ವಿಶ್ವದ ಪ್ರತಿಷ್ಠಿತ ಪ್ರಶಸ್ತಿಗೆ ಪಾತ್ರವಾದ ಫೋಕ್ಸ್‌ವ್ಯಾಗನ್ ಐಡಿ.4 ಎಲೆಕ್ಟ್ರಿಕ್ ಕಾರು
ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಫೋಕ್ಸ್‌ವ್ಯಾಗನ್ ತನ್ನ ಹೊಸ ಐಡಿ.4 ಎಲೆಕ್ಟ್ರಿಕ್ ಕಾರು ಮಾದರಿಯ ಮೂಲಕ ಹೊಸ ಸಂಚಲನಕ್ಕೆ ಕಾರಣವಾಗಿದ್ದು, ಹೊಸ ಎಲೆಕ್ಟ್ರಿಕ್ ಕಾರಿಗೆ ಜಾಗತಿಕ ಮಟ್ಟದಲ್ಲಿ ನೀಡಲಾಗುವ ವಿಶ್ವದ ಶ್ರೇಷ್ಠ ಕಾರು ಪ್ರಶಸ್ತಿಗೆ ಭಾಜನವಾಗಿದೆ.

ಅಂತರ್‌ರಾಷ್ಟ್ರೀಯ ಆಟೋಉದ್ಯಮದಲ್ಲಿ ನೀಡಲಾಗುವ ವರ್ಲ್ಡ್ ಕಾರ್ ಆಫ್ ದಿ ಇಯರ್ 2021ರ ಪ್ರಶಸ್ತಿಗೆ ಈ ಬಾರಿ ಫೋಕ್ಸ್‌ವ್ಯಾಗನ್ ನಿರ್ಮಾಣದ ಐಡಿ.4 ಮಾದರಿ ಪಾತ್ರವಾಗಿದ್ದು, ಗುಣಮಟ್ಟ, ಜನಪ್ರಿಯತೆಯನ್ನು ಆಧರಿಸಿ ಈ ಪ್ರಶಸ್ತಿ ನೀಡಲಾಗುತ್ತದೆ. ಜಾಗತಿಕ ಮಟ್ಟದಲ್ಲಿ ಆಟೋ ಉದ್ಯಮವನ್ನು ಅರಿತಿರುವ 93 ಜನ ಪತ್ರಕರ್ತರನ್ನು ಒಳಗೊಂಡ ಪ್ರಶಸ್ತಿ ಆಯ್ಕೆ ಸಮಿತಿಯು ವರ್ಲ್ಡ್ ಕಾರ್ ಆಫ್ ದಿ ಇಯರ್ ಪ್ರಕಟಿಸಿದ್ದು, ವಿವಿಧ ವಿಭಾಗಗಳಲ್ಲಿ ತಾಂತ್ರಿಕತೆ ಮತ್ತು ಆದ್ಯತೆಯ ಮೇರೆಗೆ ಪ್ರಶಸ್ತಿ ವಿಭಾಗಗಳನ್ನು ಹೊಂದಿರುತ್ತವೆ.

2020ರಲ್ಲಿ ಬಿಡುಗಡೆಯಾದ ಫೋಕ್ಸ್‌ವ್ಯಾಗನ್ ಐಡಿ.4 ಮಾದರಿಯು ಸದ್ಯ ವಿಶ್ವದ ಪ್ರಮುಖ ಮಾರುಕಟ್ಟೆಗಳಲ್ಲಿ ಭಾರೀ ಬೇಡಿಕೆಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಹೊಸ ಕಾರಿನ ತಾಂತ್ರಿಕ ಬಲಿಷ್ಠ, ಗುಣಮಟ್ಟ ಮತ್ತು ಜನಪ್ರಿಯತೆ ಆಧರಿಸಿ 2021ರ ವರ್ಲ್ಡ್ ಕಾರ್ ಆಫ್ ದಿ ಇಯರ್ ಪ್ರಶಸ್ತಿ ನೀಡಲಾಗಿದೆ.

ವಿಶ್ವಾದ್ಯಂತ ಮಾರಾಟಗೊಳ್ಳುತ್ತಿರುವ ನೂರಾರು ಕಾರ್ ಬ್ರಾಂಡ್‌ಗಳಲ್ಲಿ ವಿಭಿನ್ನವಾಗಿ ಗುರುತಿಸಿಕೊಂಡ ಫೋಕ್ಸ್‌ವ್ಯಾಗನ್ ಐಡಿ.4 ಮಾದರಿಯು ಪ್ರತಿಷ್ಠತ ಪ್ರಶಸ್ತಿಯ ಫೈನಲ್ ಹಂತದಲ್ಲಿ ತೀವ್ರ ಪೈಪೋಟಿಯಲ್ಲಿದ್ದ ಹೋಂಡಾ ಇ ಕಾರು ಮತ್ತು ಟೊಯೊಟಾ ಯಾರಿಸ್ ಎಸ್‌ಯುವಿ ಕಾರುಗಳನ್ನು ಹಿಂದಿಕ್ಕಿ ವರ್ಲ್ಡ್ ಕಾರ್ ಆಫ್ ದಿ ಇಯರ್ ಪ್ರಶಸ್ತಿ ಪಡೆದುಕೊಂಡಿತು.

ಮ್ಯಾಡುಲರ್ ಎಲೆಕ್ಟ್ರಿಕ್ ಡ್ರೈವ್ ಮ್ಯಾಟ್ರಿಕ್ಸ್ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಸಿದ್ದಗೊಂಡಿರುವ ಫೋಕ್ಸ್‌ವ್ಯಾಗನ್ ಕಂಪನಿಯ ಹೊಸ ಇವಿ ಕಾರು ಮಾದರಿಗಳು ಈಗಾಗಲೇ ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟ ಮಾಡುತ್ತಿದ್ದು, 2022ರ ಆರಂಭದಲ್ಲಿ ಭಾರತದಲ್ಲೂ ಹೊಸ ಇವಿ ಕಾರುಗಳನ್ನು ಹೊಸ ಆಮದು ನೀತಿ ಅಡಿ ಮಾರಾಟ ಪ್ರಕ್ರಿಯೆಯನ್ನು ಅಧಿಕೃತವಾಗಿ ಆರಂಭಿಸುವ ಸಿದ್ದತೆಯಲ್ಲಿದೆ.

ಯುರೋಪಿನ್ ಪ್ರಮುಖ ಮಾರುಕಟ್ಟೆಗಳಲ್ಲಿ ಐಡಿ ಸರಣಿಯಲ್ಲಿ ಐಡಿ.3 ಮತ್ತು ಐಡಿ.4 ಮತ್ತು ಮಧ್ಯಮ ಕ್ರಮಾಂಕದಲ್ಲಿ ಇ-ಗಾಲ್ಪ್ ಹಾಗೂ ಇ-ಅಪ್ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುತ್ತಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಭಾರತದಲ್ಲಿ ಐಡಿ.4 ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಸದ್ಯ ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳನ್ನು ಪರಿಣಾಮಕಾರಿಯಾಗಿ ತಗ್ಗಿಸುವ ಉದ್ದೇಶದಿಂದ ಹಲವಾರು ಕಠಿಣಕ್ರಮಗಳನ್ನು ಜಾರಿಗೆ ತರುತ್ತಿದ್ದು, ಬಹುತೇಕ ಆಟೋ ಉತ್ಪಾದನಾ ಕಂಪನಿಗಳು ಸಂಪೂರ್ಣವಾಗಿ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನ ಉತ್ಪಾದನೆಯತ್ತ ಹೆಚ್ಚು ಗಮಹರಿಸುತ್ತಿವೆ.

ಭಾರತದಲ್ಲಿ ಬಿಡುಗಡೆಯಾಗಲಿರುವ ಐಡಿ.4 ಎಲೆಕ್ಟ್ರಿಕ್ ಕಾರು ಮಾದರಿಯು ಹಲವು ವಿಶೇಷತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಪ್ರತಿ ಚಾರ್ಜ್‌ಗೆ 510ಕಿ.ಮೀ ಗೂ ಅಧಿಕ ಮೈಲೇಜ್ ಹಿಂದಿರುಗಿಸುವ ವೈಶಿಷ್ಟ್ಯತೆ ಹೊಂದಿದೆ.
MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಜೊತೆಗೆ ಹೊಸ ಕಾರಿನಲ್ಲಿ ಸಾಮಾನ್ಯ ಕಾರುಗಳಂತೆ ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದ್ದು, ರಿಯರ್ ವೀಲ್ಹ್ ಡ್ರೈವ್ ಸಿಸ್ಟಂ ಪಡೆದುಕೊಂಡಿರುವ ಹೊಸ ಕಾರಿನಲ್ಲಿ ಕ್ವಿಕ್ ಚಾರ್ಜ್ ಮೂಲಕ 30 ನಿಮಿಷ ಕಾಲ ಚಾರ್ಜ್ ಮಾಡಿದ್ದಲ್ಲಿ 320 ಕಿ.ಮೀ ಮೈಲೇಜ್ ಸುಲಭವಾಗಿ ಪಡೆಯಬಹುದಾಗಿದೆ.

ಆರಂಭಿಕ ಹಂತವಾಗಿ ಐಡಿ.4 ಎಲೆಕ್ಟ್ರಿಕ್ ಕಾರಿನಲ್ಲಿ ರಿಯರ್ ಡ್ರೈವ್ ಸಿಸ್ಟಂ ನೀಡಲಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಗ್ರಾಹಕರ ಬೇಡಿಕೆಗೆ ಆಧರಿಸಿ ಆಲ್ ವೀಲ್ಹ್ ಡ್ರೈವ್ ಸಿಸ್ಟಂ ಮಾದರಿಯನ್ನು ನೀಡಲಿದ್ದು, ರಿಯರ್ ಡ್ರೈವ್ ಸಿಸ್ಟಂ ಹೊಂದಿರುವ ಕಾರು ಮಾದರಿಯು 204-ಬಿಎಚ್‌ಪಿ ಮಾಡಿದ್ದಲ್ಲಿ ಆಲ್ ವೀಲ್ಹ್ ಡ್ರೈವ್ ಮಾದರಿಯು 310-ಬಿಎಚ್‌ಪಿ ಉತ್ಪಾದನೆ ಮಾಡಲಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹೊಸ ಕಾರು 4,592-ಎಂಎಂ ಉದ್ದ, 1,852-ಎಂಎಂ ಅಗಲ ಮತ್ತು 1,629-ಎಂಎಂ ಎತ್ತರದ ವಿನ್ಯಾಸದೊಂದಿಗೆ ಅತ್ಯುತ್ತಮ ಆಸನ ಸೌಲಭ್ಯವನ್ನು ಹೊಂದಿದ್ದು, ತಾಂತ್ರಿಕ ಅಂಶಗಳ ಧ್ವನಿ ಗ್ರಹಿಕೆಯ ಮೂಲಕ ನಿಯಂತ್ರಣ ಮಾಡಬಹುದಾದ ಸೌಲಭ್ಯಗಳ ಜೋಡಣೆಯನ್ನು ಪಡೆದುಕೊಂಡಿದೆ.


Click it and Unblock the Notifications








