ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಕಾಲಿಡಲಿದೆ ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿ

ವಿಶ್ವಾದ್ಯಂತ ದಿನೇ ದಿನೇ ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಪರಿಸರ ಸ್ನೇಹಿಯಾಗಿರುವ ಹಿನ್ನೆಲೆಯಲ್ಲಿ ಹಲವಾರು ದೇಶಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡುತ್ತಿವೆ. ನಾರ್ವೆ ಸೇರಿದಂತೆ ಯುರೋಪಿನ ಹಲವು ದೇಶಗಳಲ್ಲಿ 2030ರ ವೇಳೆಗೆ ಸಂಪೂರ್ಣವಾಗಿ ಎಲೆಕ್ಟ್ರಿಕ್ ವಾಹನಗಳನ್ನು ಅಳವಡಿಸಿಕೊಳ್ಳಲು ನಿರ್ಧರಿಸಲಾಗಿದೆ. ಭಾರತದಲ್ಲಿಯೂ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ.

ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಕಾಲಿಡಲಿದೆ ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಫೇಮ್ 2ನಂತಹ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಕೆಲವು ರಾಜ್ಯಗಳಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿ ನೀಡಲಾಗುತ್ತಿದೆ. ಇನ್ನು ಕೆಲವು ರಾಜ್ಯಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತದೆ. ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾಗಿವೆ.

ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಕಾಲಿಡಲಿದೆ ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿ

ಈಗ ದೇಶಿಯ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ಹಲವು ಹೊಸ ಸ್ಟಾರ್ಟ್ ಅಪ್‌ ಕಂಪನಿಗಳು ಎಲೆಕ್ಟ್ರಿಕ್ ದ್ವಿಚಕ್ರ ವಾಹನ ವಿಭಾಗದಲ್ಲಿ ತಮ್ಮ ವಾಹನಗಳನ್ನು ಬಿಡುಗಡೆಗೊಳಿಸಲು ಮುಂದಾಗುತ್ತಿವೆ. ಎಲೆಕ್ಟ್ರಿಕ್ ಕಾರು ವಿಭಾಗದಲ್ಲಿ ಕೆಲವು ಹೊಸ ಹೆಸರುಗಳು ಹೊರಹೊಮ್ಮುತ್ತಿವೆ. ಸ್ಮಾರ್ಟ್‌ಫೋನ್ ತಯಾರಕ ಕಂಪನಿಗಳು ಸಹ ಕೂಡ ಈ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸಲು ಮುಂದಾಗುತ್ತಿವೆ.

ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಕಾಲಿಡಲಿದೆ ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿ

ಕೆಲವು ದಿನಗಳ ಹಿಂದಷ್ಟೇ ಖ್ಯಾತ ಸ್ಮಾರ್ಟ್‌ಫೋನ್ ತಯಾರಕ ಕಂಪನಿಯಾದ Xiaomi ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಕಾಲಿಡುವುದಾಗಿ ತಿಳಿಸಿತ್ತು. ಇತ್ತೀಚೆಗಷ್ಟೇ ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿಯಾದ ಒಪ್ಪೋ ಸಹ ತನ್ನ ಎಲೆಕ್ಟ್ರಿಕ್ ಕಾರ್ ಅನ್ನು ಬಿಡುಗಡೆಗೊಳಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಹೊರಬಿದ್ದಿತ್ತು. ಈಗ ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿಯಾದ VIVO ಸಹ ದೇಶಿಯ ಮಾರುಕಟ್ಟೆಯಲ್ಲಿ ತನ್ನ ಎಲೆಕ್ಟ್ರಿಕ್ ವಾಹನವನ್ನು ಬಿಡುಗಡೆಗೊಳಿಸಲು ಸಿದ್ಧತೆ ನಡೆಸುತ್ತಿದೆ ಎಂದು ವರದಿಯಾಗಿದೆ.

ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಕಾಲಿಡಲಿದೆ ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿ

ಇತ್ತೀಚೆಗೆ VIVO ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಟ್ರೇಡ್‌ಮಾರ್ಕ್ ಅನ್ನು ಸಲ್ಲಿಸಿದೆ. VIVO ಗಿಂತ ಮೊದಲು, ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿಯಾದ OnePlus ಸಹ ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ಕಾರು ಬಿಡುಗಡೆಗೊಳಿಸುವುದಾಗಿ ತಿಳಿಸಿತ್ತು. ಮಾಹಿತಿಗಳ ಪ್ರಕಾರ, OnePlus ಕಂಪನಿಯು ಭಾರತದಲ್ಲಿ Oneplus Life ಹೆಸರಿನಲ್ಲಿ ಟ್ರೇಡ್‌ಮಾರ್ಕ್ ಸಲ್ಲಿಸಿದೆ.

ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಕಾಲಿಡಲಿದೆ ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿ

ಸ್ಮಾರ್ಟ್‌ಫೋನ್ ತಯಾರಕ ಕಂಪನಿಗಳು ಚಾಲಕರಹಿತ ಕಾರು, ಸೆಲ್ಫ್ ಬ್ಯಾಲೆನ್ಸ್ ಸ್ಕೂಟರ್‌, ಸೆಲ್ಫ್ ಬ್ಯಾಲೆನ್ಸ್ ಬೋರ್ಡ್‌, ರಿಮೋಟ್ ಕಂಟ್ರೋಲ್ ವಾಹನಗಳು, ನಾಗರಿಕ ಡ್ರೋನ್‌ಗಳು ಹಾಗೂ ಸೆಲ್ಫ್ ಬ್ಯಾಲೆನ್ಸ್ ಎಲೆಕ್ಟ್ರಿಕ್ ಯುನಿಸೈಕಲ್‌ಗಳಿಗಾಗಿ ದೇಶಿಯ ಮಾರುಕಟ್ಟೆಯಲ್ಲಿ ಕಾರ್ಯ ನಿರ್ವಹಿಸುತ್ತಿವೆ. Oppo ತನ್ನ ಎಲೆಕ್ಟ್ರಿಕ್ ವಾಹನವನ್ನು 2024 ರ ಆರಂಭದಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ಕೆಲವು ವರದಿಗಳಲ್ಲಿ ಬಹಿರಂಗಪಡಿಸಲಾಗಿದೆ.

ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಕಾಲಿಡಲಿದೆ ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿ

Xiaomi, Huawei ಹಾಗೂ Apple ನಂತಹ ಜನಪ್ರಿಯ ಮೊಬೈಲ್ ತಯಾರಕ ಕಂಪನಿಗಳು ಸಹ ಭವಿಷ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರವನ್ನು ಪ್ರವೇಶಿಸಲು ಸಜ್ಜಾಗುತ್ತಿವೆ. ಇನ್ನು ಸ್ಮಾರ್ಟ್‌ಫೋನ್ ತಯಾರಕ ಕಂಪನಿಯಾದ Oppo ಬಗ್ಗೆ ಮಾತನಾಡುವುದಾದರೆ, ಕಂಪನಿಯು ಭಾರತಕ್ಕಾಗಿ ಎಲೆಕ್ಟ್ರಿಕ್ ಕಾರ್ ಅನ್ನು ಅಭಿವೃದ್ಧಿಪಡಿಸುತ್ತಿದೆ ಎಂದು ವರದಿಯಾಗಿದೆ.

ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಕಾಲಿಡಲಿದೆ ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿ

ಈ ಎಲೆಕ್ಟ್ರಿಕ್ ಕಾರ್ ಅನ್ನು 2024 ರಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿವೆ. OPPO, Realme ಹಾಗೂ OnePlus ನಂತಹ ಕಂಪನಿಗಳು BBK ಎಲೆಕ್ಟ್ರಾನಿಕ್ಸ್ ಒಡೆತನದಲ್ಲಿದೆ. OPPO, Realme ಹಾಗೂ OnePlus ಕಂಪನಿಗಳು ದೇಶಿಯ ಮಾರುಕಟ್ಟೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ಧಿಪಡಿಸಿ, ಬಿಡುಗಡೆಗೊಳಿಸಲು ನಿರ್ಧರಿಸುತ್ತಿವೆ. Oppo ಕಂಪನಿಯು 2024 ರ ಆರಂಭದಲ್ಲಿ ಸಂಭವನೀಯ ಉಡಾವಣೆಯೊಂದಿಗೆ ತನ್ನ ವಾಹನವನ್ನು ಬಿಡುಗಡೆಗೊಳಿಸಬಹುದು.

ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಕಾಲಿಡಲಿದೆ ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿ

ಆದರೆ ಈ ಕಂಪನಿಗಳು ತಮ್ಮ ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಇನ್ನಿತರ ಯಾವುದೇ ವಿವರಗಳನ್ನು ಬಹಿರಂಗಪಡಿಸಿಲ್ಲ. ಅಂತಹ ಯೋಜನೆಗಳು ನಿಜವಾಗಿಯೂ ನಡೆಯುತ್ತಿವೆಯೇ ಎಂಬುದನ್ನು ಗಮನಿಸುವುದು ಸಹ ಮುಖ್ಯವಾಗಿದೆ. ಈ ಸ್ಮಾರ್ಟ್‌ಫೋನ್ ತಯಾರಕ ಕಂಪನಿಗಳು ನಿಜವಾಗಿಯೂ ಎಲೆಕ್ಟ್ರಿಕ್ ವಾಹನ ಕ್ಷೇತ್ರವನ್ನು ಪ್ರವೇಶಿಸಲು ತಯಾರಿ ನಡೆಸುತ್ತಿದ್ದರೆ, ಅದು ದೊಡ್ಡ ಹೆಜ್ಜೆಯಾಗಿರಲಿದೆ.

ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಕಾಲಿಡಲಿದೆ ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿ

ಭಾರತದ ಎಲೆಕ್ಟ್ರಿಕ್ ವಾಹನ ಉದ್ಯಮವು ಇನ್ನೂ ಆರಂಭಿಕ ಹಂತದಲ್ಲಿದೆ. ಆದರೆ ಹಲವು ವಾಹನ ತಯಾರಕ ಕಂಪನಿಗಳು ಈ ಬೃಹತ್ ಮಾರುಕಟ್ಟೆಯನ್ನು ಗಮನಿಸಿ, ಅದರಿಂದ ಬರುವ ಲಾಭ ಪಡೆಯಲು ಯಾವುದೇ ಅವಕಾಶವನ್ನು ಕಳೆದುಕೊಳ್ಳಲು ಬಯಸುವುದಿಲ್ಲ. ಭಾರತದಲ್ಲಿ ಎಲೆಕ್ಟ್ರಿಕ್ ದ್ವಿಚಕ್ರ ಹಾಗೂ ಎಲೆಕ್ಟ್ರಿಕ್ ತ್ರಿಚಕ್ರ ವಾಹನಗಳು ಹೆಚ್ಚು ಬೇಡಿಕೆಯನ್ನು ಹೊಂದಿವೆ.

ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಕಾಲಿಡಲಿದೆ ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿ

ಎಲೆಕ್ಟ್ರಿಕ್ ದ್ವಿಚಕ್ರ ವಾಹನ ವಿಭಾಗದಲ್ಲಿ ಸ್ಥಾಪಿತ ಕಂಪನಿಗಳಿಗೆ ಹಲವಾರು ಸ್ಟಾರ್ಟ್‌ಅಪ್‌ ಕಂಪನಿಗಳು ಸವಾಲು ಒಡ್ಡುತ್ತಿವೆ. ಇದರ ಜೊತೆಗೆ ಪ್ರಮುಖ ಮೊಬೈಲ್ ತಯಾರಕ ಕಂಪನಿಗಳು ಮಾರುಕಟ್ಟೆಯನ್ನು ಪ್ರವೇಶಿಸುತ್ತಿರುವುದು ಸಹ ಪೈಪೋಟಿಯನ್ನು ಮತ್ತಷ್ಟು ಹೆಚ್ಚಿಸಿದೆ. ಜಾಗತಿಕ ಮಟ್ಟದಲ್ಲಿ Apple, Google, Huawei ಹಾಗೂ Xiaomi ನಂತಹ ಕಂಪನಿಗಳು ತಮ್ಮದೇ ಆದ ಎಲೆಕ್ಟ್ರಿಕ್ ವಾಹನಗಳನ್ನು ಅಭಿವೃದ್ಧಿಪಡಿಸುವ ವಿವಿಧ ಹಂತಗಳಲ್ಲಿವೆ.

ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಕಾಲಿಡಲಿದೆ ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿ

ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲು ಫೇಮ್ 2 ನಂತಹ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಕೆಲವು ರಾಜ್ಯಗಳಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ಸಬ್ಸಿಡಿ ನೀಡಲಾಗುತ್ತಿದೆ. ಇನ್ನು ಕೆಲವು ರಾಜ್ಯಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಖರೀದಿ ಮೇಲೆ ವಿಶೇಷ ಕೊಡುಗೆಗಳನ್ನು ನೀಡಲಾಗುತ್ತದೆ. ಎಲೆಕ್ಟ್ರಿಕ್ ವಾಹನಗಳಿಗೆ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಎಲ್ಲಾ ವಾಹನ ತಯಾರಕ ಕಂಪನಿಗಳು ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಗೆ ಮುಂದಾಗಿವೆ.

ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಕಾಲಿಡಲಿದೆ ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿ

Hyundai, Mahindra and Mahindra, Tata Motors, MG Motor ಸೇರಿದಂತೆ ಹಲವು ಕಂಪನಿಗಳು ಈಗಾಗಲೇ ತಮ್ಮ ಎಲೆಕ್ಟ್ರಿಕ್ ಕಾರುಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿವೆ. Tata Motors ಕಂಪನಿಯು ತನ್ನ Nexon EV ಹಾಗೂ Tigor ಎಲೆಕ್ಟ್ರಿಕ್ ಕಾರುಗಳನ್ನು ದೇಶಿಯ ಮಾರುಕಟ್ಟೆಯಲ್ಲಿ ಮಾರಾಟ ಮಾಡುತ್ತಿದೆ.

ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಕಾಲಿಡಲಿದೆ ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿ

ಮೊಬೈಲ್ ತಯಾರಕ ಕಂಪನಿಗಳು ಮೊಬೈಲ್ ಫೋನ್'ಗಳ ರೀತಿ ಕಡಿಮೆ ಬೆಲೆಯ ಎಲೆಕ್ಟ್ರಿಕ್ ವಾಹನಗಳನ್ನು ಮಾರಾಟ ಬಹುದು ಎಂಬುದು ವಾಹನ ಪ್ರಿಯರ ನಿರೀಕ್ಷೆ. ಪೆಟ್ರೋಲ್, ಡೀಸೆಲ್ ಬೆಲೆ ಗಗನಕ್ಕೇರಿರುವ ಹಿನ್ನೆಲೆಯಲ್ಲಿ ವಾಹನ ಸವಾರರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಮುಂದಾಗುತ್ತಿದ್ದಾರೆ.

ಎಲೆಕ್ಟ್ರಿಕ್ ವಾಹನ ಕ್ಷೇತ್ರಕ್ಕೆ ಕಾಲಿಡಲಿದೆ ಮತ್ತೊಂದು ಸ್ಮಾರ್ಟ್‌ಫೋನ್ ತಯಾರಕ ಕಂಪನಿ

ಆದರೆ ಇವಿ ಚಾರ್ಜಿಂಗ್ ಕೇಂದ್ರಗಳು ಸಾಕಷ್ಟು ಸಂಖ್ಯೆಯಲ್ಲಿ ಇಲ್ಲದೇ ಇರುವುದರಿಂದ ಈಗಲೂ ಸಹ ಹಲವಾರು ಜನರು ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸಲು ಹಿಂದೇಟು ಹಾಕುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ಸಂಖ್ಯೆಯಲ್ಲಿ ಇವಿ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಲು ಮುಂದಾಗುತ್ತಿವೆ.

ಗಮನಿಸಿ: ಈ ಲೇಖನದಲ್ಲಿರುವ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.

Most Read Articles

Kannada
English summary
Vivo company files trademark for electric vehicles in india details
Story first published: Thursday, December 9, 2021, 10:13 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X