ಬಿಡುಗಡೆಗೂ ಮುನ್ನ ಫೋಕ್ಸ್‌ವ್ಯಾಗನ್ ಟೈಗನ್ ಕಾರಿನ ಮಾಹಿತಿ ಸೋರಿಕೆ

ಫೋಕ್ಸ್‌ವ್ಯಾಗನ್ ಇಂಡಿಯಾ ಕಂಪನಿಯು ಇದೇ ತಿಂಗಳು 31ರಂದು ತನ್ನ ಬಹುನೀರಿಕ್ಷಿತ ಟೈಗನ್ ಕಾರಿನ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಕಾರು ಮಾದರಿಯ ಉತ್ಪಾದನಾ ಆವೃತ್ತಿಯ ಚಿತ್ರಗಳು ಅನಾವರಣಕ್ಕೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಸೋರಿಕೆಯಾಗಿವೆ.

ಬಿಡುಗಡೆಗೂ ಮುನ್ನ ಫೋಕ್ಸ್‌ವ್ಯಾಗನ್ ಟೈಗನ್ ಕಾರಿನ ಮಾಹಿತಿ ಸೋರಿಕೆ

ಹೊಸ ಟೈಗನ್ ಉತ್ಪಾದನಾ ಆವೃತ್ತಿಯು ಪ್ರಸ್ತುತ ಮಾರುಕಟ್ಟೆಯಲ್ಲಿರುವ ಟಿ ರಾಕ್ ಮಾದರಿಯನ್ನು ಆಧರಿಸಿ ನಿರ್ಮಾಣಗೊಂಡಿದ್ದು, ಕಾನ್ಸೆಪ್ಟ್ ಮಾದರಿಯಲ್ಲಿನ ಬಹುತೇಕ ತಾಂತ್ರಿಕ ಅಂಶಗಳನ್ನು ಉತ್ಪಾದನಾ ಮಾದರಿಯನ್ನು ಮುಂದುವರಿಸಲಾಗಿದೆ. ಜಿಟಿ ಆವೃತ್ತಿಯು ಟೈಗನ್ ಮಾದರಿಯ ಹೈ ಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳಲ್ಲೇ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಳ್ಳಲಿದೆ.

ಬಿಡುಗಡೆಗೂ ಮುನ್ನ ಫೋಕ್ಸ್‌ವ್ಯಾಗನ್ ಟೈಗನ್ ಕಾರಿನ ಮಾಹಿತಿ ಸೋರಿಕೆ

ಟೈಗನ್ ಎಸ್‍‍ಯುವಿ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಟಾಟಾ ನೆಕ್ಸಾನ್ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಬೆಲೆಯು ಕೂಡಾ ಸ್ಪರ್ಧಾತ್ಮಕವಾಗಲಿದೆ.

ಬಿಡುಗಡೆಗೂ ಮುನ್ನ ಫೋಕ್ಸ್‌ವ್ಯಾಗನ್ ಟೈಗನ್ ಕಾರಿನ ಮಾಹಿತಿ ಸೋರಿಕೆ

ಟೈಗನ್ ಕಂಪ್ಯಾಕ್ಟ್ ಎಸ್‍‍ಯುವಿ ಮಾದರಿಯು ಅಂತರ್‍‍ರಾಷ್ಟ್ರೀಯ ಮಾರುಕಟ್ಟೆಯಲ್ಲಿರುವ ಎಸ್‍‍ಯುವಿಗಳಿಗಿಂತಲೂ ಹೆಚ್ಚಿನ ಪ್ರಮಾಣದ ಗ್ರೌಂಡ್ ಕ್ಲಿಯರೆನ್ಸ್ ಹಾಗೂ ಹೆಚ್ಚುವರಿ ವ್ಹೀಲ್‍‍ಬೇಸ್ ಅನ್ನು ಹೊಂದಿರಲಿದ್ದು, ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ಜೊತೆಗೆ ಎಲ್‍ಇಡಿ ಪೊಜೆಕ್ಟರ್ ಹೆಡ್‌ಲ್ಯಾಂಪ್ಸ್ ಇಂಟ್ರಾಗ್ರೆಟೆಡ್ ಡಿಆರ್‌ಎಲ್ಎಸ್ ಹೊಂದಿದೆ.

ಬಿಡುಗಡೆಗೂ ಮುನ್ನ ಫೋಕ್ಸ್‌ವ್ಯಾಗನ್ ಟೈಗನ್ ಕಾರಿನ ಮಾಹಿತಿ ಸೋರಿಕೆ

ಜೊತೆಗೆ ಹೊಸ ಕಾರಿನಲ್ಲಿ ಫಂಕ್ಷನಲ್ ಟರ್ನ್ ಇಂಡಿಕೇಟರ್, ಎಲ್‍ಇ‍‍ಡಿ ಲೈಟ್ ಬಾರ್‌, ಮುಂಭಾಗದಲ್ಲಿ ಸ್ಕಫ್ ಪ್ಲೇಟ್, ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವಿಂಡೋ ಮತ್ತು ಡೋರ್ ಹ್ಯಾಂಡಲ್ ಮೇಲೆ ಕ್ರೋಮ್ ವಿನ್ಯಾಸವನ್ನು ನೀಡಲಾಗಿದ್ದು, ಸ್ಪೋರ್ಟಿ ವಿನ್ಯಾಸಕ್ಕೆ ಪೂರಕವಾಗಿ ಬೂಟ್ ಲಿಡ್, ಎಲ್ಇಡಿ ಟೈಲ್ ಲ್ಯಾಂಪ್ಸ್, ಬ್ಲ್ಯಾಕ್ ಔಟ್ ರೂಫ್, ಹಿಂಬದಿಯಲ್ಲಿ ಕ್ರೊಮ್ ಆಕ್ಸೆಂಟ್ ನೀಡಲಾಗಿದೆ.

ಬಿಡುಗಡೆಗೂ ಮುನ್ನ ಫೋಕ್ಸ್‌ವ್ಯಾಗನ್ ಟೈಗನ್ ಕಾರಿನ ಮಾಹಿತಿ ಸೋರಿಕೆ

ಈ ಮೂಲಕ ಆಕರ್ಷಕ ಹೊರನೋಟವನ್ನು ಪಡೆದುಕೊಂಡಿರುವ ಹೊಸ ಕಾರು ರೂಫ್ ಮೌಂಟೆಡ್, ಸಿಲ್ವರ್ ರೂಫ್ ರೈಲ್ಸ್, ಬಾಡಿ ಕ್ಲಾಡಿಂಗ್ ಹೊಂದಿದ್ದು, ಹೊಸ ಕಾರಿನ ಒಳಭಾಗದ ವಿನ್ಯಾಸವು ಸಹ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳಿಂದ ಕೂಡಿದೆ.

ಬಿಡುಗಡೆಗೂ ಮುನ್ನ ಫೋಕ್ಸ್‌ವ್ಯಾಗನ್ ಟೈಗನ್ ಕಾರಿನ ಮಾಹಿತಿ ಸೋರಿಕೆ

ಹಾಗೆಯೇ ಆಕರ್ಷಕವಾಗಿರುವ ಈ ಕಾರಿನ ಇಂಟಿರಿಯರ್ ಕೂಡಾ ಅಡ್ವಾನ್ಸ್ ಟೆಕ್ನಿಕಲ್ ಫೀಚರ್ಸ್‌ಗಳಾದ ಟಚ್ ಸ್ಕ್ರೀನ್ ಇನ್ಫೋಟೆನ್‍‍ಮೆಂಟ್ ಸಿಸ್ಟಂ ಹಾಗೂ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‍‍ಗಳನ್ನು ಹೊಂದಿದೆ.

ಬಿಡುಗಡೆಗೂ ಮುನ್ನ ಫೋಕ್ಸ್‌ವ್ಯಾಗನ್ ಟೈಗನ್ ಕಾರಿನ ಮಾಹಿತಿ ಸೋರಿಕೆ

ಎಂಜಿನ್ ಸಾಮರ್ಥ್ಯ ಮತ್ತು ಪರ್ಫಾಮೆನ್ಸ್

ಹೊಸ ಟೈಗನ್ ಕಾರು ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರವೇ ಬಿಡುಗಡೆಯಾಗಲಿದ್ದು, ನಗರ ಪ್ರದೇಶದಲ್ಲಿನ ಓಡಾಟಕ್ಕೆ ಅನುಕೂಲಕರವಾಗುವಂತೆ ಪ್ರಮುಖ ಎರಡು ಎಂಜಿನ್ ಆಯ್ಕೆಗಳನ್ನು ನೀಡುತ್ತಿದೆ.

ಬಿಡುಗಡೆಗೂ ಮುನ್ನ ಫೋಕ್ಸ್‌ವ್ಯಾಗನ್ ಟೈಗನ್ ಕಾರಿನ ಮಾಹಿತಿ ಸೋರಿಕೆ

ಹೊಸ ಕಾರಿನಲ್ಲಿ ಪೊಲೊ ಹ್ಯಾಚ್‌ಬ್ಯಾಕ್‌ನಲ್ಲಿ ಬಳಕೆ ಮಾಡಲಾಗಿರುವ 108-ಬಿಎಚ್‌ಪಿ ಸಾಮರ್ಥ್ಯದ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಮತ್ತು 148-ಬಿಎಚ್‌ಪಿ ಸಾಮರ್ಥ್ಯದ 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಟೈಗನ್‌ನಲ್ಲಿ ಜೋಡಿಸಲಾಗುತ್ತಿದೆ.

ಬಿಡುಗಡೆಗೂ ಮುನ್ನ ಫೋಕ್ಸ್‌ವ್ಯಾಗನ್ ಟೈಗನ್ ಕಾರಿನ ಮಾಹಿತಿ ಸೋರಿಕೆ

ಈ ಮೂಲಕ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಪ್ರಯಾಣಿಕ ಸುರಕ್ಷತೆಗೂ ಹೆಚ್ಚಿನ ಸುರಕ್ಷತೆ ನೀಡಲಾಗಿದ್ದು, ಎಬಿಎಸ್ ಜೊತೆ ಇಬಿಡಿ, 4 ಏರ್‌ಬ್ಯಾಗ್, 2 ವೀಲ್ಹ್ ಡ್ರೈವ್ ಟೆಕ್ನಾಲಜಿ, ತ್ರಿ ಜೋನ್ ಕ್ಲೈಮೆಟ್ ಕಂಟ್ರೋಲ್, ಸನ್‌ರೂಫ್ ಮತ್ತು ಹಿಲ್ ಅಸಿಸ್ಟ್ ಸೌಲಭ್ಯಗಳಿವೆ.

ಬಿಡುಗಡೆಗೂ ಮುನ್ನ ಫೋಕ್ಸ್‌ವ್ಯಾಗನ್ ಟೈಗನ್ ಕಾರಿನ ಮಾಹಿತಿ ಸೋರಿಕೆ

ಈ ತಿಂಗಳು ಕೊನೆಯಲ್ಲಿ ಉತ್ಪಾದನಾ ಮಾದರಿಯೊಂದಿಗೆ ಅನಾವರಣಗೊಳ್ಳಲಿರುವ ಟೈಗನ್ ಉತ್ಪಾದನಾ ಮಾದರಿಯು ಮುಂದಿನ ಕೆಲವೇ ತಿಂಗಳಿನಲ್ಲಿ ಬಿಡುಗಡೆಯಾಗಲಿದ್ದು, ಫೋಕ್ಸ್‌ವ್ಯಾಗನ್ ಹೊಸ ಕಾರಿನ ಬೆಲೆಯನ್ನು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 9.50 ಲಕ್ಷದಿಂದ ರೂ.13 ಲಕ್ಷ ಬೆಲೆ ಅಂತರದಲ್ಲಿ ಮಾರಾಟಬಹುದೆಂದು ನೀರಿಕ್ಷಿಸಲಾಗಿದೆ.

Article Published On: Tuesday, March 30, 2021, 16:08 [IST]
English summary
Volkswagen Taigun Production Design Leaked Ahead Of Launch. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+