ಕೋವಿಡ್ ಎಫೆಕ್ಟ್: ಸೆಕೆಂಡ್ ಹ್ಯಾಂಡ್ ವಾಹನ ಮಾರಾಟ ಪ್ರಕ್ರಿಯೆಯಲ್ಲಿ ಭಾರೀ ಹೆಚ್ಚಳ

ಕೋವಿಡ್ ಆತಂಕದಿಂದ ಆಟೋ ಉದ್ಯಮವು ತೀವ್ರ ಹಿನ್ನಡೆ ಅನುಭವಿಸುತ್ತಿದ್ದು, ಹೊಸ ವಾಹನ ಮಾರಾಟದಲ್ಲಿ ಭಾರೀ ಪ್ರಮಾಣದ ಕುಸಿತ ಕಂಡಿದೆ. ಇದರ ನಡುವೆ ಗ್ರಾಹಕರು ಪರಿಸ್ಥಿತಿಗೆ ಅನುಗುಣವಾಗಿ ಸೆಕೆಂಡ್ ವಾಹನಗಳ ಮುಖ ಮಾಡುತ್ತಿದ್ದಾರೆ.

ಕೋವಿಡ್ ಎಫೆಕ್ಟ್: ಸೆಕೆಂಡ್ ಹ್ಯಾಂಡ್ ವಾಹನ ಮಾರಾಟ ಪ್ರಕ್ರಿಯೆಯಲ್ಲಿ ಭಾರೀ ಹೆಚ್ಚಳ

ಕರೋನಾ ವೈರಸ್‌ನಿಂದಾಗಿ ಪ್ರಮುಖ ವಾಣಿಜ್ಯ ಚಟುವಟಿಕೆಗಳು ನೆಲಕಚ್ಚಿದ್ದು, ಆಟೋ ಉದ್ಯಮವು ಕೂಡಾ ಭಾರೀ ಪ್ರಮಾಣದ ನಷ್ಟ ಅನುಭವಿಸುತ್ತಿದೆ. ಲಾಕ್‌ಡೌನ್ ವಿನಾಯ್ತಿ ನಂತರ ಆಟೋ ಉತ್ಪಾದನಾ ಚಟುವಟಿಕೆಗಳಿಗೆ ಅವಕಾಶ ಸಿಕ್ಕಿದ್ದರೂ ಗ್ರಾಹಕರಿಲ್ಲದೆ ಹಲವು ಕಾರು ಮಾರಾಟ ಕಂಪನಿಗಳು ಕದಮುಚ್ಚುವ ಸ್ಥಿತಿಗೆ ತಲುಪಿವೆ.

ಕೋವಿಡ್ ಎಫೆಕ್ಟ್: ಸೆಕೆಂಡ್ ಹ್ಯಾಂಡ್ ವಾಹನ ಮಾರಾಟ ಪ್ರಕ್ರಿಯೆಯಲ್ಲಿ ಭಾರೀ ಹೆಚ್ಚಳ

ಸದ್ಯ ಕರೋನಾ ವೈರಸ್ 2ನೇ ಅಲೆಯ ಪರಿಣಾಮ ದೇಶದಲ್ಲಿ ಆಟೋ ಉದ್ಯಮವು ಮಂದಗತಿಯಲ್ಲಿ ಸಾಗಿದ್ದು, ಹೊಸ ವಾಹನ ಖರೀದಿ ಯೋಜನೆಯಲ್ಲಿದ್ದ ಹಲವು ಗ್ರಾಹಕರು ಪರಿಸ್ಥಿತಿಗೆ ಅನುಗುಣವಾಗಿ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿಯತ್ತ ಮುಖ ಮಾಡುತ್ತಿದ್ದಾರೆ.

ಕೋವಿಡ್ ಎಫೆಕ್ಟ್: ಸೆಕೆಂಡ್ ಹ್ಯಾಂಡ್ ವಾಹನ ಮಾರಾಟ ಪ್ರಕ್ರಿಯೆಯಲ್ಲಿ ಭಾರೀ ಹೆಚ್ಚಳ

ಹೊಸ ವಾಹನಗಳ ಬೇಡಿಕೆಯಿಲ್ಲದಿರುವುದರಿಂದ ಹೊಸ ಅವಕಾಶವನ್ನು ಬಳಸಿಕೊಳ್ಳಲು ಮುಂದಾಗಿರುವ ಹಲವು ಆಟೋ ಕಂಪನಿಗಳು ಹೊಸ ವಾಹನಗಳ ಮಾರಾಟದ ಜೊತೆಗೆ ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟದ ಉದ್ಯಮದ ಮೇಲೂ ಗಮನಹರಿಸುತ್ತಿವೆ.

ಕೋವಿಡ್ ಎಫೆಕ್ಟ್: ಸೆಕೆಂಡ್ ಹ್ಯಾಂಡ್ ವಾಹನ ಮಾರಾಟ ಪ್ರಕ್ರಿಯೆಯಲ್ಲಿ ಭಾರೀ ಹೆಚ್ಚಳ

ಸದ್ಯ ವೈರಸ್ ಭೀತಿ ನಡುವೆಯೂ ಹೊಸ ಸುರಕ್ಷಾ ಮಾರ್ಗಸೂಚಿಯೊಂದಿಗೆ ವ್ಯಾಪಾರ ವಹಿವಾಟು ಕೈಗೊಂಡಿರುವ ಆಟೋ ಕಂಪನಿಗಳು ಕನಿಷ್ಠ ಪ್ರಮಾಣದ ವಾಹನ ಮಾರಾಟ ಪ್ರಮಾಣವನ್ನು ದಾಖಲಿಸಿದ್ದು, ಬಹುತೇಕ ಕಂಪನಿಗಳ ಕಾರು ಮಾರಾಟದಲ್ಲಿ ಶೇ. 40ರಿಂದ ಶೇ.60ರಷ್ಟು ಕುಸಿತ ಕಂಡುಬಂದಿದೆ.

ಕೋವಿಡ್ ಎಫೆಕ್ಟ್: ಸೆಕೆಂಡ್ ಹ್ಯಾಂಡ್ ವಾಹನ ಮಾರಾಟ ಪ್ರಕ್ರಿಯೆಯಲ್ಲಿ ಭಾರೀ ಹೆಚ್ಚಳ

ಹೊಸ ಕಾರುಗಳು ಮಾರಾಟವು ಕುಸಿದ ಬೆನ್ನಲ್ಲೇ ಸೆಕೆಂಡ್ ಹ್ಯಾಂಡ್ ವಾಹನಗಳ ಖರೀದಿ ಮತ್ತು ಮಾರಾಟ ಪ್ರಮಾಣವು ತೀವ್ರಗತಿಯಲ್ಲಿ ಹೆಚ್ಚಿದ್ದು, ಈ ನಿಟ್ಟಿನಲ್ಲಿ ಪ್ರಮುಖ ಕಂಪನಿ ಸೆಕೆಂಡ್ ಹ್ಯಾಂಡ್ ಮಾರಾಟ ಮಳಿಗೆಗಳ ಸಂಖ್ಯೆಯನ್ನು ದ್ವಿಗುಣಗೊಳಿಸುತ್ತಿವೆ.

ಕೋವಿಡ್ ಎಫೆಕ್ಟ್: ಸೆಕೆಂಡ್ ಹ್ಯಾಂಡ್ ವಾಹನ ಮಾರಾಟ ಪ್ರಕ್ರಿಯೆಯಲ್ಲಿ ಭಾರೀ ಹೆಚ್ಚಳ

ಅಸಂಘಟಿತವಾಗಿರುವ ಸ್ಥಳೀಯ ವ್ಯಾಪಾರಿಗಳ ಬಳಿ ಸೆಕೆಂಡ್ ಹ್ಯಾಂಡ್ ವಾಹನ ಖರೀದಿಯು ಕೆಲವು ಸಂದರ್ಭಗಳಲ್ಲಿ ಲಾಭಕ್ಕಿಂತ ಹೆಚ್ಚು ನಷ್ಟ ಅನುಭವಿಸಬೇಕಾದ ಸಂದರ್ಭಗಳು ಎದುರಾಗಬಹುದಾಗಿದ್ದು, ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳನ್ನು ಗ್ರಾಹಕರಿಗೆ ತಲುಪಿಸುವ ಯೋಜನೆಯಲ್ಲಿವೆ.

ಕೋವಿಡ್ ಎಫೆಕ್ಟ್: ಸೆಕೆಂಡ್ ಹ್ಯಾಂಡ್ ವಾಹನ ಮಾರಾಟ ಪ್ರಕ್ರಿಯೆಯಲ್ಲಿ ಭಾರೀ ಹೆಚ್ಚಳ

ಜೊತೆಗೆ ಪ್ರಮಾಣೀಕೃತ ಸೆಕೆಂಡ್ ಹ್ಯಾಂಡ್ ವಾಹನಗಳ ಮಾರಾಟ ಮಳಿಗೆಗಳಲ್ಲಿ ಖರೀದಿಸುವ ವಾಹನಗಳಿಗೆ ಹೆಚ್ಚುವರಿಯಾಗಿ ವಾರಂಟಿ ಸಹ ದೊರೆಯಲಿದ್ದು, ಮೋಸ ವ್ಯವಹಾರಗಳಿಗೆ ಇಲ್ಲಿ ಅವಕಾಶವಿರುವುದಿಲ್ಲ.

ಕೋವಿಡ್ ಎಫೆಕ್ಟ್: ಸೆಕೆಂಡ್ ಹ್ಯಾಂಡ್ ವಾಹನ ಮಾರಾಟ ಪ್ರಕ್ರಿಯೆಯಲ್ಲಿ ಭಾರೀ ಹೆಚ್ಚಳ

ಈ ನಿಟ್ಟಿನಲ್ಲಿ ಮಹೀಂದ್ರಾ ಕಂಪನಿಯು ಫಸ್ಟ್ ಛಾಯ್ಸ್, ಮಾರುತಿ ಸುಜುಕಿ ಟ್ರೂ ವ್ಯಾಲ್ಯೂ ಸೇರಿದಂತೆ ಪ್ರಮುಖ ಸೆಕೆಂಡ್ ಹ್ಯಾಂಡ್ ಕಾರು ಮಾರಾಟ ಮಳಿಗೆಗಳು ಭಾರೀ ಪ್ರಮಾಣದ ವಹಿವಾಟು ನಡೆಸುವ ಯೋಜನೆಯಲ್ಲಿದ್ದು, ಸೆಕೆಂಡ್ ಹ್ಯಾಂಡ್ ವಾಹನಗಳಿಗೆ ಮಹಾನಗರಗಳಿಂತಲೂ ಹೆಚ್ಚು 2ನೇ ಮತ್ತು 3ನೇ ಹಂತದ ನಗರಗಳಲ್ಲಿ ಹೆಚ್ಚಿನ ಮಟ್ಟದ ಬೇಡಿಕೆ ಕಂಡುಬರುತ್ತಿದೆ.

Most Read Articles

Kannada
English summary
Used Car Sales Demand High In India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X