ಎಂಪಿವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ Kia India

ದೇಶಿಯ ಮಾರುಕಟ್ಟೆಯಲ್ಲಿ ವಿವಿಧ ಕಾರು ಮಾದರಿಗಳ ಮೂಲಕ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿರುವ ಕಿಯಾ ಇಂಡಿಯಾ ಕಂಪನಿಯು ಮುಂಬರುವ ದಿನಗಳಲ್ಲಿ ಮತ್ತಷ್ಟು ಹೊಸ ಕಾರುಗಳ ಬಿಡುಗಡೆಯನ್ನು ಖಚಿತಪಡಿಸಿದ್ದು, ಹೊಸ ಕಾರುಗಳಲ್ಲಿ ಬಹುನೀರಿಕ್ಷಿತ ಎಂಪಿವಿ ಸೇರಿದಂತೆ ಹೊಸ ಕಾರು ಮಾದರಿಗಳು ಸೇರಿವೆ.

ಎಂಪಿವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ ಕಿಯಾ ಕಂಪನಿ

ಸದ್ಯ ಮಾರುಕಟ್ಟೆಯಲ್ಲಿ ಹ್ಯಾಚ್‌ಬ್ಯಾಕ್ ಮತ್ತು ಕಂಪ್ಯಾಕ್ಟ್ ಎಸ್‌ಯುವಿ ವಿಭಾಗವು ಉಳಿದ ಕಾರು ಮಾದರಿಗಳಿಂತಲೂ ಹೆಚ್ಚು ಬೇಡಿಕೆಯಲ್ಲಿದ್ದು, ತದನಂತರ ಎಸ್‌ಯುವಿ ಮತ್ತು ಎಂಪಿವಿ ಕಾರುಗಳು ಹೆಚ್ಚಿನ ಮಟ್ಟದ ಬೇಡಿಕೆಯಲ್ಲಿರುವ ಕಾರು ಮಾದರಿಗಳಾಗಿವೆ. ಎಂಪಿವಿ(ಮಲ್ಟಿ ಪರ್ಪಸ್ ವೆಹಿಕಲ್) ಮಾದರಿಗಳಲ್ಲಿನ ಪ್ರತಿಸ್ಪರ್ಧಿ ಕಡಿಮೆ ಇರುವುದರಿಂದ ಮಾರುಕಟ್ಟೆಯಲ್ಲಿರುವ ಕೆಲವೇ ಕೆಲವು ಎಂಪಿವಿ ಕಾರು ಮಾದರಿಗಳು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿವೆ.

ಎಂಪಿವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ ಕಿಯಾ ಕಂಪನಿ

ಇದೇ ಕಾರಣಕ್ಕೆ ಮಧ್ಯಮ ಗಾತ್ರದ ಎಂಪಿವಿ ವಿಭಾಗಕ್ಕೆ ಪ್ರವೇಶಿಸಲು ಸಿದ್ದವಾಗಿರುವ ಕಿಯಾ ಕಂಪನಿಯು ಹೊಸ ಮಾದರಿಯ ಎಂಪಿವಿ ಮಾದರಿಯೊಂದನ್ನು ಅಭಿವೃದ್ದಿಗೊಳಿಸುತ್ತಿದ್ದು, ಹೊಸ ಕಾರನ್ನು 2022ರ ಆರಂಭದಲ್ಲಿ ಬಿಡುಗಡೆ ಮಾಡುವ ಸಿದ್ದತೆಯಲ್ಲಿದೆ.

ಎಂಪಿವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ ಕಿಯಾ ಕಂಪನಿ

ಮಧ್ಯಮ ಗಾತ್ರದ ಎಂಪಿವಿ ಕಾರು ಮಾದರಿಯ ಮಾರಾಟದಲ್ಲಿ ಸದ್ಯ ಮಾರುತಿ ಸುಜುಕಿ ಎರ್ಟಿಗಾ ಕಾರು ಅಧಿಕ ಬೇಡಿಕೆಯೊಂದಿಗೆ ಮೊದಲ ಸ್ಥಾನದಲ್ಲಿದ್ದು, ದುಬಾರಿ ಬೆಲೆ ನಡುವೆಯೂ ಟೊಯೊಟಾ ಇನೋವಾ ಕ್ರಿಸ್ಟಾ ಕಾರು ಎರ್ಟಿಗಾ ಮಾದರಿಯಷ್ಟೇ ಬೇಡಿಕೆಯೊಂದಿಗೆ ಎರಡನೇ ಸ್ಥಾನದಲ್ಲಿದೆ.

ಎಂಪಿವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ ಕಿಯಾ ಕಂಪನಿ

ಆದರೆ ಎರ್ಟಿಗಾ ಕಾರಿಗಿಂತಲೂ ದುಪ್ಪಟ್ಟು ಬೆಲೆ ಹೊಂದಿರುವ ಇನೋವಾ ಕ್ರಿಸ್ಟಾ ಕಾರು ಐಷಾರಾಮಿ ಕಾರು ಮಾದರಿಯಾಗಿ ಗುರುತಿಸಿಕೊಂಡಿದ್ದು, ಎರ್ಟಿಗಾ ಮತ್ತು ಇನೋವಾ ಕ್ರಿಸ್ಟಾ ನಡುವೆ ಬೆಲೆ ಅಂತರ ಸಾಕಷ್ಟಿದೆ. ಈ ಎರಡು ಕಾರುಗಳ ನಡುವಿನ ಸ್ಥಾನದಲ್ಲಿರುವ ಮಹೀಂದ್ರಾ ಮರಾಜೋ ಕಾರು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುವಲ್ಲಿ ವಿಫಲವಾಗುತ್ತಿದ್ದು, ಇನೋವಾ ಮತ್ತು ಎರ್ಟಿಗಾ ನಡುವಿನ ಸ್ಥಾನವನ್ನು ತುಂಬಲು ಕಿಯಾ ಹೊಸ ಎಂಪಿವಿ ಕಾರು ಉತ್ಪನ್ನವನ್ನು ಸಿದ್ದಪಡಿಸುತ್ತಿದೆ.

ಎಂಪಿವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ ಕಿಯಾ ಕಂಪನಿ

ಸದ್ಯ ಮಾರುಕಟ್ಟೆಯಲ್ಲಿರುವ ಕಿಯಾ ಕಾರ್ನಿವಾಲ್ ಎಂಪಿವಿ ಕಾರು ಮಾದರಿಯು ಇನೋವಾ ಕ್ರಿಸ್ಟಾ ಕಾರಿಗಿಂತಲೂ ಹೆಚ್ಚಿನ ಮಟ್ಟದ ಬೆಲೆಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಹೊಸ ಕಾರನ್ನು ಮಧ್ಯಮ ವರ್ಗದ ಗ್ರಾಹಕರನ್ನು ಗಮನದಲ್ಲಿಟ್ಟುಕೊಂಡು ನಿರ್ಮಾಣ ಮಾಡುತ್ತಿದೆ.

ಎಂಪಿವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ ಕಿಯಾ ಕಂಪನಿ

ಕಿಯಾ ಕಾರ್ನಿವಾಲ್ ಕಾರು ಮಾದರಿಯು ಸದ್ಯ 2.2-ಲೀಟರ್ ವಿಜಿಟಿ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.24.95 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 33.99 ಲಕ್ಷ ಬೆಲೆ ಹೊಂದಿದ್ದು, ಹೊಸದಾಗಿ ಬಿಡುಗಡೆಯಾಗಲಿರುವ ಮಧ್ಯಮ ಕ್ರಮಾಂಕದ ಎಂಪಿವಿ ಕಾರು ಮಾದರಿಯು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಎಕ್ಸ್‌ಶೋರೂಂ ಪ್ರಕಾರ ರೂ. 12 ಲಕ್ಷದಿಂದ ರೂ. 17 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದಾಗಿದೆ.

ಗ್ರಾಹಕರ ಬೇಡಿಕೆಯೆಂತೆ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯ ಪಡೆದುಕೊಳ್ಳಲಿರುವ ಹೊಸ ಎಂಪಿವಿ ಕಾರು ಭರ್ಜರಿ ಬೇಡಿಕೆ ಗಿಟ್ಟಿಸಿಕೊಳ್ಳವ ನೀರಿಕ್ಷೆಯಲ್ಲಿದ್ದು, ಬೆಲೆಯಲ್ಲಿ ಎರ್ಟಿಗಾ ಕಾರಿಗಿಂತಲೂ ತುಸು ದುಬಾರಿ ಮತ್ತು ಮತ್ತು ಇನೋವಾ ಕ್ರಿಸ್ಟಾ ಕಾರಿಗಿಂತಲೂ ಕಡಿಮೆ ಬೆಲೆಯೊಂದಿಗೆ ಮಾರಾಟಗೊಳ್ಳಲಿದೆ.

ಎಂಪಿವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ ಕಿಯಾ ಕಂಪನಿ

ಹೀಗಾಗಿ ಬಜೆಟ್ ಬೆಲೆಯಲ್ಲಿರುವ ಮಾರುತಿ ಎರ್ಟಿಗಾ ಮತ್ತು ಪ್ರೀಮಿಯಂ ಬೆಲೆ ಹೊಂದಿರುವ ಇನೋವಾ ಕ್ರಿಸ್ಟಾ ನಡುವಿನ ಬೆಲೆ ಅಂತರವನ್ನು ಸರಿದೂಗಿಸುವ ಮೂಲಕ ಗ್ರಾಹಕರನ್ನು ಸೆಳೆಯಲು ಮುಂದಾಗಿರುವ ಕಿಯಾ ಕಂಪನಿಯು ಉತ್ತಮ ಬೇಡಿಕೆ ಗಿಟ್ಟಿಸಿಕೊಳ್ಳುವ ನೀರಿಕ್ಷೆಯಲ್ಲಿದೆ.

ಎಂಪಿವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ ಕಿಯಾ ಕಂಪನಿ

ಪ್ರತಿ ವರ್ಷ ಎರಡು ಹೊಸ ಕಾರು ಮಾದರಿಗಳನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿರುವ ಕಿಯಾ ಕಂಪನಿಯು ಕಾರು ಮಾರಾಟ ಆರಂಭದ ಒಂದೂವರೆ ವರ್ಷದಲ್ಲಿ ಮೂರು ಕಾರುಗಳನ್ನು ಬಿಡುಗಡೆ ಮಾಡಿದ್ದು, ಇದೀಗ ನಾಲ್ಕನೇ ಕಾರು ಮಾದರಿಯಾಗಿ ಮಧ್ಯಮ ಕ್ರಮಾಂಕದ ಎಂಪಿವಿ ಕಾರನ್ನು ರಸ್ತೆಗಿಳಿಸುವ ಸಿದ್ದತೆಯಲ್ಲಿತ್ತು.

ಎಂಪಿವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ ಕಿಯಾ ಕಂಪನಿ

ಯೋಜನೆಯೆಂತೆ ಈ ವರ್ಷದ ಮಧ್ಯಂತರದಲ್ಲಿ ಬಿಡುಗಡೆಯಾಗಬೇಕಿದ್ದ ಹೊಸ ಕಾರನ್ನು ಕೋವಿಡ್ ಕಾರಣಕ್ಕೆ 2022ಕ್ಕೆ ಮುಂದೂಡಿಕೆ ಮಾಡಿರುವ ಕಿಯಾ ಕಂಪನಿಯು ಹೊಸ ಎಂಪಿವಿ ನಂತರ ಸೊಲ್ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್, ನಿರೊ ಎಲೆಕ್ಟ್ರಿಕ್ ಎಸ್‌ಯುವಿ ಮತ್ತು ಇವಿ6 ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯನ್ನು ಬಿಡುಗಡೆ ಮಾಡಲಿದೆ.

ಎಂಪಿವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ ಕಿಯಾ ಕಂಪನಿ

ಸೊಲ್ ಎಲೆಕ್ಟ್ರಿಕ್ ಹ್ಯಾಚ್‌ಬ್ಯಾಕ್ ಮಾದರಿಯು ರೂ. 12 ಲಕ್ಷದಿಂದ ರೂ.15 ಲಕ್ಷ ಬೆಲೆ ಅಂತರದಲ್ಲಿ ನಿರೊ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯು ರೂ.22 ಲಕ್ಷದಿಂದ ರೂ.27 ಲಕ್ಷ ಬೆಲೆ ಅಂತರದಲ್ಲಿ ಮತ್ತು ಇವಿ6 ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯು ಐಷಾರಾಮಿ ಸೌಲಭ್ಯಗಳೊಂದಿಗೆ ರೂ. 35 ಲಕ್ಷದಿಂದ ರೂ. 40 ಲಕ್ಷ ಬೆಲೆ ಅಂತದರಲ್ಲಿ ಮಾರಾಟಗೊಳ್ಳಬಹುದಾಗಿದೆ.

ಎಂಪಿವಿ ಸೇರಿ ನಾಲ್ಕು ಹೊಸ ಕಾರು ಬಿಡುಗಡೆ ಮಾಡಲಿದೆ ಕಿಯಾ ಕಂಪನಿ

ಇವಿ6 ಹೊಸ ಕಾರು ಪ್ರತಿ ಚಾರ್ಜ್‌ಗೆ ಗರಿಷ್ಠ 480 ಕಿ.ಮೀ ಮೈಲೇಜ್ ಹಿಂದಿರುಗಿಸಲಿದ್ದು, ಸೂಪರ್ ಫಾಸ್ಟ್ ಚಾರ್ಜಿಂಗ್ ಸೌಲಭ್ಯದೊಂದಿಗೆ ಅತಿ ಕಡಿಮೆ ಅವಧಿಯಲ್ಲಿ ಗರಿಷ್ಠ ಪ್ರಮಾಣ ಚಾರ್ಜ್ ಮಾಡಬಹುದಾಗಿದೆ.

Most Read Articles

Kannada
English summary
Upcooming kia cars in india soon details
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X