ಕರೋನಾ ಭೀತಿಯ ನಡುವೆಯೂ ಏಪ್ರಿಲ್ ತಿಂಗಳಿನಲ್ಲಿ ಹೆಚ್ಚಿನ ಸಂಖ್ಯೆಯ ಮಾರಾಟ ಕಂಡ ಫೋಕ್ಸ್‌ವ್ಯಾಗನ್ ಟಿ-ರಾಕ್

ಜರ್ಮನಿ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ತನ್ನ 2021ರ ಟಿ-ರಾಕ್ ಎಸ್‍ಯುವಿಯನ್ನು ಈ ವರ್ಷದ ಮಾರ್ಚ್ ತಿಂಗಳಿನ ಅಂತ್ಯದಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಬೆಲೆ ಏರಿಕೆಯ ಹೊರತಾಗಿ 2021ರ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿಯಯಲ್ಲಿ ಯಾವುದೇ ಬದಲಾವಣೆಗಳಿಲ್ಲ.

ಕರೋನಾ ಭೀತಿಯ ನಡುವೆಯೂ ಏಪ್ರಿಲ್ ತಿಂಗಳಿನಲ್ಲಿ ಹೆಚ್ಚಿನ ಸಂಖ್ಯೆಯ ಟಿ-ರಾಕ್ ಎಸ್‍ಯುವಿಗಳನ್ನು ಮಾರಾಟ ಮಾಡಿದ ಫೋಕ್ಸ್‌ವ್ಯಾಗನ್‍

ಫೋಕ್ಸ್‌ವ್ಯಾಗನ್ ಕಂಪನಿಯು ಈ ಹೊಸ ಟಿ-ರಾಕ್ ಎಸ್‍ಯುವಿಯನ್ನು ಎಕ್ಸ್ ಶೋರೂಂ ಪ್ರಕಾರ ರೂ.21.35 ಲಕ್ಷಗಳಿಗೆ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಾಗಿತ್ತು. 2021ರ ಏಪ್ರಿಲ್ ತಿಂಗಳಿನಲ್ಲಿ ದೇಶದ ಹಲವು ಕಡೆ ಲಾಕ್ ಡೌನ್ ಮತ್ತು ಕರೋನಾ ಭೀತಿಯು ಹೆಚ್ಚಾಗಿತ್ತು ಇದರ ನಡೆವೆ ಫೋಕ್ಸ್‌ವ್ಯಾಗನ್ ಕಂಪನಿಯು ಟಿ-ರಾಕ್ ಮಾದರಿಯ 166 ಯುನಿಟ್‌ಗಳನ್ನು ಮಾರಾಟಗೊಳಿಸಿದ್ದಾರೆ.

ಕರೋನಾ ಭೀತಿಯ ನಡುವೆಯೂ ಏಪ್ರಿಲ್ ತಿಂಗಳಿನಲ್ಲಿ ಹೆಚ್ಚಿನ ಸಂಖ್ಯೆಯ ಟಿ-ರಾಕ್ ಎಸ್‍ಯುವಿಗಳನ್ನು ಮಾರಾಟ ಮಾಡಿದ ಫೋಕ್ಸ್‌ವ್ಯಾಗನ್‍

ಪ್ರೀಮಿಯಂ ಮಿಡ್ ಸೈಜ್ ಎಸ್‍ಯುವಿಯಾದ ಟಿ-ರಾಕ್ ಅನ್ನು ಸಿಬಿಯು ಆಗಿ ಭಾರತಕ್ಕೆ ತರಲಾಗುತ್ತಿದೆ. ಇದರ ಪರಿಣಾಮವಾಗಿ 2021ರ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿಯ ಬೆಲೆಯು ಹಿಂದಿನ ಮಾದರಿಗಿಂತ ರೂ.1.36 ಲಕ್ಷ ಹೆಚ್ಚಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಕರೋನಾ ಭೀತಿಯ ನಡುವೆಯೂ ಏಪ್ರಿಲ್ ತಿಂಗಳಿನಲ್ಲಿ ಹೆಚ್ಚಿನ ಸಂಖ್ಯೆಯ ಟಿ-ರಾಕ್ ಎಸ್‍ಯುವಿಗಳನ್ನು ಮಾರಾಟ ಮಾಡಿದ ಫೋಕ್ಸ್‌ವ್ಯಾಗನ್‍

ಬೆಲೆ ಏರಿಕೆಯ ಹೊರತಾಗಿ 2021ರ ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿಯಯಲ್ಲಿ ಯಾವುದೇ ಬದಲಾವಣೆಳನ್ನು ಮಾಡಲಾಗಿಲ್ಲ, ಸಂಪೂರ್ಣವಾಗಿ ಹಿಂದಿನ ಮಾದರಿಯಂತಿದೆ, ಭಾರತೀಯ ಮಾರುಕಟ್ಟೆಯಲ್ಲಿ ಟಿಗ್ವಾನ್ ಆಲ್-ಸ್ಪೇಸ್ ಮತ್ತು ಟಿಗ್ವಾನ್ 5 ಸೀಟರ್ ಎಸ್‍ಯುವಿ ನಡುವಿನ ಸ್ಥಾನದಲ್ಲಿ ಟಿ-ರಾಕ್ ಅನ್ನು ಇರಿಸಲಾಗುತ್ತದೆ.

ಕರೋನಾ ಭೀತಿಯ ನಡುವೆಯೂ ಏಪ್ರಿಲ್ ತಿಂಗಳಿನಲ್ಲಿ ಹೆಚ್ಚಿನ ಸಂಖ್ಯೆಯ ಟಿ-ರಾಕ್ ಎಸ್‍ಯುವಿಗಳನ್ನು ಮಾರಾಟ ಮಾಡಿದ ಫೋಕ್ಸ್‌ವ್ಯಾಗನ್‍

ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಸ್ಲೀಕ್ ಗ್ರಿಲ್ ಅನ್ನು ಹೊಂದಿದೆ ಮತ್ತು ಮುಂಭಾಗದ ಎರಡೂ ಬದಿಯಲ್ಲಿ ಎಲ್‍ಇಡಿ ಪ್ರೊಜೆಕ್ಟರ್ ಹೆಡ್‍‍ಲ್ಯಾಂಪ್‍‍ಗಳನ್ನು ನೀಡಲಾಗಿದೆ. ಈ ಎಸ್‍‍ಯುವಿನ ಹೊಸ ಬಂಪರ್ ಅನ್ನು ಹೊಂದಿದ್ದು, ದೊಡ್ಡ ಮೆಡ್ ಗ್ರಿಲ್ ಏರ್ ಇನ್ ಟೆಕ್ ಅನ್ನು ಹೊಂದಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಕರೋನಾ ಭೀತಿಯ ನಡುವೆಯೂ ಏಪ್ರಿಲ್ ತಿಂಗಳಿನಲ್ಲಿ ಹೆಚ್ಚಿನ ಸಂಖ್ಯೆಯ ಟಿ-ರಾಕ್ ಎಸ್‍ಯುವಿಗಳನ್ನು ಮಾರಾಟ ಮಾಡಿದ ಫೋಕ್ಸ್‌ವ್ಯಾಗನ್‍

ಈ ಎಸ್‍‍ಯುವಿಯ ಮುಂಭಾಗದಲ್ಲಿ ಎಲ್‍ಇ‍ಡಿ ಡಿಆರ್‍ಎಲ್‍ಗಳನ್ನು ಸಹ ಅಳವಡಿಸಲಾಗಿದೆ. ಹೊಸ ಟಿ-ರಾಕ್ ಎಸ್‍‍ಯುವಿನಲ್ಲಿ 5 ಸ್ಪೋಕ್ ಅಲಾಯ್ ವ್ಹೀಲ್, ಹಿಂಭಾಗದಲ್ಲಿ ರೂಫ್-ಮೌಂಟೆಡ್ ಸ್ಪಾಯ್ಲರ್ ಮತ್ತು ಸ್ಲೀಕ್ ಎಲ್‍ಇಡಿ ಟೈಲ್‍ ಲೈಟ್‍‍‍ಗಳನ್ನು ಹೊಂದಿದೆ. ಹಿಂಭಾಗದಲ್ಲಿ ಬಂಪರ್ ಮತ್ತು ಸ್ಕಫ್ ಪ್ಲೇಟ್ ಗಳನ್ನು ಕೂಡ ಹೊಂದಿವೆ.

ಕರೋನಾ ಭೀತಿಯ ನಡುವೆಯೂ ಏಪ್ರಿಲ್ ತಿಂಗಳಿನಲ್ಲಿ ಹೆಚ್ಚಿನ ಸಂಖ್ಯೆಯ ಟಿ-ರಾಕ್ ಎಸ್‍ಯುವಿಗಳನ್ನು ಮಾರಾಟ ಮಾಡಿದ ಫೋಕ್ಸ್‌ವ್ಯಾಗನ್‍

ಈ ಹೊಸ ಎಸ್‍‍ಯುವಿಯ ಪ್ರೀಮಿಯಂ ಫೀಚರ್ಸ್‌ಗಳಾದ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವೆನ್ನಾ ಲೆದರ್ ಸೀಟುಗಳು, ಫ್ರಂಟ್ ಆ್ಯಂಡ್ ರೇರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿದೆ. ಇನ್ನು ಸುರಕ್ಷತೆಗಾಗಿ ಎಬಿಎಸ್ ಜೊತೆ ಇಬಿಡಿ, 6 ಏರ್‌ಬ್ಯಾಗ್‌ಗಳು, ಟಯರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರೇರ್ ಪಾರ್ಕಿಂಗ್ ಕ್ಯಾಮೆರಾ ಸೇರಿದಂತೆ ಹಲವಾರು ಪ್ರೀಮಿಯಂ ಫೀಚರ್ ಗಳನ್ನು ಹೊಂದಿವೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಕರೋನಾ ಭೀತಿಯ ನಡುವೆಯೂ ಏಪ್ರಿಲ್ ತಿಂಗಳಿನಲ್ಲಿ ಹೆಚ್ಚಿನ ಸಂಖ್ಯೆಯ ಟಿ-ರಾಕ್ ಎಸ್‍ಯುವಿಗಳನ್ನು ಮಾರಾಟ ಮಾಡಿದ ಫೋಕ್ಸ್‌ವ್ಯಾಗನ್‍

ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍‍ಯುವಿನಲ್ಲಿ 1.5-ಲೀಟರ್ 4 ಸಿಲಿಂಡರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 148 ಬಿ‍ಹೆಚ್‍ಪಿ ಪವರ್ ಮತ್ತು 250 ಎನ್‍‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍‍ನೊಂದಿಗೆ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ಅನ್ನು ನೀಡಲಾಗಿದೆ.

ಕರೋನಾ ಭೀತಿಯ ನಡುವೆಯೂ ಏಪ್ರಿಲ್ ತಿಂಗಳಿನಲ್ಲಿ ಹೆಚ್ಚಿನ ಸಂಖ್ಯೆಯ ಟಿ-ರಾಕ್ ಎಸ್‍ಯುವಿಗಳನ್ನು ಮಾರಾಟ ಮಾಡಿದ ಫೋಕ್ಸ್‌ವ್ಯಾಗನ್‍

ಹೊಸ ಫೋಕ್ಸ್‌ವ್ಯಾಗನ್‍ ಟಿ-ರಾಕ್ ಎಸ್‍ಯುವಿಯು ಕೇವಲ 8.4 ಸೆಕೆಂಡುಗಳಲ್ಲಿ 0 ರಿಂದ 100 ಕಿ.ಮೀ ವೇಗವನ್ನು ಪಡೆದುಕೊಳ್ಳುತ್ತದೆ. ಇನ್ನು ಈ ಹೊಸ ಟಿ-ರಾಕ್ ಎಸ್‍ಯುವಿಯು ಪ್ರತಿ ಗಂಟೆಗೆ 205 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ.

ಕರೋನಾ ಭೀತಿಯ ನಡುವೆಯೂ ಏಪ್ರಿಲ್ ತಿಂಗಳಿನಲ್ಲಿ ಹೆಚ್ಚಿನ ಸಂಖ್ಯೆಯ ಟಿ-ರಾಕ್ ಎಸ್‍ಯುವಿಗಳನ್ನು ಮಾರಾಟ ಮಾಡಿದ ಫೋಕ್ಸ್‌ವ್ಯಾಗನ್‍

2021ರ ಫೋಕ್ಸ್‌ವ್ಯಾಗನ್‍ ಟಿ-ರಾಕ್ ಮಾದರಿಯು ಭಾರತೀಯ ಮಾರುಕಟ್ಟೆಯಲ್ಲಿ ಜೀಪ್ ಕಂಪಾಸ್, ಕಿಯಾ ಸೆಲ್ಟೋಸ್ ಮತ್ತು ಸ್ಕೋಡಾ ಕರೋಕ್ ಎಸ್‍‍ಯುವಿಗಳಿಗೆ ಪೈಪೋಟಿ ನೀಡುತ್ತದೆ

Most Read Articles

Kannada
English summary
166 Units Of Volkswagen T-Roc Sold In April 2021. Read In Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X