ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಫೋಕ್ಸ್‌ವ್ಯಾಗನ್

ಫೋಕ್ಸ್‌ವ್ಯಾಗನ್ ಕಂಪನಿಯು ಕಾರು ಖರೀದಿಯ ಯೋಜನೆಯಲ್ಲಿರುವ ಗ್ರಾಹಕರಿಗೆ ಹಲವಾರು ಆಫರ್‌ಗಳನ್ನು ಘೋಷಣೆ ಮಾಡಿದ್ದು, ಫೆಬ್ರುವರಿ ಅವಧಿಗಾಗಿ ವಿವಿಧ ಕಾರು ಮಾದರಿಗಳ ಮೇಲೆ ಗ್ರಾಹಕರಿಗೆ ಗರಿಷ್ಠ ಪ್ರಮಾಣದ ಡಿಸ್ಕೌಂಟ್ ನೀಡುತ್ತಿದೆ.

ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಫೋಕ್ಸ್‌ವ್ಯಾಗನ್

ಕಾರು ಮಾರಾಟ ಸುಧಾರಣೆಗಾಗಿ ಹೊಸ ವರ್ಷದ ಆಫರ್‌ಗಳನ್ನು ಘೋಷಣೆ ಮಾಡುತ್ತಿರುವ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಗ್ರಾಹಕರನ್ನು ಸೆಳೆಯುತ್ತಿದ್ದು, ಫೋಕ್ಸ್‌ವ್ಯಾಗನ್ ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಮೇಲೆ ಆಕರ್ಷಕ ಆಫರ್‌ಗಳನ್ನು ಘೋಷಿಸಿದೆ. ಹೊಸ ಆಫರ್‌ಗಳು ಫೋಕ್ಸ್‌ವ್ಯಾಗನ್ ನಿರ್ಮಾಣದ ಪೊಲೊ ಮತ್ತು ವೆಂಟೊ ಖರೀದಿಯ ಮೇಲೆ ಅನ್ವಯವಾಗಲಿದ್ದು, ಹೊಸ ಆಫರ್‌ಗಳು ಈ ತಿಂಗಳ 28ರ ತನಕ ಲಭ್ಯವಿರಲಿವೆ.

ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಫೋಕ್ಸ್‌ವ್ಯಾಗನ್

ಫೋಕ್ಸ್‌ವ್ಯಾಗನ್ ಕಂಪನಿಯು ಘೋಷಣೆ ಮಾಡಿರುವ ಹೊಸ ಆಫರ್‌ಗಳಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್ ಜೊತೆಗೆ ಕಾರ್ಪೊರೇಟ್ ಡಿಸ್ಕೌಂಟ್ ನೀಡಲಾಗುತ್ತಿದ್ದು, ಕನಿಷ್ಠ ರೂ. 45 ಸಾವಿರದಿಂದ ಗರಿಷ್ಠ ರೂ. 65 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.

ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಫೋಕ್ಸ್‌ವ್ಯಾಗನ್

ಪೊಲೊ ಹ್ಯಾಚ್‌ಬ್ಯಾಕ್ ಕಾರು ಖರೀದಿ ಮೇಲೆ ರೂ. 20 ಸಾವಿರ ಎಕ್ಸ್‌ಚೆಂಜ್ ಡಿಸ್ಕೌಂಟ್, ರೂ.10 ಸಾವಿರ ಲೊಯಾಲಿಟಿ ಬೋನಸ್, ರೂ.15 ಸಾವಿರ ಕಾರ್ಪೊರೇಟ್ ರಿಯಾಯಿತಿಯನ್ನು ನೀಡುತ್ತಿದೆ.

ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಫೋಕ್ಸ್‌ವ್ಯಾಗನ್

ಹೊಸ ಆಫರ್‌ಗಳಲ್ಲಿ ವೆಂಟೊ ಸೆಡಾನ್ ಮಾದರಿಯ ಖರೀದಿ ಮೇಲೆ ಗ್ರಾಹಕರು ಹೈ ಲೈನ್ ಆವೃತ್ತಿಯ ಮೇಲೆ ರೂ. 40 ಸಾವಿರ ಕ್ಯಾಶ್ ಡಿಸ್ಕೌಂಟ್, ರೂ.25 ಸಾವಿರ ಎಕ್ಸ್‌ಚೆಂಜ್ ಆಫರ್ ಪಡೆದುಕೊಳ್ಳಬಹುದಾಗಿದ್ದು, ಆಟೋಮ್ಯಾಟಿಕ್ ರೆಡ್ ಅಂಡ್ ವೈಟ್ ಎಡಿಷನ್ ಮೇಲೆ ರೂ.25 ಸಾವಿರ ಎಕ್ಸ್‌ಚೆಂಜ್ ಬೋನಸ್ ನೀಡಲಾಗುತ್ತಿದೆ. ಫೋಕ್ಸ್‌ವ್ಯಾಗನ್ ಕಂಪನಿಯು ವೆಂಟೊ ಆರಂಭಿಕ ಆವೃತ್ತಿಗಳ ಮೇಲೆ ರೂ.20 ಸಾವಿರ ಎಕ್ಸ್‌ಚೆಂಜ್ ಆಫರ್ ಮತ್ತು ರೂ.15 ಸಾವಿರ ಲೊಯಾಲಿಟಿ ಬೋನಸ್ ನೀಡುತ್ತಿದ್ದು, ಹೈ ಲೈನ್ ಆವೃತ್ತಿಯನ್ನು ಖರೀದಿ ಗ್ರಾಹಕರಿಗೆ ಮಾತ್ರವೇ ಕ್ಯಾಶ್ ಡಿಸ್ಕೌಂಟ್ ನೀಡಲಾಗುತ್ತಿದೆ.

ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಫೋಕ್ಸ್‌ವ್ಯಾಗನ್

ಇನ್ನುಳಿದ ಸಾಮಾನ್ಯ ಮಾದರಿಗಳ ಮೇಲೆ ಕಾರ್ಪೊರೇಟ್ ರಿಯಾಯಿತಿ, ವಿನಿಮಯ ಬೋನಸ್ ಲಭ್ಯವಿದ್ದು, ಹೊಸ ಆಫರ್‌ಗಳು ಮುಂದಿನ ಕೆಲವೇ ದಿನಗಳ ಕಾಲ ಮಾತ್ರ ಲಭ್ಯವಿರಲಿವೆ.

ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಫೋಕ್ಸ್‌ವ್ಯಾಗನ್

ಹೊಸ ಆಫರ್‌ಗಳಲ್ಲಿ ಫೋಕ್ಸ್‌ವ್ಯಾಗನ್ ಕಂಪನಿಯು ಹೈ ಎಂಡ್ ಮಾದರಿಗಳಾದ ಟಿ-ರಾಕ್ ಮತ್ತು ಟಿಗ್ವಾನ್ ಕಾರುಗಳ ಮೇಲೆ ಯಾವುದೇ ಆಫರ್ ನೀಡಿಲ್ಲವಾದರೂ ನಿಗದಿತ ಅವಧಿಯಲ್ಲಿ ಕಾರು ಖರೀದಿಸುವ ಗ್ರಾಹಕರಿಗೆ ಹೆಚ್ಚುವರಿ ಸರ್ವಿಸ್ ಸೇವೆಗಳು ಲಭ್ಯವಾಗಲಿವೆ ಎನ್ನಲಾಗಿದೆ.

ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಫೋಕ್ಸ್‌ವ್ಯಾಗನ್

ಇನ್ನು ಫೋಕ್ಸ್‌ವ್ಯಾಗನ್ ಕಂಪನಿಯು ಪೊಲೊ ಹ್ಯಾಚ್‌ಬ್ಯಾಕ್ ಮತ್ತು ವೆಂಟೊ ಸೆಡಾನ್ ಕಾರುಗಳಲ್ಲಿ ಬಿಡುಗಡೆ ಮಾಡಲಾದ ರೆಡ್ ಅಂಡ್ ವೈಟ್ ಆವೃತ್ತಿಗಳು ಸಾಕಷ್ಟು ಬೇಡಿಕೆ ಪಡೆದುಕೊಂಡಿದ್ದು, ಹೊಸ ಬಣ್ಣದ ಆಯ್ಕೆಗಳು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿವೆ.

MOST READ: 2021ರಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಬಹುನೀರಿಕ್ಷಿತ ಎಸ್‌ಯುವಿ ಕಾರುಗಳಿವು..!

ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಫೋಕ್ಸ್‌ವ್ಯಾಗನ್

ಸ್ಪೆಷಲ್ ಎಡಿಷನ್ ಪೊಲೊ ಹ್ಯಾಚ್‌ಬ್ಯಾಕ್ ಮತ್ತು ವೆಂಟೊ ಸೆಡಾನ್ ಕಾರುಗಳು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.19 ಲಕ್ಷಕ್ಕೆ ಮತ್ತು 11.49 ಲಕ್ಷಕ್ಕೆ ಖರೀದಿಗೆ ಲಭ್ಯವಿದ್ದು, ಹೊಸ ಕಾರುಗಳು ಬಣ್ಣಗಳ ಆಯ್ಕೆ ಹೊರತುಪಡಿಸಿ ಸ್ಟ್ಯಾಂಡರ್ಡ್ ಮಾದರಿಯಲ್ಲೇ ತಾಂತ್ರಿಕ ಅಂಶಗಳನ್ನು ಪಡೆದುಕೊಂಡಿವೆ.

ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಫೋಕ್ಸ್‌ವ್ಯಾಗನ್

ರೆಡ್ ಆ್ಯಂಡ್ ವೈಟ್ ಪೊಲೊ ಮತ್ತು ವೆಂಟೊ ಕಾರುಗಳ ಮಾದರಿಗಳಿಗಾಗಿ ಯಾವುದೇ ಹೆಚ್ಚುವರಿ ದರ ವಿಧಿಸದ ಫೋಕ್ಸ್‌ವ್ಯಾಗನ್ ಕಂಪನಿಯು ಸ್ಟ್ಯಾಂಡರ್ಡ್ ಮಾದರಿಯಲ್ಲೇ ಮಾರಾಟ ಮಾಡಲಿದ್ದು, ಸ್ಪೆಷಲ್ ಎಡಿಷನ್ ಮಾದರಿಗಳು ಹೈ ಎಂಡ್ ವೆರಿಯೆಂಟ್‌ಗಳಲ್ಲಿ ಪರಿಚಯಿಸಲಾಗಿದೆ.

MOST READ: ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ರೇಟಿಂಗ್ಸ್ ಪಡೆದುಕೊಂಡ ನಿಸ್ಸಾನ್ ಮ್ಯಾಗ್ನೈಟ್

ವಿವಿಧ ಕಾರುಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಿಸಿದ ಫೋಕ್ಸ್‌ವ್ಯಾಗನ್

ಪೊಲೊ ಮತ್ತು ವೆಂಟೊ ಹೈಲೈನ್ ಆಟೋಮ್ಯಾಟಿಕ್ ವೆರಿಯೆಂಟ್‌ಗಳಲ್ಲಿ ಸ್ಪೆಷಲ್ ಎಡಿಷನ್ ಆಫರ್ ಮಾಡಲಾಗುತ್ತಿದ್ದು, ರೆಡ್ ಆ್ಯಂಡ್ ವೈಟ್ ಮಾದರಿಯು ಫ್ಯಾಶ್ ರೆಡ್, ಸನ್‌ಸೆಟ್ ರೆಡ್ ಮತ್ತು ಕ್ಯಾಂಡಿ ವೈಟ್ ಬಣ್ಣಗಳನ್ನು ಆಧರಿಸಿ ಸ್ಪೆಷಲ್ ಎಡಿಷನ್ ಅಭಿವೃದ್ದಿಗೊಳಿಸಿದೆ.

Article Published On: Thursday, February 11, 2021, 22:13 [IST]
English summary
Volkswagen Offers Great Discounts On Selected Models In 2021 February. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+