Just In
Don't Miss!
- News
ತೊಂದರೆಗೊಳಗಾಗಿರುವ ರಾಜ್ಯಗಳಿಗೆ ಮುಂದಿನ ವಾರದೊಳಗೆ ಮತ್ತಷ್ಟು ಲಸಿಕೆ: ಕೇಂದ್ರ
- Finance
UMANG APP: ಇಪಿಎಫ್ಗೆ ಸಂಬಂಧಿಸಿದ ಆ್ಯಪ್, ವೈಶಿಷ್ಟ್ಯಗಳೇನು ತಿಳಿಯಿರಿ
- Movies
ಜಾಕಿ ಚಾನ್ ತಮ್ಮ ಮಗನಿಗೆ ಸಾವಿರಾರು ಕೋಟಿ ಆಸ್ತಿಯನ್ನು ಕೊಡುತ್ತಿಲ್ಲವೇಕೆ?
- Lifestyle
ಭಾನುವಾರದ ಭವಿಷ್ಯ: ಈ ದಿನ ಯಾವ ರಾಶಿಯವರಿಗೆ ಅದೃಷ್ಟದ ದಿನ
- Sports
ಹೈದರಾಬಾದ್ ಸೋಲಿಸಿ ಅಗ್ರ ಸ್ಥಾನಕ್ಕೇರಿದ ಮುಂಬೈ ಇಂಡಿಯನ್ಸ್
- Education
Ninasam Diploma Admission 2020-21: ಮೇ ತಿಂಗಳಲ್ಲಿ ನೀನಾಸಂ ಡಿಪ್ಲೋಮಾ ಪ್ರವೇಶಾತಿ ಆರಂಭ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಶೀಘ್ರದಲ್ಲೇ ಭಾರತಕ್ಕೆ ಬರಲಿದೆ 2021ರ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ
ಜರ್ಮನಿ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ಭಾರತೀಯ ಮಾರುಕಟ್ಟೆಯಲ್ಲಿ ಹೊಸ ನಾಲ್ಕು ಎಸ್‍ಯುವಿಗಳನ್ನು ಬಿಡುಗಡೆಗೊಳಿಸಿವೆ. ಇದರಲ್ಲಿ 2021ರ ಟಿ-ರಾಕ್ ಮಿಡ್ ಎಸ್‍ಯುವಿಯು ಕೂಡ ಒಳಗೊಂಡಿದೆ. ಟಿ-ರಾಕ್ ಅನ್ನು ಕಳೆದ ವರ್ಷ ಸೀಮಿತ ಸಂಖ್ಯೆಯಲ್ಲಿ ಭಾರತಕ್ಕೆ ತರಲಾಗಿತ್ತು.

ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿಯನ್ನು 2020ರ ಮಾರ್ಚ್ ತಿಂಗಳಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿಗೆ ಭಾರತೀಯ ಮಾರುಕಟ್ಟೆಯಲ್ಲಿ ಕಡಿಮೆ ಅವಧಿಯಲ್ಲಿ ಭರ್ಜರಿ ಬೇಡಿಕೆಯನ್ನು ಪಡೆದುಕೊಂಡಿತ್ತು. ಭಾರತದಲ್ಲಿ ಟಿ-ರಾಕ್ ಎಸ್‍ಯುವಿಯ ಮೊದಲ ಬ್ಯಾಚ್ ಆಗಿ 1,000 ಯುನಿಟ್‍ಗಳನ್ನು ಕಳೆದ ವರ್ಷ ಬಿಡುಗಡೆಗೊಳಿಸಿದ್ದರು.

ಈ ಹೊಸ ಟಿ-ರಾಕ್ ಎಸ್‍ಯುವಿಯಲ್ಲಿ ಐಷಾರಾಮಿ ಫೀಚರ್ಸ್ ಹೊಂದಿದೆ. ಫೋಕ್ಸ್‌ವ್ಯಾಗನ್ ಕಂಪನಿಯು ಈ ಎಸ್‍ಯುವಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ವರದಿಗಳ ಪ್ರಕಾರ 2021ರ ಟಿ-ರಾಕ್ ಎಸ್‍ಯುವಿಯನ್ನು ಏಪ್ರಿಲ್ 1ರಂದು ಬಿಡುಗಡೆಗೊಳಿಸಬಹುದು.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್‍ಯುವಿ

ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ ಎಲ್ಲಾ ಯುನಿಟ್‍ಗಳು ಕಡಿಮೆ ಅವಧಿಯಲ್ಲಿ ಮಾರಾಟಗೊಳಿಸಿತ್ತು. ಇದರಿಂದ ಫೋಕ್ಸ್‌ವ್ಯಾಗನ್ ಕಂಪನಿಯು ಟಿ-ರಾಕ್ ಎಸ್‍ಯುವಿಯ ಬುಕ್ಕಿಂಗ್ ಸ್ವೀಕಿರಿಸುವುದನ್ನು ನಿಲ್ಲಿಸಲಾಗಿತ್ತು.

ಮೊದಲ ಬ್ಯಾಚ್‌ನ ಯುನಿಟ್‍ಗಳು ಮಾರಾಟವಾಗಿರುವುದರಿಂದ ಎರಡನೇ ಬ್ಯಾಚ್ ಆಮದುಮಾಡಿಕೊಳ್ಳಲಿದೆ. ಫೋಕ್ಸ್‌ವ್ಯಾಗನ್ ಕಂಪನಿಯು ಎರಡನೇ ಬ್ಯಾಚ್‌ನಲ್ಲಿ 2,500 ಯುನಿಟ್‍ಗಳನ್ನು ಸಿಬಿಯು ಮಾರ್ಗದ ಮೂಲಕ ಆಮದುಮಾಡಿಕೊಳ್ಳಲಿದೆ. ಇದೀಗ ಫೋಕ್ಸ್‌ವ್ಯಾಗನ್ ಕಂಪನಿ ತನ್ನ ಟಿ-ರಾಕ್ ಎಎಸ್‍ಯುವಿ ಖರೀದಿಗೆ ಬುಕ್ಕಿಂಗ್ ಪುನಾರಂಭಿಸಿದೆ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

2021ರ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿಯು ಬಿಡುಗಡೆಯಾದ ಬಳಿಕ ಟೈಗನ್ ಮತ್ತು ಟಿಗ್ವಾನ್ 5-ಸೀಟರ್ ಮಾದರಿಗಳ ನಡುವೆ ಟಿ-ರಾಕ್ ಅನ್ನು ಇರಿಸಲಾಗುತ್ತದೆ. ಫೋಕ್ಸ್‌ವ್ಯಾಗನ್ ಭಾರತದಲ್ಲಿ ಹೆಚ್ಚಾಗಿ ಎಸ್‍ಯುವಿಗಳನ್ನು ಬಿಡುಗಡೆಗೊಳಿಸಲಾಗುತ್ತಿದೆ.

ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಸ್ಲೀಕ್ ಗ್ರಿಲ್ ಅನ್ನು ಹೊಂದಿದೆ ಮತ್ತು ಮುಂಭಾಗದ ಎರಡೂ ಬದಿಯಲ್ಲಿ ಎಲ್‍ಇಡಿ ಪ್ರೊಜೆಕ್ಟರ್ ಹೆಡ್‍ಲ್ಯಾಂಪ್‍ಗಳನ್ನು ಅಳವಡಿಸಲಾಗಿದೆ. ಈ ಎಸ್‍ಯುವಿನ ಹೊಸ ಬಂಪರ್ ಅನ್ನು ಹೊಂದಿದ್ದು, ದೊಡ್ಡ ಮೆಡ್ ಗ್ರಿಲ್ ಏರ್ ಇನ್‍ಟೇಕ್ ಹೊಂದಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಈ ಎಸ್‍ಯುವಿಯ ಮುಂಭಾಗದಲ್ಲಿ ಎಲ್‍ಇಡಿ ಡಿಆರ್‍ಎಲ್‍ಗಳನ್ನು ಸಹ ಅಳವಡಿಸಲಾಗಿದೆ. ಹೊಸ ಟಿ-ರಾಕ್ ಎಸ್‍ಯುವಿನಲ್ಲಿ 5 ಸ್ಪೋಕ್ ಅಲಾಯ್ ವ್ಹೀಲ್, ಹಿಂಭಾಗದಲ್ಲಿ ರೂಫ್-ಮೌಂಟೆಡ್ ಸ್ಪಾಯ್ಲರ್ ಮತ್ತು ಸ್ಲೀಕ್ ಎಲ್‍ಇಡಿ ಟೈಲ್ ಲೈಟ್‍ಗಳನ್ನು ಹೊಂದಿದೆ. ಹಿಂಭಾಗದಲ್ಲಿ ಬಂಪರ್ ಮತ್ತು ಸ್ಕಫ್ ಪ್ಲೇಟ್‍ಗಳನ್ನು ಒಳಗೊಂಡಿದೆ.

ಈ ಎಸ್‍ಯುವಿಯ ಪ್ರೀಮಿಯಂ ಫೀಚರ್ಸ್‌ಗಳಾದ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವೆನ್ನಾ ಲೆದರ್ ಸೀಟುಗಳು, ಫ್ರಂಟ್ ಆ್ಯಂಡ್ ರೇರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿದೆ. ಇನ್ನು ಸುರಕ್ಷತೆಗಾಗಿ ಎಬಿಎಸ್ ಜೊತೆ ಇಬಿಡಿ, 6 ಏರ್‌ಬ್ಯಾಗ್‌ಗಳು, ಟಯರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರೇರ್ ಪಾರ್ಕಿಂಗ್ ಕ್ಯಾಮೆರಾ ಸೇರಿದಂತೆ ಹಲವಾರು ಪ್ರೀಮಿಯಂ ಸೌಲಭ್ಯಗಳನ್ನು ಒಳಗೊಂಡಿವೆ.

ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿನಲ್ಲಿ 1.5-ಲೀಟರ್ 4 ಸಿಲಿಂಡರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ನೀಡಿದೆ. ಈ ಎಂಜಿನ್ 148 ಬಿಹೆಚ್‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಅನ್ನು ನೀಡಲಾಗಿದೆ.

ಫೋಕ್ಸ್‌ವ್ಯಾಗನ್‍ನ ಟಿ-ರಾಕ್ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಜೀಪ್ ಕಂಪಾಸ್, ಕಿಯಾ ಸೆಲ್ಟೋಸ್ ಮತ್ತು ಸ್ಕೋಡಾ ಕರೋಕ್ ಎಸ್‍ಯುವಿಗಳಿಗೆ ಪೈಪೋಟಿ ನೀಡುತ್ತದೆ. 2021ರ ಫೋಕ್ಸ್‌ವ್ಯಾಗನ್‍ನ ಟಿ-ರಾಕ್ ಖರೀದಿಸಲು ಬಯಸುವವರು ಹತ್ತಿರದ ಫೋಕ್ಸ್‌ವ್ಯಾಗನ್‍ನ ಡೀಲರ್ ಬಳಿ ತೆರಳಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.