ಇದೇ ತಿಂಗಳು 28ರಂದು ಅನಾವರಣಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಐಡಿ.4 ಜಿಟಿಎಕ್ಸ್

ಫೋಕ್ಸ್‌ವ್ಯಾಗನ್ ಕಂಪನಿಯು ಶೀಘ್ರದಲ್ಲೇ ತನ್ನ ಪ್ರಮುಖ ಎಲೆಕ್ಟ್ರಿಕ್ ಕಾರು ಮಾದರಿಗಳ ಮಾರಾಟವನ್ನು ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ವಿಸ್ತರಿಸುವ ಯೋಜನೆಯಲ್ಲಿದ್ದು, ಕಂಪನಿಯ ಹೊಸ ಐಡಿ ಸರಣಿಯಲ್ಲಿನ ಐಡಿ.4 ಜಿಟಿಎಕ್ಸ್ ಪರ್ಫಾಮೆನ್ಸ್ ಎಲೆಕ್ಟ್ರಿಕ್ ಕಾರಿನ ಟೀಸರ್ ಬಿಡುಗಡೆ ಮಾಡಿ ಅನಾವರಣಗೊಳಿಸಲು ಸಜ್ಜಾಗುತ್ತಿದೆ.

ಇದೇ ತಿಂಗಳು 28ರಂದು ಅನಾವರಣಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಐಡಿ.4 ಜಿಟಿಎಕ್ಸ್

ಮ್ಯಾಡುಲರ್ ಎಲೆಕ್ಟ್ರಿಕ್ ಡ್ರೈವ್ ಮ್ಯಾಟ್ರಿಕ್ಸ್ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಸಿದ್ದಗೊಂಡಿರುವ ಫೋಕ್ಸ್‌ವ್ಯಾಗನ್ ಕಂಪನಿಯ ಹೊಸ ಇವಿ ಕಾರು ಮಾದರಿಗಳು ಈಗಾಗಲೇ ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟ ಮಾಡುತ್ತಿದ್ದು, ಹೊಸದಾಗಿ ಅಭಿವೃದ್ದಿಪಡಿಸಲಾಗಿರುವ ಐಡಿ.4 ಜಿಟಿಎಕ್ಸ್ ಪರ್ಫಾಮೆನ್ಸ್ ಎಲೆಕ್ಟ್ರಿಕ್ ಕಾರು ಅತ್ಯುತ್ತಮ ಪರ್ಫಾಮೆನ್ಸ್‌ನೊಂದಿಗೆ ಮೈಲೇಜ್ ವಿಚಾರದಲ್ಲೂ ಗಮನಸೆಳೆಯಲಿದೆ.

ಇದೇ ತಿಂಗಳು 28ರಂದು ಅನಾವರಣಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಐಡಿ.4 ಜಿಟಿಎಕ್ಸ್

2021ರ ಮೊದಲಾರ್ಧದಲ್ಲಿ ಐಡಿ.4 ಜಿಟಿಎಕ್ಸ್ ಅನ್ನು ಬಿಡುಗಡೆ ಮಾಡಲು ಯೋಜಿಸಿರುವುದಾಗಿ ಖಚಿತಪಡಿಸಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಹೊಸ ಕಾರನ್ನು ಇದೇ ತಿಂಗಳು 28ರಂದು ಸ್ಪೋರ್ಟಿ ಡ್ಯುಯಲ್-ಮೋಟಾರ್ ಜೋಡಣೆಯೊಂದಿಗೆ ಅನಾವರಣಗೊಳಿಸುತ್ತಿದೆ.

ಇದೇ ತಿಂಗಳು 28ರಂದು ಅನಾವರಣಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಐಡಿ.4 ಜಿಟಿಎಕ್ಸ್

ಐಡಿ.4 ಜಿಟಿಎಕ್ಸ್ ರೂಪಾಂತರವು 6.2 ಸೆಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮೀ ವೇಗವನ್ನು ತಲುಪಬಲ್ಲ ಶಕ್ತಿಶಾಲಿ ಪವರ್‌ಟ್ರೇನ್ ಹೊಂದುವ ನಿರೀಕ್ಷೆಯಿದ್ದು, ಸ್ಟ್ಯಾಂಡರ್ಡ್ ಐಡಿ.4 ಮಾದರಿಯು 8.5 ಸೆಕೆಂಡುಗಳಲ್ಲಿ ಸೊನ್ನೆಯಿಂದ 100 ಕಿ.ಮೀ ವೇಗ ಪಡೆದುಕೊಳ್ಳುತ್ತದೆ.

ಇದೇ ತಿಂಗಳು 28ರಂದು ಅನಾವರಣಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಐಡಿ.4 ಜಿಟಿಎಕ್ಸ್

ಆದರೆ ಐಡಿ.4 ಜಿಟಿಎಕ್ಸ್ ರೂಪಾಂತರವು ವಿಶೇಷವಾಗಿ ಪರ್ಫಾಮೆನ್ಸ್ ಉದ್ದೇಶಕ್ಕಾಗಿ ಅಭಿವೃದ್ದಿಗೊಳಿಸುತ್ತಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಆಲ್-ವೀಲ್ ಡ್ರೈವ್ ವ್ಯವಸ್ಥೆಯನ್ನು ಹೊಂದುವ ನಿರೀಕ್ಷೆಯಿದೆ. ಹೊಸ ಎಲೆಕ್ಟ್ರಿಕ್ ಕಾರು 302 ಬಿಹೆಚ್‌ಪಿ (225 ಕಿ.ವ್ಯಾ / 306 ಪಿಎಸ್) ಮತ್ತು 339 ಎಲ್‌ಬಿ-ಅಡಿ (460 ಎನ್‌ಎಂ) ಟಾರ್ಕ್ ಉತ್ಪಾದನೆಯನ್ನು ಉತ್ಪಾದಿಸಬಹುದಾಗಿದೆ.

ಇದೇ ತಿಂಗಳು 28ರಂದು ಅನಾವರಣಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಐಡಿ.4 ಜಿಟಿಎಕ್ಸ್

2025ರ ವೇಳೆಗೆ ಫೋಕ್ಸ್‌ವ್ಯಾಗನ್ ಕಂಪನಿಯು ಬರೋಬ್ಬರಿ 20ಕ್ಕೂ ಹೆಚ್ಚು ಹೊಸ ಎಲೆಕ್ಟ್ರಿಕ್ ಮಾದರಿಗಳನ್ನು ಬಿಡುಗಡೆ ಮಾಡಲು ಯೋಜನೆಯಲ್ಲಿದ್ದು, ಈ ವರ್ಷಾಂತ್ಯಕ್ಕೆ ಭಾರತದಲ್ಲೂ ತನ್ನ ಮೊದಲ ಇವಿ ಕಾರನ್ನು ಬಿಡುಗಡೆ ಮಾಡಲಿದೆ.

ಇದೇ ತಿಂಗಳು 28ರಂದು ಅನಾವರಣಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಐಡಿ.4 ಜಿಟಿಎಕ್ಸ್

ಕಳೆದ ವರ್ಷ ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ 1.34 ಲಕ್ಷ ಯುನಿಟ್ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡಿದ್ದು, ಹೊಸ ಉತ್ಪನ್ನಗಳೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇದೇ ತಿಂಗಳು 28ರಂದು ಅನಾವರಣಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಐಡಿ.4 ಜಿಟಿಎಕ್ಸ್

ಸದ್ಯ ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳನ್ನು ಪರಿಣಾಮಕಾರಿಯಾಗಿ ತಗ್ಗಿಸುವ ಉದ್ದೇಶದಿಂದ ಹಲವಾರು ಕಠಿಣಕ್ರಮಗಳನ್ನು ಜಾರಿಗೆ ತರುತ್ತಿದ್ದು, ಬಹುತೇಕ ಆಟೋ ಉತ್ಪಾದನಾ ಕಂಪನಿಗಳು ಸಂಪೂರ್ಣವಾಗಿ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನ ಉತ್ಪಾದನೆಯತ್ತ ಹೆಚ್ಚು ಗಮಹರಿಸುತ್ತಿವೆ.

ಇದೇ ತಿಂಗಳು 28ರಂದು ಅನಾವರಣಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಐಡಿ.4 ಜಿಟಿಎಕ್ಸ್

ಫೋಕ್ಸ್‌ವ್ಯಾಗನ್ ಕೂಡಾ ಡೀಸೆಲ್ ಎಂಜಿನ್ ಹಗರಣದಲ್ಲಿ ಸಿಲುಕಿದ ನಂತರ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನೇ ಸ್ಥಗಿತಗೊಳಿಸಿ ಪೆಟ್ರೋಲ್ ಮಾದರಿಗಳ ಜೊತೆಗೆ ಎಲೆಕ್ಟ್ರಿಕ್ ಕಾರು ಮಾದರಿಗಳ ಮಾರಾಟ ಮಾಡುತ್ತಿದ್ದು, ಮುಂಬರುವ ದಿನಗಳಲ್ಲಿ ಪೆಟ್ರೋಲ್ ಕಾರುಗಳ ಮಾರಾಟವನ್ನು ಸಹ ಹಂತ-ಹಂತವಾಗಿ ಸ್ಥಗಿತಗೊಳಿಸಲಿರುವ ಆಟೋ ಉತ್ಪಾದನಾ ಕಂಪನಿಗಳು ಹೈಬ್ರಿಡ್ ಅಥವಾ ಸಂಪೂರ್ಣವಾಗಿ ಎಲೆಕ್ಟ್ರಿಕ್ ಮಾದರಿಗಳನ್ನು ಮಾತ್ರ ಬಿಡುಗಡೆ ಮಾಡಲಿವೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಇದೇ ತಿಂಗಳು 28ರಂದು ಅನಾವರಣಗೊಳ್ಳಲಿದೆ ಫೋಕ್ಸ್‌ವ್ಯಾಗನ್ ಐಡಿ.4 ಜಿಟಿಎಕ್ಸ್

ಈ ನಿಟ್ಟಿನಲ್ಲಿ ಮಹತ್ವದ ಮುನ್ನಡೆ ಸಾಧಿಸುತ್ತಿರುವ ಫೋಕ್ಸ್‌ವ್ಯಾಗನ್ ಕಂಪನಿಯು ವಿವಿಧ ಇವಿ ಕಾರು ಮಾದರಿಗಳೊಂದಿಗೆ ಜಾಗತಿಕ ಆಟೋ ಉದ್ಯಮದಲ್ಲಿ ಗಮನಸೆಳೆಯುತ್ತಿದ್ದು, ಭಾರತದಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

More from DriveSpark

Article Published On: Monday, April 19, 2021, 17:50 [IST]
English summary
Volkswagen ID4 GTX World Premier To Be Held On 28th April. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+