ಡೀಲರ್ಸ್ ಮಟ್ಟದಲ್ಲಿ ಫೋಕ್ಸ್‌ವ್ಯಾಗನ್ ಟೈಗನ್ ಕಾರು ಖರೀದಿಗೆ ಬುಕ್ಕಿಂಗ್ ಆರಂಭ

ಫೋಕ್ಸ್‌ವ್ಯಾಗನ್ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸಿ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಕಾರು ಅತ್ಯುತ್ತಮ ಫೀಚರ್ಸ್‌ಗಳೊಂದಿಗೆ ಮುಂದಿನ ಕೆಲವೇ ವಾರಗಳಲ್ಲಿ ಮಾರುಕಟ್ಟೆ ಪ್ರವೇಶಿಸಲಿದೆ.

ಡೀಲರ್ಸ್ ಮಟ್ಟದಲ್ಲಿ ಫೋಕ್ಸ್‌ವ್ಯಾಗನ್ ಟೈಗನ್ ಕಾರು ಖರೀದಿ ಬುಕ್ಕಿಂಗ್ ಆರಂಭ

ಹೊಸ ಟೈಗನ್ ಕಾರಿನಲ್ಲಿ ಫೋಕ್ಸ್‌ವ್ಯಾಗನ್ ಕಂಪನಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದ್ದು, ಶೀಘ್ರದಲ್ಲೇ ಹೊಸ ಕಾರಿನ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ. ಅದಕ್ಕೂ ಮುನ್ನ ಆಸಕ್ತ ಗ್ರಾಹಕರು ಈಗಾಗಲೇ ಪ್ರಮುಖ ಡೀಲರ್ಸ್‌ಗಳಲ್ಲಿ ಟೈಗನ್ ಖರೀದಿಗಾಗಿ ಬುಕ್ಕಿಂಗ್ ಸಲ್ಲಿಕೆಯಾಗುತ್ತಿದ್ದು, ಹೊಸ ಕಾರು ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಡೀಲರ್ಸ್ ಮಟ್ಟದಲ್ಲಿ ಫೋಕ್ಸ್‌ವ್ಯಾಗನ್ ಟೈಗನ್ ಕಾರು ಖರೀದಿ ಬುಕ್ಕಿಂಗ್ ಆರಂಭ

ಹೊಸ ಕಾರಿನಲ್ಲಿ ಜೋಡಣೆ ಮಾಡಲಾಗುತ್ತಿರುವ ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್) ಸೌಲಭ್ಯವು ಕಾರಿನ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸುವ ನೀರಿಕ್ಷೆಯಿದ್ದು, ಹೊಸ ಕಾರಿನ ಟಾಪ್ ಎಂಡ್ ಮಾದರಿಯಲ್ಲಿ ಎಡಿಎಎಸ್ ಸೌಲಭ್ಯವನ್ನು ಅಳವಡಿಸುವ ಸಾಧ್ಯತೆಗಳಿವೆ.

ಡೀಲರ್ಸ್ ಮಟ್ಟದಲ್ಲಿ ಫೋಕ್ಸ್‌ವ್ಯಾಗನ್ ಟೈಗನ್ ಕಾರು ಖರೀದಿ ಬುಕ್ಕಿಂಗ್ ಆರಂಭ

ಹೊಸ ಕಾರಿನಲ್ಲಿ ಅಡ್ವಾನ್ಸ್ ಟೆಕ್ನಿಕಲ್ ಫೀಚರ್ಸ್‌ಗಳಾದ 10-ಇಂಚಿನ ಟಚ್ ಸ್ಕ್ರೀನ್ ಇನ್ಫೋಟೆನ್‍‍ಮೆಂಟ್ ಸಿಸ್ಟಂ ಹಾಗೂ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‍‍ಗಳನ್ನು ಹೊಂದಿದ್ದು, ಬ್ಲ್ಯಾಕ್ ಆ್ಯಂಡ್ ಗ್ರೇ ಡ್ಯುಯಲ್ ಕಲರ್ ಪಡೆದುಕೊಂಡಿದೆ.

ಡೀಲರ್ಸ್ ಮಟ್ಟದಲ್ಲಿ ಫೋಕ್ಸ್‌ವ್ಯಾಗನ್ ಟೈಗನ್ ಕಾರು ಖರೀದಿ ಬುಕ್ಕಿಂಗ್ ಆರಂಭ

ಹಾಗೆಯೇ ವೆಂಟಿಲೆಟೆಡ್ ಸೀಟ್, ಎಲೆಕ್ಟ್ರಿಕ್ ಸನ್‌ರೂಫ್, ಬಾಡಿ ಕ್ಲಾಡಿಂಗ್, ರಿಯರ್ ಎಸಿ ವೆಂಟ್ಸ್, ಕೀ ಲೆಸ್ ಎಂಟ್ರಿ, ವೈರ್‌ಲೆಸ್ ಚಾರ್ಜರ್ ಹೊಂದಿದ್ದು, ಹೊಸ ಕಾರಿನ ಒಳಭಾಗದ ವಿನ್ಯಾಸವು ಸಹ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳಿಂದ ಕೂಡಿದೆ. ಸುರಕ್ಷತೆಗೂ ಹೊಸ ಕಾರಿನಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, ಕಾರ್ ಕನೆಕ್ಟ್ ಟೆಕ್ನಾಲಜಿಯೊಂದಿಗೆ ಎಬಿಎಸ್ ಜೊತೆ ಇಬಿಡಿ, 6 ಏರ್‌ಬ್ಯಾಗ್(ಹೈಎಂಡ್ ಮಾದರಿಯಲ್ಲಿ), 2 ವೀಲ್ಹ್ ಡ್ರೈವ್ ಟೆಕ್ನಾಲಜಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೋಲ್, ಕ್ರೂಸ್ ಕಂಟ್ರೊಲ್ ಮತ್ತು ಹಿಲ್ ಅಸಿಸ್ಟ್ ಸೌಲಭ್ಯಗಳಿವೆ.

ಡೀಲರ್ಸ್ ಮಟ್ಟದಲ್ಲಿ ಫೋಕ್ಸ್‌ವ್ಯಾಗನ್ ಟೈಗನ್ ಕಾರು ಖರೀದಿ ಬುಕ್ಕಿಂಗ್ ಆರಂಭ

ಈ ಮೂಲಕ ಆಕರ್ಷಕ ಹೊರನೋಟವನ್ನು ಪಡೆದುಕೊಂಡಿರುವ ಹೊಸ ಕಾರು ರೂಫ್ ಮೌಂಟೆಡ್, ಸಿಲ್ವರ್ ರೂಫ್ ರೈಲ್ಸ್ ಸೌಲಭ್ಯಗಳನ್ನು ಹೊಂದಿದ್ದು, ಸ್ಥಳೀಯವಾಗಿ ಶೇ.95 ರಷ್ಟು ಬಿಡಿಭಾಗಗಳನ್ನು ಪಡೆದುಕೊಂಡಿರುವ ಟೈಗನ್ ಕಾರು ಮಾದರಿಯು ಬೆಲೆಯಲ್ಲಿ ಪ್ರತಿಸ್ಪರ್ಧಿ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

ಡೀಲರ್ಸ್ ಮಟ್ಟದಲ್ಲಿ ಫೋಕ್ಸ್‌ವ್ಯಾಗನ್ ಟೈಗನ್ ಕಾರು ಖರೀದಿ ಬುಕ್ಕಿಂಗ್ ಆರಂಭ

ಇನ್ನು ಟೈಗನ್ ಕಾರಿನಲ್ಲಿ ಎಲ್‍ಇಡಿ ಪೊಜೆಕ್ಟರ್ ಹೆಡ್‌ಲ್ಯಾಂಪ್ಸ್ ಇಂಟ್ರಾಗ್ರೆಟೆಡ್ ಡಿಆರ್‌ಎಲ್ಎಸ್ ಜೋಡಣೆ ಹೊಂದಿದ್ದು, ಫಂಕ್ಷನಲ್ ಟರ್ನ್ ಇಂಡಿಕೇಟರ್, ಎಲ್‍ಇ‍‍ಡಿ ಲೈಟ್ ಬಾರ್‌, ಮುಂಭಾಗದಲ್ಲಿ ಸ್ಕಫ್ ಪ್ಲೇಟ್, 17-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವಿಂಡೋ ಮತ್ತು ಡೋರ್ ಹ್ಯಾಂಡಲ್ ಮೇಲೆ ಕ್ರೋಮ್ ವಿನ್ಯಾಸ ಪಡೆದುಕೊಂಡಿದೆ.

ಡೀಲರ್ಸ್ ಮಟ್ಟದಲ್ಲಿ ಫೋಕ್ಸ್‌ವ್ಯಾಗನ್ ಟೈಗನ್ ಕಾರು ಖರೀದಿ ಬುಕ್ಕಿಂಗ್ ಆರಂಭ

ಸ್ಪೋರ್ಟಿ ವಿನ್ಯಾಸಕ್ಕೆ ಪೂರಕವಾಗಿ ಬೂಟ್ ಲಿಡ್, ಎಲ್ಇಡಿ ಟೈಲ್ ಲ್ಯಾಂಪ್ಸ್, ಬ್ಲ್ಯಾಕ್ ಔಟ್ ರೂಫ್, ಹಿಂಬದಿಯಲ್ಲಿ ಕ್ರೊಮ್ ಆಕ್ಸೆಂಟ್ ನೀಡಲಾಗಿದ್ದು, ಎಂಕ್ಯೂಬಿ ಎ0 ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಉತ್ಪಾದನೆಗೊಳಿಸಲಾಗಿದೆ.

ಡೀಲರ್ಸ್ ಮಟ್ಟದಲ್ಲಿ ಫೋಕ್ಸ್‌ವ್ಯಾಗನ್ ಟೈಗನ್ ಕಾರು ಖರೀದಿ ಬುಕ್ಕಿಂಗ್ ಆರಂಭ

ಹೊಸ ಕಾರಿನಲ್ಲಿ ಪೊಲೊ ಹ್ಯಾಚ್‌ಬ್ಯಾಕ್‌ನಲ್ಲಿ ಬಳಕೆ ಮಾಡಲಾಗಿರುವ 108-ಬಿಎಚ್‌ಪಿ ಸಾಮರ್ಥ್ಯದ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಮತ್ತು 148-ಬಿಎಚ್‌ಪಿ ಸಾಮರ್ಥ್ಯದ 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಟೈಗನ್‌ನಲ್ಲಿ ಜೋಡಿಸಲಾಗಿದೆ.

ಡೀಲರ್ಸ್ ಮಟ್ಟದಲ್ಲಿ ಫೋಕ್ಸ್‌ವ್ಯಾಗನ್ ಟೈಗನ್ ಕಾರು ಖರೀದಿ ಬುಕ್ಕಿಂಗ್ ಆರಂಭ

ಹೊಸ ಕಾರಿನ ಬೆಲೆಯು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 10 ಲಕ್ಷದಿಂದ ರೂ .16 ಲಕ್ಷ ಬೆಲೆ ಅಂತರದಲ್ಲಿ ಮಾರಾಟಬಹುದೆಂದು ನೀರಿಕ್ಷಿಸಲಾಗಿದ್ದು, ಜೂನ್ ಮಧ್ಯಂತರದಲ್ಲಿ ಬಿಡುಗಡೆಯಾಗಬಹುದು ಎನ್ನಲಾಗಿದೆ.

Most Read Articles

Kannada
English summary
Volkswagen Dealers Unofficially Opens Taigun SUV Booking. Read in Kannada.
Story first published: Sunday, May 16, 2021, 21:50 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X