ಹೊಸ Volkswagen Tiguan ಫೇಸ್‌ಲಿಫ್ಟ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

ಜರ್ಮನಿ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ತನ್ನ ಹೊಸ ಟಿಗ್ವಾನ್ ಫೇಸ್‌ಲಿಫ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದೀಗ ಫೋಕ್ಸ್‌ವ್ಯಾಗನ್ ತನ್ನ ಟಿಗ್ವಾನ್ ಫೇಸ್‌ಲಿಫ್ಟ್ ಎಸ್‌ಯುವಿಯ ಬಿಡುಗಡೆಯ ದಿನಾಂಕವನ್ನು ಬಹಿರಂಗಪಡಿಸಿದೆ.

ಹೊಸ Volkswagen Tiguan ಫೇಸ್‌ಲಿಫ್ಟ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಫೇಸ್‌ಲಿಫ್ಟ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ 2021ರ ಡಿಸೆಂಬರ್ 7 ರಂದು ಬಿಡುಗಡೆಯಾಗಲಿದೆ. ಫೋಕ್ಸ್‌ವ್ಯಾಗನ್ ಈಗಾಗಲೇ ಘೋಷಿಸಿದಂತೆ, ಕಂಪನಿಯು ಈ ವರ್ಷ ಭಾರತದಲ್ಲಿ ಬಿಡುಗಡೆ ಮಾಡಲು ಯೋಜಿಸಿದ್ದ ನಾಲ್ಕು ಎಸ್‌ಯುವಿಗಳಲ್ಲಿ ಒಂದಾಗಿದೆ. ಇನ್ನು ಅಧಿಕೃತ ಬಿಡುಗಡೆಗೂ ಮುನ್ನ ಫೋಕ್ಸ್‌ವ್ಯಾಗನ್ ವೆಬ್‌ಸೈಟ್‌ನಲ್ಲಿ ಟಿಗ್ವಾನ್ ಫೇಸ್‌ಲಿಫ್ಟ್ ಎಸ್‍ಯುವಿಯ ಹೆಸರನ್ನು ಪಟ್ಟಿಮಾಡಲಾಗಿದೆ. ಈ ಹೊಸ ಎಸ್‌ಯುವಿ ಡೀಸೆಲ್ ಎಂಜಿನ್ ಅನ್ನು ಕೈಬಿಡುತ್ತದೆ ಮತ್ತು ಪೆಟ್ರೋಲ್ ಎಂಜಿನ್‌ನೊಂದಿಗೆ ಮಾತ್ರ ಲಭ್ಯವಿರುತ್ತದೆ. ಇದು ಸಣ್ಣ ವಿನ್ಯಾಸ ಬದಲಾವಣೆಗಳನ್ನು ಮತ್ತು ವೈಶಿಷ್ಟ್ಯದ ನವೀಕರಣಗಳನ್ನು ಸಹ ಸ್ವೀಕರಿಸುತ್ತದೆ.

ಹೊಸ Volkswagen Tiguan ಫೇಸ್‌ಲಿಫ್ಟ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಫೇಸ್‌ಲಿಫ್ಟ್ ಎಸ್‍ಯುವಿಯು ಭಾರತಕ್ಕೆ ಹೊಸದಲ್ಲ, ಈ ಹಿಂದೆ ಮಾರಾಟದಲ್ಲಿತ್ತು. ಆದರೆ ಇದೀಗ ಫೋಕ್ಸ್‌ವ್ಯಾಗನ್ ಕಂಪನಿಯು ಟಿಗ್ವಾನ್ ಎಸ್‍ಯುವಿಯನ್ನು ಹೊಸ ಅವತಾರದಲ್ಲಿ ಬಿಡುಗಡೆಗೊಳಿಸಲು ಮುಂದಾಗಿದೆ. ಟಿಗ್ವಾನ್ ಎಸ್‍ಯುವಿ ಎಲ್ಲಾ ಹೊಸ ವಿನ್ಯಾಸ, ನೂತನ ವೈಶಿಷ್ಟ್ಯಗಳು ಮತ್ತು ಹೊಸ ಎಂಜಿನ್ ಅನ್ನು ಪಡೆದುಕೊಂಡಿದೆ.

ಹೊಸ Volkswagen Tiguan ಫೇಸ್‌ಲಿಫ್ಟ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

ಈ ಹೊಸ ಟಿಗ್ವಾನ್ ಫೇಸ್‌ಲಿಫ್ಟ್ ವಿನ್ಯಾಸದ ಬಗ್ಗೆ ಹೇಳುವುದಾದರೆ, ಸ್ವಲ್ಪ ಇದು ದೇಶದಲ್ಲಿ ಮಾರಾಟವಾಗಿದ್ದ ಅದರ ಹಿಂದಿನ ಮಾದರಿಗೆ ಸ್ವಲ್ಪ ಹೋಲುತ್ತದೆ. ಆದರೆ ಕೆಲವು ಟ್ವೀಕ್‌ಗಳಿವೆ.ಇನ್ನು ಈ ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿ ನಯವಾದ ಹೆಡ್‌ಲ್ಯಾಂಪ್‌ಗಳನ್ನು ಒಳಗೊಂಡಿದೆ. ಎಲ್ಇಡಿ ಮ್ಯಾಟ್ರಿಕ್ಸ್ ತಂತ್ರಜ್ಞಾನವನ್ನು ಕೂಡಿದೆ.

ಹೊಸ Volkswagen Tiguan ಫೇಸ್‌ಲಿಫ್ಟ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

ಇನ್ನು ಕ್ರೋಮ್ ಫಿನಿಶಿಂಗ್ ಹೊಂದಿರುವ ವಿಂಡೋ ಲೈನ್ ಇದರ ಪ್ರೀಮಿಯಂ ಲುಕ್ ಅನ್ನು ಹೆಚ್ಚಿಸುತ್ತದೆ. ಹೊಸ ಟಿಗ್ವಾನ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ ಸ್ಪ್ಲಿಟ್-ಸ್ಟೈಲ್ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಬಂಪರ್‌ನಲ್ಲಿ ಕ್ರೋಮ್ ಅಸ್ಸೆಂಟ್ ಗಳು, ದೊಡ್ಡ ಪ್ರತಿಫಲಿತ ಸ್ಟ್ರಿಪ್ ಮತ್ತು ಬೂಟ್ ಲಿಡ್ ಮಧ್ಯದಲ್ಲಿ ಇರಿಸಲಾಗಿರುವ ವಿಡಬ್ಲ್ಯೂ ಬ್ಯಾಡ್ಜ್ ಅನ್ನು ಒಳಗೊಂಡಿದೆ.

ಹೊಸ Volkswagen Tiguan ಫೇಸ್‌ಲಿಫ್ಟ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

ಇದರೊಂದಿಗೆ ಆಂಡ್ರಾಯ್ಡ್ ಆಟೋ ಮತ್ತು ಆಪಲ್ ಕಾರ್ ಪ್ಲೇ ಕನೆಕ್ಟ್ ಆಗಿರುವ 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ. ಇನ್ನು ಇದರಲ್ಲಿ ಸಂಪೂರ್ಣ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಸ್ಕಫ್ ಪ್ಲೇಟ್‌ಗಳು, ಪನೋರಮಿಕ್ ಸನ್‌ರೂಫ್ ಮತ್ತು 30 ಮಾದರಿಯ ಅಂಬೈಟ್ ಲೈಟ್ ಗಳನ್ನು ಕೂಡ ಒಳಗೊಂಡಿದೆ.

ಹೊಸ Volkswagen Tiguan ಫೇಸ್‌ಲಿಫ್ಟ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

ಈ ಹೊಸ ಟಿಗ್ವಾನ್ ಫೇಸ್‌ಲಿಫ್ಟ್ ಎಸ್‍ಯುವಿಯ ಹಿಂಭಾಗದಲ್ಲಿ ಎಸಿ ವೆಂಟ್ಸ್, ವೈರ್‌ಲೆಸ್ ಮೊಬೈಲ್ ಚಾರ್ಜಿಂಗ್ ಜೊತೆಗೆ ಅನೇಕ ಯುಎಸ್‌ಬಿ ಸ್ಲಾಟ್‌ಗಳು, ಕೂಲ್ಡ್ ಗ್ಲೋವ್‌ಬಾಕ್ಸ್ ಮತ್ತು ಬಳಕೆಯ ಸುಲಭವಾದ ಕನೆಕ್ಟಿವಿಟಿ ಹೊಂದಿರುವ ತಂತ್ರಜ್ಞಾನದವನ್ನು ಕೂಡ ಒಳಗೊಂಡಿದೆ.

ಹೊಸ Volkswagen Tiguan ಫೇಸ್‌ಲಿಫ್ಟ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

ಹೊಸ ಟಿಗ್ವಾನ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ 2.0-ಲೀಟರ್ ಟಿಎಸ್ಐ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 190 ಬಿಹೆಚ್‍ಪಿ ಪವರ್ ಮತ್ತು 320 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 7-ಸ್ಪೀಡ್ ಡಿಎಸ್ಜಿ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ. ಇದರಲ್ಲಿ ಆಲ್-ವ್ಹೀಲ್-ಡ್ರೈವ್ ಸಿಸ್ಟಂ ಅನ್ನು ನೀಡಲಾಗಿದೆ.

ಹೊಸ Volkswagen Tiguan ಫೇಸ್‌ಲಿಫ್ಟ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

ಈ ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ, ಆರು ಏರ್‌ಬ್ಯಾಗ್‌ಗಳು, ಎಬಿಎಸ್, ಇಎಸ್‌ಪಿ, ಆಂಟಿ-ಸ್ಪಿಲ್ ಕಂಟ್ರೋಲ್, ಆಟೋ-ಹೋಲ್ಡ್, ಹಿಲ್ ಸ್ಟಾರ್ಟ್ ಅಸಿಸ್ಟ್ & ಹಿಲ್ ಡಿಸೆಂಟ್ ಕಂಟ್ರೋಲ್, ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್, ಹಿಂಭಾಗದಲ್ಲಿ 3 ಹೆಡ್‌ರೆಸ್ಟ್‌ಗಳು ಐಎಸ್‌ಒಫಿಕ್ಸ್ ಚೈಲ್ಡ್ ಸೀಟ್ ಆಂಕರ್, ಡ್ರೈವರ್ ಅಲರ್ಟ್ ಸಿಸ್ಟಂ ಮತ್ತು ಎಲ್ಇಡಿ ಕಾರ್ನರಿಂಗ್ ಲ್ಯಾಂಪ್ ಅನ್ನು ಒಳಗೊಂಡಿದೆ.

ಹೊಸ Volkswagen Tiguan ಫೇಸ್‌ಲಿಫ್ಟ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

ಇನ್ನು ಫೋಕ್ಸ್‌ವ್ಯಾಗನ್ ಕಂಪನಿಯು ತನ್ನ 2021ರ ಟಿ-ರಾಕ್ ಎಸ್‍ಯುವಿಯನ್ನು ಈ ವರ್ಷದ ಮಾರ್ಚ್ ತಿಂಗಳಿನ ಅಂತ್ಯದಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಈ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿಗೆ ಭಾರತೀಯ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆಯನ್ನು ಪಡೆದುಕೊಂಡಿದೆ. ಫೋಕ್ಸ್‌ವ್ಯಾಗನ್ ಇಂಡಿಯಾ ಕಂಪನಿಯು ಟಿ-ರಾಕ್ ಎಸ್‍ಯುವಿಗಾಗಿ ಬುಕ್ಕಿಂಗ್‌ಗಳನ್ನು ಸ್ವೀಕರಿಸುವುದನ್ನು ನಿಲ್ಲಿಸಿದೆ. ಏಕೆಂದರೆ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿಯ ಎರಡನೇ ಬ್ಯಾಚ್ ಮಾರಾಟವಾಗಿದೆ.

ಹೊಸ Volkswagen Tiguan ಫೇಸ್‌ಲಿಫ್ಟ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

ಈ ಟಿ-ರಾಕ್ ಎಸ್‍ಯುವಿಯು ಸಂಪೂರ್ಣವಾಗಿ ಆಮದು ಮಾಡಲಾದ ವಾಹನವಾಗಿದ್ದು, ಟೈಗನ್‌ನ ಮೇಲೆ ಇರಿಸಲಾಗಿದೆ. ಈ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.21.35 ಲಕ್ಷವಾಗಿದೆ. ಈ ಪ್ರೀಮಿಯಂ ಮಿಡ್ ಸೈಜ್ ಎಸ್‍ಯುವಿಯಾದ ಟಿ-ರಾಕ್ ಅನ್ನು ಸಿಬಿಯು ಆಗಿ ಭಾರತಕ್ಕೆ ತರಲಾಗುತ್ತಿದೆ. ಇದರ ಪರಿಣಾಮವಾಗಿ 2021ರ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿಯ ಬೆಲೆಯು ಹಿಂದಿನ ಮಾದರಿಗಿಂತ ರೂ.1.36 ಲಕ್ಷ ಹೆಚ್ಚಾಗಿದೆ

ಹೊಸ Volkswagen Tiguan ಫೇಸ್‌ಲಿಫ್ಟ್ ಎಸ್‍ಯುವಿಯ ಬಿಡುಗಡೆ ದಿನಾಂಕ ಬಹಿರಂಗ

ಇನ್ನು ಫೋಕ್ಸ್‌ವ್ಯಾಗನ್ ಟಿಗ್ವಾನ್ ಫೇಸ್‌ಲಿಫ್ಟ್ ಸ್ಥಳೀಯವಾಗಿ ಸಿಕೆಡಿ (ಸಂಪೂರ್ಣ ನಾಕ್ ಡೌನ್) ಯುನಿಟ್ ಗಳ ಮೂಲಕ ಜೋಡಿಸಲಾಗುತ್ತದೆ. ಇನ್ನು ಈ ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಎಸ್‍ಯುವಿಯ ಬೆಲೆಯು ಎಕ್ಸ್ ಶೋರೂಂ ಪ್ರಕಾರ ರೂ.26 ಲಕ್ಷದಿಂದ ರೂ.29 ಲಕ್ಷಗಳಾಗಿರಬಹುದು. ಈ ಹೊಸ ಫೋಕ್ಸ್‌ವ್ಯಾಗನ್ ಟಿಗ್ವಾನ್ ಫೇಸ್‌ಲಿಫ್ಟ್ ಎಸ್‍ಯುವಿಯು ಅತ್ಯಾಧುನಿಕ ಫೀಚರ್ಸ್, ತಂತ್ರಜ್ಙಾನ ಮತ್ತು ಆಕರ್ಷಕ ವಿನ್ಯಾಸವನ್ನು ಒಳಗೊಂಡಿದೆ.

More from DriveSpark

Article Published On: Friday, November 19, 2021, 15:19 [IST]
English summary
Volkswagen revealed 2021 tiguan facelift suv launch date in india details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+