ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಕರೋನಾ ವೈರಸ್‌ನಿಂದಾಗಿ ಉಂಟಾಗುತ್ತಿರುವ ಆರ್ಥಿಕ ಬಿಕ್ಕಟ್ಟು ಸಾರಿಗೆ ವಲಯಕ್ಕೆ ಭಾರೀ ಹೊಡೆತ ನೀಡಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಸಾರಿಗೆ ವಲಯಕ್ಕೆ ಕೇಂದ್ರ ಸರ್ಕಾರವು ಕೆಲವು ವಿನಾಯ್ತಿಗಳನ್ನು ಘೋಷಣೆ ಮಾಡುತ್ತಿದೆ.

ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ದೇಶಾದ್ಯಂತ ಕರೋನಾ ವೈರಸ್ 2ನೇ ಅಲೆ ಹೆಚ್ಚಿದ್ದರ ಪರಿಣಾಮ ಲಾಕ್‌ಡೌನ್ ವಿಧಿಸಿರುವುದರಿಂದ ವಾಣಿಜ್ಯ ಚಟುವಟಿಕೆಗಳು ಸ್ತಬ್ಧವಾಗಿದ್ದು, ಲಾಕ್‌ಡೌನ್‌ನಿಂದಾಗಿ ಸಂಕಷ್ಟದಲ್ಲಿ ವಾಹನ ಮಾಲೀಕರಿಗೆ ಕೆಲವು ಪ್ರಮುಖ ವಿನಾಯ್ತಿಗಳನ್ನು ನೀಡಲಾಗಿದೆ. ಕಳೆದ ವರ್ಷದಿಂದ ಸುಮಾರು ಆರು ಬಾರಿ ವಾಹನಗಳ ಅಗತ್ಯ ದಾಖಲೆಗಳ ಮಾನ್ಯತಾ ಅವಧಿಯನ್ನು ವಿಸ್ತರಿಸಲಾಗಿದ್ದು, ಇದೀಗ 2ನೇ ಅಲೆಯ ಸಂದರ್ಭದಲ್ಲೂ ಡ್ರೈವಿಂಗ್ ಲೈಸೆನ್ಸ್, ಆರ್‌ಸಿ, ಎಫ್‌ಸಿ ಮಾನ್ಯತಾ ಅವಧಿ ಮತ್ತೆ ವಿಸ್ತರಿಸಲಾಗಿದೆ.

ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಏಪ್ರಿಲ್ 30ರಿಂದ ಅನ್ವಯವಾಗುವಂತೆ ವಾಹನಗಳ ಅಗತ್ಯ ದಾಖಲೆಗಳ ಮಾನ್ಯತಾ ಅವಧಿಯನ್ನು ವಿಸ್ತರಣೆ ಮಾಡಿರುವ ಕೇಂದ್ರ ಸಾರಿಗೆ ಇಲಾಖೆಯು ದಾಖಲೆಗಳ ಮಾನ್ಯತಾ ಅವಧಿಯನ್ನು ಜೂನ್ 30ರ ತನಕ ಮಾನ್ಯತಾ ಅವಧಿಯನ್ನು ವಿಸ್ತರಣೆ ಮಾಡಿದೆ.

ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಹಾಗೆಯೇ ವಿನಾಯ್ತಿ ಅವಧಿಯಲ್ಲಿ ಮುಕ್ತಾಯಗೊಂಡ ವಾಹನ ದಾಖಲೆಗಳ ನವೀಕರಣಕ್ಕೆ ಯಾವುದೇ ಹೆಚ್ಚುವರಿ ಮೊತ್ತ ವಿಧಿಸುವುದಿಲ್ಲ ಎಂಬುವುದನ್ನು ಸಹ ಸ್ಪಷ್ಟಪಡಿಸಿರುವ ಕೇಂದ್ರ ಸಾರಿಗೆ ಇಲಾಖೆಯು ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದೆ.

ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಹೊಸ ಆದೇಶದಂತೆ ಏಪ್ರಿಲ್ 30ಕ್ಕೆ ಮುಕ್ತಾಯಗೊಂಡಿರುವ ಆರ್‌ಸಿ(ನೋಂದಣಿ ಪ್ರಮಾಣಪತ್ರ), ಡಿಎಲ್(ಚಾಲನಾ ಪ್ರಮಾಣಪತ್ರ) ಮತ್ತು ಎಫ್‌ಸಿ(ಫಿಟ್‌ನೆಸ್ ಪ್ರಮಾಣಪತ್ರ)ಗಳ ಮಾನ್ಯತಾ ಅವಧಿಯು ಮುಂದಿನ ಜೂನ್ ಅಂತ್ಯದ ತನಕ ಮಾನ್ಯತೆ ಹೊಂದಿರಲಿದ್ದು, ಆರ್‌ಸಿ, ಡಿಎಲ್ ಮತ್ತು ಎಫ್‌ಸಿ ಹೊರತುಪಡಿಸಿ ವಾಹನಗಳ ಇನ್ಸುರೆನ್ಸ್ ಮೇಲೆ ಹೊಸ ಆದೇಶವು ಅನ್ವಯವಾಗುವುದಿಲ್ಲ.

ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ವಾಹನಗಳ ಇನ್ಸುರೆನ್ಸ್ ನವೀಕರಣ ಅವಧಿಯನ್ನು ಕಳೆದ ವರ್ಷ ಮಾರ್ಚ್ ಮತ್ತು ಎಪ್ರಿಲ್ ತಿಂಗಳಿನಲ್ಲಿ ಮಗಿದ್ದ ವಾಹನ ಮಾಲೀಕರಿಗೆ ಲಾಕ್‌ಡೌನ್ ಅವಧಿಯಲ್ಲಿ ವಿನಾಯ್ತಿ ನೀಡಲಾಗಿತ್ತು. ಆದರೆ ಇದೀಗ ಡಿಎಲ್, ಆರ್‌ಸಿ ಮತ್ತು ಎಫ್‌ಸಿ ಹೊರತುಪಡಿಸಿ ಇನ್ಸುರೆನ್ಸ್ ‌ಗೆ ಯಾವುದೇ ವಿನಾಯ್ತಿ ನೀಡುತ್ತಿಲ್ಲ.

ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಕರೋನಾ ವೈರಸ್ ಹರಡುವಿಕೆಯನ್ನು ತಡೆಯಲು ಹಲವಾರು ಕಠಿಣ ಕ್ರಮಗಳನ್ನು ಮುಂದುವರಿಸಿರುವ ಕೇಂದ್ರ ಸರ್ಕಾರವು ಸಂಕಷ್ಟ ಸಮಯದಲ್ಲಿ ವಾಹನ ದಾಖಲೆಗಳಿಗೆ ಹೆಚ್ಚುವರಿ ಮಾನ್ಯತಾ ಅವಧಿಯನ್ನು ವಿಸ್ತರಿಸಿರುವುದು ಸ್ವಾಗತಾರ್ಹ.

ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಇನ್ನು ದೇಶಾದ್ಯಂತ ಕೋವಿಡ್ 2ನೇ ಅಲೆ ಹೆಚ್ಚಿರುವುದರಿಂದ ವಿವಿಧ ರಾಜ್ಯಗಳಲ್ಲಿ ಹಲವು ಕಠಿಣ ಕ್ರಮಗಳೊಂದಿಗೆ ಲಾಕ್ಡೌನ್ ಮುಂದುವರಿಸಲು ನಿರ್ಧರಿಸಿದ್ದು, ಹೊಸ ಸುರಕ್ಷಾ ಕ್ರಮಗಳ ಪರಿಣಾಮ ಆಟೋ ಉದ್ಯಮ ಹಿಂದೆಂಗಿಂತಲೂ ಹೆಚ್ಚು ನಷ್ಟ ಎದುರಾಗುವ ಭೀತಿಯಲ್ಲಿದೆ.

MOST READ: ಲಾಕ್‌ಡೌನ್ ಉಲ್ಲಂಘನೆ ಮಾಡಿರುವ ವಾಹನ ಮಾಲೀಕರಿಗೆ ಜೈಲು ಶಿಕ್ಷೆ ಫಿಕ್ಸ್

ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಕಳೆದ ವರ್ಷದ ಲಾಕ್‌ಡೌನ್‌ ಹೊಡೆತಕ್ಕೆ ಸಿಲುಕಿ ಸುಧಾರಣೆಯ ಹಾದಿಯಲ್ಲಿದ್ದ ಆಟೋ ಉದ್ಯಮವು ಇದೀಗ ಮತ್ತೆ ಸಂಕಷ್ಟ ಎದುರಿಸುತ್ತಿದ್ದು, ದೇಶಾದ್ಯಂತ ಹಲವು ಆಟೋ ಕಂಪನಿಗಳು ಈಗಾಗಲೇ ಕನಿಷ್ಠ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಿಸುತ್ತಿದ್ದರೆ ಇನ್ನು ಕೆಲವು ವಾಹನ ಕಂಪನಿಗಳು ಉದ್ಯೋಗಿಗಳ ಆರೋಗ್ಯದ ದೃಷ್ಠಿಯಿಂದ ಹೊಸ ವಾಹನಗಳ ಉತ್ಪಾದನೆಯನ್ನೇ ತಾತ್ಕಾಲಿಕವಾಗಿ ಬಂದ್ ಮಾಡಿವೆ.

ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ವಾಹನ ಉತ್ಪಾದನೆಯು ತಗ್ಗಿರುವುರುವುದು ಭಾರೀ ನಷ್ಟ ಎದುರಿಸುವ ಭೀತಿ ಎದುರಾಗಿದ್ದು, ಹೊಸ ಸುರಕ್ಷಾ ಕ್ರಮಗಳೊಂದಿಗೆ ಕೆಲವೇ ಕೆಲವು ಕಂಪನಿಗಳು ಮಾತ್ರ ವಾಹನ ಉತ್ಪಾದನೆ ಕೈಗೊಳ್ಳುತ್ತಿವೆ.

MOST READ: ಕೋವಿಡ್ ಭೀತಿ: ಕಾರು ಉತ್ಪಾದನೆಯನ್ನು ತಾತ್ಕಾಲಿಕವಾಗಿ ಬಂದ್ ಮಾಡಿದ ಎಂಜಿ ಮೋಟಾರ್

ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಇದರ ನಡುವೆ ಹೊಸ ವಾಹನಗಳ ಖರೀದಿಗೆ ಬುಕ್ಕಿಂಗ್ ಸಲ್ಲಿಕೆ ತೀವ್ರ ಕಂಡಿರುವುದಲ್ಲದೆ ಈಗಾಗಲೇ ಬುಕ್ಕಿಂಗ್ ಸಲ್ಲಿಕೆ ಮಾಡಿದ್ದ ಲಕ್ಷಾಂತರ ಹೊಸ ವಾಹನ ಖರೀದಿದಾರರು ಈಗಾಗಲೇ ಮಾಡಲಾಗಿರುವ ಬುಕ್ಕಿಂಗ್ ಹಿಂಪಡೆಯುತ್ತಿದ್ದಾರೆ.

Most Read Articles

Kannada
English summary
Ministry Of Road Transport And Highway Extended Validity For RTO Documents. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X