ಡ್ರೈವಿಂಗ್ ಲೈಸೆನ್ಸ್, ಆರ್‌ಸಿ ಮಾನ್ಯತಾ ಅವಧಿ ಮತ್ತೆ ವಿಸ್ತರಿಸಿದ ಕೇಂದ್ರ ಸರ್ಕಾರ

ಕರೋನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಡ್ರೈವಿಂಗ್ ಲೈಸೆನ್ಸ್, ಆರ್‌ಸಿಗಳಂತಹ ವಾಹನ ಸಂಬಂಧಿತ ದಾಖಲೆಗಳ ಮಾನ್ಯತೆ ಅವಧಿಯನ್ನು ಜೂನ್‌ ತಿಂಗಳವರೆಗೆ ವಿಸ್ತರಿಸಿದೆ.

ಡ್ರೈವಿಂಗ್ ಲೈಸೆನ್ಸ್, ಆರ್‌ಸಿ ಮಾನ್ಯತಾ ಅವಧಿ ಮತ್ತೆ ವಿಸ್ತರಿಸಿದ ಕೇಂದ್ರ ಸರ್ಕಾರ

ಈ ವಿಸ್ತರಣೆಯು 2020ರ ಫೆಬ್ರವರಿ 1 ಹಾಗೂ ಅದರ ನಂತರ ಮಾನ್ಯತೆ ಅಂತ್ಯವಾದ ದಾಖಲೆಗಳಿಗೆ ಮಾತ್ರ ಅನ್ವಯವಾಗಲಿದೆ. ಕರೋನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ವಾಹನ ದಾಖಲೆಯ ಸಿಂಧುತ್ವವನ್ನು ಹೆಚ್ಚಿಸಲಾಗುತ್ತಿದೆ. ಇದಕ್ಕೂ ಮುನ್ನ ಕಳೆದ ವರ್ಷದ ಮಾರ್ಚ್ 30, ಜೂನ್ 9, ಆಗಸ್ಟ್ 24 ಹಾಗೂ ಡಿಸೆಂಬರ್ 27ರಂದು ವಾಹನ ದಾಖಲೆಯ ಮಾನ್ಯತೆಯನ್ನು ವಿಸ್ತರಿಸಿ ಆದೇಶ ಹೊರಡಿಸಲಾಗಿತ್ತು.

ಡ್ರೈವಿಂಗ್ ಲೈಸೆನ್ಸ್, ಆರ್‌ಸಿ ಮಾನ್ಯತಾ ಅವಧಿ ಮತ್ತೆ ವಿಸ್ತರಿಸಿದ ಕೇಂದ್ರ ಸರ್ಕಾರ

ಕರೋನಾ ವೈರಸ್ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಾನ್ಯತಾ ಅವಧಿಯನ್ನು ನಿರಂತರವಾಗಿ ವಿಸ್ತರಿಸಲಾಗುತ್ತಿದೆ. ಮೋಟಾರು ವಾಹನ ಕಾಯ್ದೆ 1988 ಹಾಗೂ ಕೇಂದ್ರ ವಾಹನ ನಿಯಮ 1989ರ ಅಡಿಯಲ್ಲಿ ಬರುವ ಎಲ್ಲಾ ದಾಖಲೆಗಳಿಗೆ ಇದು ಅನ್ವಯವಾಗಲಿದೆ.

MOSTREAD: ಟ್ರ್ಯಾಕ್ಟರ್‌ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್‌ಗಳಿರಲು ಕಾರಣಗಳಿವು

ಡ್ರೈವಿಂಗ್ ಲೈಸೆನ್ಸ್, ಆರ್‌ಸಿ ಮಾನ್ಯತಾ ಅವಧಿ ಮತ್ತೆ ವಿಸ್ತರಿಸಿದ ಕೇಂದ್ರ ಸರ್ಕಾರ

ದೇಶದಲ್ಲಿ ಕರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಹಲವು ಸಾರಿಗೆ ಕಚೇರಿಗಳನ್ನು ಮುಚ್ಚಲಾಗುತ್ತಿದ್ದು, ಜನರ ಅನುಕೂಲಕ್ಕಾಗಿ ಈ ಕ್ರಮ ಕೈಗೊಳ್ಳಲಾಗುತ್ತಿದೆ.

ಡ್ರೈವಿಂಗ್ ಲೈಸೆನ್ಸ್, ಆರ್‌ಸಿ ಮಾನ್ಯತಾ ಅವಧಿ ಮತ್ತೆ ವಿಸ್ತರಿಸಿದ ಕೇಂದ್ರ ಸರ್ಕಾರ

ಇದರ ಜೊತೆಗೆ ದಾಖಲೆಗಳ ಆನ್‌ಲೈನ್ ನವೀಕರಣದ ಆಯ್ಕೆಯನ್ನು ಸಹ ಜಾರಿಗೆ ತರಲಾಗಿದೆ. ಆನ್‌ಲೈನ್ ನವೀಕರಣದ ಆಯ್ಕೆಯನ್ನು ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರ ತಿಳಿಸಿದೆ.

MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಡ್ರೈವಿಂಗ್ ಲೈಸೆನ್ಸ್, ಆರ್‌ಸಿ ಮಾನ್ಯತಾ ಅವಧಿ ಮತ್ತೆ ವಿಸ್ತರಿಸಿದ ಕೇಂದ್ರ ಸರ್ಕಾರ

ಡ್ರೈವಿಂಗ್ ಲೈಸೆನ್ಸ್ ಹಾಗೂ ವಾಹನಗಳ ದಾಖಲೆಗಳನ್ನು ಒಟ್ಟಿಗೆ ಸಾಗಿಸುವ ಅಗತ್ಯವಿಲ್ಲ. ಇತ್ತೀಚೆಗೆ ಕೇಂದ್ರ ಸಾರಿಗೆ ಇಲಾಖೆಯು ಎಲ್ಲಾ ರಾಜ್ಯಗಳಿಗೆ ಡಿಜಿಟಲ್ ರೂಪದಲ್ಲಿರುವ ದಾಖಲೆಗಳಿಗೆ ಮಾನ್ಯತೆ ನೀಡುವಂತೆ ಆದೇಶ ನೀಡಿದೆ.

ಡ್ರೈವಿಂಗ್ ಲೈಸೆನ್ಸ್, ಆರ್‌ಸಿ ಮಾನ್ಯತಾ ಅವಧಿ ಮತ್ತೆ ವಿಸ್ತರಿಸಿದ ಕೇಂದ್ರ ಸರ್ಕಾರ

ಡ್ರೈವಿಂಗ್ ಲೈಸೆನ್ಸ್ ಹಾಗೂ ಇನ್ನಿತರ ವಾಹನ ಸಂಬಂಧಿತ ದಾಖಲೆಗಳನ್ನು ಆನ್‌ಲೈನ್‌ನಲ್ಲಿ ಸಂಗ್ರಹಿಸಿ, ಪೊಲೀಸರ ತಪಾಸಣೆ ವೇಳೆಯಲ್ಲಿ ತೋರಿಸಬಹುದು. ಡ್ರೈವಿಂಗ್ ಲೈಸೆನ್ಸ್ ಹಾಗೂ ಇನ್ನಿತರ ದಾಖಲೆಗಳನ್ನು ಎಂ ಟ್ರಾನ್ಸ್‌ಪೋರ್ಟ್ ಅಥವಾ ಡಿಜಿಲಾಕರ್ ಅಪ್ಲಿಕೇಶನ್‌ನಲ್ಲಿ ಸಂಗ್ರಹಿಸಿದರೆ ಅವುಗಳನ್ನು ಮಾನ್ಯವೆಂದು ಪರಿಗಣಿಸಲಾಗುತ್ತದೆ.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಡ್ರೈವಿಂಗ್ ಲೈಸೆನ್ಸ್, ಆರ್‌ಸಿ ಮಾನ್ಯತಾ ಅವಧಿ ಮತ್ತೆ ವಿಸ್ತರಿಸಿದ ಕೇಂದ್ರ ಸರ್ಕಾರ

ಬೇರೆ ಯಾವುದೇ ಅಪ್ಲಿಕೇಶನ್‌ನಲ್ಲಿ ಅಥವಾ ಬೇರೆ ರೀತಿಯಲ್ಲಿ ಸಂಗ್ರಹಿಸಿದರೆ ಅವುಗಳನ್ನು ಮಾನ್ಯವೆಂದು ಪರಿಗಣಿಸಲಾಗುವುದಿಲ್ಲ. ಆದರೆ ಎಂ ಟ್ರಾನ್ಸ್‌ಪೋರ್ಟ್ ಅಥವಾ ಡಿಜಿಲಾಕರ್ ಅಪ್ಲಿಕೇಶನ್‌ನಲ್ಲಿರುವ ವಾಹನದ ದಾಖಲೆಗಳನ್ನು ಕೆಲವು ರಾಜ್ಯಗಳು ಮಾನ್ಯವೆಂದು ಪರಿಗಣಿಸುತ್ತಿಲ್ಲವೆಂಬ ದೂರುಗಳು ಕೇಳಿ ಬಂದಿದ್ದವು.

ಡ್ರೈವಿಂಗ್ ಲೈಸೆನ್ಸ್, ಆರ್‌ಸಿ ಮಾನ್ಯತಾ ಅವಧಿ ಮತ್ತೆ ವಿಸ್ತರಿಸಿದ ಕೇಂದ್ರ ಸರ್ಕಾರ

ಇತ್ತೀಚೆಗೆ ದೇಶದ ಹಲವು ಭಾಗಗಳಲ್ಲಿ ವಾಹನ ದಾಖಲೆಗಳ ಡಿಜಿಟಲ್ ಪ್ರತಿಗಳನ್ನು ತೋರಿಸಿದಾಗ ಅದರಿಂದ ಕಿರುಕುಳಕ್ಕೆ ಒಳಗಾಗುತ್ತಿರುವುದಾಗಿ ಸಾರ್ವಜನಿಕರು ದೂರು ನೀಡಿದ್ದರು.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಡ್ರೈವಿಂಗ್ ಲೈಸೆನ್ಸ್, ಆರ್‌ಸಿ ಮಾನ್ಯತಾ ಅವಧಿ ಮತ್ತೆ ವಿಸ್ತರಿಸಿದ ಕೇಂದ್ರ ಸರ್ಕಾರ

ಈ ಹಿನ್ನೆಲೆಯಲ್ಲಿ ಡಿಜಿಲಾಕರ್ ಹಾಗೂ ಎಂ ಟ್ರಾನ್ಸ್‌ಪೋರ್ಟ್'ನಲ್ಲಿರುವ ದಾಖಲೆಗಳನ್ನು ಮಾನ್ಯವೆಂದು ಪರಿಗಣಿಸಲಾಗುವುದು ಎಂದು ಕೇಂದ್ರ ಸಾರಿಗೆ ಇಲಾಖೆಯು ಸ್ಪಷ್ಟನೆಯನ್ನು ನೀಡಿದೆ.

Most Read Articles

Kannada
English summary
Validity of DL and other vehicle documents extended till June 2021. Read in Kannada.
Story first published: Saturday, March 27, 2021, 12:41 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X