ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ 2021ರ Volkswagen Tiguan ಎಸ್‍ಯುವಿ

ಜರ್ಮನಿ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ತನ್ನ ಹೊಸ ಟಿಗ್ವಾನ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಈಗಾಗಲೇ ಅನಾವರಣಗೊಳಿಸಿದೆ ಈ ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಎಸ್‍ಯುವಿಗಳಲ್ಲಿ ಒಂದಾಗಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ 2021ರ Volkswagen Tiguan ಎಸ್‍ಯುವಿ

ಅಧಿಕೃತ ಬಿಡುಗಡೆಗೂ ಮುನ್ನ ಫೋಕ್ಸ್‌ವ್ಯಾಗನ್ ವೆಬ್‌ಸೈಟ್‌ನಲ್ಲಿ ಟಿಗ್ವಾನ್ ಫೇಸ್‌ಲಿಫ್ಟ್ ಎಸ್‍ಯುವಿಯ ಹೆಸರನ್ನು ಪಟ್ಟಿಮಾಡಿದೆ. ಫೋಕ್ಸ್‌ವ್ಯಾಗನ್ ಕಂಪನಿಯು 2021ರ ಟಿಗ್ವಾನ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಕೆಲವು ವರದಿಗಳ ಪ್ರಾಕರ ಈ ಟಿಗ್ವಾನ್ ಫೇಸ್‌ಲಿಫ್ಟ್ ಎಸ್‍ಯುವಿಯಯು ನವೆಂಬರ್ ತಿಂಗಳಲ್ಲಿ ಬಿಡುಗಡೆಗೊಳಿಸಬಹುದು. ಎಸ್‌ಯುವಿ ಡೀಸೆಲ್ ಎಂಜಿನ್ ಅನ್ನು ಕೈಬಿಡುತ್ತದೆ ಮತ್ತು ಪೆಟ್ರೋಲ್ ಎಂಜಿನ್‌ನೊಂದಿಗೆ ಮಾತ್ರ ಲಭ್ಯವಿರುತ್ತದೆ. ಇದು ಸಣ್ಣ ವಿನ್ಯಾಸ ಬದಲಾವಣೆಗಳನ್ನು ಮತ್ತು ವೈಶಿಷ್ಟ್ಯದ ನವೀಕರಣಗಳನ್ನು ಸಹ ಸ್ವೀಕರಿಸುತ್ತದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ 2021ರ Volkswagen Tiguan ಎಸ್‍ಯುವಿ

ಇನ್ನು ಈ ಟಿಗ್ವಾನ್ ಎಸ್‍ಯುವಿಯು ಭಾರತಕ್ಕೆ ಹೊಸದಲ್ಲ, ಈ ಹಿಂದೆ ಮಾರಾಟದಲ್ಲಿತ್ತು. ಆದರೆ ಇದೀಗ ಫೋಕ್ಸ್‌ವ್ಯಾಗನ್ ಕಂಪನಿಯು ಟಿಗ್ವಾನ್ ಎಸ್‍ಯುವಿಯನ್ನು ಹೊಸ ಅವತಾರದಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ. ಟಿಗ್ವಾನ್ ಎಸ್‍ಯುವಿ ಎಲ್ಲಾ ಹೊಸ ವಿನ್ಯಾಸ, ನೂತನ ವೈಶಿಷ್ಟ್ಯಗಳು ಮತ್ತು ಹೊಸ ಎಂಜಿನ್ ಅನ್ನು ಪಡೆದುಕೊಂಡಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ 2021ರ Volkswagen Tiguan ಎಸ್‍ಯುವಿ

ಹೊಸ ಟಿಗ್ವಾನ್ ವಿನ್ಯಾಸದ ಬಗ್ಗೆ ಹೇಳುವುದಾದರೆ, ಸ್ವಲ್ಪ ಇದು ದೇಶದಲ್ಲಿ ಮಾರಾಟವಾಗಿದ್ದ ಅದರ ಹಿಂದಿನ ಮಾದರಿಗೆ ಸ್ವಲ್ಪ ಹೋಲುತ್ತದೆ. ಆದರೆ ಕೆಲವು ಟ್ವೀಕ್‌ಗಳಿವೆ.ಇನ್ನು ಈ ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿ ನಯವಾದ ಹೆಡ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ. ಎಲ್ಇಡಿ ಮ್ಯಾಟ್ರಿಕ್ಸ್ ತಂತ್ರಜ್ಞಾನವನ್ನು ಕೂಡಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ 2021ರ Volkswagen Tiguan ಎಸ್‍ಯುವಿ

ಇನ್ನು ಕ್ರೋಮ್ ಫಿನಿಶಿಂಗ್ ಹೊಂದಿರುವ ವಿಂಡೋ ಲೈನ್ ಇದರ ಪ್ರೀಮಿಯಂ ಲುಕ್ ಅನ್ನು ಹೆಚ್ಚಿಸುತ್ತದೆ. ಹೊಸ ಎಸ್‍ಯುವಿಯಲ್ಲಿ ಸ್ಪ್ಲಿಟ್-ಸ್ಟೈಲ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಬಂಪರ್‌ನಲ್ಲಿ ಕ್ರೋಮ್ ಅಸ್ಸೆಂಟ್ ಗಳು, ದೊಡ್ಡ ಪ್ರತಿಫಲಿತ ಸ್ಟ್ರಿಪ್ ಮತ್ತು ಬೂಟ್ ಲಿಡ್ ಮಧ್ಯದಲ್ಲಿ ಇರಿಸಲಾಗಿರುವ ವಿಡಬ್ಲ್ಯೂ ಬ್ಯಾಡ್ಜ್ ಅನ್ನು ಒಳಗೊಂಡಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ 2021ರ Volkswagen Tiguan ಎಸ್‍ಯುವಿ

ಇದರೊಂದಿಗೆ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಕನೆಕ್ಟ್ ಆಗಿರುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ. ಇನ್ನು ಇದರಲ್ಲಿ ಸಂಪೂರ್ಣ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಸ್ಕಫ್ ಪ್ಲೇಟ್‌ಗಳು, ಪನೋರಮಿಕ್ ಸನ್‌ರೂಫ್ ಮತ್ತು 30 ಮಾದರಿಯ ಅಂಬೈಟ್ ಲೈಟ್ ಗಳನ್ನು ಕೂಡ ಹೊಂದಿವೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ 2021ರ Volkswagen Tiguan ಎಸ್‍ಯುವಿ

ಹೊಸ ಟಿಗ್ವಾನ್ ಹಿಂಭಾಗದಲ್ಲಿ ಎಸಿ ವೆಂಟ್ಸ್, ವೈರ್‌ಲೆಸ್ ಮೊಬೈಲ್ ಚಾರ್ಜಿಂಗ್ ಜೊತೆಗೆ ಅನೇಕ ಯುಎಸ್‌ಬಿ ಸ್ಲಾಟ್‌ಗಳು, ಕೂಲ್ಡ್ ಗ್ಲೋವ್‌ಬಾಕ್ಸ್ ಮತ್ತು ಬಳಕೆಯ ಸುಲಭವಾದ ಕನೆಕ್ಟಿವಿಟಿ ಹೊಂದಿರುವ ತಂತ್ರಜ್ಞಾನದವನ್ನು ಕೂಡ ಒಳಗೊಂಡಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ 2021ರ Volkswagen Tiguan ಎಸ್‍ಯುವಿ

ಇನ್ನು ಈ ಟಿಗ್ವಾನ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 2.0-ಲೀಟರ್ ಟಿಎಸ್ಐ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 190 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 7-ಸ್ಪೀಡ್ ಡಿಎಸ್ಜಿ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇದರಲ್ಲಿ ಆಲ್-ವ್ಹೀಲ್-ಡ್ರೈವ್ ಸಿಸ್ಟಂ ಅನ್ನು ನೀಡಲಾಗಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ 2021ರ Volkswagen Tiguan ಎಸ್‍ಯುವಿ

ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ, ಆರು ಏರ್‌ಬ್ಯಾಗ್‌ಗಳು, ಎಬಿಎಸ್, ಇಎಸ್‌ಪಿ, ಆಂಟಿ-ಸ್ಪಿಲ್ ಕಂಟ್ರೋಲ್, ಆಟೋ-ಹೋಲ್ಡ್, ಹಿಲ್ ಸ್ಟಾರ್ಟ್ ಅಸಿಸ್ಟ್ & ಹಿಲ್ ಡಿಸೆಂಟ್ ಕಂಟ್ರೋಲ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್, ಹಿಂಭಾಗದಲ್ಲಿ 3 ಹೆಡ್‌ರೆಸ್ಟ್‌ಗಳು ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಆಂಕರ್, ಡ್ರೈವರ್ ಅಲರ್ಟ್ ಸಿಸ್ಟಂ ಮತ್ತು ಎಲ್ಇಡಿ ಕಾರ್ನರಿಂಗ್ ಲ್ಯಾಂಪ್ ಅನ್ನು ಹೊಂದಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ 2021ರ Volkswagen Tiguan ಎಸ್‍ಯುವಿ

ಜರ್ಮನಿ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ತನ್ನ ಹೊಸ ಟೈಗೋ ಕಾಂಪ್ಯಾಕ್ಟ್ ಕ್ರಾಸ್‌ಒವರ್ ಅನ್ನು ಯುರೋಪಿಯನ್ ಮಾರುಕಟ್ಟೆಗಾಗಿ ಅನಾವರಣಗೊಳಿಸಿದೆ. ಈ ಹೊಸ ಫೋಕ್ಸ್‌ವ್ಯಾಗನ್ ಟೈಗೋ ಕಾಂಪ್ಯಾಕ್ಟ್ ಕ್ರಾಸ್‌ಒವರ್ ಮಾದರಿಯು ನಿವಸ್ ಕ್ರಾಸ್ಒವರ್ ಅನ್ನು ಆಧರಿಸಿದೆ. ನಿವಸ್ ಕ್ರಾಸ್ಒವರ್ ಕಳೆದ ವರ್ಷದಿಂದ ದಕ್ಷಿಣ ಅಮೆರಿಕಾದ ಮಾರುಕಟ್ಟೆಗಳಲ್ಲಿ ಮಾರಾಟದಲ್ಲಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ 2021ರ Volkswagen Tiguan ಎಸ್‍ಯುವಿ

ಈ ಹೊಸ ಟೈಗೋ ಕಾಂಪ್ಯಾಕ್ಟ್ ಕ್ರಾಸ್‌ಒವರ್ ಯುರೋಪಿಯನ್ ಮಾರುಕಟ್ಟೆಗೆ ಕೆಲವು ಸಣ್ಣ ಬದಲಾವಣೆಗಳನ್ನು ಪಡೆಯುತ್ತದೆ. ಇದು ಹಿಂಭಾಗದಲ್ಲಿ ಕೂಪೆಯಂತಹ ರೂಫ್ ಲೈನ್ ಅನ್ನು ಉಳಿಸಿಕೊಂಡಿದೆ. ಆದರೆ ಇದರಿಂದ ಬೂಟ್ ಸ್ಪೇಸ್ ಹೆಚ್ಚು ದೊರೆಯುದಿಲಲ್ಲ. ಈ ಕ್ರಾಸ್ಒವರ್ ಮಾದರಿಯು 438 ಲೀಟರ್ ಬೂಟ್ ಸ್ಪೇಸ್ ನೀಡುತ್ತದೆ.ಹೊಸ ಫೋಕ್ಸ್‌ವ್ಯಾಗನ್ ಟೈಗೋ ಕಾಂಪ್ಯಾಕ್ಟ್ ಕ್ರಾಸ್‌ಒವರ್ ಎಲ್ಇಡಿ ಹೆಡ್ ಲೈಟ್ ಗಳನ್ನು ಸ್ಟ್ಯಾಂಡರ್ಡ್ ಆಗಿ, ಆಧುನಿಕ ಆಪರೇಟಿಂಗ್ ಕಾನ್ಸೆಪ್ಟ್, ಸಂಪೂರ್ಣ ಡಿಜಿಟಲ್ ಕಾಕ್ಪಿಟ್ ಮತ್ತು ಇತರ ಅತ್ಯಾಧುನಿಕ ತಂತ್ರಜ್ಙಾನಗಳನ್ನು ಒಳಗೊಂಡಿದೆ.

ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ 2021ರ Volkswagen Tiguan ಎಸ್‍ಯುವಿ

2021ರ ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿ ಸ್ಥಳೀಯವಾಗಿ ಸಿಕೆಡಿ (ಸಂಪೂರ್ಣ ನಾಕ್ ಡೌನ್) ಘಟಕಗಳ ಮೂಲಕ ಜೋಡಿಸಲಾಗುತ್ತದೆ. ಇನ್ನು ಈ ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.26 ಲಕ್ಷದಿಂದ ರೂ.29 ಲಕ್ಷಗಳಾಗಿರಬಹುದು. ಈ ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಫೇಸ್‌ಲಿಫ್ಟ್ ಎಸ್‍ಯುವಿಯು ಅತ್ಯಾಧುನಿಕ ಫೀಚರ್ಸ್, ತಂತ್ರಜ್ಙಾನ ಮತ್ತು ಆಕರ್ಷಕ ವಿನ್ಯಾಸವನ್ನು ಹೊಂದಿದೆ.

More from DriveSpark

Article Published On: Saturday, September 25, 2021, 12:27 [IST]
English summary
Volkswagen ready to introduce new 2021 tiguan facelift suv launch soon details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+