Just In
- 2 hrs ago
ಕೊನೆಯ ಆಸೆಯೆಂತೆ ರಾಜಕುಮಾರ ಪ್ರಿನ್ಸ್ ಫಿಲಿಪ್ ಅಂತಿಮ ಯಾತ್ರೆಗೆ ಸಿದ್ದವಾಗಿದೆ ಮಾಡಿಫೈ ಲ್ಯಾಂಡ್ ರೋವರ್
- 4 hrs ago
ಜಪಾನ್ನಲ್ಲಿ ಬಿಡುಗಡೆಯಾಯ್ತು ಮೇಡ್ ಇನ್ ಇಂಡಿಯಾ 2021ರ ಸುಜುಕಿ ಜಿಕ್ಸರ್ 250 ಬೈಕ್
- 4 hrs ago
ಆಕರ್ಷಕ ಬೆಲೆಯಲ್ಲಿ ದೇಶದ ಮೊದಲ ಹೈಬ್ರಿಡ್ ಟ್ರ್ಯಾಕ್ಟರ್ ಬಿಡುಗಡೆ
- 5 hrs ago
ಬೆಲೆ ಏರಿಕೆ ಪಡೆದುಕೊಂಡ ಟಿವಿಎಸ್ ಸ್ಟಾರ್ ಸಿಟಿ ಪ್ಲಸ್ ಬೈಕ್
Don't Miss!
- News
ಬೆಂಗಳೂರಿನಲ್ಲಿ ಭೀತಿ: ಕೊರೊನಾ ಹೆಚ್ಚು ರೆಮ್ಡೆಸಿವಿರ್ ಔಷಧಿ ಕಡಿಮೆ!
- Sports
ಐಪಿಎಲ್ ಇತಿಹಾಸದಲ್ಲಿ ಅಪರೂಪದ ದಾಖಲೆ ಬರೆದ ಆರ್ಸಿಬಿ!
- Finance
ಚಿನ್ನ, ಬೆಳ್ಳಿ ಸ್ವಲ್ಪ ಕುಸಿತ: ಏಪ್ರಿಲ್ 14ರಂದು ಎಲ್ಲೆಡೆ ಬೆಲೆ ಎಷ್ಟಿದೆ?
- Movies
40, 50, 60ರ ಸೀಕ್ರೆಟ್ ಬಿಚ್ಚಿಟ್ಟ ಕ್ರೇಜಿಸ್ಟಾರ್ ರವಿಚಂದ್ರನ್
- Education
SSLC Exams 2021: ಸಿಬಿಎಸ್ಇ ಪರೀಕ್ಷೆ ರದ್ದು ಬೆನ್ನಲ್ಲೇ ಎಸ್ಎಸ್ಎಲ್ಸಿ ಪರೀಕ್ಷೆ ಊಹಾಪೋಹ: ಸುರೇಶ್ ಕುಮಾರ್ ಸ್ಪಷ್ಟನ
- Lifestyle
ನಿಮ್ಮ ಮಗು 10ವರ್ಷ ತಲುಪುವಾಗ ಕಲಿಸಬೇಕಾದ ಜೀವನ ಕೌಶಲ್ಯಗಳಿವು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪೊಲೊ ಮತ್ತು ವೆಂಟೊ ಕಾರುಗಳ ಟರ್ಬೊ ಎಡಿಷನ್ ಸ್ಥಗಿತಗೊಳಿಸಿದ ಫೋಕ್ಸ್‌ವ್ಯಾಗನ್
ಫೋಕ್ಸ್‌ವ್ಯಾಗನ್ ಇಂಡಿಯಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ತನ್ನ ಜನಪ್ರಿಯ ಕಾರು ಮಾದರಿಗಳಾದ ಪೊಲೊ ಹ್ಯಾಚ್‌ಬ್ಯಾಕ್ ಮತ್ತು ಫೋಕ್ಸ್‌ವ್ಯಾಗನ್ ವೆಂಟೊ ಸೆಡಾನ್ ಕಾರು ಮಾದರಿಗಳಲ್ಲಿ ಕಳೆದ ಫೆಬ್ರವರಿಯಲ್ಲಿ ಬಿಡುಗಡೆ ಮಾಡಲಾಗಿದ್ದ ಟರ್ಬೊ ಎಡಿಷನ್‌ಗಳನ್ನು ಸ್ಥಗಿತಗೊಳಿಸಿದೆ.

ಪೊಲೊ ಹ್ಯಾಚ್‌ಬ್ಯಾಕ್ ಮತ್ತು ಫೋಕ್ಸ್‌ವ್ಯಾಗನ್ ವೆಂಟೊ ಸೆಡಾನ್ ಕಾರಿನ ಕಂಫರ್ಟ್ ವೆರಿಯೆಂಟ್ ಆಧರಿಸಿ ಟರ್ಬೊ ಎಡಿಷನ್ ಬಿಡುಗಡೆ ಮಾಡಿದ್ದ ಫೋಕ್ಸ್‌ವ್ಯಾಗನ್ ಕಂಪನಿಯು ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೊಸ ಆವೃತ್ತಿಗಳಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಪರಿಚಯಿಸಿತ್ತು. ಹೊಸ ಕಾರು ಮಾದರಿಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಪೊಲೊ ಟರ್ಬೊ ಎಡಿಷನ್‌ಗೆ ರೂ. 6.99 ಲಕ್ಷ ಮತ್ತು ವೆಂಟೊ ಟರ್ಬೊ ಎಡಿಷನ್‌ಗೆ ರೂ. 8.69 ಲಕ್ಷ ಬೆಲೆ ಹೊಂದಿದ್ದವು.

ಟರ್ಬೊ ಎಡಿಷನ್‌ಗಳು ಸ್ಟ್ಯಾಂಡರ್ಡ್ ಮಾದರಿಗಿಂತಲೂ ತುಸು ದುಬಾರಿಯಾಗಿದ್ದರೂ ವಿವಿಧ ಹೆಚ್ಚುವರಿ ತಾಂತ್ರಿಕ ಸೌಲಭ್ಯಗಳೊಂದಿಗೆ ಗಮನಸೆಳೆದಿದ್ದವು. ಆದರೆ ಹೊಸ ಆವೃತ್ತಿಗಳನ್ನು ಕಂಪನಿಯು ಸೀಮಿತ ಅವಧಿಗಾಗಿ ಮಾತ್ರವೇ ಬಿಡುಗಡೆ ಮಾಡಲಾಗಿತ್ತು.

ಹೊಸ ಕಾರುಗಳಲ್ಲಿ ಫೋಕ್ಸ್‌ವ್ಯಾಗನ್ ಕಂಪನಿಯು ಸ್ಟ್ಯಾಂಡರ್ಡ್ ಮಾದರಿಯಲ್ಲಿರುವ ಫೀಚರ್ಸ್ ಒಳಗೊಂಡಂತೆ ಹೆಚ್ಚುವರಿಯಾಗಿ ಗ್ಲಾಸಿ ಬ್ಲ್ಯಾಕ್ ಸ್ಪಾಯ್ಲರ್, ರಿಯರ್ ವ್ಯೂ ಮಿರರ್ ಕ್ಯಾಪ್, ಫೆಂಡರ್ ಬ್ಯಾಡ್ಜ್, ಸ್ಪೋಟಿ ಸೀಟುಗಳನ್ನು ನೀಡಲಾಗಿತ್ತು.

ಹೊಸ ತಾಂತ್ರಿಕ ಅಂಶಗಳಿಂದಾಗಿ ಹೊಸ ಕಾರಿನ ನೋಟವು ಆಕರ್ಷಕವಾಗಿದ್ದು, ಸ್ಪೋರ್ಟಿ ಹ್ಯಾಚ್‌ಬ್ಯಾಕ್ ಮತ್ತು ಸೆಡಾನ್ ಕಾರು ಖರೀದಿದಾರರನ್ನು ಸೆಳೆಯಲು ಹೊಸ ಕಾರು ಮಾದರಿಯು ಸಹಕಾರಿಯಾಗಲಿದೆ ಎನ್ನಬಹುದು.

ಇನ್ನು ಹೆಚ್ಚುವರಿ ತಾಂತ್ರಿಕ ಅಂಶಗಳನ್ನು ಹೊರತುಪಡಿಸಿ ಹೊಸ ವೆರಿಯೆಂಟ್‌ಗಳ ಎಂಜಿನ್ ಆಯ್ಕೆಯನ್ನು ಈ ಹಿಂದಿನಂತೆಯೇ ಮುಂದುವರಿಸಲಾಗಿತ್ತು. ಸದ್ಯ ಲಭ್ಯವಿರುವ ಸ್ಟಾಕ್ ಹೊರತುಪಡಿಸಿ ಹೊಸದಾಗಿ ಉತ್ಪಾದನೆಯನ್ನು ಸ್ಥಗಿತಗೊಳಿಸಲಾಗಿದ್ದು, ಈಗಾಗಲೇ ಸ್ಟಾಕ್ ಪ್ರಮಾಣವು ಕೂಡಾ ಪೂರ್ಣ ಪ್ರಮಾಣದಲ್ಲಿ ಬುಕ್ಕಿಂಗ್ ಪಡೆದುಕೊಂಡಿದೆ ಎನ್ನಲಾಗಿದೆ.

ಇದರೊಂದಿಗೆ ಹ್ಯಾಚ್‌ಬ್ಯಾಕ್ ಮತ್ತು ಸೆಡಾನ್ ಮಾದರಿಗಳ ಮಾದರಿಗಳ ಮಾರಾಟದಲ್ಲಿ ಉತ್ತಮ ಬೇಡಿಕೆ ಹೊಂದಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಪೊಲೊ ಮತ್ತು ವೆಂಟೊ ಕಾರುಗಳಲ್ಲಿ ಅತ್ಯುತ್ತಮ ಎಂಜಿನ್ ಆಯ್ಕೆ ಜೋಡಣೆ ಮಾಡಿದೆ.

ಟರ್ಬೊ ಎಡಿಷನ್‌ಗಳಲ್ಲಿ ಕಾರು ಮಾದರಿಗಳಿಗೆ ಅನುಗುಣವಾಗಿ 1.0-ಲೀಟರ್ ಎಂಪಿಐ ಮತ್ತು 1.0-ಲೀಟರ್ ಟಿಎಸ್ಐ ಟರ್ಬೋ ಪೆಟ್ರೋಲ್ ಎಂಜಿನ್ ಜೋಡಿಸಲಾಗಿದ್ದು, ಎಂಜಿನ್ ಮಾದರಿಗಳಿಗೆ ಅನುಗುಣವಾಗಿ ಗೇರ್‌ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ.
MOST READ: ವಾಣಿಜ್ಯ ವಾಹನಗಳ ನಿರ್ವಹಣಾ ವೆಚ್ಚ ತಗ್ಗಿಸಲು ಹೊಸ ಟರ್ಬೊ ಟ್ರಾನ್ ಎಂಜಿನ್ ಪರಿಚಯಿಸಿದ ಟಾಟಾ ಮೋಟಾರ್ಸ್

ಪೊಲೊ ಆರಂಭಿಕ ಕಾರು ಮಾದರಿಯಲ್ಲಿರುವ 1.0-ಲೀಟರ್ ಎಂಪಿಐ ಪೆಟ್ರೋಲ್ ಎಂಜಿನ್ ಮಾದರಿಯು 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 76-ಬಿಎಚ್‌ಪಿ ಮತ್ತು 95-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಟಾಪ್ ಎಂಡ್ ಮಾದರಿಗಳಲ್ಲಿರುವ 1.0-ಲೀಟರ್ ಟಿಎಸ್ಐ ಟರ್ಬೋ ಪೆಟ್ರೋಲ್ ಕಾರು ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಗರಿಷ್ಠ 109-ಬಿಎಚ್‌ಪಿ ಮತ್ತು 170-ಎನ್ಎಂ ಟಾರ್ಕ್ ಉತ್ಪಾದನೆಯೊಂದಿಗೆ ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ 16.47 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತವೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ವೆಂಟೊ ಕಾರು ಮಾದರಿಯಲ್ಲಿ ಫೋಕ್ಸ್‌ವ್ಯಾಗನ್ ಕಂಪನಿಯು ಎಲ್ಲಾ ವೆರಿಯೆಂಟ್‌ಗಳಲ್ಲೂ 1.0-ಲೀಟರ್ ಟಿಎಸ್ಐ ಟರ್ಬೋ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಾಗಿದೆ.

ಪೊಲೊ ಮತ್ತು ವೆಂಟೊ ಮಾದರಿಗಳಲ್ಲಿ ಟರ್ಬೊ ಎಡಿಷನ್ ಹೊರತು ಪಡಿಸಿ ಸ್ಟ್ಯಾಂಡರ್ಡ್ ಮಾದರಿಗಳಿಗೆ ಅನುಸಾರವಾಗಿ ಪೊಲೊ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.06 ಲಕ್ಷದಿಂದ ರೂ. 9.92 ಲಕ್ಷ ಬೆಲೆ ಹೊಂದಿದ್ದರೆ ವೆಂಟೊ ಕಾರು ಮಾದರಿಯು ಆರಂಭಿಕವಾಗಿ ರೂ. 8.69 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 13.68 ಲಕ್ಷ ಬೆಲೆ ಹೊಂದಿವೆ.