ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿ

ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ತನ್ನ ಹೊಸ ಟಿಗ್ವಾನ್ ಫೇಸ್‍‍ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಪರಿಚಯಿಸಲಿದೆ. ಟಿಗ್ವಾನ್ ಎಸ್‍ಯುವಿಯು ಭಾರತದಲ್ಲಿ ಹೊಸ ಅವತಾರದಲ್ಲಿ ಬಿಡುಗಡೆಯಾಗಲಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿ

ಫೋಕ್ಸ್‌ವ್ಯಾಗನ್ ಕಂಪನಿ ಈ ಹೊಸ ಟಿಗ್ವಾನ್ 5 ಸೀಟರ್ ಅನ್ನು ಇದೇ ತಿಂಗಳಲ್ಲಿ ಬಿಡುಗಡೆಗೊಳಿಸಲಿದೆ ಎಂದು ವರದಿಯಾಗಿದೆ. ಟಿಗ್ವಾನ್ ಫೇಸ್‌ಲಿಫ್ಟ್ ಅನ್ನು 2020ರಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಧಿಕೃತವಾಅನಾವರಣಗೊಳಿಸಲಾಯಿತು. ಇದು ದೊಡ್ಡದಾದ ಕ್ರೋಮ್ ಗ್ರಿಲ್ ಮತ್ತು ಟ್ವಿನ್-ಪಾಡ್ ಎಲ್ಇಡಿ ಹೆಡ್‌ಲೈಟ್‌ಗಳನ್ನು ಪಡೆಯುತ್ತದೆ, ಅದು ಎಲ್ಇಡಿ ಡೇಟೈಮ್ ರನ್ನಿಂಗ್ ಲೈಟ್‌ಗಳನ್ನು ಹೊಂದಿರುತ್ತದೆ. ಮುಂಭಾಗದ ಬಂಪರ್ ಅನ್ನು ಸಹ ನವೀಕರಿಸಲಾಗಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿ

ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿಯನ್ನು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ 2007ರಲ್ಲಿ ಮೊದಲ ಬಾರಿಗೆ ಅನಾವರಣಗೊಳಿಸಿದರು. ಹಿಂದಿನ ಮಾದರಿ ಟಿಗ್ವಾನ್ ಎಸ್‍ಯುವಿಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದಾಗ 6 ದಶಲಕ್ಷಕ್ಕೂ ಹೆಚ್ಚಿನ ಯುನಿಟ್ ಗಳು ಮಾರಾಟವಾಗಿತ್ತು.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿ

ಇನ್ನು ಈ ಹೊಸ ಟಿಗ್ವಾನ್ ಫೇಸ್‍‍ಲಿಫ್ಟ್ ಎಸ್‍ಯುವಿಯ ಮುಂಭಾಗದಲ್ಲಿ ನವೀಕರಿಸಿದ ಗ್ರಿಲ್ ಅನ್ನು ಅಳವಡಿಸಿದ್ದಾರೆ. ಟಿಗ್ವಾನ್ ಮುಂಭಾಗ ಏರ್ ಡ್ಯಾಮ್ ಜೊತೆ ಸ್ಪೋರ್ಟಿಯರ್ ಫ್ರಂಟ್ ಬಂಪರ್ ಅನ್ನು ಸಹ ಒಳಗೊಂಡಿವೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿ

ಈ ಹೊಸ ಎಸ್‍ಯುವಿಯಲ್ಲಿ ಹೊಸ ಟೈಲ್ ಲೈಟ್, ಮರುವಿನ್ಯಾಸಗೊಳಿಸಿದ ವ್ಹೀಲ್ ಗಳು ಮತ್ತು ಹಿಂಭಾಗದಲ್ಲಿ ನವೀಕರಿಸಿದ ಬಂಪರ್ ಅನ್ನು ಅಳವಡಿಸಲಾಗಿದೆ. ಇನ್ನು ಟಿಗ್ವಾನ್ ಬ್ಯಾಡ್ಜಿಂಗ್ ಅನ್ನು ಟೈಲ್‌ಗೇಟ್‌ನ ಮಧ್ಯಭಾಗಕ್ಕೆ ಸ್ಥಳಾಂತರಿಸಲಾಗಿದೆ. ಈ ಎಸ್‍ಯುವಿಯ ಹಿಂಭಾಗದಲ್ಲಿ ಹೆಚ್ಚುವರಿ ಕ್ರೋಮ್ ಬಿಟ್‌ಗಳನ್ನು ಅಳವಡಿಸಲಾಗಿದೆ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿ

ಇನ್ನು ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಕೂಡ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ. ಈ ಟಿಗ್ವಾನ್ ಎಸ್‍ಯುವಿಯಲ್ಲಿ ಇನ್ಫೋಟೈನ್‌ಮೆಂಟ್ ಸಿಸ್ಟಂನ ಇತ್ತೀಚಿನ ಆವೃತ್ತಿ ಮತ್ತು ದೊಡ್ಡ ಟಚ್‌ಸ್ಕ್ರೀನ್‌ಗಳನ್ನು ಒಳಗೊಂಡಿದೆ. ಟಿಗ್ವಾನ್ ಫೇಸ್‍‍ಲಿಫ್ಟ್ ಎಸ್‍ಯುವಿಯಲ್ಲಿ ಸೆಂಟರ್ ಕನ್ಸೋಲ್‌ನಲ್ಲಿ ಯುಎಸ್‌ಬಿ-ಸಿ ಪೋರ್ಟ್‌ಗಳು, ಹೊಸ ಬಹು-ಬಣ್ಣದ ಆಂಬಿಯೆಂಟ್ ಲೈಟಿಂಗ್ ಮತ್ತು ಕ್ಲೈಮೆಂಟ್ ಕಂಟ್ರೋಲ್ ಅನ್ನು ಹೂಂದಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿ

ಟಿಗ್ವಾನ್ ಎಸ್‍ಯುವಿಯಲ್ಲಿ 2.0-ಲೀಟರ್, 4-ಸಿಲಿಂಡರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 184 ಬಿಹೆಚ್‍ಪಿ ಪವರ್ ಮತ್ತು 300 ಎನ್‌ಎಂ ಉತ್ಪಾದಿಸುತ್ತದೆ. ಇನ್ನು ಪ್ಲಗ್-ಇನ್ ಹೈಬ್ರಿಡ್ ರೂಪಾಂತರವು 241 ಬಿಹೆಚ್‍ಪಿ ಪವರ್ ಉತ್ಪಾದಿಸುತ್ತದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿ

ಎಂಟ್ರಿ-ಲೆವೆಲ್ ರೂಪಾಂತರಗಳಲ್ಲಿ 1.5-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗುತ್ತದೆ. ಈ ಎಂಜಿನ್ 147 ಬಿಹೆಚ್‌ಪಿ ಮತ್ತು 250 ಎನ್ಎಂ ಟಾರ್ಕ್ ಉತ್ಪಾದಿಸಬಹುದು. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನ್ಯುವಲ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗುತ್ತದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿ

ಈ ಹೊಸ ಟಿಗ್ವಾನ್ ಫೇಸ್‍‍ಲಿಫ್ಟ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಇದೇ ತಿಂಗಳಲ್ಲಿ ಬಿಡುಗಡೆಯಾಗಲಿದೆ. ಭಾರತದಲ್ಲಿ ಟಿಗ್ವಾನ್ ಫೇಸ್‍‍ಲಿಫ್ಟ್ ಎಸ್‍ಯುವಿಯನ್ನು ಫೋಕ್ಸ್‌ವ್ಯಾಗನ್ ಸ್ಮರ್ಧಾತ್ಮಕ ಬೆಲೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ.

Most Read Articles

Kannada
English summary
2021 Volkswagen Tiguan 5-Seater Launch In March. Read In Kannada.
Story first published: Wednesday, March 3, 2021, 21:14 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X