Just In
- 10 min ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 1 hr ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- 2 hrs ago ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- 3 hrs ago Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
Don't Miss!
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- News Zero Shadow Day: ನಾಳೆ ಬುಧವಾರ ಬೆಂಗಳೂರಿನಲ್ಲಿ ಶೂನ್ಯ ನೆರಳು ದಿನ; ಸಮಯ, ವಿವರ
- Sports David Warner: ಊಟನೂ ಬೇಡ, ಹುಡುಗಿನೂ ಬೇಡ; ಆಧಾರ್ ಕಾರ್ಡ್ ಬೇಕೆಂದ ಡೇವಿಡ್ ವಾರ್ನರ್!
- Technology Lava: ಲಾವಾ ಪ್ರೊ ವಾಚ್ Zn ಹಾಗೂ Vn ಸ್ಮಾರ್ಟ್ವಾಚ್ ಲಾಂಚ್! ಸೀಮಿತ ಅವಧಿಯ ಕೊಡುಗೆ ಸಹ ಲಭ್ಯ..
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Movies Sathya : ತಾಜ್ ಮಹಲ್ ಎದುರು ನಿಂತ ಸತ್ಯಾ, ಪತಿ ಜೊತೆ ಗೌತಮಿ ಪ್ರವಾಸ...!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಟೈಗುನ್ ಕಾರು ಮಾದರಿಯೊಂದಿಗೆ ಭರ್ಜರಿ ಬೇಡಿಕೆ ಪಡೆದುಕೊಂಡ ಫೋಕ್ಸ್ವ್ಯಾಗನ್
ಪ್ರೀಮಿಯಂ ಕಂಪ್ಯಾಕ್ಟ್ ಎಸ್ಯುವಿ ಮಾರಾಟದಲ್ಲಿ ಗಮನಸೆಳೆಯುತ್ತಿರುವ ಫೋಕ್ಸ್ವ್ಯಾಗನ್ ಟೈಗುನ್ ಕಾರು ಬಿಡುಗಡೆಯ ನಂತರ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ದುಬಾರಿ ಬೆಲೆ ನಡುವೆಯೂ ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.
ಟೈಗುನ್ ಕಂಪ್ಯಾಕ್ಟ್ ಎಸ್ಯುವಿ ಮಾದರಿಯನ್ನು ಫೋಕ್ಸ್ವ್ಯಾಗನ್ ಕಂಪನಿಯು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಗೊಳಿಸಿದ್ದು, ಹೊಸ ಕಾರಿನ ಬುಕ್ಕಿಂಗ್ ಈ ವರ್ಷದ ಕೊನೆಯ ತನಕವು ಪೂರ್ಣಗೊಂಡಿದೆ. ಕಂಪನಿಯು ಸದ್ಯ ಬುಕ್ಕಿಂಗ್ ಆಧರಿಸಿ ಹೊಸ ಕಾರಿನ ವಿತರಣೆ ಆರಂಭಿಸಿದ್ದು, ಪ್ರತಿ ತಿಂಗಳು ಕಂಪನಿಯು ಮೂರರಿಂದ ನಾಲ್ಕು ಸಾವಿರ ಯುನಿಟ್ ವಿತರಿಸುವ ಯೋಜನೆಯಲ್ಲಿದೆ.
ಹೊಸ ಕಾರು ದುಬಾರಿ ಬೆಲೆ ನಡುವೆಯೂ ನೀರಿಕ್ಷೆಗೂ ಮೀರಿ ಬುಕ್ಕಿಂಗ್ ಪಡೆದುಕೊಂಡಿದ್ದು, ಹೊಸ ಕಾರಿನ ಮೂಲಕ ಫೋಕ್ಸ್ವ್ಯಾಗನ್ ಕಂಪನಿಯು ನವೆಂಬರ್ ಅವಧಿಯ ಕಾರು ಮಾರಾಟದಲ್ಲಿ ಶೇ.123ರಷ್ಟು ಬೆಳವಣಿಗೆ ಸಾಧಿಸಿದೆ.
ಫೋಕ್ಸ್ವ್ಯಾಗನ್ ಕಂಪನಿಯು ಹೊಸ ಟೈಗುನ್ ಮೂಲಕ ನವೆಂಬರ್ ತಿಂಗಳಿನಲ್ಲಿ 2849 ಯುನಿಟ್ ಮಾರಾಟ ಮಾಡಿದ್ದು, ಅಕ್ಟೋಬರ್ ಅವಧಿಯಲ್ಲಿನ ಕಾರು ಮಾರಾಟಕ್ಕಿಂತಲೂ ಶೇ.3 ರಷ್ಟು ಮತ್ತು ಕಳೆದ ವರ್ಷದ ನವೆಂಬರ್ ಅವಧಿಯಲ್ಲಿನ ಕಾರು ಮಾರಾಟಕ್ಕಿಂತ ಶೇ. 123ರಷ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದೆ.
ಟೈಗುನ್ ಜೊತೆ ವೆಂಟೊ, ಪೊಲೊ ಕೂಡಾ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಇದೀಗ ಹೊಸದಾಗಿ ಬಿಡುಗಡೆಯಾಗಿರುವ ಟಿಗ್ವಾನ್ ಎಸ್ಯುವಿ ಮತ್ತಷ್ಟು ಬೇಡಿಕೆ ತಂದುಕೊಡುವ ನೀರಿಕ್ಷೆಯಿದೆ. ಜೊತೆಗೆ ಹೊಸ ಕಾರುಗಳನ್ನು ಸ್ಥಳೀಯವಾಗಿ ಉತ್ಪಾದನೆಗೊಂಡಿರುವ ಶೇ.95 ರಷ್ಟು ಬಿಡಿಭಾಗಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಆಮದು ಬಿಡಿಭಾಗಗಳನ್ನು ತಗ್ಗಿಸಿರುವುದರಿಂದ ಬೆಲೆಯಲ್ಲೂ ಕೂಡಾ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಉತ್ತಮವಾಗಿವೆ.
ಹೊಸ ಫೋಕ್ಸ್ವ್ಯಾಗನ್ ಟೈಗುನ್ ಪ್ರೀಮಿಯಂ ಕಂಪ್ಯಾಕ್ಟ್ ಎಸ್ಯುವಿ ಮಾದರಿಯು ಬಿಡುಗಡೆಯ ನಂತರ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಮಾದರಿಗಾಗಿ ಕಂಪನಿಯು ಇದುವರೆಗೆ ಸುಮಾರು 20 ಸಾವಿರ ಯುನಿಟ್ಗಳಿಗೆ ಬುಕ್ಕಿಂಗ್ ಪಡೆದುಕೊಂಡಿದೆ.
ಹೊಸ ಟೈಗುನ್ ಕಾರು ಡೈನಾಮಿಕ್ ಲೈನ್(ಕಂಫರ್ಟ್ ಲೈನ್, ಹೈ ಲೈನ್ ಮತ್ತು ಟಾಪ್ ಲೈನ್) ಮತ್ತು ಜಿಟಿ ಲೈನ್(ಜಿಟಿ ಮತ್ತು ಜಿಟಿ ಪ್ಲಸ್) ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ.10.54 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.54 ಲಕ್ಷ ಬೆಲೆ ಹೊಂದಿದೆ.
ಹೊಸ ಕಾರು ಸ್ಕೋಡಾ ಕುಶಾಕ್ ಮಾದರಿಯಲ್ಲಿಯೇ ತಾಂತ್ರಿಕ ಸೌಲಭ್ಯಗಳು, ಎಂಜಿನ್ ಆಯ್ಕೆ ಹೊಂದಿದ್ದು, ಹೊಸ ಕಾರಿನ ಡೈನಾಮಿಕ್ ಮಾದರಿಗಳಲ್ಲಿ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಮತ್ತು ಟಾಪ್ ಎಂಡ್ ಮಾದರಿಯಾದ ಜಿಟಿ ಲೈನ್ನಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದೆ.
ಹೊಸ ಕಾರು ಸ್ಕೋಡಾ ಕುಶಾಕ್ ಮಾದರಿಯಲ್ಲಿಯೇ ತಾಂತ್ರಿಕ ಸೌಲಭ್ಯಗಳು, ಎಂಜಿನ್ ಆಯ್ಕೆ ಹೊಂದಿದ್ದು, ಹೊಸ ಕಾರಿನ ಡೈನಾಮಿಕ್ ಮಾದರಿಗಳಲ್ಲಿ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಮತ್ತು ಟಾಪ್ ಎಂಡ್ ಮಾದರಿಯಾದ ಜಿಟಿ ಲೈನ್ನಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದೆ.
ಹಾಗೆಯೇ ಪರ್ಫಾಮೆನ್ಸ್ ಜೊತೆಗೆ ಹೆಚ್ಚುವರಿ ಪ್ರೀಮಿಯಂ ಫೀಚರ್ಸ್ ಹೊಂದಿರುವ ಜಿಟಿ ಲೈನ್ ಮಾದರಿಯು ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.49 ಲಕ್ಷ ಬೆಲೆ ನಿಗದಿಪಡಿಸಲಾಗಿದೆ.
ಟೈಗುನ್ ಆರಂಭಿಕ ವೆರಿಯೆಂಟ್ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯಿದ್ದಲ್ಲಿ ಟಾಪ್ ಎಂಡ್ ವೆರಿಯೆಂಟ್ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಜಿಎಸ್ ಡ್ಯಯುಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯಿದೆ.
1.0-ಲೀಟರ್ ಟಿಎಸ್ಐ ಪೆಟ್ರೋಲ್ ಮಾದರಿಯು 113-ಬಿಎಚ್ಪಿ, 175 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದರೆ 1.5-ಲೀಟರ್ ಪೆಟ್ರೋಲ್ ಮಾದರಿಯು 148-ಬಿಎಚ್ಪಿ, 250 ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆ ಹೊಂದಿದ್ದು, 1.0-ಲೀಟರ್ ಟಿಎಸ್ಐ ಮಾದರಿಯು ಪ್ರತಿ ಲೀಟರ್ ಪೆಟ್ರೋಲ್ಗೆ 18.47 ಕಿ.ಮೀ ಮೈಲೇಜ್ ಹಿಂದಿರುಗಿಸಿದ್ದಲ್ಲಿ 1.5-ಲೀಟರ್ ಮಾದರಿಯು ಪ್ರತಿ ಲೀಟರ್ಗೆ 17.88 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತವೆ.
ಹೊಸ ಟೈಗುನ್ ಕಾರಿನಲ್ಲಿ ಫೋಕ್ಸ್ವ್ಯಾಗನ್ ಕಂಪನಿಯು ಎಲ್ಇಡಿ ಮ್ಯಾಟ್ರಿಕ್ಸ್ ಹೆಡ್ಲ್ಯಾಂಪ್ಸ್ ಇಂಟ್ರಾಗ್ರೆಟೆಡ್ ಡಿಆರ್ಎಲ್ಎಸ್ ಜೋಡಣೆ ಹೊಂದಿದ್ದು, ಫಂಕ್ಷನಲ್ ಟರ್ನ್ ಇಂಡಿಕೇಟರ್, ಎಲ್ಇಡಿ ಲೈಟ್ ಬಾರ್, ಮುಂಭಾಗದಲ್ಲಿ ಸ್ಕಫ್ ಪ್ಲೇಟ್, 17-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವಿಂಡೋ ಹಾಗೂ ಡೋರ್ ಹ್ಯಾಂಡಲ್ ಮೇಲೆ ಕ್ರೋಮ್ ವಿನ್ಯಾಸ ಮತ್ತು ಕಾರಿನ ಸುತ್ತಲೂ ಬಾಡಿ ಕ್ಲ್ಯಾಡಿಂಗ್ ನೀಡಲಾಗಿದೆ.
ಹೊಸ ಕಾರಿನ ಒಳಭಾಗದ ವಿನ್ಯಾಸವು ಸಹ ಸಾಕಷ್ಟು ಪ್ರೀಮಿಯಂ ಫೀಚರ್ಸ್ಗಳಿಂದ ಕೂಡಿದ್ದು, ಅಡ್ವಾನ್ಸ್ ಟೆಕ್ನಿಕಲ್ ಫೀಚರ್ಸ್ಗಳಾದ 10.1-ಇಂಚಿನ ಟಚ್ ಸ್ಕ್ರೀನ್ ಇನ್ಫೋಟೆನ್ಮೆಂಟ್ ಸಿಸ್ಟಂ ಹಾಗೂ 8-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಅಂಡ್ರಾಯಿಡ್ ಆಟೋ ಮತ್ತು ಕಾರ್ಪ್ಲೇಯೊಂದಿಗೆ ಕಾರ್ ಕನೆಕ್ಟ್ ಟೆಕ್ನಾಲಜಿ ಹೊಂದಿದೆ.
ಹಾಗೆಯೇ ಹೊಸ ಕಾರು ವರ್ಚುವಲ್ ಕಾಕ್ಪಿಟ್ನೊಂದಿಗೆ ಬ್ಲ್ಯಾಕ್ ಆ್ಯಂಡ್ ಗ್ರೇ ಡ್ಯುಯಲ್ ಕಲರ್ ಡ್ಯಾಶ್ಬೋರ್ಡ್ ಹೊಂದಿದ್ದು, ಮುಂಭಾಗದಲ್ಲಿ ವೆಂಟಿಲೆಟೆಡ್ ಸೀಟ್ಗಳು, ಎಲೆಕ್ಟ್ರಿಕ್ ಸನ್ರೂಫ್, ಸೆಂಟ್ರಲ್ ಆರ್ಮ್ ರೆಸ್ಟ್, ರಿಯರ್ ಎಸಿ ವೆಂಟ್ಸ್, ಕೀ ಲೆಸ್ ಎಂಟ್ರಿ, ವೈರ್ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್ ಹೊಂದಿದೆ.
ಸುರಕ್ಷತೆಗೂ ಹೊಸ ಕಾರಿನಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, ಕಾರ್ ಕನೆಕ್ಟ್ ಟೆಕ್ನಾಲಜಿ ಸೇರಿದಂತೆ ಒಟ್ಟು 40 ಸುರಕ್ಷಾ ಫೀಚರ್ಸ್ಗಳು ಟೈಗನ್ ಕಾರಿನಲ್ಲಿವೆ. 6 ಏರ್ಬ್ಯಾಗ್(ಟಾಪ್ ಎಂಡ್ ಮಾದರಿಯಲ್ಲಿ) ಎಬಿಎಸ್ ಜೊತೆ ಇಬಿಡಿ, ಮಲ್ಟಿ ಕೂಲಿಷನ್ ಬ್ರೇಕ್ಸ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೋಲ್, ರಿಯರ್ ವ್ಯೂ ಕ್ಯಾಮೆರಾ, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಕ್ರೂಸ್ ಕಂಟ್ರೊಲ್ ಮತ್ತು ಹಿಲ್ ಹೋಲ್ಡ್ ಕಂಟ್ರೋಲ್ ಸೇರಿ ಹಲವು ಸೌಲಭ್ಯಗಳಿವೆ.