ಕೋವಿಡ್ ಅಬ್ಬರ: ಹೊಸ ವಾಹನಗಳ ಉತ್ಪಾದನೆಯಲ್ಲಿ ಕುಸಿತ
ದೇಶಾದ್ಯಂತ ಕೋವಿಡ್ 2ನೇ ಅಲೆ ಹೆಚ್ಚಿರುವುದರಿಂದ ವಿವಿಧ ರಾಜ್ಯಗಳಲ್ಲಿ ಹಲವು ಕಠಿಣ ಕ್ರಮಗಳೊಂದಿಗೆ ಭಾಗಶಃ ಲಾಕ್ಡೌನ್, ಕರ್ಫ್ಯೂ ವಿಧಿಸಲಾಗುತ್ತಿದ್ದು, ಹೊಸ ಸುರಕ್ಷಾ ಕ್ರಮಗಳ ಪರಿಣಾಮ ಆಟೋ ಉದ್ಯಮ ಮತ್ತೆ ನೆಲಕಚ್ಚುವ ಭೀತಿ ಎದುರಿಸುತ್ತಿದೆ.

ಕಳೆದ ವರ್ಷದ ಲಾಕ್‌ಡೌನ್ ಹೊಡೆತಕ್ಕೆ ಸಿಲುಕಿ ಸುಧಾರಿಸಿಕೊಳ್ಳುತ್ತಿದ್ದ ಆಟೋ ಉದ್ಯಮವು ಇದೀಗ ಮತ್ತೆ ಲಾಕ್‌ಡೌನ್ ಭೀತಿ ಎದುರಿಸುತ್ತಿದ್ದು, ಮಹಾರಾಷ್ಟ್ರದಲ್ಲಿ ನೆಲೆಗೊಂಡಿರುವು ಹಲವು ಆಟೋ ಕಂಪನಿಗಳು ಈಗಾಗಲೇ ಕನಿಷ್ಠ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಿಸುತ್ತಿವೆ. ಹೊಸ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಿರುವ ಸಂದರ್ಭದಲ್ಲೇ ಮತ್ತೆ ಉತ್ಪಾದನೆಯು ತಗ್ಗಿರುವುರುವುದು ಭಾರೀ ನಷ್ಟ ಎದುರಿಸುವ ಭೀತಿ ಎದುರಾಗಿದ್ದು, ಹೊಸ ಸುರಕ್ಷಾ ಕ್ರಮ ಕೈಗೊಂಡು ಉತ್ಪಾದನೆ ಕೈಗೊಳ್ಳುತ್ತಿವೆ.

ಪುಣೆ ಸುತ್ತುಮತ್ತ ನೆಲೆಗೊಂಡಿರುವ ದೇಶದ ಪ್ರಮುಖ ಆಟೋ ಕಂಪನಿಗಳು ಶೇ.50ಕ್ಕಿಂತಲೂ ಕಡಿಮೆ ಪ್ರಮಾಣದ ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಣೆ ಮಾಡುತ್ತಿದ್ದು, ವಾಹನ ಮಾರಾಟದಲ್ಲೂ ಕೂಡಾ ಹೊಸ ತಂತ್ರಗಳನ್ನು ಅಳವಡಿಸಿಕೊಂಡು ವೈರಸ್ ಹರಡುವಿಕೆ ತಡೆಯೊಂದಿಗೆ ಉದ್ಯಮ ವ್ಯವಹಾರ ಕೈಗೊಳ್ಳುತ್ತಿವೆ.

ಮಾಹಾರಾಷ್ಟ್ರದಲ್ಲಿ ಲಾಕ್ ಡೌನ್, ಕರ್ಫ್ಯೂ ಹೊರತಾಗಿಯೂ ಕೂಡಾ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ನಿರಂತರ ಏರಿಕೆಯಾಗುತ್ತಿದ್ದು, ದಿನಂಪ್ರತಿ ಸುಮಾರು 60 ಸಾವಿರ ಕೇಸ್‌ಗಳು ದಾಖಲಾಗುತ್ತಿರುವುದು ಉದ್ಯಮ ಚಟುವಟಿಕೆಗಳು ಸ್ತಬ್ಧಗೊಳ್ಳುವ ಸೂಚನೆ ನೀಡುತ್ತಿವೆ.

ಹೀಗಾಗಿ ಮುಂಜಾಗ್ರತ ಕ್ರಮವಾಗಿ ಲಭ್ಯವಿರುವ ಉದ್ಯೋಗಿಗಳೊಂದಿಗೆ ವಾಹನ ಉತ್ಪಾದನೆ ತೀವ್ರಗೊಳಿಸಿರುವ ಆಟೋ ಕಂಪನಿಗಳು ಡಿಜಿಟಲ್ ವ್ಯವಹಾರಗಳಿಗೆ ಹೆಚ್ಚಿನ ಒತ್ತು ನೀಡುತ್ತಿವೆ. ಆಟೋ ಉದ್ಯಮವು ಕಳೆದ ಕೆಲ ವರ್ಷಗಳಲ್ಲಿ ಹಲವಾರು ಬದಲಾವಣೆಗಳಿಗೆ ಸಾಕ್ಷಿಯಾಗಿದ್ದು, ಹೊಸ ವಾಹನಗಳ ಮಾರಾಟವು ಪರಿಸ್ಥಿತಿಗೆ ಅನುಗುಣವಾಗಿ ಏರಿಳಿಕೆ ಆಗುತ್ತಿರುತ್ತದೆ. ಆದರೆ ಕರೋನಾ ವೈರಸ್ ಪರಿಣಾಮದಿಂದಾಗಿ ಹೊಸ ವಾಹನ ಮಾರಾಟಕ್ಕಾಗಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳು ಸಾಕಷ್ಟು ಬಳಕೆಯಾಗುತ್ತಿರುವುದು ಹೊಸ ಬೆಳವಣಿಗೆಗೆ ಕಾರಣವಾಗಿದೆ.

ಹೌದು, ಹೊಸ ವಾಹನ ಖರೀದಿಗಾಗಿ ಬಹುತೇಕ ಗ್ರಾಹಕರು ನೇರವಾಗಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡುವುದು ಸಾಮಾನ್ಯವಾಗಿರುತ್ತದೆ. ಆದರೆ ಕರೋನಾ ವೈರಸ್ ಪರಿಣಾಮ ಗ್ರಾಹಕರನ್ನು ಮಳಿಗೆಗಳಿಗೆ ಭೇಟಿ ನೀಡದೆ ವಾಹನ ಖರೀದಿ ಪ್ರಕ್ರಿಯೆಯತ್ತ ಸೆಳೆಯಲು ಆಟೋ ಕಂಪನಿಗಳು ಮಾಡಿದ ಹೊಸ ಪ್ರಯತ್ನವು ಇಂದು ಸಾಕಷ್ಟು ಪ್ರಯೋಜಕಾರಿಯಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ವೈರಸ್ ಹರಡುವಿಕೆಯ ಸಂದರ್ಭದಲ್ಲಿ ಮಾರಾಟ ಮಳಿಗೆಗಳಿಗೆ ಭೇಟಿ ನೀಡದೆ ವಾಹನ ಪ್ರಕ್ರಿಯೆಯನ್ನು ಸರಳಗೊಳಿಸಲು ಆನ್‌ಲೈನ್ ಮಾರಾಟ ಮಳಿಗೆಗಳು ಸಾಕಷ್ಟು ಸಹಕಾರಿಯಾಗಿದ್ದು, ಬಳಕೆದಾರರ ಸಂಖ್ಯೆಯಲ್ಲೂ ಕೂಡಾ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದೆ.

ಕೋವಿಡ್ 19 ಹರಡುವಿಕೆಗೂ ಮೊದಲೇ ಹಲವಾರು ಆಟೋ ಕಂಪನಿಗಳು ಆನ್‌ಲೈನ್ ಪ್ಲ್ಯಾಟ್ ತೆರೆದಿದ್ದರೂ ಬಳಕೆದಾರರ ಸಂಖ್ಯೆಯು ತೀರಾ ವಿರಳವಾಗಿತ್ತು. ಆದರೆ ಕರೋನಾ ವೈರಸ್ ಹೆಚ್ಚಳವಾಗುತ್ತಿದ್ದಂತೆ ಸಾಮಾಜಿಕ ಅಂತರ ಅಗತ್ಯವಾಯಿತೋ ಆಗಿನಿಂದ ವಾಹನ ಮಾರಾಟಕ್ಕಾಗಿ ಆನ್‌ಲೈನ್ ಪ್ಲ್ಯಾಟ್‌ಫಾರ್ಮ್‌ಗಳ ಬಳಕೆಯು ಹೆಚ್ಚಳವಾಯ್ತು.
MOST READ: ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ಆನ್‌ಲೈನ್ ಪ್ಲ್ಯಾಟ್ ಮೂಲಕ ವಿವಿಧ ಆಟೋ ಕಂಪನಿಗಳು ಗ್ರಾಹಕರಿಗೆ ಅತಿ ಸರಳವಾಗಿ ಮನೆಯಲ್ಲೇ ಕುಳಿತು ವಾಹನ ಖರೀದಿ ಮಾಡುವ ಅವಕಾಶ ಒದಗಿಸಿದ್ದು, ಆನ್‌ಲೈನ್ ಪ್ಲ್ಯಾಟ್‌ಫಾರ್ಮ್ ನಿಂದಾಗಿ ಹಲವಾರು ಕಾರು ಕಂಪನಿಗಳಿಗೆ ನಷ್ಟ ಪರಿಸ್ಥಿತಿಯಿಂದ ಹೊರಬರಲು ಸಾಧ್ಯವಾಗಿದೆ.


Click it and Unblock the Notifications