಸಿಸಿ, 3 ಸಿಲಿಂಡರ್ ನ್ಯಾಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಇಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 48 ಬಿಹೆಚ್‍ಪಿ ಪವರ್ ಮತ್ತು 69 ಎನ್ಎಂ ಟಾರ್ಕ್ ಉತ್ಪಾದಿಸುವುದನ್ನು ಮುಂದುವರಿಸಬಹುದು.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಣ್ಣ ಕಾರುಗಳಿವು

ನ್ಯೂ ಜನರೇಷನ್ ಟಾಟಾ ಟಿಯಾಗೋ

ಟಾಟಾ ಮೋಟಾರ್ಸ್ ತನ್ನ ಮೂರು ಅತ್ಯಂತ ಜನಪ್ರಿಯ ಉತ್ಪನ್ನಗಳಾದ ಹೊಸ ತಲೆಮಾರಿನ ಮಾದರಿಗಳಾದ ಟಿಯಾಗೊ, ಟಿಗೋರ್ ಮತ್ತು ನೆಕ್ಸಾನ್ ಅನ್ನು ಪರಿಚಯಿಸಲಿದೆ. ತಮ್ಮ ಬಿಡುಗಡೆಯ ವೇಳಾಪಟ್ಟಿಯಲ್ಲಿ ಯಾವುದೇ ಅಧಿಕೃತ ಮಾಹಿತಿಗಳನ್ನು ಬಹಿರಂಗಪಟ್ಟಿಸಿಲ್ಲ. ಇವುಗಳು 2022 ಅಥವಾ 2023 ರಲ್ಲಿ ಬರುವ ನಿರೀಕ್ಷೆಯಿದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಣ್ಣ ಕಾರುಗಳಿವು

ಎಂಟ್ರಿ ಲೆವೆಲ್ ನ್ಯೂ ಜನರೇಷನ್ ಟಾಟಾ ಟಿಯಾಗೋ ಹ್ಯಾಚ್‌ಬ್ಯಾಕ್ ಆಲ್ಫಾ ಆರ್ಕಿಟೆಕ್ಚರ್‌ಗಾಗಿ ತನ್ನ ಅಸ್ತಿತ್ವದಲ್ಲಿರುವ ಪ್ಲಾಟ್‌ಫಾರ್ಮ್ ಅನ್ನು ಕೈಬಿಟ್ಟು ಹೊಸ ಬದಲಾವಣೆಗಳೊಂದಿಗೆ ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಬಹುದು ಎಂದು ನಿರೀಕ್ಷಿಸುತ್ತೇವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಣ್ಣ ಕಾರುಗಳಿವು

ಟಾಟಾ ಪಂಚ್

ಭಾರತೀಯ ಮಾರುಕಟ್ಟೆಯಲ್ಲಿ ಟಾಟಾ ಮೋಟಾರ್ಸ್ ತನ್ನ ಬಹುನಿರೀಕ್ಷಿತ ಪಂಚ್ ಮೈಕ್ರೊ ಎಸ್‍ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಮೈಕ್ರೋ ಎಸ್‌ಯುವಿಯು ಅಕ್ಟೋಬರ್ 4, ಅಧಿಕೃತವಾಗಿ ಪಾದಾರ್ಪಣೆ ಮಾಡಲಿದೆ ಎಂದು ಕಾರ್ ತಯಾರಕರು ಹೇಳಿದ್ದಾರೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಣ್ಣ ಕಾರುಗಳಿವು

ಇದು ನೆಕ್ಸಾನ್ ಕಾಂಪ್ಯಾಕ್ಟ್ ಎಸ್‌ಯುವಿಯಲ್ಲಿರುವ ಡ್ರೈವ್ ಮೋಡ್‌ಗಳನ್ನು ಪಡೆಯುವ ನಿರೀಕ್ಷೆಯಿದೆ. ಟಾಟಾ ನೆಕ್ಸಾನ್ 3 ಸ್ಪೋರ್ಟ್, ಸಿಟಿ ಮತ್ತು ಇಕೋ.ಎಂಬ ಡ್ರೈವ್ ಮೋಡ್‌ಗಳನ್ನು ನೀಡುತ್ತದೆ. ಇನ್ನು ಥ್ರೊಟಲ್ ರೆಸ್ಪಾನ್ಸ್ ಅನ್ನು ಸರಿಹೊಂದಿಸುವುದರಿಂದ 'ಇಕೋ' ಡ್ರೈವ್ ಮೋಡ್ ಹೆಚ್ಚಿನ ಮೈಲೇಜ್ ಅನ್ನು ನೀಡುತ್ತದೆ ಎಂದು ಹೇಳಲಾಗುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಣ್ಣ ಕಾರುಗಳಿವು

ಟಾಟಾ ಪಂಚ್ ಮೈಕ್ರೊ ಎಸ್‍ಯುವಿಯು ಎರಡು ಎಂಜಿನ್ ಆಯ್ಕೆಗಳಲ್ಲಿ ಬರುವ ಸಾಧ್ಯತೆಯಿದೆ ಇದು 1.2-ಲೀಟರ್ 3-ಸಿಲಿಂಡರ್ ನ್ಯೆಚುರಲ್ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2L ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಆಗಿರಬಹುದು. ಈ ಎಂಜಿನ್ ಗಳೊಂದಿಗೆ 5-ಸ್ಪೀಡ್ ಮ್ಯಾನುವಲ್ ಮತ್ತು AMT ಯುನಿಟ್ ಅನ್ನು ಒಳಗೊಂಡಿರುವ ಸಾಧ್ಯತೆಯಿದೆ. ಮೈಕ್ರೊ ಎಸ್‌ಯುವಿ ಡ್ರೈವ್ ಮೋಡ್‌ಗಳನ್ನು ಸಹ ಪಡೆಯಬಹುದು.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಣ್ಣ ಕಾರುಗಳಿವು

ಸಿಟ್ರನ್ ಸಿ3

ಫ್ರೆಂಚ್ ಕಾರು ತಯಾರಕರಿಂದ ಮುಂಬರುವ ಹ್ಯಾಚ್‌ಬ್ಯಾಕ್ ಸಿಟ್ರನ್ ಸಿ3 ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಯಾಗಲಿದೆ. ಈ ಮಾದರಿಯನ್ನು CMP (ಕಾಮನ್ ಮಾಡ್ಯುಲರ್ ಪ್ಲಾಟ್‌ಫಾರ್ಮ್) ಪ್ಲಾಟ್‌ಫಾರ್ಮ್ ಮೇಲೆ ವಿನ್ಯಾಸಗೊಳಿಸಲಾಗುವುದು ಮತ್ತು 90% ಸ್ಥಳೀಯ ಮೂಲಗಳಿಂದ ತಯಾರಿಸಲಾಗುತ್ತದೆ. ಮಾರುತಿ ಸುಜುಕಿ ಇಗ್ನಿಸ್ ಮತ್ತು ಮುಂಬರುವ ಟಾಟಾ ಪಂಚ್‌ನಂತಹ ಕಾರುಗಳಿಗೆ ಪೈಪೋಟಿ ನೀಡುತ್ತದೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಸಣ್ಣ ಕಾರುಗಳಿವು

ಈ ಕಾರಿನ ವಿನ್ಯಾಸ, ವೈಶಿಷ್ಟ್ಯಗಳು ಮತ್ತು ಎಂಜಿನ್ ವಿಷಯದಲ್ಲಿ, ಭಾರತ-ಸ್ಪೆಕ್ ಸಿಟ್ರನ್ ಸಿ3 ಯುರೋಪಿಯನ್ ಮಾದರಿಯಿಂದ ಭಿನ್ನವಾಗಿರುತ್ತದೆ. ಇಲ್ಲಿ, ಹೊಸ ಸಿಟ್ರೊಯೆನ್ ಹ್ಯಾಚ್‌ಬ್ಯಾಕ್ ಅನ್ನು ಎರಡು ಪೆಟ್ರೋಲ್ (1.2L ನ್ಯಾಚುಅರಲ್ ಮತ್ತು 1.2L ಟರ್ಬೊ) ಮತ್ತು ಒಂದು ಡೀಸೆಲ್ ಎಂಜಿನ್ (1.5L) ನೊಂದಿಗೆ ನೀಡಲಾಗುವುದು. ಹಲವಾರು ವಿನ್ಯಾಸದ ಬಿಟ್‌ಗಳು ಮತ್ತು ವೈಶಿಷ್ಟ್ಯಗಳು ಟಾಪ್-ಎಂಡ್ ರೂಪಾಂತರಕ್ಕೆ ಸಹ ಆಯ್ಕೆಗಳಾಗಿ ಬರುತ್ತವೆ.

Most Read Articles

Kannada
English summary
Upcoming small cars in indian market find here all details
Story first published: Friday, September 24, 2021, 14:26 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X