ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಟಿಗ್ವಾನ್ 5-ಸೀಟರ್ ಎಸ್‍ಯುವಿ
ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ಭಾರತೀಯ ಮಾರುಕಟ್ಟೆಯಲ್ಲಿ ಪಾರುಪತ್ಯ ಸಾಧಿಸಲು ಸಜ್ಜಾಗಿದೆ. ಫೋಕ್ಸ್‌ವ್ಯಾಗನ್ ಕಂಪನಿಯು ಎಸ್‌ಯುವಿಡಬ್ಲ್ಯು ಕಾರ್ಯತಂತ್ರ ಅಡಿಯಲ್ಲಿ ಹೊಸ ನಾಲ್ಕು ಎಸ್‍ಯುವಿಗಳನ್ನು ಭಾರತದಲ್ಲಿ ಬಿಡುಗಡೆಗೊಳಿಸಲಿವೆ.

ಇದರಲ್ಲಿ ಫೋಕ್ಸ್‌ವ್ಯಾಗನ್ ಕಂಪನಿಯ ಟೈಗನ್, ಟಿಗ್ವಾನ್ ಆಲ್‌ಸ್ಪೇಸ್, ಟಿ-ರಾಕ್ ಮತ್ತು ನಾಲ್ಕನೇ ಎಸ್‍ಯುವಿಯು 5-ಸೀಟರ್ ಟಿಗ್ವಾನ್ ಮಾದರಿಯಾಗಲಿದೆ. ಈ ಟಿಗ್ವಾನ್ ಎಸ್‍ಯುವಿಯು ಭಾರತದಲ್ಲಿ ಹೊಸ ಅವತಾರದಲ್ಲಿ ಬಿಡುಗಡೆಯಾಗಲಿದೆ. ಫೋಕ್ಸ್‌ವ್ಯಾಗನ್ ಕಂಪನಿ ಈ ಹೊಸ ಟಿಗ್ವಾನ್ 5 ಸೀಟರ್ ಅನ್ನು ಶೀಘ್ರದಲ್ಲೇ ಬಿಡುಗಡೆಯಾಗಬಹುದು ಎಂದು ನಿರೀಕ್ಷಿಸುತ್ತೇವೆ.

ಹೊಸ ಟಿಗ್ವಾನ್ ಫೇಸ್‌ಲಿಫ್ಟ್ ಅನ್ನು 2020ರಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಧಿಕೃತವಾಗಿ ಅನಾವರಣಗೊಳಿಸಲಾಯಿತು. ಇದು ದೊಡ್ಡದಾದ ಕ್ರೋಮ್ ಗ್ರಿಲ್ ಮತ್ತು ಟ್ವಿನ್-ಪಾಡ್ ಎಲ್ಇಡಿ ಹೆಡ್‌ಲೈಟ್‌ಗಳನ್ನು ಪಡೆಯುತ್ತದೆ, ಅದು ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್‌ಗಳನ್ನು ಹೊಂದಿರುತ್ತದೆ. ಮುಂಭಾಗದ ಬಂಪರ್ ಅನ್ನು ಸಹ ನವೀಕರಿಸಲಾಗಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ 2007ರಲ್ಲಿ ಮೊದಲ ಬಾರಿಗೆ ಪ್ರದರ್ಶಿಸಿದ್ದರು. ಹಿಂದಿನ ಮಾದರಿ ಟಿಗ್ವಾನ್ ಎಸ್‍ಯುವಿಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದಾಗ 6 ದಶಲಕ್ಷಕ್ಕೂ ಹೆಚ್ಚಿನ ಯುನಿಟ್ ಗಳು ಮಾರಾಟವಾಗಿತ್ತು.

ಇನ್ನು ಈ ಹೊಸ ಟಿಗ್ವಾನ್ ಎಸ್‍ಯುವಿಯ ಮುಂಭಾಗದಲ್ಲಿ ನವೀಕರಿಸಿದ ಗ್ರಿಲ್ ಅನ್ನು ಅಳವಡಿಸಿದ್ದಾರೆ. ಟಿಗ್ವಾನ್ ಮುಂಭಾಗ ಏರ್ ಡ್ಯಾಮ್ ಜೊತೆ ಸ್ಪೋರ್ಟಿಯರ್ ಫ್ರಂಟ್ ಬಂಪರ್ ಅನ್ನು ಸಹ ಒಳಗೊಂಡಿವೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಈ ಹೊಸ ಎಸ್‍ಯುವಿಯಲ್ಲಿ ಹೊಸ ಟೈಲ್ ಲೈಟ್, ಮರುವಿನ್ಯಾಸಗೊಳಿಸಿದ ವ್ಹೀಲ್ ಗಳು ಮತ್ತು ಹಿಂಭಾಗದಲ್ಲಿ ನವೀಕರಿಸಿದ ಬಂಪರ್ ಅನ್ನು ಅಳವಡಿಸಲಾಗಿದೆ. ಇನ್ನು ಟಿಗ್ವಾನ್ ಬ್ಯಾಡ್ಜಿಂಗ್ ಅನ್ನು ಟೈಲ್‌ಗೇಟ್‌ನ ಮಧ್ಯಭಾಗಕ್ಕೆ ಸ್ಥಳಾಂತರಿಸಲಾಗಿದೆ. ಈ ಎಸ್‍ಯುವಿಯ ಹಿಂಭಾಗದಲ್ಲಿ ಹೆಚ್ಚುವರಿ ಕ್ರೋಮ್ ಬಿಟ್‌ಗಳನ್ನು ಅಳವಡಿಸಲಾಗಿದೆ.

ಇನ್ನು ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಕೂಡ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ. ಈ ಟಿಗ್ವಾನ್ ಎಸ್‍ಯುವಿಯಲ್ಲಿ ಇನ್ಫೋಟೈನ್‌ಮೆಂಟ್ ಸಿಸ್ಟಂನ ಇತ್ತೀಚಿನ ಆವೃತ್ತಿ ಮತ್ತು ದೊಡ್ಡ ಟಚ್‌ಸ್ಕ್ರೀನ್‌ಗಳನ್ನು ಒಳಗೊಂಡಿದೆ. ಟಿಗ್ವಾನ್ ಫೇಸ್‍ಲಿಫ್ಟ್ ಎಸ್‍ಯುವಿಯಲ್ಲಿ ಸೆಂಟರ್ ಕನ್ಸೋಲ್‌ನಲ್ಲಿ ಯುಎಸ್‌ಬಿ-ಸಿ ಪೋರ್ಟ್‌ಗಳು, ಹೊಸ ಬಹು-ಬಣ್ಣದ ಆಂಬಿಯೆಂಟ್ ಲೈಟಿಂಗ್ ಮತ್ತು ಕ್ಲೈಮೆಂಟ್ ಕಂಟ್ರೋಲ್ ಅನ್ನು ಹೂಂದಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಟಿಗ್ವಾನ್ ಎಸ್‍ಯುವಿಯಲ್ಲಿ 2.0-ಲೀಟರ್, 4-ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 184 ಬಿಹೆಚ್‍ಪಿ ಪವರ್ ಮತ್ತು 300 ಎನ್‌ಎಂ ಉತ್ಪಾದಿಸುತ್ತದೆ. ಇನ್ನು ಪ್ಲಗ್-ಇನ್ ಹೈಬ್ರಿಡ್ ರೂಪಾಂತರವು 241 ಬಿಹೆಚ್‍ಪಿ ಪವರ್ ಉತ್ಪಾದಿಸುತ್ತದೆ.

ಎಂಟ್ರಿ-ಲೆವೆಲ್ ರೂಪಾಂತರಗಳಲ್ಲಿ 1.5-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಈ ಎಂಜಿನ್ 147 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಉತ್ಪಾದಿಸಬಹುದು. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನ್ಯುವಲ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ.

ಇನ್ನು ಫೋಕ್ಸ್‌ವ್ಯಾಗನ್ ತನ್ನ ಬಹುನಿರೀಕ್ಷಿತ ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಫೋಕ್ಸ್‌ವ್ಯಾಗನ್ ಕಂಪನಿಯು ತನ್ನ ಈ ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯ ರೋಡ್ ಟೆಸ್ಟ್ ಅನ್ನು ಭಾರತದಲ್ಲಿ ಈಗಾಗಲೇ ನಡೆಸಿದೆ. ಈ ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯು ಇದೇ ತಿಂಗಳ 31ರಂದು ಅನಾವರಣವಾಗಬಹುದು.

ಈ ಹೊಸ ಟಿಗ್ವಾನ್ ಫೇಸ್‍ಲಿಫ್ಟ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಭಾರತದಲ್ಲಿ ಟಿಗ್ವಾನ್ ಫೇಸ್‍ಲಿಫ್ಟ್ ಎಸ್‍ಯುವಿಯನ್ನು ಫೋಕ್ಸ್‌ವ್ಯಾಗನ್ ಸ್ಮರ್ಧಾತ್ಮಕ ಬೆಲೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.


Click it and Unblock the Notifications








