ಫೋಕ್ಸ್‌ವ್ಯಾಗನ್ ಪೊಲೊ, ವೆಂಟೊ ಕಾರುಗಳ ಖರೀದಿ ಮೇಲೆ ಆಕರ್ಷಕ ರಿಯಾಯಿತಿ
ಫೋಕ್ಸ್‌ವ್ಯಾಗನ್ ಇಂಡಿಯಾ ಕಂಪನಿಯು ಪೊಲೊ ಹ್ಯಾಚ್‌ಬ್ಯಾಕ್ ಮತ್ತು ವೆಂಟೊ ಸೆಡಾನ್ ಕಾರುಗಳ ಮೇಲೆ ಆಕರ್ಷಕ ರಿಯಾಯಿತಿಗಳನ್ನು ಘೋಷಿಸಿದೆ. ಫೋಕ್ಸ್‌ವ್ಯಾಗನ್ ಕಂಪನಿಯ ತನ್ನ ಈ ಎರಡು ಜನಪ್ರಿಯ ಮಾದರಿಗಳ ಮಾರಾಟವನ್ನು ಹೆಚ್ಚಿಸಲು ಈ ಭರ್ಜರಿ ರಿಯಾಯಿತಿಯನ್ನು ಘೋಷಿಸಲಾಗಿದೆ.

ಫೋಕ್ಸ್‌ವ್ಯಾಗನ್ ಪೊಲೊ ಮತ್ತು ವೆಂಟೊ ಕಾರುಗಳ ಮೇಲೆ ನಗದು ರಿಯಾಯಿತಿ, ಎಕ್ಸ್‌ಚೇಂಜ್ ಬೋನಸ್ ಮತ್ತು ಲಾಯಲ್ಟಿ ಬೋನಸ್ ಮುಂತಾದ ಆಕರ್ಷಕ ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಈ ರಿಯಾಯಿತಿಗಳು ಈ ತಿಂಗಳ ಅಂತ್ಯದವರೆಗೂ ಲಭ್ಯವಿರುತ್ತದೆ. ಫೋಕ್ಸ್‌ವ್ಯಾಗನ್ ಪೊಲೊ ಕಾರು ಟ್ರೆಂಡ್‌ಲೈನ್, ಕಂಫರ್ಟ್‌ಲೈನ್, ಹೈಲೈನ್ ಪ್ಲಸ್ ಮತ್ತು ಜಿಟಿ ಎಂಬ ನಾಲ್ಕು ರೂಪಾಂತರಗಳಲ್ಲಿ ಲಭ್ಯವಿದೆ.

ಪೊಲೊ ಕಾರಿನ ಎಲ್ಲಾ ರೂಪಾಂತರಗಳ ಮೇಲೆ ರೂ.20,000 ವರೆಗಿನ ಎಕ್ಸ್‌ಚೇಂಜ್ ಬೋನಸ್ ಮತ್ತು ರೂ.10,000 ವರೆಗಿನ ಲಾಯಲ್ಟಿ ಬೋನಸ್ ಲಭ್ಯವಿದೆ. ಜಿಟಿ ಟಿಎಸ್‌ಐ ರೂಪಾಂತರದ ಮೇಲೆ ಹೆಚ್ಚುವರಿ ರೂ.20,000 ವರೆಗಿನ ನಗದು ರಿಯಾಯಿತಿ ಮತ್ತು ರೂ.5,000 ವರೆಗಿನ ಕಾರ್ಪೋರೇಟ್ ಬೋನಸ್ ಅನ್ನು ನೀಡಲಾಗಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಇನ್ನು ಫೋಕ್ಸ್‌ವ್ಯಾಗನ್ ವೆಂಟೊ ಕಾರು ಕಂಫರ್ಟ್‌ಲೈನ್, ಹೈಲೈನ್ ಮತ್ತು ಹೈಲೈನ್ ಪ್ಲಸ್ ಎಂಬ ಮೂರು ರೂಪಾಂತರಗಳಲ್ಲಿ ಲಭ್ಯವಿದೆ. ಈ ಸೆಡಾನ್ ಮೇಲೆ ರೂ.25 ಸಾವಿರ ವರೆಗಿನ ಎಕ್ಸ್‌ಚೇಂಜ್ ಬೋನಸ್ ಮತ್ತು ರೂ.10,000 ವರೆಗಿನ ಲಾಯಲ್ಟಿ ಬೋನಸ್ ಲಭ್ಯವಿದೆ.

ಫೋಕ್ಸ್‌ವ್ಯಾಗನ್ ಕಂಪನಿಯು ಪೊಲೊ ಮತ್ತು ವೆಂಟೊ ಕಾರುಗಳನ್ನು ಸ್ಥಳಿಯವಾಗಿ ತಯಾರಿಸಲಾಗುತ್ತಿದೆ. ಫೋಕ್ಸ್‌ವ್ಯಾಗನ್ ಪೊಲೊ ಮತ್ತು ವೆಂಟೊ ಕಾರುಗಳಲ್ಲಿ 1.2 ಲೀಟರ್ ಎಂಜಿನ್ ಅನ್ನು ಬದಲಾಯಿಸಿ 1.0 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಈ ಎಂಜಿನ್ 110 ಬಿಹೆಚ್‍ಪಿ ಪವರ್ ಮತ್ತು 175 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ. ಈ ಹಿಂದಿನ ತಲೆಮಾರಿನ ಮಾದರಿಗಳಲ್ಲಿ ಇದ್ದ 7 ಸ್ಪೀಡ್ ಡಿಎಸ್‍ಜಿ ಗೇರ್‍ಬಾಕ್ಸ್ ಅನ್ನು ಬದಲಾಯಿಸಿದೆ

ಈ ಎಂಜಿನ್‍ನೊಂದಿಗೆ 6 ಸ್ಪೀಡ್ ಮ್ಯಾನ್ಯುವಲ್ ಗೇರ್‍ಬಾಕ್ಸ್ ಅನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ. ಇನ್ನು ಇದರಲ್ಲಿ 6 ಸ್ಫೀಡ್ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಆಯ್ಕೆಯನ್ನು ಹೊಂದಿದೆ. ಈ ಎಂಜಿನ್ ಪ್ರತಿ ಲೀಟರ್‌ಗೆ 18.24 ಕಿ.ಮೀ ಮೈಲೇಜ್ ಅನ್ನು ನೀಡುತ್ತದೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಈ 1.0 ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಹೆಚ್ಚಿನ ಪವರ್ ಡ್ರೈವಿಬಿಲಿಟಿ, ಉತ್ತಮ ಕಾರ್ಯಕ್ಷಮತೆ, ಸುಧಾರಿತ ಇಂಧನ ದಕ್ಷತೆಯನ್ನು ಮತ್ತು ಹೆಚ್ಚು ಸಮರ್ಥನೀಯ ಎಂಜಿನ್ ಎಂದು ಜನಪ್ರಿಯತೆಯನ್ನು ಗಳಿಸಿದೆ. ಈ ವೆಂಟೊ ಕಾರಿನಲ್ಲಿ ಫೋಕ್ಸ್‌ವ್ಯಾಗನ್‍ನ ಪ್ರಶಸ್ತಿ ವಿಜೇತ ಟಿಎಸ್‍ಐ ತಂತ್ರಜ್ಞಾನವನ್ನು ಕೂಡ ಒಳಗೊಂಡಿದೆ.

ಫೋಕ್ಸ್‌ವ್ಯಾಗನ್ ವೆಂಟೊ ಸೆಡಾನ್ ಭಾರತೀಯ ಮಾರುಕಟ್ಟೆಯಲ್ಲಿ ಮಾರುತಿ ಸುಜುಕಿ ಸಿಯಾಝ್, ಹ್ಯುಂಡೈ ವೆರ್ನಾ ಮತ್ತು ಹೋಂಡಾ ಸಿಟಿ ಕಾರುಗಳಿಗೆ ಪೈಪೋಟಿಯನ್ನು ನೀಡುತ್ತದೆ. ಫೋಕ್ಸ್‌ವ್ಯಾಗನ್ ಕಂಪನಿಯು ಮಾರಾಟವನ್ನು ಹೆಚ್ಚಿಸಲು ಪೊಲೊ ಮತ್ತು ವೆಂಟೊ ಕಾರುಗಳ ಮೇಲೆ ರಿಯಾಯಿತಿಯನ್ನು ನೀಡಲಾಗುತ್ತಿದೆ.


Click it and Unblock the Notifications








