ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್

ಫೋಕ್ಸ್‌ವ್ಯಾಗನ್ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯ ಉತ್ಪಾದನಾ ಮಾದರಿಯನ್ನು ಅನಾವರಣಗೊಳಿಸಿ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಗಳಲ್ಲೇ ಅತ್ಯುತ್ತಮ ಫೀಚರ್ಸ್ ಪಡೆದುಕೊಳ್ಳಲಿದೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್

ಕಾನ್ಸೆಪ್ಟ್ ಮಾದರಿಯಲ್ಲಿನ ಬಹುತೇಕ ತಾಂತ್ರಿಕ ಅಂಶಗಳನ್ನು ಉಳಿಸಿಕೊಂಡಿರುವ ಟೈಗನ್ ಉತ್ಪಾದನಾ ಮಾದರಿಯು ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಗಳಲ್ಲೇ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ ಪಡೆದುಕೊಂಡಿದ್ದು, ಹೊಸ ಕಾರಿನಲ್ಲಿ ಕಂಪನಿಯು ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಜೋಡಣೆ ಮಾಡಿರುವುದು ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್

ಹೊಸ ಕಾರಿನಲ್ಲಿ ಜೋಡಣೆ ಮಾಡಲಾಗುತ್ತಿರುವ ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್) ಸೌಲಭ್ಯವು ಕಾರಿನ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸುವ ನೀರಿಕ್ಷೆಯಿದ್ದು, ಹೊಸ ಕಾರಿನ ಟಾಪ್ ಎಂಡ್ ಮಾದರಿಯಲ್ಲಿ ಅಳವಡಿಸುವ ಸಾಧ್ಯತೆಗಳಿವೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್

ಹೊಸ ಎಡಿಎಎಸ್ ಸೌಲಭ್ಯ ಅಳವಡಿಕೆಯಿಂದಾಗಿ ಕಾರು ಚಾಲನೆ ವೇಳೆ ರಸ್ತೆಗುಂಡಿಗಳನ್ನು ಸುಲಭವಾಗಿ ಪತ್ತೆಹಚ್ಚಲು ರಡಾರ್ ಬಳಕೆಯಾಗಲಿದ್ದು, ಇದು ಅಗತ್ಯ ಸಂದರ್ಭಗಳಲ್ಲಿ ಅಟೊನೊಮಸ್ ಬ್ರೇಕಿಂಗ್ ಸಿಸ್ಟಂನೊಂದಿಗೆ ಕಾರ್ಯ ನಿರ್ವಹಣೆ ಮಾಡುವ ಮೂಲಕ ರಸ್ತೆಗುಂಡಿಯಿಂದಾಗುವ ಅಪಾಯವನ್ನು ತಡೆಯಬಲ್ಲದು.

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್

ಹೊಸ ಕಾರಿನ ಇಂಟಿರಿಯರ್ ಕೂಡಾ ಅಡ್ವಾನ್ಸ್ ಟೆಕ್ನಿಕಲ್ ಫೀಚರ್ಸ್‌ಗಳಾದ 10-ಇಂಚಿನ ಟಚ್ ಸ್ಕ್ರೀನ್ ಇನ್ಫೋಟೆನ್‍‍ಮೆಂಟ್ ಸಿಸ್ಟಂ ಹಾಗೂ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‍‍ಗಳನ್ನು ಹೊಂದಿದ್ದು, ಬ್ಲ್ಯಾಕ್ ಆ್ಯಂಡ್ ಗ್ರೇ ಡ್ಯುಯಲ್ ಕಲರ್ ಪಡೆದುಕೊಂಡಿದೆ. ಹಾಗೆಯೇ ವೆಂಟಿಲೆಟೆಡ್ ಸೀಟ್, ಎಲೆಕ್ಟ್ರಿಕ್ ಸನ್‌ರೂಫ್, ಬಾಡಿ ಕ್ಲಾಡಿಂಗ್, ರಿಯರ್ ಎಸಿ ವೆಂಟ್ಸ್, ಕೀ ಲೆಸ್ ಎಂಟ್ರಿ, ವೈರ್‌ಲೆಸ್ ಚಾರ್ಜರ್ ಹೊಂದಿದ್ದು, ಹೊಸ ಕಾರಿನ ಒಳಭಾಗದ ವಿನ್ಯಾಸವು ಸಹ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳಿಂದ ಕೂಡಿದೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್

ಹೊಸ ಕಾರಿನಲ್ಲಿ ಸುರಕ್ಷತೆಗೂ ಹೆಚ್ಚಿನ ಒತ್ತು ನೀಡಲಾಗಿದ್ದು, ಕಾರ್ ಕನೆಕ್ಟ್ ಟೆಕ್ನಾಲಜಿಯೊಂದಿಗೆ ಎಬಿಎಸ್ ಜೊತೆ ಇಬಿಡಿ, 6 ಏರ್‌ಬ್ಯಾಗ್(ಹೈಎಂಡ್ ಮಾದರಿಯಲ್ಲಿ), 2 ವೀಲ್ಹ್ ಡ್ರೈವ್ ಟೆಕ್ನಾಲಜಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೋಲ್, ಕ್ರೂಸ್ ಕಂಟ್ರೊಲ್ ಮತ್ತು ಹಿಲ್ ಅಸಿಸ್ಟ್ ಸೌಲಭ್ಯಗಳಿವೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್

ಈ ಮೂಲಕ ಆಕರ್ಷಕ ಹೊರನೋಟವನ್ನು ಪಡೆದುಕೊಂಡಿರುವ ಹೊಸ ಕಾರು ರೂಫ್ ಮೌಂಟೆಡ್, ಸಿಲ್ವರ್ ರೂಫ್ ರೈಲ್ಸ್ ಸೌಲಭ್ಯಗಳನ್ನು ಹೊಂದಿದ್ದು, ಸ್ಥಳೀಯವಾಗಿ ಶೇ.95 ರಷ್ಟು ಬಿಡಿಭಾಗಗಳನ್ನು ಪಡೆದುಕೊಂಡಿರುವ ಟೈಗನ್ ಕಾರು ಮಾದರಿಯು ಬೆಲೆಯಲ್ಲಿ ಪ್ರತಿಸ್ಪರ್ಧಿ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್

ಇನ್ನು ಟೈಗನ್ ಕಾರಿನಲ್ಲಿ ಎಲ್‍ಇಡಿ ಪೊಜೆಕ್ಟರ್ ಹೆಡ್‌ಲ್ಯಾಂಪ್ಸ್ ಇಂಟ್ರಾಗ್ರೆಟೆಡ್ ಡಿಆರ್‌ಎಲ್ಎಸ್ ಜೋಡಣೆ ಹೊಂದಿದ್ದು, ಫಂಕ್ಷನಲ್ ಟರ್ನ್ ಇಂಡಿಕೇಟರ್, ಎಲ್‍ಇ‍‍ಡಿ ಲೈಟ್ ಬಾರ್‌, ಮುಂಭಾಗದಲ್ಲಿ ಸ್ಕಫ್ ಪ್ಲೇಟ್, 17-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವಿಂಡೋ ಮತ್ತು ಡೋರ್ ಹ್ಯಾಂಡಲ್ ಮೇಲೆ ಕ್ರೋಮ್ ವಿನ್ಯಾಸ ಪಡೆದುಕೊಂಡಿದೆ.

MOST READ: ಭಾರತದಲ್ಲಿ ಅತಿ ಹೆಚ್ಚು ರಿಸೇಲ್ ವ್ಯಾಲ್ಯೂ ಹೊಂದಿರುವ ಕಾರುಗಳಿವು!

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್

ಸ್ಪೋರ್ಟಿ ವಿನ್ಯಾಸಕ್ಕೆ ಪೂರಕವಾಗಿ ಬೂಟ್ ಲಿಡ್, ಎಲ್ಇಡಿ ಟೈಲ್ ಲ್ಯಾಂಪ್ಸ್, ಬ್ಲ್ಯಾಕ್ ಔಟ್ ರೂಫ್, ಹಿಂಬದಿಯಲ್ಲಿ ಕ್ರೊಮ್ ಆಕ್ಸೆಂಟ್ ನೀಡಲಾಗಿದ್ದು, ಎಂಕ್ಯೂಬಿ ಎ0 ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಉತ್ಪಾದನೆಗೊಳಿಸಲಾಗಿದೆ.

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್

ಹೊಸ ಕಾರಿನಲ್ಲಿ ಪೊಲೊ ಹ್ಯಾಚ್‌ಬ್ಯಾಕ್‌ನಲ್ಲಿ ಬಳಕೆ ಮಾಡಲಾಗಿರುವ 108-ಬಿಎಚ್‌ಪಿ ಸಾಮರ್ಥ್ಯದ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಮತ್ತು 148-ಬಿಎಚ್‌ಪಿ ಸಾಮರ್ಥ್ಯದ 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಟೈಗನ್‌ನಲ್ಲಿ ಜೋಡಿಸಲಾಗಿದೆ.

MOST READ: ಬಿಡುಗಡೆಯಾಗಲಿರುವ 4x4 ಡ್ರೈವ್ ಸಿಸ್ಟಂ ಸೌಲಭ್ಯವುಳ್ಳ ಟಾಪ್ 5 ಕಾರುಗಳಿವು..!

ಅಡ್ವಾನ್ಸ್ ಡ್ರೈವರ್ ಅಸಿಸ್ಟ್ ಟೆಕ್ನಾಲಜಿ ಪಡೆದುಕೊಳ್ಳಲಿದೆ ಫೋಕ್ಸ್‌ವ್ಯಾಗನ್ ಟೈಗನ್

ಟೈಗನ್ ಕಂಪ್ಯಾಕ್ಟ್ ಎಸ್‍‍ಯುವಿ ಕಾರು ಮಾದರಿಯು ಸದ್ಯ ಮಾರುಕಟ್ಟೆಯಲ್ಲಿ ಜನಪಪ್ರಿಯವಾಗಿರುವ ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಟಾಟಾ ನೆಕ್ಸಾನ್ ಮತ್ತು ಮಾರುತಿ ಸುಜುಕಿ ಬ್ರೆಝಾ ಕಾರುಗಳಿಗೆ ಉತ್ತಮ ಪೈಪೋಟಿ ನೀಡಲಿದ್ದು, ಹೊಸ ಕಾರಿನ ಬೆಲೆಯು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 10 ಲಕ್ಷದಿಂದ ರೂ .16 ಲಕ್ಷ ಬೆಲೆ ಅಂತರದಲ್ಲಿ ಮಾರಾಟಬಹುದೆಂದು ನೀರಿಕ್ಷಿಸಲಾಗಿದೆ.

More from DriveSpark

Article Published On: Tuesday, May 4, 2021, 18:54 [IST]
English summary
Volkswagen Taigun Could Feature ADAS In India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+