ಬಿಡುಗಡೆಯ ಸನಿಹದಲ್ಲಿ ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿ

ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ತನ್ನ ಬಹುನಿರೀಕ್ಷಿತ ಹೊಸ ಟೈಗನ್ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಇದೀಗ ಫೋಕ್ಸ್‌ವ್ಯಾಗನ್ ಕಂಪನಿಯು ತನ್ನ ಈ ಹೊಸ ಟೈಗನ್ ಎಸ್‌ಯುವಿಯ ಟೀಸರ್ ವೀಡಿಯೊವನ್ನು ಬಿಡುಗಡೆಗೊಳಿಸಿದೆ.

ಬಿಡುಗಡೆಯ ಸನಿಹದಲ್ಲಿ ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿ

ಫೋಕ್ಸ್‌ವ್ಯಾಗನ್ ಕಂಪನಿಯು ಈ ಹೊಸ ಟೈಗನ್ ಎಸ್‌ಯುವಿಯನ್ನು ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಿದ್ದರು. ಫೋಕ್ಸ್‌ವ್ಯಾಗನ್ 2.0 ಯೋಜನೆಯಡಿಯಲ್ಲಿ ಈ ಎಸ್‍ಯುವಿ ಬಿಡುಗಡೆಯಾಗಲಿದೆ. ಈ ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‍ಯುವಿಯ ಮುಂಭಾಗದಲ್ಲಿ ಡ್ಯುಯಲ್-ಸ್ಲ್ಯಾಟ್ ಕ್ರೋಮ್ ಗ್ರಿಲ್ ಅನ್ನು ಡ್ಯುಯಲ್-ಲೆನ್ಸ್ ಪ್ರೊಜೆಕ್ಟರ್ ಹೆಡ್‌ಲ್ಯಾಂಪ್‌ಗಳು ಮತ್ತು ಅಡ್ಡಲಾಗಿರುವ ಎಲ್ಇಡಿ ಡಿಆರ್‌ಎಲ್‌ಗಳಿಂದ ಸುತ್ತುವರೆದಿದೆ.

ಬಿಡುಗಡೆಯ ಸನಿಹದಲ್ಲಿ ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿ

ಈ ಎಸ್‍ಯುವಿಯ ಬಂಪರ್, ಕ್ರೋಮ್ ಸರೌಂಡ್ ಫಾಗ್ ಲ್ಯಾಂಪ್‌ಗಳು ಮತ್ತು ಕಾಂಟ್ರಾಸ್ಟ್ ಕಲರ್ ಸ್ಕಿಡ್ ಪ್ಲೇಟ್‌ನ ಕೆಳಗಿನ ಭಾಗದಲ್ಲಿ ಕ್ರೋಮ್ ಅಂಶಗಳನ್ನು ಹೊಂದಿದ್ದು, ಇದು ಈ ಹೊಸ ಎಸ್‍ಯುವಿಗೆ ಅಗ್ರೇಸಿವ್ ಲುಕ್ ಅನ್ನು ಹೊಂದಿದೆ.

ಬಿಡುಗಡೆಯ ಸನಿಹದಲ್ಲಿ ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿ

ಈ ಎಸ್‍ಯುವಿಯಲ್ಲಿ 17 ಇಂಚಿನ ಡ್ಯುಯಲ್ ಟೋನ್ ಅಲಾಯ್ ವ್ಹೀಲ್‌ಗಳು, ಬೋಲ್ಡ್ ಕ್ರೀಸ್‌ಗಳು, ಸಿಲ್ವರ್ ರೂಫ್ ರೈಲ್ಗಳು ಮತ್ತು ಶಾರ್ಕ್ ಫಿನ್ ಆಂಟೆನಾಗಳನ್ನು ಹೊಂದಿರುತ್ತದೆ. ಎಲ್‌ಇಡಿ ಟೈಲ್‌ಲ್ಯಾಂಪ್ ಕ್ಲಸ್ಟರ್ ಟೈಲ್‌ಗೇಟ್‌ನ ಉದ್ದಕ್ಜೂ ಚಲಿಸುತ್ತದೆ.

ಬಿಡುಗಡೆಯ ಸನಿಹದಲ್ಲಿ ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿ

ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯಲ್ಲಿ 1.0-ಲೀಟರ್, ಮೂರು ಸಿಲಿಂಡರ್ ಟಿಎಸ್‌ಐ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್, ನಾಲ್ಕು ಸಿಲಿಂಡರ್ ಟಿಎಸ್‌ಐ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

ಬಿಡುಗಡೆಯ ಸನಿಹದಲ್ಲಿ ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿ

ಇದರಲ್ಲಿ 1.0-ಲೀಟರ್ ಎಂಜಿನ್ 115 ಬಿಹೆಚ್‍ಪಿ ಪವರ್ ಮತ್ತು 175 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ. ಇನ್ನು 1.5-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 150 ಬಿಹೆಚ್‍ಪಿ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಬಿಡುಗಡೆಯ ಸನಿಹದಲ್ಲಿ ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿ

ಈ ಎಂಜಿನ್ ಗಳೊಂದಿಗ್ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಸ್ಟ್ಯಾಂಡರ್ಡ್, 6-ಸ್ಪೀಡ್ ಟಾರ್ಕ್ ಕಾರ್ನ್ವಾಟರ್ (1.0 ಎಲ್ ಪೆಟ್ರೋಲ್ ಮಾತ್ರ) ಮತ್ತು 7-ಸ್ಪೀಡ್ ಡಿಸಿಟಿ ಆಟೋಮ್ಯಾಟಿಕ್ (1.5 ಎಲ್ ಪೆಟ್ರೋಲ್ ಮಾತ್ರ) ಗೇರ್ ಬಾಕ್ಸ್ ಅನ್ನು ನೀಡಲಾಗುತ್ತದೆ.

ಬಿಡುಗಡೆಯ ಸನಿಹದಲ್ಲಿ ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿ

ಇನ್ನು ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿಯ ಎಂಕ್ಯೂಬಿ-ಎ0-ಇನ್ ಪ್ಲಾಟ್‌ಫಾರ್ಮ್‌ ಅನ್ನು ಆಧರಿಸಿದೆ. ಇನ್ನು ಈ ಎಸ್‍ಯುವಿಯಲ್ಲಿ ಹಲವಾರು ಅತ್ಯಾಧುನಿಕ ಸುರಕ್ಷತಾ ಫೀಚರ್ ಗಳನ್ನು ಹೊಂದಿದೆ.

ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಈ ವಿಭಾಗದ ಕಾರುಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಆಧುನಿಕ ಫಿಚರ್ ಗಳೊಂದಿಗೆ ಪ್ರೀಮಿಯಂ ಕಾಣುವ ಕ್ಯಾಬಿನ್ ಪಡೆಯಲಿದೆ. ಇದರಲ್ಲಿ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ಎಲೆಕ್ಟ್ರಿಕ್ ಸನ್‌ರೂಫ್, ಮಲ್ಟಿ ಫಂಕ್ಷನ್ ಸ್ಟೀಯರಿಂಗ್ ವ್ಹೀಲ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್ ಮತ್ತು ಇತರ ಫೀಚರ್ ಗಳನ್ನು ಹೊಂದಿರುತ್ತದೆ.

ಬಿಡುಗಡೆಯ ಸನಿಹದಲ್ಲಿ ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿ

ಫೋಕ್ಸ್‌ವ್ಯಾಗನ್ ಟೈಗನ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಕಾಂಪ್ಯಾಕ್ಟ್ ಎಸ್‍ಯುವಿಗಳಿಗೆ ಪ್ರಬಲ ಪೈಪೋಟಿ ನೀಡುತ್ತದೆ. ಈ ಹೊಸ ಎಸ್‍ಯುವಿಯು ಶೀಘ್ರದಲ್ಲೇ ಬಿಡುಗಡೆಯಾಗುತ್ತದೆ ಎಂದು ನಿರೀಕ್ಷಿಸುತ್ತೇವೆ.

More from DriveSpark

Article Published On: Monday, June 28, 2021, 17:26 [IST]
English summary
Volkswagen India Teases Taigun SUV. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+