ಭಾರತದಲ್ಲಿ ಬಿಡುಗಡೆಯಾಗಲಿದೆ ಫೋಕ್ಸ್‌ವ್ಯಾಗನ್ ಟಿಗ್ವಾನ್ ಫೇಸ್‌ಲಿಫ್ಟ್ ಎಸ್‍ಯುವಿ
ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ಈ ವರ್ಷದ ಆರಂಭದಲ್ಲಿ ತನ್ನ 2021ರ ಹೊಸ ಎಸ್‍ಯುವಿಯ ಟೀಸರ್ ಅನ್ನು ಬಿಡುಗಡೆಗೊಳಿಸಿದೆ. ಇದು ಅಟ್ಲಾಸ್ ಕ್ರಾಸ್ ಸ್ಪೋರ್ಟ್ ಆಗಿರಬಹುದು ಎಂದು ವರದಿಗಳಾಗಿತ್ತು.

ಇನ್ನು ಕೆಲವು ವರದಿಗಳ ಪ್ರಕಾರ ಇದು ಟಿಗ್ವಾನ್ ಫೇಸ್‌ಲಿಫ್ಟ್ ಆಗಿರಬಹುದು. ಫೋಕ್ಸ್‌ವ್ಯಾಗನ್ ಕಂಪನಿಯು ತನ್ನ ಟೈಗನ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿದ ಬಳಿಕ ಟಿಗ್ವಾನ್ ಫೇಸ್‌ಲಿಫ್ಟ್ ಅನ್ನು ಬಿಡುಗಡೆಗೊಳಿಸಬಹುದು ಎನ್ನಲಾಗುತ್ತಿದೆ. ಟಿಗ್ವಾನ್ ಮಾದರಿಯು ಫೋಕ್ಸ್‌ವ್ಯಾಗನ್ ಕಂಪನಿಯ ಸರಣಿಯಲ್ಲಿರುವ ಜನಪ್ರಿಯ ಎಸ್‍ಯುವಿಗಳಲ್ಲಿ ಒಂದಾಗಿದೆ.

ಟಿಗ್ವಾನ್ ಫೇಸ್‌ಲಿಫ್ಟ್ ಅನ್ನು ಜುಲೈ 2020 ರಲ್ಲಿ ಅನಾವರಣಗೊಳಿಸಲಾಯಿತು. ಇದು ದೊಡ್ಡದಾದ ಕ್ರೋಮ್ ಗ್ರಿಲ್ ಮತ್ತು ಟ್ವಿನ್-ಪಾಡ್ ಎಲ್ಇಡಿ ಹೆಡ್‌ಲೈಟ್‌ಗಳನ್ನು ಪಡೆಯುತ್ತದೆ, ಅದು ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್‌ಗಳನ್ನು ಹೊಂದಿರುತ್ತದೆ. ಮುಂಭಾಗದ ಬಂಪರ್ ಅನ್ನು ಸಹ ನವೀಕರಿಸಲಾಗಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ 2007ರಲ್ಲಿ ಮೊದಲ ಬಾರಿಗೆ ಅನಾವರಣಗೊಳಿಸಿದರು. ಹಿಂದಿನ ಮಾದರಿ ಟಿಗ್ವಾನ್ ಎಸ್‍ಯುವಿಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದಾಗ 6 ದಶಲಕ್ಷಕ್ಕೂ ಹೆಚ್ಚಿನ ಯುನಿಟ್ ಗಳು ಮಾರಾಟವಾಗಿತ್ತು.

ಇನ್ನು ಈ ಹೊಸ ಟಿಗ್ವಾನ್ ಫೇಸ್‍ಲಿಫ್ಟ್ ಎಸ್‍ಯುವಿಯ ಮುಂಭಾಗದಲ್ಲಿ ನವೀಕರಿಸಿದ ಗ್ರಿಲ್ ಅನ್ನು ಅಳವಡಿಸಿದ್ದಾರೆ. ಟಿಗ್ವಾನ್ ಮುಂಭಾಗ ಏರ್ ಡ್ಯಾಮ್ ಜೊತೆ ಸ್ಪೋರ್ಟಿಯರ್ ಫ್ರಂಟ್ ಬಂಪರ್ ಅನ್ನು ಸಹ ಹೊಂದಿದೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಈ ಹೊಸ ಎಸ್‍ಯುವಿಯಲ್ಲಿ ಹೊಸ ಟೈಲ್ ಲೈಟ್, ಮರುವಿನ್ಯಾಸಗೊಳಿಸಿದ ವ್ಹೀಲ್ ಗಳು ಮತ್ತು ಹಿಂಭಾಗದಲ್ಲಿ ನವೀಕರಿಸಿದ ಬಂಪರ್ ಅನ್ನು ಅಳವಡಿಸಲಾಗಿದೆ. ಇನ್ನು ಟಿಗ್ವಾನ್ ಬ್ಯಾಡ್ಜಿಂಗ್ ಅನ್ನು ಟೈಲ್‌ಗೇಟ್‌ನ ಮಧ್ಯಭಾಗಕ್ಕೆ ಸ್ಥಳಾಂತರಿಸಲಾಗಿದೆ. ಈ ಎಸ್‍ಯುವಿಯ ಹಿಂಭಾಗದಲ್ಲಿ ಹೆಚ್ಚುವರಿ ಕ್ರೋಮ್ ಬಿಟ್‌ಗಳನ್ನು ಅಳವಡಿಸಲಾಗಿದೆ.

ಇನ್ನು ಈಎಸ್‍ಯುವಿಯ ಇಂಟಿರಿಯರ್ ನಲ್ಲಿ ಕೂಡ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ. ಈ ಟಿಗ್ವಾನ್ ಎಸ್‍ಯುವಿಯಲ್ಲಿ ಇನ್ಫೋಟೈನ್‌ಮೆಂಟ್ ಸಿಸ್ಟಂನ ಇತ್ತೀಚಿನ ಆವೃತ್ತಿ ಮತ್ತು ದೊಡ್ಡ ಟಚ್‌ಸ್ಕ್ರೀನ್‌ಗಳನ್ನು ಒಳಗೊಂಡಿದೆ. ಟಿಗ್ವಾನ್ ಫೇಸ್‍ಲಿಫ್ಟ್ ಎಸ್‍ಯುವಿಯಲ್ಲಿ ಸೆಂಟರ್ ಕನ್ಸೋಲ್‌ನಲ್ಲಿ ಯುಎಸ್‌ಬಿ-ಸಿ ಪೋರ್ಟ್‌ಗಳು, ಹೊಸ ಬಹು-ಬಣ್ಣದ ಆಂಬಿಯೆಂಟ್ ಲೈಟಿಂಗ್ ಮತ್ತು ಕ್ಲೈಮೆಂಟ್ ಕಂಟ್ರೋಲ್ ಅನ್ನು ಹೂಂದಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಟಿಗ್ವಾನ್ ಎಸ್‍ಯುವಿಯಲ್ಲಿ 2.0-ಲೀಟರ್, 4-ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 184 ಬಿಹೆಚ್‍ಪಿ ಪವರ್ ಮತ್ತು 300 ಎನ್‌ಎಂ ಉತ್ಪಾದಿಸುತ್ತದೆ. ಇನ್ನು ಪ್ಲಗ್-ಇನ್ ಹೈಬ್ರಿಡ್ ರೂಪಾಂತರವು 241 ಬಿಹೆಚ್‍ಪಿ ಪವರ್ ಉತ್ಪಾದಿಸುತ್ತದೆ.

ಈ ಹೊಸ ಟಿಗ್ವಾನ್ ಫೇಸ್‍ಲಿಫ್ಟ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿದೆ. ಭಾರತದಲ್ಲಿ ಟಿಗ್ವಾನ್ ಫೇಸ್‍ಲಿಫ್ಟ್ ಎಸ್‍ಯುವಿಯನ್ನು ಸ್ಮರ್ಧಾತ್ಮಕ ಬೆಲೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.


Click it and Unblock the Notifications