Just In
- 2 hrs ago
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- 4 hrs ago
ಫೆಬ್ರವರಿ ತಿಂಗಳಿನಲ್ಲಿ 12 ಸಾವಿರಕ್ಕೂ ಹೆಚ್ಚು ಎಂಪಿವಿಗಳನ್ನು ಮಾರಾಟ ಮಾಡಿದ ಮಾರುತಿ ಸುಜುಕಿ
- 4 hrs ago
ಸಿಎನ್ಜಿ ವರ್ಷನ್ನಲ್ಲೂ ಬಿಡುಗಡೆಯಾಗಲಿದೆ ಸ್ಕೋಡಾ ರ್ಯಾಪಿಡ್ ಸೆಡಾನ್
- 4 hrs ago
ಸ್ಕ್ರ್ಯಾಪೇಜ್ ನೀತಿ ಅಳವಡಿಸಿಕೊಳ್ಳುವ ವಾಹನ ಮಾಲೀಕರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Movies
ಬಿಗ್ಬಾಸ್: ಪ್ರಶಾಂತ್ ಸಂಬರ್ಗಿ ಮೇಲೆ ಉರಿದು ಬಿದ್ದ ಮನೆ ಸದಸ್ಯರು
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಬಿಡುಗಡೆಗೆ ಸಜ್ಜಾಗುತ್ತಿದೆ ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‍ಯುವಿ
ಫೋಕ್ಸ್‌ವ್ಯಾಗನ್ ಕಂಪನಿಯು ತನ್ನ ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಇದೀಗ ಫೋಕ್ಸ್‌ವ್ಯಾಗನ್ ಕಂಪನಿಯು ತನ್ನ ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯು ಭಾರತದಲ್ಲಿ ಇತ್ತೀಚೆಗೆ ಸ್ಪಾಟ್ ಟೆಸ್ಟ್ ಅನ್ನು ನಡೆಸಿದೆ.

ಫೋಕ್ಸ್‌ವ್ಯಾಗನ್ ಕಂಪನಿಯು ಈ ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ದೆಹಲಿ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಿದ್ದರು. ವರದಿಗಳ ಪ್ರಕಾರ, ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಎಸ್‌ಯುವಿಯು ಭಾರತದಲ್ಲಿ ದೀಪಾವಳಿ ಹಬ್ಬಕ್ಕೂ ಮುನ್ನ ಬಿಡುಗಡೆಯಾಗಲಿದೆ. ಫೋಕ್ಸ್‌ವ್ಯಾಗನ್ 2.0 ಯೋಜನೆಯಡಿಯಲ್ಲಿ ಬಿಡುಗಡೆಯಾಗಲಿರುವ ಮೊದಲ ಮಾದರಿ ಟೈಗನ್ ಆಗಿರಲಿದೆ.

ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಟಿಎಸ್ಐ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಹೊಂದಿರುತ್ತದೆ ಎಂದು ಫೋಕ್ಸ್‌ವ್ಯಾಗನ್ ಹೇಳಿದೆ. ಟಿ-ರಾಕ್ ಮಾದರಿಯಲ್ಲಿ ಕಂಡುಬರುವಂತಹ ಲೀಟರ್ 1.5 ಲೀಟರ್ ಅಥವಾ 1.0-ಲೀಟರ್ ಲೀಟರ್ ಎಂಬ ಮಾಹಿತಿಯನ್ನು ಕಂಪನಿಯು ಇನ್ನು ಬಹಿರಂಗಪಡಿಸಿಲ್ಲ.
MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಇದರಲ್ಲಿ 1.0-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 108 ಬಿಹೆಚ್‍ಪಿ ಪವರ್ ಮತ್ತು 175 ಎನ್ಎಂ ಟಾರ್ಕ್ ಉತ್ಪಾದಿಸಿದ್ದರೆ, 1.5-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ 148 ಬಿಹೆಚ್‍ಪಿ ಪವರ್ ಮತ್ತು 240 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.

ಫೋಕ್ಸ್‌ವ್ಯಾಗನ್ ಕಂಪನಿಯು ಈಗಗಾಲೇ ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯ ಹೆಸರನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪಟ್ಟಿ ಮಾಡಲಾಗಿದೆ. ಈ ಹೊಸ ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿಯು ಆಕರ್ಷಕ ವಿನ್ಯಾಸವನ್ನು ಹೊಂದಿದೆ.
MOST READ: ಜನವರಿ ತಿಂಗಳಿನಲ್ಲಿ ಮಾರುತಿ ಎಕ್ಸ್‌ಎಲ್6 ಕಾರು ಮಾರಾಟದಲ್ಲಿ ಶೇ.305ರಷ್ಟು ಹೆಚ್ಚಳ

ಈ ಫೋಕ್ಸ್‌ವ್ಯಾಗನ್ ಹೊಸ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿಯ ವಿನ್ಯಾಸವು ಟಿ-ಕ್ರಾಸ್ ಎಸ್‍ಯುವಿಗೆ ಹೋಲುತ್ತದೆ. ಮುಂಭಾಗದಲ್ಲಿ ಸಾಕಷ್ಟು ಪ್ರಮಾಣದ ಕ್ರೋಮ್ ಅನ್ನು ಬಳಸಲಾಗುತ್ತದೆ ಗ್ರಿಲ್ ಕ್ರೋಮ್ ಅಲಂಕರಿಸುವಿಕೆಯೊಂದಿಗೆ ಸ್ಲ್ಯಾಟ್‌ಗಳನ್ನು ಪಡೆಯುತ್ತದೆ.

ಇದರ ಹೆಡ್‌ಲ್ಯಾಂಪ್‌ಗಳು ನಯವಾದ ಯುನಿಟ್ ಗಳಾಗಿವೆ ಮತ್ತು ಗ್ರಿಲ್‌ನ ವಿಸ್ತೃತ ಭಾಗದಂತೆ ಕಂಡುಬರುತ್ತದೆ. ಫಾಗ್ ಲ್ಯಾಂಪ್ ಗಳ ಸುತ್ತ ಕ್ರೋಮ್ ಸ್ಟ್ರಿಪ್ ಇದೆ ಮತ್ತು ಸ್ಕಿಡ್ ಪ್ಲೇಟ್ ಇದಕ್ಕೆ ಬಹಳ ಮಸ್ಕಲರ್ ನಿಲುವನ್ನು ನೀಡುತ್ತದೆ. ಇನ್ನು ಎಸ್‍ಯುವಿಯ ಹಿಂಭಾಗದಲ್ಲಿ ಟೈಲ್ ಲ್ಯಾಂಪ್ ಅನ್ನು ಹೊಂದಿದ್ದು, ಇದು ಆಲ್-ಎಲ್ಇಡಿ ಆಗಿದ್ದು, ಅದು ಬೂಟ್‌ನಾದ್ಯಂತ ಚಲಿಸುತ್ತದೆ. ಮಧ್ಯದಲ್ಲಿ ಫೋಕ್ಸ್‌ವ್ಯಾಗನ್ ಲೋಗೋವನ್ನು ಇರಿಸಲಾಗಿದೆ.
MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಮುಂಭಾಗದಲ್ಲಿರುವಂತೆಯೇ ಹಿಂಭಾಗದಲ್ಲಿ ಕೂಡ ಸ್ಕಿಡ್ ಪ್ಲೇಟ್ ಮತ್ತು ಅದರ ಮೇಲೆ ಕ್ರೋಮ್ ಅಲಂಕರಿಸುವ ಬಂಪರ್ ಹೊಂದಿದೆ. ಇನ್ನು ಈ ಎಸ್‍ಯುವಿಯ ಇಂಟಿರಿಯರ್ ನಲ್ಲಿ ಈ ವಿಭಾಗದ ಕಾರುಗಳಲ್ಲಿ ಸಾಮಾನ್ಯವಾಗಿ ಕಂಡುಬರುವ ಆಧುನಿಕ ಫಿಚರ್ ಗಳೊಂದಿಗೆ ಪ್ರೀಮಿಯಂ ಕಾಣುವ ಕ್ಯಾಬಿನ್ ಪಡೆಯಲಿದೆ.

ಇದರಲ್ಲಿ ಫುಲ್ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ಎಲೆಕ್ಟ್ರಿಕ್ ಸನ್‌ರೂಫ್, ಮಲ್ಟಿ ಫಂಕ್ಷನ್ ಸ್ಟೀಯರಿಂಗ್ ವ್ಹೀಲ್, ಆಟೋಮ್ಯಾಟಿಕ್ ಕ್ಲೈಮೆಂಟ್ ಕಂಟ್ರೋಲ್ ಮತ್ತು ಇತರ ಫೀಚರ್ ಗಳನ್ನು ಒಳಗೊಂಡಿರುತ್ತದೆ.

ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿ ಎಂಕ್ಯೂಬಿ ಎಒ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ ಮತ್ತು ಈ ಪ್ಲಾಟ್‌ಫಾರ್ಮ್ ಪಡೆದ ಭಾರತದ ಮೊದಲ ವಾಹನ ಇದಾಗಿದೆ. ಫೋಕ್ಸ್‌ವ್ಯಾಗನ್ ಟೈಗನ್ ಮಾದರಿಯು ದೇಶಿಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೋಸ್ ಕಾಂಪ್ಯಾಕ್ಟ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.