ಕೇಂದ್ರ ಬಜೆಟ್ 2021: ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

15 ವರ್ಷ ಮೇಲ್ಪಟ್ಟ ಹಳೆಯ ವಾಹನಗಳ ಓಡಾಟಕ್ಕೆ ಸಂಪೂರ್ಣವಾಗಿ ಬ್ರೇಕ್ ಹಾಕಲು ಸ್ಕ್ರ್ಯಾಪೇಜ್ ನೀತಿಯನ್ನು ಕಡ್ಡಾಯ ಜಾರಿಗೆ ತರಲು ಕೇಂದ್ರ ಸರ್ಕಾರವು ಮಹತ್ವದ ನಿರ್ಣಯ ಪ್ರಕಟಿಸಿದ್ದು, ಹೊಸ ಸ್ಕ್ರ್ಯಾಪೇಜ್ ನೀತಿಯನ್ನು ಹಂತ-ಹಂತವಾಗಿ ಜಾರಿಗೆ ತರಲು ಮುಂದಾಗಿದೆ.

ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

2021-22ರ ಕೇಂದ್ರ ಸರ್ಕಾರ ಬಜೆಟ್ ಮಂಡನೆ ವೇಳೆ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಯನ್ನು ಪ್ರಸ್ತಾಪಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೊಸದಾಗಿ ಜಾರಿಗೆ ತರಲಾಗುತ್ತಿರುವ ವಾಹನ ಸ್ಕ್ರ್ಯಾಪೇಜ್ ನೀತಿಯು ಆಟೋ ಉದ್ಯಮಕ್ಕೆ ವರವಾಗಲಿದೆ ಎಂದಿದ್ದಾರೆ. ಸ್ವಯಂಪ್ರೇರಿತ ವಾಹನ ಸ್ಕ್ರ್ಯಾಪಿಂಗ್ ನೀತಿಯನ್ನು ಪ್ರತ್ಯೇಕವಾಗಿ ಪ್ರಕಟಿಸುವುದಾಗಿ ಹೇಳಿರುವ ವಿತ್ತ ಸಚಿವರು ಹಳೆಯ ವಾಹನಗಳಿಗೆ ಮತ್ತು ಅನರ್ಹ ವಾಹನಗಳಿಗೆ ಪ್ರತ್ಯೇಕ ಸ್ಕ್ರ್ಯಾಪೇಜ್ ನಿಯಮಗಳನ್ನು ರೂಪಿಸಿದ್ದೇವೆ ಎಂದಿದ್ದಾರೆ.

ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ಹೊಸ ಸ್ಕ್ರ್ಯಾಪೇಜ್ ನೀತಿಯು 2022ರ ಏಪ್ರಿಲ್ 1ರಿಂದ ಕಡ್ಡಾಯವಾಗಿ ಜಾರಿಗೆ ಬರಲಿದ್ದು, 20 ವರ್ಷ ಮೇಲ್ಪಟ್ಟ ವ್ಯಯಕ್ತಿಕ ಬಳಕೆಯ ವಾಹನಗಳು ಮತ್ತು 15 ವರ್ಷ ಮೇಲ್ಪಟ್ಟ ವಾಣಿಜ್ಯ ಬಳಕೆಯ ವಾಹನಗಳನ್ನು ಹೊಸ ನೀತಿಯಡಿಯಲ್ಲಿ ಸ್ಕ್ರ್ಯಾಪ್‌ಗೊಳ್ಳಲಿವೆ.

ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ಹೊಸ ನೀತಿಯಿಂದಾಗಿ ಕೇವಲ ಆಟೋ ಉದ್ಯಮಕ್ಕೆ ಮಾತ್ರವಲ್ಲ ಮಾಲಿನ್ಯ ಮತ್ತು ತೈಲ ಆಮದು ತಗ್ಗಿಸಲು ಪರಿಣಾಮಕಾರಿಯಾದ ನೀತಿಯಾಗಿದ್ದು, ಹಳೆಯ ವಾಹನಗಳ ಬಳಕೆಗೆ ಬ್ರೇಕ್ ಹಾಕಿದ್ದಲ್ಲಿ ಅತಿ ಹೆಚ್ಚು ಇಂಧನ ಕಾರ್ಯಕ್ಷಮತೆಯ ಹೊಂದಿರುವ ಹೊಸ ವಾಹನಗಳ ಉತ್ತೇಜಿಸಲು ಸಹಕಾರಿಯಾಗಲಿದೆ.

ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ಜೊತೆಗೆ ಹೊಸ ಸ್ಕ್ರ್ಯಾಪೇಜ್ ನೀತಿಯಿಂದಾಗಿ ಪರಿಸರ ಸ್ನೇಹಿ ಎಲೆಕ್ಟ್ರಿಕ್ ವಾಹನಗಳನ್ನು ಉತ್ತೇಜಿಸಲು ಸಾಕಷ್ಟು ಸಹಕಾರಿಯಾಗಲಿದ್ದು, ಹೊಸ ನಿಯಮದಲ್ಲಿ ಹಳೆಯ ವಾಹನಗಳಿಗೆ ಮತ್ತು ಅನರ್ಹ ವಾಹನಗಳಿಗೆ ಪ್ರತ್ಯೇಕವಾಗಿ ಸ್ಕ್ರ್ಯಾಪೇಜ್ ನಿಯಮಗಳು ಅನ್ವಯವಾಗಲಿವೆ. ಬಜೆಟ್ ಮಂಡನೆ ವೇಳೆ ಕೇವಲ ಹೊಸ ಸ್ಕ್ರ್ಯಾಪೇಜ್ ನೀತಿ ಪ್ರಮುಖಾಂಶಗಳನ್ನು ಮಾತ್ರ ಪ್ರಸ್ತಾಪಿಸಲಾಗಿದ್ದು, ಶೀಘ್ರದಲ್ಲೇ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಹೊಸ ನೀತಿಯ ಕುರಿತು ಸಂಪೂರ್ಣ ಮಾಹಿತಿಯನ್ನು ಹಂಚಿಕೊಳ್ಳಲಿದೆ.

ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ಸ್ವಯಂಪ್ರೇರಿತ ವಾಹನ ಸ್ಕ್ರ್ಯಾಪಿಂಗ್ ನೀತಿಯಲ್ಲಿ ಹಳೆಯ ವಾಹನಗಳನ್ನು ಮಾಲೀಕರೇ ನೇರವಾಗಿ ಅಧಿಕೃತ ಸ್ಕ್ರ್ಯಾಪೇಜ್ ಕೇಂದ್ರಗಳಲ್ಲಿ ಸ್ಕ್ಯಾಪ್ ಮಾಡಿಸುವ ಮೂಲಕ ಹೊಸ ವಾಹನಗಳ ಖರೀದಿಗೆ ಕೆಲವು ವಿನಾಯ್ತಿ ಪಡೆದುಕೊಳ್ಳುವ ಅವಕಾಶ ನೀಡಲಿದೆ.

ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ಆದರೆ ಚಾಲನೆಗೆ ಅನರ್ಹವಾಗಿರುವ ವಾಹನಗಳಿಗೆ ಪ್ರತ್ಯೇಕ ಸ್ಕ್ಯಾಪೇಜ್ ನೀತಿಯು ಅನ್ವಯವಾಗಲಿದ್ದು, ಮರುಬಳಕೆಯ ಉದ್ಯಮವನ್ನೂ ಪ್ರೋತ್ಸಾಹಿಸಲು ಹೊಸ ನೀತಿಯು ಪ್ರಮುಖ ಪಾತ್ರವಹಿಸಲಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ಮರುಬಳಕೆ ಉದ್ಯಮದಲ್ಲಿ ವಿಫುಲ ಅವಕಾಶ

ಹೌದು, ಸ್ಕ್ಯಾಪೇಜ್ ನೀತಿಯು ಜಾರಿಗೆ ಬಂದಲ್ಲಿ ಹಳೆಯ ವಾಹನಗಳಿಂದ ಬರುವ ಬಿಡಿಭಾಗಗಳ ನಿರ್ವಹಣೆ ಮತ್ತು ಮರುಬಳಕೆಯಿಂದಾಗಿ ರೂ. 43 ಸಾವಿರ ಕೋಟಿ ವ್ಯವಹಾರ ನೀರಿಕ್ಷೆಯಿದ್ದು, ಸ್ಕ್ಯಾಪೇಜ್ ನೀತಿಯಲ್ಲಿ ಸಂಗ್ರಹವಾಗುವ ಬಿಡಿಭಾಗಗಳನ್ನು ಮರುಬಳಕೆ ಮಾಡಿಕೊಳ್ಳುವ ಮೂಲಕ ಹೊಸ ವಾಹನ ಉತ್ಪಾದನಾ ವೆಚ್ಚವನ್ನು ತಗ್ಗಿಸಬಹುದಾಗಿದೆ ಎನ್ನಲಾಗಿದೆ.

ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ಇನ್ನು ಕಳೆದ ವಾರವಷ್ಟೇ ವಾಹನ ಸ್ಕ್ರ್ಯಾಪೇಜ್ ನೀತಿಯನ್ನು 15 ವರ್ಷ ಮೇಲ್ಪಟ್ಟ ಸರ್ಕಾರಿ ವಾಹನಗಳಿಗೆ ಅನ್ವಯವಾಗುವಂತೆ ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಹೊಸ ನೀತಿಯನ್ನು ಅಂಗೀಕರಿಸಿದ್ದು, ಹೊಸ ನೀತಿಯು ವಾಹನ ಉದ್ಯಮಕ್ಕೆ ಮಾತ್ರವಲ್ಲದೆ ಪರಿಸರ ವ್ಯವಸ್ಥೆಯ ಸುಧಾರಣೆ ತೊಡಗಿರುವ ಇತರೆ ಕ್ಷೇತ್ರಗಳಿಗೂ ಸಹಕಾರಿಯಾಗಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಬಹುನೀರಿಕ್ಷಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿ ಜಾರಿಗೆ ಗ್ರೀನ್ ಸಿಗ್ನಲ್

ಈ ಮೂಲಕ ಬಹುದಿನಗಳಿಂದ ಚರ್ಚೆಯಲ್ಲಿದ್ದ ವಾಹನ ಸ್ಕ್ರ್ಯಾಪೇಜ್ ನೀತಿಯ ಜಾರಿಗೆ ಮಹತ್ವದ ಹೆಜ್ಜೆಯಿರಿಸಿರುವ ಕೇಂದ್ರ ಸರ್ಕಾರವು ಹೊಸ ನೀತಿಯನ್ನು ಒಂದೇ ಬಾರಿಗೆ ಜಾರಿಗೆ ತರದೆ ಹಂತ-ಹಂತವಾಗಿ ಸ್ಕ್ರ್ಯಾಪೇಜ್ ನೀತಿಯನ್ನು ಅಳವಡಿಸಿಕೊಳ್ಳುತ್ತಿದ್ದು, ಹೊಸ ಸ್ಕ್ರ್ಯಾಪೇಜ್ ನೀತಿಯ ಪ್ರಸ್ತಾಪವಾಗುತ್ತಿದ್ದಂತೆ ಆಟೋ ಮೊಬೈಲ್‌ಗೆ ಸಂಬಂಧಿತ ಷೇರುಗಳಲ್ಲಿ ಸಾಕಷ್ಟು ಏರಿಕೆಯಾಗುತ್ತಿದೆ.

Most Read Articles

Kannada
English summary
Union Budget 2021: Vehicle Scrappage Policy Announced. Read in Kannada.
Story first published: Monday, February 1, 2021, 13:33 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X