ಜನವರಿ 1ರಿಂದ ಕಾರುಗಳ ಬೆಲೆಯಲ್ಲಿ ಶೇ.5 ರಷ್ಟು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಫೋಕ್ಸ್‌ವ್ಯಾಗನ್

ಫೋಕ್ಸ್‌ವ್ಯಾಗನ್ ಇಂಡಿಯಾ ಕಂಪನಿಯು ಹೊಸ ವರ್ಷದಿಂದಲೇ ಕಾರುಗಳ ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ್ದು, ಜನವರಿ 1ರಿಂದಲೇ ಹೊಸ ಕಾರುಗಳ ಬೆಲೆಯಲ್ಲಿ ವಿವಿಧ ಮಾದರಿಗಳಿಗೆ ಅನುಗುಣವಾಗಿ ಶೇ.5 ರಷ್ಟು ದರ ಹೆಚ್ಚಿಸುವುದಾಗಿ ಘೋಷಣೆ ಮಾಡಿದೆ.

ಜನವರಿ 1ರಿಂದ ಕಾರುಗಳ ಬೆಲೆಯಲ್ಲಿ ಶೇ.5 ರಷ್ಟು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಫೋಕ್ಸ್‌ವ್ಯಾಗನ್

ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ವೆಚ್ಚ ಹೆಚ್ಚುತ್ತಿರುವ ಪರಿಣಾಮ ಹೊಸ ವಾಹನಗಳ ಬೆಲೆಯು ನಿರಂತರವಾಗಿ ಏರಿಕೆಯಾಗುತ್ತಿದ್ದು, ಪ್ರೀಮಿಯಂ ಕಾರುಗಳ ಮಾರಾಟದಲ್ಲಿ ಮುಂಚೂಣಿಯಲ್ಲಿರುವ ಫೋಕ್ಸ್‌ವ್ಯಾಗನ್ ಇಂಡಿಯಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆ ಹೆಚ್ಚಿಸಲು ನಿರ್ಧರಿಸಿದೆ.

ಜನವರಿ 1ರಿಂದ ಕಾರುಗಳ ಬೆಲೆಯಲ್ಲಿ ಶೇ.5 ರಷ್ಟು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಫೋಕ್ಸ್‌ವ್ಯಾಗನ್

ಆಟೋ ಬಿಡಿಭಾಗಗಳ ಕೊರತೆ ಮತ್ತು ಹೆಚ್ಚುತ್ತಿರುವ ವೆಚ್ಚಗಳನ್ನು ನಿರ್ವಹಿಸಲು ಪ್ರಮುಖ ವಾಹನ ತಯಾರಕ ಕಂಪನಿಗಳು ಹೊಸ ವಾಹನಗಳ ಬೆಲೆಯನ್ನು ನಿರಂತರವಾಗಿ ಪರಿಷ್ಕರಣೆ ಮಾಡುತ್ತಿದ್ದು, ನಿರಂತರ ಬೆಲೆ ಏರಿಕೆ ಪರಿಣಾಮ ಹೊಸ ವಾಹನಗಳ ಮಾಲೀಕತ್ವವು ದಿನದಿಂದ ದಿನಕ್ಕೆ ದುಬಾರಿಯಾಗಿ ಪರಿಣಮಿಸಿದೆ.

ಜನವರಿ 1ರಿಂದ ಕಾರುಗಳ ಬೆಲೆಯಲ್ಲಿ ಶೇ.5 ರಷ್ಟು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಫೋಕ್ಸ್‌ವ್ಯಾಗನ್

ಕಳೆದ ಕೆಲವು ತಿಂಗಳುಗಳಲ್ಲಿ ಹೊಸ ವಾಹನಗಳ ಬೆಲೆಯಲ್ಲಿ ಸಾಕಷ್ಟು ಏರಿಕೆಯಾಗಿದ್ದು, ಫೋಕ್ಸ್‌ವ್ಯಾಗನ್ ಮತ್ತು ಸಹಭಾಗಿತ್ವ ಕಂಪನಿಯಾಗಿರುವ ಸ್ಕೋಡಾ ಇಂಡಿಯಾ ಕಂಪನಿಯು ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಬೆಲೆಯಲ್ಲಿ ಹೆಚ್ಚಳ ಮಾಡುತ್ತಿದೆ.

ಜನವರಿ 1ರಿಂದ ಕಾರುಗಳ ಬೆಲೆಯಲ್ಲಿ ಶೇ.5 ರಷ್ಟು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಫೋಕ್ಸ್‌ವ್ಯಾಗನ್

ಮಾಹಿತಿಗಳ ಪ್ರಕಾರ ಫೋಕ್ಸ್‌ವ್ಯಾಗನ್ ಕಂಪನಿಯು ತನ್ನ ಕಾರುಗಳ ಬೆಲೆಯನ್ನು ಶೇ.2 ರಿಂದ ಶೇ. 5 ರಷ್ಟು ಹೆಚ್ಚಳ ಮಾಡಬಹುದು ಎನ್ನಲಾಗಿದ್ದು, ಹೆಚ್ಚಳವಾದ ಹೊಸ ದರ ಪಟ್ಟಿ ಶೀಘ್ರದಲ್ಲೇ ಪ್ರಕಟವಾಗಲಿದೆ. ವಿವಿಧ ವೆರಿಯೆಂಟ್‌ಗಳಿಗೆ ಅನುಗುಣವಾಗಿ ಹೊಸ ಕಾರಿನ ಬೆಲೆಯು ರೂ.15 ಸಾವಿರದಿಂದ ರೂ. 50 ಸಾವಿರ ತನಕ ಹೆಚ್ಚಳವಾಗಬಹುದಾಗಿದ್ದು, ಸೆಮಿಕಂಡಕ್ಟರ್ ಕೊರತೆಯೇ ಕಾರುಗಳ ಬೆಲೆಯಲ್ಲಿ ಹೆಚ್ಚಿನ ಏರಿಕೆಗೆ ಪ್ರಮುಖ ಕಾರಣವಾಗಿದೆ.

ಜನವರಿ 1ರಿಂದ ಕಾರುಗಳ ಬೆಲೆಯಲ್ಲಿ ಶೇ.5 ರಷ್ಟು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಫೋಕ್ಸ್‌ವ್ಯಾಗನ್

ಕೋವಿಡ್‌ ಪರಿಣಾಮ ಜಾಗತಿಕ ಮಾರುಕಟ್ಟೆಯಲ್ಲಿ ಆಟೋ ಬಿಡಿಭಾಗಗಳ ಕೊರತೆಯು ಬೆಲೆ ಹೆಚ್ಚಳಕ್ಕೆ ಪ್ರಮುಖ ಕಾರಣವಾಗುತ್ತಿದ್ದು, ಹೆಚ್ಚುತ್ತಿರುವ ವೆಚ್ಚಗಳ ನಿರ್ವಹಣೆಗಾಗಿ ಆಟೋ ಕಂಪನಿಗಳು ನಿರಂತರವಾಗಿ ಬೆಲೆ ಪರಿಷ್ಕರಣೆ ಮಾಡುತ್ತಿವೆ.

ಜನವರಿ 1ರಿಂದ ಕಾರುಗಳ ಬೆಲೆಯಲ್ಲಿ ಶೇ.5 ರಷ್ಟು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಫೋಕ್ಸ್‌ವ್ಯಾಗನ್

ಕೋವಿಡ್‌ಗೂ ಮುನ್ನ ಪ್ರತಿ ಆರು ತಿಂಗಳಿಗೆ ಒಂದು ಬಾರಿ ವಾಹನಗಳ ದರ ಪರಿಷ್ಕರಣೆ ಮಾಡುತ್ತಿದ್ದ ಆಟೋ ಕಂಪನಿಗಳು ಇದೀಗ ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ದರ ಹೆಚ್ಚಿಸುತ್ತಿದ್ದು, 2021ರಲ್ಲೇ ಫೋಕ್ಸ್‌ವ್ಯಾಗನ್ ಮತ್ತು ಸ್ಕೋಡಾ ಸೇರಿದಂತೆ ಪ್ರಮುಖ ಕಾರು ಕಂಪನಿಗಳು ಮೂರರಿಂದ ನಾಲ್ಕು ಬಾರಿ ದರ ಹೆಚ್ಚಿಸಿವೆ.

ಜನವರಿ 1ರಿಂದ ಕಾರುಗಳ ಬೆಲೆಯಲ್ಲಿ ಶೇ.5 ರಷ್ಟು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಫೋಕ್ಸ್‌ವ್ಯಾಗನ್

ಪ್ರತಿ ಮೂರು ತಿಂಗಳಿಗೆ ಒಂದು ಬಾರಿ ಬಹುತೇಕ ವಾಹನ ತಯಾರಕ ಕಂಪನಿಗಳು ತಮ್ಮ ವಾಹನಗಳ ಮೂಲ ಬೆಲೆಯಲ್ಲಿ ಶೇ.1 ರಿಂದ ಶೇ.3 ರಷ್ಟು ಬೆಲೆ ಹೆಚ್ಚಿಸುತ್ತಿರುವುದರಿಂದ ಕಳೆದ ಕೆಲ ತಿಂಗಳಿನಲ್ಲಿ ಬಜೆಟ್ ಕಾರುಗಳ ಬೆಲೆಯಲ್ಲಿ ಸರಾಸರಿಯಾಗಿ ರೂ. 40 ಸಾವಿರದಿಂದ ರೂ.1 ಲಕ್ಷದಷ್ಟು ಮತ್ತು ಮಧ್ಯಮ ಕ್ರಮಾಂಕದ ಕಾರುಗಳು ರೂ. 50 ಸಾವಿರದಿಂದ ರೂ. 1.20 ಲಕ್ಷದಷ್ಟು ಬೆಲೆ ಹೆಚ್ಚಳವಾಗಿವೆ.

ಜನವರಿ 1ರಿಂದ ಕಾರುಗಳ ಬೆಲೆಯಲ್ಲಿ ಶೇ.5 ರಷ್ಟು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಫೋಕ್ಸ್‌ವ್ಯಾಗನ್

ವಿದೇಶಿ ಮಾರುಕಟ್ಟೆಗಳಿಂದ ಪ್ರಮುಖವಾಗಿ ಆಮದುಗೊಳ್ಳುವ ಎಲೆಕ್ಟ್ರಾನಿಕ್ ಸೆಮಿ ಕಂಡಕ್ಟರ್‌ಗಳ ಬೆಲೆ ಹೆಚ್ಚಳವಾಗುತ್ತಿರುವ ಪರಿಣಾಮವೇ ಹೊಸ ವಾಹನ ಖರೀದಿಯು ಮತ್ತಷ್ಟು ಹೊರೆಯಾಗುತ್ತಿದೆ.

ಜನವರಿ 1ರಿಂದ ಕಾರುಗಳ ಬೆಲೆಯಲ್ಲಿ ಶೇ.5 ರಷ್ಟು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಫೋಕ್ಸ್‌ವ್ಯಾಗನ್

ಇನ್ನು ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಗಮನಸೆಳೆಯುತ್ತಿರುವ ಫೋಕ್ಸ್‌ವ್ಯಾಗನ್ ಟೈಗುನ್ ಕಾರು ಬಿಡುಗಡೆಯ ನಂತರ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ದುಬಾರಿ ಬೆಲೆ ನಡುವೆಯೂ ಪ್ರತಿಸ್ಪರ್ಧಿ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಜನವರಿ 1ರಿಂದ ಕಾರುಗಳ ಬೆಲೆಯಲ್ಲಿ ಶೇ.5 ರಷ್ಟು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಫೋಕ್ಸ್‌ವ್ಯಾಗನ್

ಟೈಗುನ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಫೋಕ್ಸ್‌ವ್ಯಾಗನ್ ಕಂಪನಿಯು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಗೊಳಿಸಿದ್ದು, ಹೊಸ ಕಾರಿನ ಬುಕ್ಕಿಂಗ್ ಈ ವರ್ಷದ ಕೊನೆಯ ತನಕವು ಪೂರ್ಣಗೊಂಡಿದೆ. ಕಂಪನಿಯು ಸದ್ಯ ಬುಕ್ಕಿಂಗ್ ಆಧರಿಸಿ ಹೊಸ ಕಾರಿನ ವಿತರಣೆ ಆರಂಭಿಸಿದ್ದು, ಪ್ರತಿ ತಿಂಗಳು ಕಂಪನಿಯು ಮೂರರಿಂದ ನಾಲ್ಕು ಸಾವಿರ ಯುನಿಟ್ ವಿತರಿಸುವ ಯೋಜನೆಯಲ್ಲಿದೆ.

ಜನವರಿ 1ರಿಂದ ಕಾರುಗಳ ಬೆಲೆಯಲ್ಲಿ ಶೇ.5 ರಷ್ಟು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಫೋಕ್ಸ್‌ವ್ಯಾಗನ್

ಹೊಸ ಕಾರು ದುಬಾರಿ ಬೆಲೆ ನಡುವೆಯೂ ನೀರಿಕ್ಷೆಗೂ ಮೀರಿ ಬುಕ್ಕಿಂಗ್ ಪಡೆದುಕೊಂಡಿದ್ದು, ಹೊಸ ಕಾರಿನ ಮೂಲಕ ಫೋಕ್ಸ್‌ವ್ಯಾಗನ್ ಕಂಪನಿಯು ನವೆಂಬರ್ ಅವಧಿಯ ಕಾರು ಮಾರಾಟದಲ್ಲಿ ಶೇ.123ರಷ್ಟು ಬೆಳವಣಿಗೆ ಸಾಧಿಸಿದೆ.

ಜನವರಿ 1ರಿಂದ ಕಾರುಗಳ ಬೆಲೆಯಲ್ಲಿ ಶೇ.5 ರಷ್ಟು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಫೋಕ್ಸ್‌ವ್ಯಾಗನ್

ಫೋಕ್ಸ್‌ವ್ಯಾಗನ್ ಕಂಪನಿಯು ಹೊಸ ಟೈಗುನ್ ಮೂಲಕ ನವೆಂಬರ್ ತಿಂಗಳಿನಲ್ಲಿ 2849 ಯುನಿಟ್ ಮಾರಾಟ ಮಾಡಿದ್ದು, ಅಕ್ಟೋಬರ್ ಅವಧಿಯಲ್ಲಿನ ಕಾರು ಮಾರಾಟಕ್ಕಿಂತಲೂ ಶೇ.3 ರಷ್ಟು ಮತ್ತು ಕಳೆದ ವರ್ಷದ ನವೆಂಬರ್ ಅವಧಿಯಲ್ಲಿನ ಕಾರು ಮಾರಾಟಕ್ಕಿಂತ ಶೇ. 123ರಷ್ಟು ಹೆಚ್ಚು ಬೇಡಿಕೆ ಪಡೆದುಕೊಂಡಿದೆ.

ಜನವರಿ 1ರಿಂದ ಕಾರುಗಳ ಬೆಲೆಯಲ್ಲಿ ಶೇ.5 ರಷ್ಟು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಫೋಕ್ಸ್‌ವ್ಯಾಗನ್

ಟೈಗುನ್ ಜೊತೆ ವೆಂಟೊ, ಪೊಲೊ ಕೂಡಾ ಉತ್ತಮ ಬೇಡಿಕೆ ಪಡೆದುಕೊಂಡಿದ್ದು, ಇದೀಗ ಹೊಸದಾಗಿ ಬಿಡುಗಡೆಯಾಗಿರುವ ಟಿಗ್ವಾನ್ ಎಸ್‌ಯುವಿ ಮತ್ತಷ್ಟು ಬೇಡಿಕೆ ತಂದುಕೊಡುವ ನೀರಿಕ್ಷೆಯಿದೆ. ಜೊತೆಗೆ ಹೊಸ ಕಾರುಗಳನ್ನು ಸ್ಥಳೀಯವಾಗಿ ಉತ್ಪಾದನೆಗೊಂಡಿರುವ ಶೇ.95 ರಷ್ಟು ಬಿಡಿಭಾಗಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಆಮದು ಬಿಡಿಭಾಗಗಳನ್ನು ತಗ್ಗಿಸಿರುವುದರಿಂದ ಬೆಲೆಯಲ್ಲೂ ಕೂಡಾ ಪ್ರತಿಸ್ಪರ್ಧಿ ಮಾದರಿಗಳಿಂತಲೂ ಉತ್ತಮವಾಗಿವೆ.

ಜನವರಿ 1ರಿಂದ ಕಾರುಗಳ ಬೆಲೆಯಲ್ಲಿ ಶೇ.5 ರಷ್ಟು ಬೆಲೆ ಹೆಚ್ಚಳಕ್ಕೆ ನಿರ್ಧರಿಸಿದ ಫೋಕ್ಸ್‌ವ್ಯಾಗನ್

ಹೊಸ ಫೋಕ್ಸ್‌ವ್ಯಾಗನ್ ಟೈಗುನ್ ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಬಿಡುಗಡೆಯ ನಂತರ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಮಾದರಿಗಾಗಿ ಕಂಪನಿಯು ಇದುವರೆಗೆ ಸುಮಾರು 20 ಸಾವಿರ ಯುನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡಿದೆ.

More from DriveSpark

Article Published On: Thursday, December 23, 2021, 16:11 [IST]
English summary
Volkswagen india to increase car price from january 1 st 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+