Just In
- 59 min ago
ಫೋಕ್ಸ್ವ್ಯಾಗನ್ ಐಡಿ.4 ಜಿಟಿಎಕ್ಸ್ ಪರ್ಫಾಮೆನ್ಸ್ ಎಲೆಕ್ಟ್ರಿಕ್ ಕಾರಿನ ಟೀಸರ್ ಬಿಡುಗಡೆ
- 1 hr ago
ಕೇವಲ 48 ನಿಮಿಷಗಳಲ್ಲಿ ಸೋಲ್ಡ್ ಔಟ್ ಆದ ಕೆಟಿಎಂ 1290 ಸೂಪರ್ ಡ್ಯೂಕ್ ಆರ್ಆರ್
- 2 hrs ago
ಹೆರ್ಮೆಸ್ 75 ವಾಣಿಜ್ಯ ಬಳಕೆಯ ಎಲೆಕ್ಟ್ರಿಕ್ ಸ್ಕೂಟರ್ ಬಿಡುಗಡೆ ಮಾಡಿದ ಕಬೀರಾ ಮೊಬಿಲಿಟಿ
- 3 hrs ago
ದುಬಾರಿ ಬೆಲೆಯ ಲ್ಯಾಂಡ್ ರೋವರ್ ಡಿಫೆಂಡರ್ ಎಸ್ಯುವಿ ಖರೀದಿಸಿದ ನಟ ಅರ್ಜುನ್ ಕಪೂರ್
Don't Miss!
- Movies
'ನೀವು ಬಸ್ ಡ್ರೈವರ್ ಮಗನೇ, ನಮ್ಮ ಮುಷ್ಕರ ಬೆಂಬಲಿಸಿ': ಯಶ್ಗೆ ಪತ್ರ ಬರೆದ ಸಾರಿಗೆ ನೌಕರರು?
- News
ಸರ್ಕಾರ v/s ಸಾರಿಗೆ ನೌಕರರು: 8ನೇ ದಿನಕ್ಕೆ ಕಾಲಿಟ್ಟ ಮುಷ್ಕರ
- Sports
ಸ್ವಿಗ್ಗಿಯಿಂದ ರೋಹಿತ್ ಶರ್ಮಾಗೆ ಅವಮಾನ ; ಕಿಡಿಕಾರಿದ ಫ್ಯಾನ್ಸ್
- Lifestyle
ರಕ್ತದಲ್ಲಿ ಕಬ್ಬಿಣದಂಶ ಹೆಚ್ಚಾದರೆ ಆಯುಸ್ಸು ಕಡಿಮೆಯಾಗುವುದು
- Education
NEET PG Admit Card 2021: ನೀಟ್ ಪಿಜಿ ಪ್ರವೇಶ ಪತ್ರ ಡೌನ್ಲೋಡ್ ಮಾಡುವುದು ಹೇಗೆ ?
- Finance
ಸುಮಾರು 5,550 ಕೋಟಿ ರು ಡಿವಿಡೆಂಡ್ ಘೋಷಿಸಿದ ಟಿಸಿಎಸ್
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ವೆಂಟೊ ಟ್ರೆಂಡ್ಲೈನ್ ವೆರಿಯೆಂಟ್ ಬುಕ್ಕಿಂಗ್ ಪ್ರಕ್ರಿಯೆಗೆ ಸ್ಥಗಿತಗೊಳಿಸಿದ ಫೋಕ್ಸ್ವ್ಯಾಗನ್
ಫೋಕ್ಸ್ವ್ಯಾಗನ್ ಕಂಪನಿಯು ತನ್ನ ಜನಪ್ರಿಯ ಕಾರು ಮಾದರಿಯಾಗಿರುವ ವೆಂಟೊ ಸೆಡಾನ್ ಮಾದರಿಯಲ್ಲಿ ಪ್ರಸ್ತುತ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹಲವಾರು ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಶೀಘ್ರದಲ್ಲೇ ವೆಂಟೊ ಕಾರಿನ ಮಧ್ಯಮ ಕ್ರಮಾಂಕದ ಟ್ರೆಂಡ್ಲೈನ್ ಮಾದರಿಯಲ್ಲಿ ಕೆಲವು ಬದಲಾವಣೆಗಳಿಗೆ ಮುಂದಾಗಿದೆ.

ಹೊಸ ಕಾರಿನ ತಾಂತ್ರಿಕ ಅಂಶಗಳ ಬದಲಾವಣೆಗಾಗಿ ವೆಂಟೊ ಟ್ರೆಂಡ್ಲೈನ್ ಮಾದರಿಯ ಬುಕ್ಕಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿರುವ ಫೋಕ್ಸ್ವ್ಯಾಗನ್ ಕಂಪನಿಯು ಶೀಘ್ರದಲ್ಲೇ ನವೀಕರಿಸಿದ ಆವೃತ್ತಿಯನ್ನು ಬಿಡುಗಡೆ ಮಾಡುವ ಸಿದ್ದತೆಯಲ್ಲಿದ್ದು, ಹೊಸ ಕಾರಿನಲ್ಲಿ ಕೆಲವು ಪ್ರಮುಖ ತಾಂತ್ರಿಕ ಅಂಶಗಳನ್ನು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಬದಲಾವಣೆಗೊಳಿಸಲಾಗುತ್ತಿದೆ.

ಫೋಕ್ಸ್ವ್ಯಾಗನ್ ಕಾರುಗಳ ಪೈಕಿ ವೆಂಟೊ ಸೆಡಾನ್ ಮಾದರಿಯು ತನ್ನ ಸರಣಿ ಕಾರುಗಳಲ್ಲಿ ಉತ್ತಮ ಬೇಡಿಕೆ ಹೊಂದಿದ್ದು, ಟರ್ಬೊ ಪೆಟ್ರೋಲ್ ಆವೃತ್ತಿಯಾಗಿರುವ ಟ್ರೆಂಡ್ಲೈನ್ ಮಾದರಿಯು ಹೊಸ ನವೀಕರಣದೊಂದಿಗೆ ಮತ್ತಷ್ಟು ಬೇಡಿಕೆ ಪಡೆದುಕೊಳ್ಳಲಿದೆ.

ಇನ್ನು ಫೋಕ್ಸ್ವ್ಯಾಗನ್ ಕಂಪನಿಯು ಇತ್ತೀಚೆಗೆ ಪೊಲೊ ಹ್ಯಾಚ್ಬ್ಯಾಕ್ ಮತ್ತು ವೆಂಟೊ ಸೆಡಾನ್ ಕಾರಿನ ಕಂಫರ್ಟ್ ವೆರಿಯೆಂಟ್ ಆಧರಿಸಿ ಟರ್ಬೊ ಎಡಿಷನ್ ಬಿಡುಗಡೆ ಮಾಡಲಾಗಿದ್ದು, ಸ್ಟ್ಯಾಂಡರ್ಡ್ ಮಾದರಿಗಿಂತಲೂ ಹೊಸ ಆವೃತ್ತಿಗಳಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಪರಿಚಯಿಸಲಾಗಿದೆ.

ಹೊಸ ಕಾರು ಮಾದರಿಗಳು ದೆಹಲಿ ಎಕ್ಸ್ಶೋರೂಂ ಪ್ರಕಾರ ಪೊಲೊ ಟರ್ಬೊ ಎಡಿಷನ್ಗೆ ರೂ. 6.99 ಲಕ್ಷ ಮತ್ತು ವೆಂಟೊ ಟರ್ಬೊ ಎಡಿಷನ್ಗೆ ರೂ. 8.69 ಲಕ್ಷ ಬೆಲೆ ನಿಗದಿಪಡಿಸಲಾಗಿದ್ದು, ಹೊಸ ಕಾರಿನ ಬೆಲೆಯು ಸ್ಟ್ಯಾಂಡರ್ಡ್ ಮಾದರಿಗಿಂತ ತುಸು ದುಬಾರಿಯಾಗಿದೆ. ಹೊಸ ಕಾರುಗಳಲ್ಲಿ ಫೋಕ್ಸ್ವ್ಯಾಗನ್ ಕಂಪನಿಯು ಸ್ಟ್ಯಾಂಡರ್ಡ್ ಮಾದರಿಯಲ್ಲಿರುವ ಫೀಚರ್ಸ್ ಒಳಗೊಂಡಂತೆ ಹೆಚ್ಚುವರಿಯಾಗಿ ಗ್ಲಾಸಿ ಬ್ಲ್ಯಾಕ್ ಸ್ಪಾಯ್ಲರ್, ರಿಯರ್ ವ್ಯೂ ಮಿರರ್ ಕ್ಯಾಪ್, ಫೆಂಡರ್ ಬ್ಯಾಡ್ಜ್, ಸ್ಪೋಟಿ ಸೀಟುಗಳನ್ನು ನೀಡಲಾಗಿದೆ.

ಹೊಸ ತಾಂತ್ರಿಕ ಅಂಶಗಳಿಂದಾಗಿ ಹೊಸ ಕಾರಿನ ನೋಟವು ಆಕರ್ಷಕವಾಗಿದ್ದು, ಸ್ಪೋರ್ಟಿ ಹ್ಯಾಚ್ಬ್ಯಾಕ್ ಮತ್ತು ಸೆಡಾನ್ ಕಾರು ಖರೀದಿದಾರರನ್ನು ಸೆಳೆಯಲು ಹೊಸ ಕಾರು ಮಾದರಿಯು ಸಹಕಾರಿಯಾಗಲಿದೆ ಎನ್ನಬಹುದು.

ಕೆಲವು ಹೊಸ ತಾಂತ್ರಿಕ ಅಂಶಗಳ ಹೊರತುಪಡಿಸಿ ಹೊಸ ವೆರಿಯೆಂಟ್ಗಳ ಎಂಜಿನ್ ಆಯ್ಕೆಯನ್ನು ಈ ಹಿಂದಿನಂತೆಯೇ ಮುಂದುವರಿಸಲಾಗಿದ್ದು, ಹ್ಯಾಚ್ಬ್ಯಾಕ್ ಮತ್ತು ಸೆಡಾನ್ ಮಾದರಿಗಳ ಮಾದರಿಗಳ ಮಾರಾಟದಲ್ಲಿ ಉತ್ತಮ ಬೇಡಿಕೆ ಹೊಂದಿರುವ ಪೊಲೊ ಮತ್ತು ವೆಂಟೊ ಕಾರುಗಳು ಅತ್ಯುತ್ತಮ ಎಂಜಿನ್ ಆಯ್ಕೆ ಹೊಂದಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ಟರ್ಬೊ ಎಡಿಷನ್ಗಳಲ್ಲಿ ಕಾರು ಮಾದರಿಗಳಿಗೆ ಅನುಗುಣವಾಗಿ 1.0-ಲೀಟರ್ ಎಂಪಿಐ ಮತ್ತು 1.0-ಲೀಟರ್ ಟಿಎಸ್ಐ ಟರ್ಬೋ ಪೆಟ್ರೋಲ್ ಎಂಜಿನ್ ಜೋಡಿಸಲಾಗಿದ್ದು, ಎಂಜಿನ್ ಮಾದರಿಗಳಿಗೆ ಅನುಗುಣವಾಗಿ ಗೇರ್ಬಾಕ್ಸ್ ಆಯ್ಕೆಯನ್ನು ನೀಡಲಾಗಿದೆ.

ವೆಂಟೊ ಕಾರು ಮಾದರಿಯಲ್ಲಿ ಫೋಕ್ಸ್ವ್ಯಾಗನ್ ಕಂಪನಿಯು ಎಲ್ಲಾ ವೆರಿಯೆಂಟ್ಗಳಲ್ಲೂ 1.0-ಲೀಟರ್ ಟಿಎಸ್ಐ ಟರ್ಬೋ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದು, 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ನೀಡಲಾಗಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಪೊಲೊ ಮತ್ತು ವೆಂಟೊ ಮಾದರಿಗಳಲ್ಲಿ ಟರ್ಬೊ ಎಡಿಷನ್ ಹೊರತು ಪಡಿಸಿ ಸ್ಟ್ಯಾಂಡರ್ಡ್ ಮಾದರಿಗಳಿಗೆ ಅನುಸಾರವಾಗಿ ವೆಂಟೊ ಕಾರು ಮಾದರಿಯು ಆರಂಭಿಕವಾಗಿ ರೂ. 8.69 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ. 13.68 ಲಕ್ಷ ಬೆಲೆ ಹೊಂದಿವೆ.