Just In
- 30 min ago ಹಲವು ಆಯ್ಕೆಗಳಲ್ಲಿ ಸಿಗಲಿದೆ 5 ಡೋರ್ ಥಾರ್: ಸುದ್ದಿ ತಿಳಿದು ನಿಟ್ಟುಸಿರು ಬಿಟ್ಟ ಮಹೀಂದ್ರಾ ಫ್ಯಾನ್ಸ್!
- 38 min ago ನಿಮ್ಮ ಬಳಿ 7 ಲಕ್ಷ ರೂಪಾಯಿ ಇದ್ದರೆ ಸಾಕು.. ಕನಸಿನ ಕಾರನ್ನು ಮನೆ ತರಬಹುದು!
- 16 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 16 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
Don't Miss!
- News Heavy Rain: ಭಾರೀ ಗಾಳಿ, ಮಳೆಗೆ ಧರೆಗುರುಳಿದ ಮರಗಳು, ವಿದ್ಯುತ್ ಕಂಬಗಳು: ಸಿಡಿಲು ಬಡಿದು 25 ಮೇಕೆಗಳ ಸಾವು
- Technology ಇಂದು ಸ್ಯಾಮ್ಸಂಗ್ ಗ್ಯಾಲಕ್ಸಿ F15 5G ಫೋನ್ ಸೇಲ್!..ಬೆಲೆ ಎಷ್ಟು?
- Lifestyle ಹೊಟ್ಟೆಯೇ ಇಲ್ಲದೆ ಬದುಕಿದ್ದ ನತಾಶಾ ದಿಡ್ಡಿ ನಿಧನ...! ಈಕೆ ಯಾರು ಗೊತ್ತಾ?
- Finance ಸುಗಮ, ಸುರಕ್ಷಿತ ಸಂಚಾರಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ ಬೆಂಗಳೂರು ಸಂಚಾರಿ ಪೊಲೀಸ್
- Movies ಆತ್ಮಗಳ ಜೊತೆ ಮಾತಾಡುತ್ತಾರಾ ನೀತು? ಕನಸುಗಳನ್ನು ಬೆನ್ನತ್ತಿ ಹೊರಟಿದ್ದೇಕೆ?
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಹುಬೇಡಿಕೆಯ ಟಿ-ರಾಕ್ ಎಸ್ಯುವಿ ಖರೀದಿಗೆ ಬುಕ್ಕಿಂಗ್ ಪುನಾರಂಭಿಸಿದ ಫೋಕ್ಸ್ವ್ಯಾಗನ್
ಜರ್ಮನಿಯ ವಾಹನ ತಯಾರಕ ಕಂಪನಿಯಾದ ಫೋಕ್ಸ್ವ್ಯಾಗನ್ ಟಿ-ರಾಕ್ ಎಸ್ಯುವಿಯನ್ನು 2020ರ ಮಾರ್ಚ್ ತಿಂಗಳಲ್ಲಿ ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತು. ಈ ಫೋಕ್ಸ್ವ್ಯಾಗನ್ ಟಿ-ರಾಕ್ ಎಸ್ಯುವಿಗೆ ಭಾರತೀಯ ಮಾರುಕಟ್ಟೆಯಲ್ಲಿ ಕಡಿಮೆ ಅವಧಿಯಲ್ಲಿ ಭರ್ಜರಿ ಬೇಡಿಕೆಯನ್ನು ಪಡೆದುಕೊಂಡಿತ್ತು.
ಫೋಕ್ಸ್ವ್ಯಾಗನ್ ಕಂಪನಿಯು ಸ್ಕೋಡಾ ಸಹಭಾಗಿತ್ವದಲ್ಲಿ ಇಂಡಿಯಾ 2.0 ಯೋಜನೆ ಅಡಿ ಈ ಟಿ-ರಾಕ್ ಎಸ್ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಲಾಗಿತ್ತು. ಈ ಹೊಸ ಟಿ-ರಾಕ್ ಎಸ್ಯುವಿಯಲ್ಲಿ ಐಷಾರಾಮಿ ಫೀಚರ್ಸ್ ಹೊಂದಿದೆ. ಫೋಕ್ಸ್ವ್ಯಾಗನ್ ಕಂಪನಿಯು ಈ ಎಸ್ಯುವಿಯನ್ನು 2020ರ ಆಟೋ ಎಕ್ಸ್ ಪೋದಲ್ಲಿ ಅನಾವರಣಗೊಳಿಸಿತ್ತು. ಭಾರತದಲ್ಲಿ ಟಿ-ರಾಕ್ ಎಸ್ಯುವಿಯ ಮೊದಲ ಬ್ಯಾಚ್ ಆಗಿ 1,000 ಯುನಿಟ್ಗಳನ್ನು ಬಿಡುಗಡೆಗೊಳಿಸಿದ್ದರು.
ಫೋಕ್ಸ್ವ್ಯಾಗನ್ ಟಿ-ರಾಕ್ ಎಸ್ಯುವಿ ಎಲ್ಲಾ ಯುನಿಟ್ಗಳು ಕಡಿಮೆ ಅವಧಿಯಲ್ಲಿ ಮಾರಾಟಗೊಳಿಸಿತ್ತು. ಇದರಿಂದ ಫೋಕ್ಸ್ವ್ಯಾಗನ್ ಕಂಪನಿಯು ಟಿ-ರಾಕ್ ಎಸ್ಯುವಿಯ ಬುಕ್ಕಿಂಗ್ ಸ್ವೀಕಿರಿಸುವುದನ್ನು ನಿಲ್ಲಿಸಲಾಗಿತ್ತು.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್ಯುವಿ300
ಮೊದಲ ಬ್ಯಾಚ್ನ ಯುನಿಟ್ಗಳು ಮಾರಾಟವಾಗಿರುವುದರಿಂದ ಎರಡನೇ ಬ್ಯಾಚ್ ಆಮದುಮಾಡಿಕೊಳ್ಳಲಿದೆ. ಫೋಕ್ಸ್ವ್ಯಾಗನ್ ಕಂಪನಿಯು ಎರಡನೇ ಬ್ಯಾಚ್ನಲ್ಲಿ 2,500 ಯುನಿಟ್ಗಳನ್ನು ಸಿಬಿಯು ಮಾರ್ಗದ ಮೂಲಕ ಆಮದುಮಾಡಿಕೊಳ್ಳಬಹುದು. ಇದೀಗ ಫೋಕ್ಸ್ವ್ಯಾಗನ್ ಕಂಪನಿ ತನ್ನ ಟಿ-ರಾಕ್ ಎಎಸ್ಯುವಿ ಖರೀದಿಗೆ ಬುಕ್ಕಿಂಗ್ ಪುನಾರಂಭಿಸಿದೆ ಎಂದು ವರದಿಗಳಾಗಿದೆ.
ಈ ಟಿ-ರಾಕ್ ಎಸ್ಯುವಿಯ ವಿನ್ಯಾಸದ ಬಗ್ಗೆ ಹೇಳುವುದಾದರೆ, ಮುಂಭಾಗದಲ್ಲಿ ಸ್ಲೀಕ್ ಗ್ರಿಲ್ ಅನ್ನು ಹೊಂದಿದೆ ಮತ್ತು ಮುಂಭಾಗದ ಎರಡೂ ಬದಿಯಲ್ಲಿ ಎಲ್ಇಡಿ ಪ್ರೊಜೆಕ್ಟರ್ ಹೆಡ್ಲ್ಯಾಂಪ್ಗಳನ್ನು ಅಳವಡಿಸಲಾಗಿದೆ. ಈ ಎಸ್ಯುವಿನ ಹೊಸ ಬಂಪರ್ ಅನ್ನು ಹೊಂದಿದ್ದು, ದೊಡ್ಡ ಮೆಡ್ ಗ್ರಿಲ್ ಏರ್ ಇನ್ಟೇಕ್ ಅನ್ನು ಹೊಂದಿದೆ.
MOST READ: ಭಾರತದಲ್ಲಿ ಸೋಲ್ಡ್ ಔಟ್ ಆದ ಮರ್ಸಿಡಿಸ್ ಇಕ್ಯೂಸಿ ಎಲೆಕ್ಟ್ರಿಕ್ ಎಸ್ಯುವಿ
ಈ ಎಸ್ಯುವಿಯ ಮುಂಭಾಗದಲ್ಲಿ ಎಲ್ಇಡಿ ಡಿಆರ್ಎಲ್ಗಳನ್ನು ಸಹ ಅಳವಡಿಸಲಾಗಿದೆ. ಹೊಸ ಟಿ-ರಾಕ್ ಎಸ್ಯುವಿನಲ್ಲಿ 5 ಸ್ಪೋಕ್ ಅಲಾಯ್ ವ್ಹೀಲ್, ಹಿಂಭಾಗದಲ್ಲಿ ರೂಫ್-ಮೌಂಟೆಡ್ ಸ್ಪಾಯ್ಲರ್ ಮತ್ತು ಸ್ಲೀಕ್ ಎಲ್ಇಡಿ ಟೈಲ್ ಲೈಟ್ಗಳನ್ನು ಹೊಂದಿದೆ. ಹಿಂಭಾಗದಲ್ಲಿ ಬಂಪರ್ ಮತ್ತು ಸ್ಕಫ್ ಪ್ಲೇಟ್ಗಳನ್ನು ನೀಡಲಾಗಿದೆ
ಟಿ-ರಾಕ್ ಎಸ್ಯುವಿಯ ಪ್ರೀಮಿಯಂ ಫೀಚರ್ಸ್ಗಳಾದ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವೆನ್ನಾ ಲೆದರ್ ಸೀಟುಗಳು, ಫ್ರಂಟ್ ಆ್ಯಂಡ್ ರೇರ್ ಪಾರ್ಕಿಂಗ್ ಸೆನ್ಸಾರ್ ಸೌಲಭ್ಯಗಳಿದೆ. ಇನ್ನು ಸುರಕ್ಷತೆಗಾಗಿ ಎಬಿಎಸ್ ಜೊತೆ ಇಬಿಡಿ, 6 ಏರ್ಬ್ಯಾಗ್ಗಳು, ಟಯರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ರೇರ್ ಪಾರ್ಕಿಂಗ್ ಕ್ಯಾಮೆರಾ ಸೇರಿದಂತೆ ಹಲವು ಪ್ರೀಮಿಯಂ ಸೌಲಭ್ಯಗಳನ್ನು ಒಳಗೊಂಡಿವೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್
ಫೋಕ್ಸ್ವ್ಯಾಗನ್ ಟಿ-ರಾಕ್ ಎಸ್ಯುವಿನಲ್ಲಿ 1.5-ಲೀಟರ್ 4 ಸಿಲಿಂಡರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಿದೆ. ಈ ಎಂಜಿನ್ 148 ಬಿಹೆಚ್ಪಿ ಪವರ್ ಮತ್ತು 250 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ನೊಂದಿಗೆ 7-ಸ್ಪೀಡ್ ಡ್ಯುಯಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ಬಾಕ್ಸ್ಅನ್ನು ನೀಡಲಾಗಿದೆ.
ಫೋಕ್ಸ್ವ್ಯಾಗನ್ನ ಟಿ-ರಾಕ್ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಜೀಪ್ ಕಂಪಾಸ್, ಕಿಯಾ ಸೆಲ್ಟೋಸ್ ಮತ್ತು ಸ್ಕೋಡಾ ಕರೋಕ್ ಎಸ್ಯುವಿಗಳಿಗೆ ಪೈಪೋಟಿ ನೀಡುತ್ತದೆ. ಫೋಕ್ಸ್ವ್ಯಾಗನ್ನ ಟಿ-ರಾಕ್ ಖರೀದಿಸಲು ಬಯಸುವವರು ಹತ್ತಿರದ ಫೋಕ್ಸ್ವ್ಯಾಗನ್ನ ಡೀಲರ್ ಬಳಿ ತೆರಳಿ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.