ಫೋಕ್ಸ್‌ವ್ಯಾಗನ್ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ

ಫೋಕ್ಸ್‌ವ್ಯಾಗನ್ ಇಂಡಿಯಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ಸ್ವಾತಂತ್ರ್ಯ ದಿನಚರಣೆಯ ಸಂಭ್ರಮದ ಪ್ರಯುಕ್ತ ಪೊಲೊ ಹ್ಯಾಚ್‌ಬ್ಯಾಕ್ ಮತ್ತು ವೆಂಟೊ ಸೆಡಾನ್ ಕಾರುಗಳ ವಿಶೇಷ ರಿಯಾಯಿತಿ ಘೋಷಿಸಿದ್ದಾರೆ. ಈ ರಿಯಾಯಿತಿಗಳು ಈ ತಿಂಗಳ ಅಂತ್ಯದವರೆಗೂ ಲಭ್ಯವಿರುತ್ತದೆ.

ಫೋಕ್ಸ್‌ವ್ಯಾಗನ್ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ

ಫೋಕ್ಸ್‌ವ್ಯಾಗನ್ ಪೊಲೊ ಮತ್ತು ವೆಂಟೊ ಕಾರುಗಳ ಮೇಲೆ ಎಕ್ಸ್‌ಚೇಂಜ್ ಬೋನಸ್ ಮತ್ತು ಲಾಯಲ್ಟಿ ಬೋನಸ್ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಫೋಕ್ಸ್‌ವ್ಯಾಗನ್ ಪೊಲೊ ಕಾರು ಟ್ರೆಂಡ್‌ಲೈನ್, ಕಂಫರ್ಟ್‌ಲೈನ್, ಕಂಫರ್ಟ್‌ಲೈನ್ ಟಿಎಸ್ಐ ಹೈಲೈನ್ ಪ್ಲಸ್ ಟಿಎಸ್ಐ ಮತ್ತು ಜಿ ಟಿಎಸ್ಐಟಿ ಎಂಬ ಐದು ರೂಪಾಂತರಗಳಲ್ಲಿ ಲಭ್ಯವಿದೆ. ಪೊಲೊ ಕಾರಿನ ಎಲ್ಲಾ ರೂಪಾಂತರಗಳ ಮೇಲೆ ರೂ.20,000 ವರೆಗಿನ ಎಕ್ಸ್‌ಚೇಂಜ್ ಬೋನಸ್ ಮತ್ತು ರೂ.10,000 ವರೆಗಿನ ಲಾಯಲ್ಟಿ ಬೋನಸ್ ಲಭ್ಯವಿದೆ.

ಫೋಕ್ಸ್‌ವ್ಯಾಗನ್ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ

ಇನ್ನು ಫೋಕ್ಸ್‌ವ್ಯಾಗನ್ ವೆಂಟೊ ಕಾರು ಕಂಫರ್ಟ್‌ಲೈನ್, ಹೈಲೈನ್ ಮತ್ತು ಹೈಲೈನ್ ಪ್ಲಸ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಈ ಸೆಡಾನ್ ಮೂರು ರೂಪಾಂತರಗಳ ಮೇಲೆ ರೂ.25 ಸಾವಿರ ವರೆಗಿನ ಎಕ್ಸ್‌ಚೇಂಜ್ ಬೋನಸ್ ಮತ್ತು ರೂ.15,000 ವರೆಗಿನ ಲಾಯಲ್ಟಿ ಬೋನಸ್ ಲಭ್ಯವಿದೆ.

ಫೋಕ್ಸ್‌ವ್ಯಾಗನ್ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ

ಫೋಕ್ಸ್‌ವ್ಯಾಗನ್ ಕಂಪನಿಯು ಪೊಲೊ ಮತ್ತು ವೆಂಟೊ ಕಾರುಗಳನ್ನು ಸ್ಥಳಿಯವಾಗಿ ತಯಾರಿಸಲಾಗುತ್ತಿದೆ. ಫೋಕ್ಸ್‌ವ್ಯಾಗನ್ ಪೊಲೊ ಮತ್ತು ವೆಂಟೊ ಕಾರುಗಳಲ್ಲಿ 1.2 ಲೀಟರ್ ಎಂಜಿನ್ ಅನ್ನು ಬದಲಾಯಿಸಿ 1.0 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಫೋಕ್ಸ್‌ವ್ಯಾಗನ್ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ

ಈ ಎಂಜಿನ್ 110 ಬಿ‍‍ಹೆಚ್‍‍‍ಪಿ ಪವರ್ ಮತ್ತು 175 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಹಿಂದಿನ ತಲೆಮಾರಿನ ಮಾದರಿಗಳಲ್ಲಿ ಇದ್ದ 7 ಸ್ಪೀಡ್ ಡಿ‍ಎಸ್‍‍ಜಿ ಗೇರ್‍‍ಬಾಕ್ಸ್ ಅನ್ನು ಬದಲಾಯಿಸಿದೆ. ಈ ಎಂಜಿನ್‍‍ನೊಂದಿಗೆ 6 ಸ್ಪೀಡ್ ಮ್ಯಾನ್ಯುವಲ್ ಗೇರ್‍‍‍ಬಾಕ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಇನ್ನು ಇದರಲ್ಲಿ 6 ಸ್ಫೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಆಯ್ಕೆಯನ್ನು ಹೊಂದಿದೆ. ಈ ಎಂಜಿನ್ ಪ್ರತಿ ಲೀಟರ್‌ಗೆ 18.24 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.

ಫೋಕ್ಸ್‌ವ್ಯಾಗನ್ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ

ಈ 1.0 ಲೀಟರ್ ಟಿ‍ಎಸ್ಐ ಪೆಟ್ರೋಲ್ ಎಂಜಿನ್ ಹೆಚ್ಚಿನ ಪವರ್ ಡ್ರೈವಿಬಿಲಿಟಿ, ಉತ್ತಮ ಕಾರ್ಯಕ್ಷಮತೆ, ಸುಧಾರಿತ ಇಂಧನ ದಕ್ಷತೆಯನ್ನು ಮತ್ತು ಹೆಚ್ಚು ಸಮರ್ಥನೀಯ ಎಂಜಿನ್ ಎಂದು ಜನಪ್ರಿಯತೆಯನ್ನು ಗಳಿಸಿದೆ. ಈ ವೆಂಟೊ ಕಾರಿನಲ್ಲಿ ಫೋಕ್ಸ್‌ವ್ಯಾಗನ್‍ನ ಪ್ರಶಸ್ತಿ ವಿಜೇತ ಟಿ‍ಎಸ್‍ಐ ತಂತ್ರಜ್ಞಾನವನ್ನು ಕೂಡ ಒಳಗೊಂಡಿದೆ.

ಫೋಕ್ಸ್‌ವ್ಯಾಗನ್ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ

ಫೋಕ್ಸ್‌ವ್ಯಾಗನ್ ತನ್ನ ಪೊಲೊ ಜಿಟಿಐ ಫೇಸ್‌ಲಿಫ್ಟ್ ಕಾರನ್ನು ಇತ್ತೀಚೆಗೆ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿತ್ತು. ಈ ಫೋಕ್ಸ್‌ವ್ಯಾಗನ್ ಪೊಲೊ ಜಿಟಿಐ ಫೇಸ್‌ಲಿಫ್ಟ್ ಕಾರು ಹಲವಾರು ಹೊಸ ನವೀಕರಿರಣಗಳನ್ನು ಪಡೆದುಕೊಂಡಿದೆ. ಹೊಸ ತಲೆಮಾರಿನ ಪೊಲೊದಲ್ಲಿ ಬಳಸಲಾಗುವ ಅದೇ ಎಂಕ್ಯೂಬಿ ಎಒ ಮಾಡ್ಯುಲರ್ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ. ನವೀಕರಿಸಿದೆ.

ಫೋಕ್ಸ್‌ವ್ಯಾಗನ್ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ

ಈ ಪೊಲೊ ಜಿಟಿಐ ಫೇಸ್‌ಲಿಫ್ಟ್ ಕಾರು ಲೈಟ್ ಬಾರ್ ಫೋಕ್ಸ್‌ವ್ಯಾಗನ್ ನಿಂದ ಬ್ಯಾಟರಿ-ಎಲೆಕ್ಟ್ರಿಕ್ ಐಡಿ ಮಾದರಿಗಳಿಗೆ ಮತ್ತು ಗಾಲ್ಫ್, ಆರ್ಟಿಯಾನ್ ಮತ್ತು ಟಿಗ್ವಾನ್ ನಂತಹ ಯಶಸ್ವಿ ಮಾದರಿಗಳ ಹೊಸ ವಾಹನ ಪೀಳಿಗೆಗೆ ಶೈಲಿಯ ಸಂಪರ್ಕವನ್ನು ಸೃಷ್ಟಿಸುತ್ತದೆ. ಈ ಕಾರಿನಲ್ಲಿ ಬೆಸ್ಪೋಕ್ ಚಾಸಿಸ್, ಮುಂಭಾಗದ ಆಕ್ಸಲ್ನಲ್ಲಿ ದೊಡ್ಡ ಸ್ಟೆಬಿಲೈಜರ್, ಹಿಂಭಾಗದಲ್ಲಿ ಗಟ್ಟಿಯಾದ ಆಕ್ಸಲ್ ಲೊಕೇಟಿಂಗ್ ಮೌಂಟ್ಸ್, ಮುಂಭಾಗದಲ್ಲಿ ಕಟ್ಟುನಿಟ್ಟಿನ ಜೋಡಣೆ ರಾಡ್ಗಳು ಮತ್ತು ಕಡಿಮೆ ಗ್ರೌಂಡ್ ಕ್ಲಿಯರೆನ್ಸ್ ಇದರ ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ.

ಫೋಕ್ಸ್‌ವ್ಯಾಗನ್ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ

ಇನ್ನು ಫೋಕ್ಸ್‌ವ್ಯಾಗನ್ ಕಂಪನಿಯು ಟಿ-ರಾಕ್ ಮತ್ತು ಟಿಗ್ವಾನ್ ಆಲ್‌ಸ್ಪೇಸ್ ಎಸ್‍ಯುವಿಗಳಿಗೂ ರಿಯಾಯಿತಿಗಳನ್ನು ನೀಡಲಾಗಿದೆ. ಅವುಗಳು ಸದ್ಯಕ್ಕೆ ಅಧಿಕೃತ ಡೀಲ್‌ಗಳನ್ನು ಹೊಂದಿಲ್ಲ. ಅಲ್ಲದೆ, ರಿಯಾಯಿತಿ ಕೊಡುಗೆಗಳು ವಿವಿಧ ರಾಜ್ಯಗಳ ನಡುವೆ ಬದಲಾಗುತ್ತವೆ, ಆದ್ದರಿಂದ ನಿಮ್ಮ ಹತ್ತಿರದ ಫೋಕ್ಸ್‌ವ್ಯಾಗನ್ ಶೋರೂಮ್‌ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಗಳನ್ನು ತಿಳಿಯಬಹುದು.

ಫೋಕ್ಸ್‌ವ್ಯಾಗನ್ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ

ಫೋಕ್ಸ್‌ವ್ಯಾಗನ್ ತನ್ನ ಬಹುನಿರೀಕ್ಷಿತ ಹೊಸ ಟೈಗನ್ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಈ ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯನ್ನು ಈ ವರ್ಷದ ಮೇ ತಿಂಗಳಲ್ಲಿ ಅಧಿಕೃತವಾಗಿ ಅನಾವರಣಗೊಳಿಸಲಾಯಿತು. ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ.

ಫೋಕ್ಸ್‌ವ್ಯಾಗನ್ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ

ವಿಡಬ್ಲ್ಯೂ ಟೈಗನ್ ಎಸ್‌ಯುವಿಯ ಉತ್ಪಾದನೆಯನ್ನು ಆಗಸ್ಟ್ 18 ರಂದು ಪ್ರಾರಂಭಿಸಲಿದೆ. ಈ ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯು ಆಕರ್ಷಕ ವಿನ್ಯಾಸ, ನೂತನ ಫೀಚರ್ಸ್, ಗರಿಷ್ಠ ಸುರಕ್ಷತೆ ಮತ್ತು ಅತ್ಯಾಧುನಿಕ ತಂತ್ರಜ್ಙಾನಗಳನ್ನು ಹೊಂದಿದೆ. ಫೋಕ್ಸ್‌ವ್ಯಾಗನ್ ಕಂಪನಿಯು ಈ ಹೊಸ ಟೈಗನ್ ಎಸ್‌ಯುವಿಯನ್ನು ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಿದ್ದರು. ಫೋಕ್ಸ್‌ವ್ಯಾಗನ್ 2.0 ಯೋಜನೆಯಡಿಯಲ್ಲಿ ಈ ಬಹುನಿರೀಕ್ಷಿತ ಎಸ್‍ಯುವಿಯು ಭಾರತದಲ್ಲಿ ಬಿಡುಗಡೆಯಾಗಲಿದೆ.

ಫೋಕ್ಸ್‌ವ್ಯಾಗನ್ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ

ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯಲ್ಲಿ 1.0-ಲೀಟರ್, ಮೂರು ಸಿಲಿಂಡರ್ ಟಿಎಸ್‌ಐ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್, ನಾಲ್ಕು ಸಿಲಿಂಡರ್ ಟಿಎಸ್‌ಐ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.ಈ ಎಸ್‍ಯುವಿಯಲ್ಲಿ ಎಲೆಕ್ಟ್ರಿಕ್ ಸನ್‌ರೂಫ್, ಮಲ್ಟಿ ಫಂಕ್ಷನ್ ಸ್ಟೀಯರಿಂಗ್ ವ್ಹೀಲ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್, ಸ್ಮಾರ್ಟ್‌ಫೋನ್ ವೈರ್‌ಲೆಸ್, ವೆಂಟಿಲೇಟೆಡ್ ಸೀಟ್‌ಗಳು, ಕಾರ್ ಟೆಕ್ ಮತ್ತು ಇತರ ಫೀಚರ್ ಗಳನ್ನು ಹೊಂದಿರುತ್ತದೆ.

ಫೋಕ್ಸ್‌ವ್ಯಾಗನ್ ಕಾರುಗಳ ಖರೀದಿ ಮೇಲೆ ಭರ್ಜರಿ ರಿಯಾಯಿತಿ

ಫೋಕ್ಸ್‌ವ್ಯಾಗನ್ ವೆಂಟೊ ಸೆಡಾನ್ ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಸಿಯಾಝ್, ಹ್ಯುಂಡೈ ವೆರ್ನಾ ಮತ್ತು ಹೋಂಡಾ ಸಿಟಿ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ ಇನ್ನು ಫೋಕ್ಸ್‌ವ್ಯಾಗನ್ ಕಂಪನಿಯು ಮಾರಾಟವನ್ನು ಹೆಚ್ಚಿಸಲು ಪೊಲೊ ಮತ್ತು ವೆಂಟೊ ಕಾರುಗಳ ಮೇಲೆ ರಿಯಾಯಿತಿಯನ್ನು ನೀಡಲಾಗುತ್ತಿದೆ.

More from DriveSpark

Article Published On: Monday, August 16, 2021, 13:04 [IST]
English summary
Volkswagen announced special offers for polo hatchback and vento sedan details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+