2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ದೇಶಿಯ ಮಾರುಕಟ್ಟೆಯಲ್ಲಿ ಕರೋನಾ ವೈರಸ್ ಪರಿಣಾಮ ಭಾರೀ ಕುಸಿತ ಕಂಡಿದ್ದ ಆಟೋ ಉದ್ಯಮವು ಇದೀಗ ನೀರಿಕ್ಷೆಗೂ ಮೀರಿ ಬೆಳವಣಿಗೆ ಸಾಧಿಸುತ್ತಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರು ವಾಹನಗಳ ಜೊತೆಗೆ ಹೊಸದಾಗಿ ಬಿಡುಗಡೆಯಾಗುತ್ತಿರುವ ವಾಹನಗಳಿಗೂ ಭಾರೀ ಬೇಡಿಕೆ ಸಲ್ಲಿಕೆಯಾಗಿರುವುದು ಆಟೋ ಉದ್ಯಮದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಕೋವಿಡ್ 19 ನಿಂದಾಗಿ ಸತತ ನಷ್ಟ ಅನುಭವಿಸಿದ್ದರಿಂದ ಹೊಸ ವಾಹನಗಳ ಬಿಡುಗಡೆ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಿದ್ದ ಆಟೋ ಕಂಪನಿಗಳು ಇದೀಗ ವಾಹನ ಬಿಡುಗಡೆ ಪ್ರಕ್ರಿಯೆಯನ್ನು ತೀವ್ರಗೊಳಿಸಿದ್ದು, 2021ರ ಅವಧಿಯಲ್ಲಿ ವಿವಿಧ ಕಂಪನಿಗಳು ಹತ್ತಾರು ಹೊಸ ವಾಹನಗಳನ್ನು ಬಿಡುಗಡೆಗೆ ಸಿದ್ದವಾಗಿವೆ. ಬಿಡುಗಡೆಯಾಗಲಿರುವ ಹೊಸ ವಾಹನಗಳಲ್ಲಿ ಎಸ್‌ಯುವಿ ಕಾರು ಮಾದರಿಗಳು ಸಹ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದ್ದು, ಬಿಡುಗಡೆಯಾಗಲಿರುವ ಹೊಸ ಎಸ್‌ಯುವಿ ಕಾರುಗಳ ಬಿಡುಗಡೆಯ ಅವಧಿ ಮತ್ತು ಅವುಗಳ ವಿಶೇಷತೆ ಕುರಿತು ಈ ಲೇಖನದಲ್ಲಿ ಚರ್ಚಿಸಲಾಗಿದೆ.

2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ರೆನಾಲ್ಟ್ ಕಿಗರ್

ರೆನಾಲ್ಟ್ ಇಂಡಿಯಾ ಕಂಪನಿಯು ಕಿಗರ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯನ್ನು ಅನಾವರಣಗೊಳಿಸಿ ಬಿಡುಗಡೆಗಾಗಿ ಅಂತಿಮ ಸಿದ್ದತೆ ನಡೆಸುತ್ತಿದ್ದು, ಹೊಸ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಪ್ರತಿಸ್ಪರ್ಧಿ ಕಾರು ಮಾದರಿಗಳಂತೆ ಹಲವಾರು ಸೆಗ್ಮೆಂಟ್ ಇನ್ ಫಸ್ಟ್ ಫೀಚರ್ಸ್‌ಗಳನ್ನು ಅಳವಡಿಸಲಾಗಿದೆ.

2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಹೊಸ ಕಿಗರ್ ಕಾರಿನಲ್ಲಿ ನಿಸ್ಸಾನ್ ಮಾಗ್ನೈಟ್‌ ಕಾರಿನಲ್ಲಿ ಜೋಡಣೆ ಮಾಡಲಾಗಿರುವ 1.0-ಲೀಟರ್ ನ್ಯಾಚುರಲಿ ಆಸ್ಪರೆಟೆಡ್ ಮತ್ತು 1.0-ಲೀಟರ್ ಸಾಮರ್ಥ್ಯದ ಟರ್ಬೊ ಪೆಟ್ರೋಲ್ ಎಂಜಿನ್ ನೀಡಲಾಗಿದ್ದು, ಫೆಬ್ರುವರಿ ಮಧ್ಯಂತರದಲ್ಲಿ ಖರೀದಿ ಲಭ್ಯವಾಗಲಿರುವ ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.20 ಲಕ್ಷದಿಂದ ರೂ. 9.30 ಲಕ್ಷ ಬೆಲೆ ಅಂತರದಲ್ಲಿ ಖರೀದಿಗೆ ಲಭ್ಯವಾಗುವ ಸುಳಿವು ನೀಡಿದೆ.

2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಟಾಟಾ ಸಫಾರಿ ಎಸ್‌ಯುವಿ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಸಫಾರಿ ಎಸ್‌ಯುವಿ ಕಾರಿನ ಹೊಸ ಆವೃತ್ತಿಯನ್ನು ದೇಶಿಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದ್ದು, ಹೊಸ ಸಫಾರಿ ಎಸ್‌ಯುವಿ ಕಾರು ಮಾದರಿಯು ವಿನೂತನ ಫೀಚರ್ಸ್‌ಗಳೊಂದಿಗೆ ಫೆಬ್ರುವರಿ ಮಧ್ಯಂತರದಲ್ಲಿ ಬಿಡುಗಡೆಯಾಗಲು ಸಿದ್ದವಾಗಿದೆ.

2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

OMEGA ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಆಧರಿಸಿ ನಿರ್ಮಾಣಗೊಂಡಿರುವ ಹೊಸ ಕಾರು 6 ಸೀಟರ್ ಮತ್ತು 7 ಸೀಟರ್ ಆಯ್ಕೆಯೊಂದಿಗೆ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ 2.0-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿದೆ. ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 19 ಲಕ್ಷದಿಂದ ರೂ.23 ಲಕ್ಷ ಬೆಲೆ ಅಂತರದಲ್ಲಿ ಎಂಜಿ ಹೆಕ್ಟರ್ ಪ್ಲಸ್, ಬಿಡುಗಡೆಗಾಗಿ ಸಿದ್ದವಾಗಿರುವ ನ್ಯೂ ಜನರೇಷನ್ ಮಹೀಂದ್ರಾ ಎಕ್ಸ್‌ಯುವಿ500 ಕಾರುಗಳಿಗೂ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಸಿಟ್ರನ್ ಸಿ5 ಏರ್‌ಕ್ರಾಸ್

ಫ್ರೆಂಚ್ ಕಾರು ಉತ್ಪಾದನಾ ಕಂಪನಿಯಾದ ಸಿಟ್ರನ್ ತನ್ನ ಬಹುನೀರಿಕ್ಷಿತ ಕಾರು ಮಾದರಿಯಾದ ಸಿ5 ಏರ್‌ಕ್ರಾಸ್ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಲು ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಫೆಬ್ರುವರಿ ಮಧ್ಯಂತರದಲ್ಲಿ ಹೊಸ ಕಾರಿನ ಮಾರಾಟಕ್ಕೆ ಅಧಿಕೃತವಾಗಿ ಚಾಲನೆ ನೀಡಲಿದೆ.

2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಯುರೋಪ್ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಸಿಟ್ರನ್ ಕಂಪನಿಯು ಗ್ರಾಹಕರ ಬೇಡಿಕೆಯೆಂತೆ ದೇಶಿಯ ಮಾರುಕಟ್ಟೆಯಲ್ಲೂ ವಿವಿಧ ಮಾದರಿಯ ಎಸ್‌ಯುವಿ, ಹ್ಯಾಚ್‌ಬ್ಯಾಕ್ ಮತ್ತು ಎಂಪಿವಿ ಕಾರುಗಳನ್ನು ಮಾರಾಟ ಮಾಡಲಿದ್ದು, ಮೊದಲ ಹಂತದಲ್ಲಿ ಸಿ5 ಏರ್‌ಕ್ರಾಸ್ ಎಸ್‌ಯುವಿ ಕಾರು ಮಾದರಿಯನ್ನು ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳಿಗೆ ಪೈಪೋಟಿಯಾಗಿ ರಸ್ತೆಗಿಳಿಸುತ್ತಿದೆ.

2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಹ್ಯುಂಡೈ ಕ್ರೆಟಾ 7 ಸೀಟರ್ ವರ್ಷನ್

ಮಧ್ಯಮ ಗಾತ್ರದ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಮುನ್ನಡೆ ಕಾಯ್ದುಕೊಂಡಿರುವ ಹ್ಯುಂಡೈ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ತನ್ನ ಹೊಸ ಕ್ರೆಟಾ 7 ಸೀಟರ್ ಮಾದರಿಯನ್ನು ಬಿಡುಗಡೆಗೊಳಿಸುವ ಸಿದ್ದತೆಯಲ್ಲಿದ್ದು, ಹೊಸ ಕಾರು ಮುಂಬರುವ ಎಪ್ರಿಲ್ ಹೊತ್ತಿಗೆ ಖರೀದಿಗೆ ಲಭ್ಯವಾಗುವ ಸುಳಿವು ನೀಡಿದೆ.

2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಸ್ಟ್ಯಾಂಡರ್ಡ್ ಕ್ರೆಟಾ ಮಾದರಿಯಲ್ಲೇ ಬಹುತೇತ ತಾಂತ್ರಿಕ ಅಂಶಗಳು, ಎಂಜಿನ್ ಆಯ್ಕೆ ಹೊಂದಲಿರುವ ಹೊಸ 7 ಸೀಟರ್ ಕ್ರೆಟಾ ಕಾರು ಆವೃತ್ತಿಯು ದೇಶಿಯ ಮಾರುಕಟ್ಟೆಯಲ್ಲಿ ಕ್ರೆಟಾಗೆ ಬದಲು ಅಲ್ಕಾಜರ್ ಎನ್ನುವ ಹೆಸರಿನೊಂದಿಗೆ ಮಾರಾಟಕ್ಕೆ ಲಭ್ಯವಾಗಲಿದ್ದು, ಹೊಸ ಕಾರು ಎಸ್‌ಯುವಿ ವೈಶಿಷ್ಟ್ಯತೆ ಹೊಂದಿದ್ದರೂ ಕ್ರೆಟಾ ಮಾದರಿಗಿಂತಲೂ ರೂ. 1 ಲಕ್ಷದಿಂದ ರೂ.2 ಲಕ್ಷ ಹೆಚ್ಚುವರಿ ಬೆಲೆಯೊಂದಿಗೆ ಎಂಪಿವಿ ಕಾರು ಖರೀದಿದಾರರನ್ನು ಸಹ ಸೆಳೆಯಲಿದೆ.

2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಸ್ಕೋಡಾ ಕುಶಾಕ್

ಸ್ಕೋಡಾ ಆಟೋ ಇಂಡಿಯಾ ಕಂಪನಿಯು ವಿಷನ್ ಇನ್ ಕಾನ್ಸೆಪ್ಟ್ ಮಾದರಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಮೊದಲ ಬಾರಿಗೆ ಅನಾವರಣಗೊಳಿಸಿತ್ತು. ಹೊಸ ಕಾನ್ಸೆಪ್ಟ್ ಕಂಪ್ಯಾಕ್ಟ್ ಎಸ್‍ಯುವಿಯನ್ನು ಇದೀಗ ಬಿಡುಗಡೆಗೊಳಿಸಲು ಸಜ್ಜಾಗಿರುವ ಕಂಪನಿಯು ಹೊಸ ವಿಷನ್ ಇನ್ ಕಾನ್ಸೆಪ್ಟ್ ಕಾರು ಮಾದರಿಯನ್ನೇ ಕುಶಾಕ್ ಹೆಸರಿನೊಂದಿಗೆ ಬಿಡುಗಡೆ ಮಾಡುವ ಸುಳಿವು ನೀಡಿದೆ.

2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಹೊಸ ಕಾರಿನಲ್ಲಿ ಸಾಮಾನ್ಯ ಮಾದರಿಯು 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ ಟರ್ಬೋ ಮಾದರಿಯು 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪರಿಚಯಿಸುವ ಸಾಧ್ಯತೆಗಳಿವೆ. ಹೊಸ ಕಾರು ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಹೊಸ ಕಾರು ಇದೇ ತಿಂಗಳಾಂತ್ಯಕ್ಕೆ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿದೆ ಎನ್ನಲಾಗಿದೆ.

2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಟಾಟಾ ಹೆಚ್‌ಬಿಎಕ್ಸ್ ಮೈಕ್ರೊ ಎಸ್‌ಯುವಿ

ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ಪ್ರಮುಖ ಮೂರು ಹೊಸ ಕಾರು ಆವೃತ್ತಿಗಳನ್ನು ಬಿಡುಗಡೆ ಮಾಡಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಟಾಟಾ ಹೊಸ ಕಾರುಗಳ ಪಟ್ಟಿಯಲ್ಲಿ ಕಳೆದ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಮೈಕ್ರೊ ಎಸ್‌ಯುವಿಯು ಕೂಡಾ ಒಂದಾಗಿದೆ.

2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

1.2-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ. 4 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 6 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗುವ ಹೊಸ ಕಾರು ಅತ್ಯುತ್ತಮ ಫೀಚರ್ಸ್ ಮತ್ತು ಆಕರ್ಷಕ ವಿನ್ಯಾಸದೊಂದಿಗೆ ಎಂಟ್ರಿ ಲೆವಲ್ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದೆ.

2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಫೋಕ್ಸ್‌ವ್ಯಾಗನ್ ಟೈಗನ್

ಫೋಕ್ಸ್‌ವ್ಯಾಗನ್ ಕಂಪನಿಯು 2020ರ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ತನ್ನ ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಟೈಗನ್ ಕಾರು ಮಾದರಿಯು ಕ್ರೆಟಾ ಮತ್ತು ಸೆಲ್ಟೊಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

1.5-ಲೀಟರ್ ಸಾಮಾನ್ಯ ಪೆಟ್ರೋಲ್ ಮತ್ತು 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಲಿರುವ ಹೊಸ ಟೈಗನ್ ಕಾರು ಮಾದರಿಯು ರೂ.10 ಲಕ್ಷದಿಂದ ರೂ.14 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದ್ದು, ಹೊಸ ಕಾರು ಇದೇ ಮಾರ್ಚ್ ಅಂತ್ಯಕ್ಕೆ ಬಿಡುಗಡೆಯಾಗಲಿದೆ.

2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ನ್ಯೂ ಜನರೇಷನ್ ಎಕ್ಸ್‌ಯುವಿ500

ಮಹೀಂದ್ರಾ ಎಕ್ಸ್‌ಯುವಿ500 ಎಸ್‌ಯುವಿ ಕಾರು ಮಾದರಿಯು ಶೀಘ್ರದಲ್ಲೇ ಹೊಸ ತಲೆಮಾರಿನ ವೈಶಿಷ್ಟ್ಯತೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿರುವ ಹೊಸ ಕಾರಿನ ಕಾರ್ಯಕ್ಷಮತೆ ಕುರಿತಂತೆ ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆ ನಡೆಸುತ್ತಿದೆ.

2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ನ್ಯೂ ಜನರೇಷನ್ ಕಾರು ಮಾದರಿಯು 2.2 ಡೀಸೆಲ್ ಎಂಜಿನ್ ಜೊತೆ ಹೊಸ ಥಾರ್‌ನಲ್ಲಿ ನೀಡಲಾಗಿರುವ 2.0-ಲೀಟರ್ ಎಂ-ಸ್ಟಾಲಿನ್ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಸಹ ಪಡೆದುಕೊಳ್ಳಲಿದೆ. ಹೊಸ ಕಾರು ವಿವಿಧ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 18.50 ಲಕ್ಷ ಬೆಲೆ ಹೊಂದುವ ಸಾಧ್ಯತೆಗಳಿವೆ.

2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಎಂಜಿ ಜೆಡ್ಎಸ್ ಪೆಟ್ರೋಲ್

ಭಾರತದಲ್ಲಿ ಎಂಜಿ ಮೋಟಾರ್ ನಿರ್ಮಾಣದ ಐದನೇ ಕಾರು ಮಾದರಿಯಾಗಿ ಬಿಡುಗಡೆಯಾಗುತ್ತಿರುವ ಜೆಡ್ಎಸ್ ಪೆಟ್ರೋಲ್ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದ್ದು, ಮಧ್ಯಮ ಕ್ರಮಾಂಕದ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯಲ್ಲೇ ಅತಿ ಹೆಚ್ಚು ಐಷಾರಾಮಿ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿದೆ.

2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ಐಷಾರಾಮಿ ಕಾರುಗಳಲ್ಲಿ ಅಳವಡಿಸಲಾಗುವ ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್) ಪಡೆದುಕೊಂಡಿರುವುದು ಹೊಸ ಕಾರು 1.5-ಲೀಟರ್ ಪೆಟ್ರೋಲ್ ಮತ್ತು 1.3-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿವೆ. ರೂ. 10 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 15 ಲಕ್ಷ ಬೆಲೆಯೊಂದಿಗೆ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ಉತ್ತಮ ಪೈಪೋಟಿಯಾಗಲಿದೆ.

Most Read Articles

Kannada
English summary
Upcoming SUV Cars in India 2021. Read in Kannada.
Story first published: Saturday, January 30, 2021, 16:49 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X