Just In
- just now Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
- 25 min ago ಬೈಕಿನಂತೆ ಮೈಲೇಜ್, ಹಿಂದೆಗಿಂತಲೂ ಬಲಿಷ್ಠವಾಗಿ ಸ್ವಿಫ್ಟ್ ಅಖಾಡಕ್ಕೆ: ಖರೀದಿಸಲು ಕ್ಯೂ ನಿಲ್ಲಲು ರೆಡಿಯಾಗಿರಿ!
- 1 hr ago Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- 2 hrs ago ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
Don't Miss!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೊಸ Volkswagen Taigun ಕಾರಿನ ಫೀಚರ್ಸ್, ಬೆಲೆ, ಬುಕ್ಕಿಂಗ್, ವಾರಂಟಿ ಮಾಹಿತಿ..
ಫೋಕ್ಸ್ವ್ಯಾಗನ್ ಇಂಡಿಯಾ(Volkswagen India) ಕಂಪನಿಯು ಸಹ ತನ್ನ ಸಹಭಾಗಿತ್ವ ಸಂಸ್ಥೆಯಾದ ಸ್ಕೋಡಾ ಆಟೋ ಕಂಪನಿ ಜೊತೆಗೂಡಿ ಹೊಸ ಎಂಕ್ಯೂಬಿ-ಎ0-ಇನ್(MQB-AO-IN) ಪ್ಲ್ಯಾಟ್ಫಾರ್ಮ್ ಅಡಿಯಲ್ಲಿ ಟೈಗುನ್(Taigun) ಪ್ರೀಮಿಯಂ ಕಂಪ್ಯಾಕ್ಟ್ ಎಸ್ಯುವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿದೆ.
ಟೈಗುನ್ ಹೊಸ ಕಾರು ಗ್ರಾಹಕರ ಬೇಡಿಕೆ ಅನುಸಾರವಾಗಿ ಡೈನಾಮಿಕ್ ಲೈನ್(ಕಂಫರ್ಟ್ ಲೈನ್, ಹೈ ಲೈನ್ ಮತ್ತು ಟಾಪ್ ಲೈನ್) ಮತ್ತು ಜಿಟಿ ಲೈನ್(ಜಿಟಿ ಮತ್ತು ಜಿಟಿ ಪ್ಲಸ್) ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ವಿವಿಧ ವೆರಿಯೆಂಟ್ಗಳಲ್ಲಿರುವ ತಾಂತ್ರಿಕ ಸೌಲಭ್ಯಕ್ಕೆ ಅನುಗುಣವಾಗಿ ಹೊಸ ಕಾರು ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ.10.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.50 ಲಕ್ಷ ಬೆಲೆ ಹೊಂದಿದೆ.
ದೇಶಿಯ ಮಾರುಕಟ್ಟೆಯಲ್ಲಿನ ಕಂಪ್ಯಾಕ್ಟ್ ಎಸ್ಯುವಿ ವಿಭಾಗದಲ್ಲಿ ಫೋಕ್ಸ್ವ್ಯಾಗನ್ ಕಂಪನಿಯು ಮೊದಲ ಬಾರಿಗೆ ಎಂಟ್ರಿ ನೀಡುತ್ತಿರುವುದು ಮತ್ತೊಂದು ವಿಶೇಷವಾಗಿದ್ದು, ಹೊಸ ಟೈಗುನ್ ಕಾರನ್ನು ಕಂಪನಿಯು ಸ್ಥಳೀಯವಾಗಿ ಉತ್ಪಾದನೆಗೊಂಡಿರುವ ಶೇ.95 ರಷ್ಟು ಬಿಡಿಭಾಗಗಳೊಂದಿಗೆ ಅಭಿವೃದ್ದಿಗೊಳಿಸಿದೆ.
ಟೈಗುನ್ ಕಾರು ಮಾದರಿಗಾಗಿ ಇದುವರೆಗೆ ಸುಮಾರು 12,221 ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದು, ಕಾರು ಬಿಡುಗಡೆಗೆ ಮುನ್ನ ಬುಕ್ಕಿಂಗ್ ದಾಖಲಿಸಿದ ಗ್ರಾಹಕರಿಗೆ ಕಂಪನಿಯು ರೂ.5 ಸಾವಿರ ಗಿಫ್ಟ್ ವೋಚರ್ ಪ್ರಕಟಿಸಿದೆ.
ಹೊಸ ಟೈಗುನ್ ಕಾರು ಸಹಭಾಗೀತ್ವ ಸಂಸ್ಥೆಯಾದ ಸ್ಕೋಡಾ ಹೊಸ ಕುಶಾಕ್ ಕಾರು ಮಾದರಿಯಲ್ಲಿರುವಂತೆ ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಡೈನಾಮಿಕ್ ಮಾದರಿಗಳಲ್ಲಿ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಿದ್ದಲ್ಲಿ ಟಾಪ್ ಎಂಡ್ ಮಾದರಿಯಾದ ಜಿಟಿ ಲೈನ್ನಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದೆ.
ಹೊಸ ಕಾರಿನಲ್ಲಿರುವ ಡೈನಾಮಿಕ್ ಲೈನ್ ಮಾದರಿಗಳು 1.0-ಲೀಟರ್ ಪೆಟ್ರೋಲ್ ಎಂಜಿನ್ನೊಂದಿಗೆ ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 15.90 ಲಕ್ಷ ಬೆಲೆ ಹೊಂದಿದೆ.
ಹಾಗೆಯೇ ಪರ್ಫಾಮೆನ್ಸ್ ಜೊತೆಗೆ ಹೆಚ್ಚುವರಿ ಪ್ರೀಮಿಯಂ ಫೀಚರ್ಸ್ ಹೊಂದಿರುವ ಜಿಟಿ ಲೈನ್ ಮಾದರಿಯು ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.49 ಲಕ್ಷ ಬೆಲೆ ನಿಗದಿಪಡಿಸಲಾಗಿದೆ.
ಟೈಗುನ್ ಆರಂಭಿಕ ವೆರಿಯೆಂಟ್ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯಿದ್ದಲ್ಲಿ ಟಾಪ್ ಎಂಡ್ ವೆರಿಯೆಂಟ್ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಜಿಎಸ್ ಡ್ಯಯುಲ್ ಕ್ಲಚ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆಯಿದೆ.
1.0-ಲೀಟರ್ ಟಿಎಸ್ಐ ಪೆಟ್ರೋಲ್ ಮಾದರಿಯು 113-ಬಿಎಚ್ಪಿ, 175 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದರೆ 1.5-ಲೀಟರ್ ಪೆಟ್ರೋಲ್ ಮಾದರಿಯು 148-ಬಿಎಚ್ಪಿ, 250 ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆ ಹೊಂದಿದ್ದು, 1.0-ಲೀಟರ್ ಟಿಎಸ್ಐ ಮಾದರಿಯು ಪ್ರತಿ ಲೀಟರ್ ಪೆಟ್ರೋಲ್ಗೆ 18.47 ಕಿ.ಮೀ ಮೈಲೇಜ್ ಹಿಂದಿರುಗಿಸಿದ್ದಲ್ಲಿ 1.5-ಲೀಟರ್ ಮಾದರಿಯು ಪ್ರತಿ ಲೀಟರ್ಗೆ 17.88 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತವೆ.
ಹೊಸ ಟೈಗುನ್ ಕಾರಿನಲ್ಲಿ ಫೋಕ್ಸ್ವ್ಯಾಗನ್ ಕಂಪನಿಯು ಎಲ್ಇಡಿ ಮ್ಯಾಟ್ರಿಕ್ಸ್ ಹೆಡ್ಲ್ಯಾಂಪ್ಸ್ ಇಂಟ್ರಾಗ್ರೆಟೆಡ್ ಡಿಆರ್ಎಲ್ಎಸ್ ಜೋಡಣೆ ಹೊಂದಿದ್ದು, ಫಂಕ್ಷನಲ್ ಟರ್ನ್ ಇಂಡಿಕೇಟರ್, ಎಲ್ಇಡಿ ಲೈಟ್ ಬಾರ್, ಮುಂಭಾಗದಲ್ಲಿ ಸ್ಕಫ್ ಪ್ಲೇಟ್, 17-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವಿಂಡೋ ಹಾಗೂ ಡೋರ್ ಹ್ಯಾಂಡಲ್ ಮೇಲೆ ಕ್ರೋಮ್ ವಿನ್ಯಾಸ ಮತ್ತು ಕಾರಿನ ಸುತ್ತಲೂ ಬಾಡಿ ಕ್ಲ್ಯಾಡಿಂಗ್ ನೀಡಲಾಗಿದೆ.
ಹೊಸ ಕಾರಿನ ಒಳಭಾಗದ ವಿನ್ಯಾಸವು ಸಹ ಸಾಕಷ್ಟು ಪ್ರೀಮಿಯಂ ಫೀಚರ್ಸ್ಗಳಿಂದ ಕೂಡಿದ್ದು, ಅಡ್ವಾನ್ಸ್ ಟೆಕ್ನಿಕಲ್ ಫೀಚರ್ಸ್ಗಳಾದ 10.1-ಇಂಚಿನ ಟಚ್ ಸ್ಕ್ರೀನ್ ಇನ್ಫೋಟೆನ್ಮೆಂಟ್ ಸಿಸ್ಟಂ ಹಾಗೂ 8-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್, ಅಂಡ್ರಾಯಿಡ್ ಆಟೋ ಮತ್ತು ಕಾರ್ಪ್ಲೇಯೊಂದಿಗೆ ಕಾರ್ ಕನೆಕ್ಟ್ ಟೆಕ್ನಾಲಜಿ ಹೊಂದಿದೆ.
ಹಾಗೆಯೇ ಹೊಸ ಕಾರು ವರ್ಚುವಲ್ ಕಾಕ್ಪಿಟ್ನೊಂದಿಗೆ ಬ್ಲ್ಯಾಕ್ ಆ್ಯಂಡ್ ಗ್ರೇ ಡ್ಯುಯಲ್ ಕಲರ್ ಡ್ಯಾಶ್ಬೋರ್ಡ್ ಹೊಂದಿದ್ದು, ಮುಂಭಾಗದಲ್ಲಿ ವೆಂಟಿಲೆಟೆಡ್ ಸೀಟ್ಗಳು, ಎಲೆಕ್ಟ್ರಿಕ್ ಸನ್ರೂಫ್, ಸೆಂಟ್ರಲ್ ಆರ್ಮ್ ರೆಸ್ಟ್, ರಿಯರ್ ಎಸಿ ವೆಂಟ್ಸ್, ಕೀ ಲೆಸ್ ಎಂಟ್ರಿ, ವೈರ್ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್ ಹೊಂದಿದೆ.
ಸುರಕ್ಷತೆಗೂ ಹೊಸ ಕಾರಿನಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, ಕಾರ್ ಕನೆಕ್ಟ್ ಟೆಕ್ನಾಲಜಿ ಸೇರಿದಂತೆ ಒಟ್ಟು 40 ಸುರಕ್ಷಾ ಫೀಚರ್ಸ್ಗಳು ಟೈಗನ್ ಕಾರಿನಲ್ಲಿವೆ. 6 ಏರ್ಬ್ಯಾಗ್(ಟಾಪ್ ಎಂಡ್ ಮಾದರಿಯಲ್ಲಿ) ಎಬಿಎಸ್ ಜೊತೆ ಇಬಿಡಿ, ಮಲ್ಟಿ ಕೂಲಿಷನ್ ಬ್ರೇಕ್ಸ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೋಲ್, ರಿಯರ್ ವ್ಯೂ ಕ್ಯಾಮೆರಾ, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಕ್ರೂಸ್ ಕಂಟ್ರೊಲ್ ಮತ್ತು ಹಿಲ್ ಹೋಲ್ಡ್ ಕಂಟ್ರೋಲ್ ಸೇರಿ ಹಲವು ಸೌಲಭ್ಯಗಳಿವೆ.
ಜೊತೆಗೆ ಹೊಸ ಕಾರಿನಲ್ಲಿ ಇನ್ನು ಹೆಚ್ಚಿನ ಆಕ್ಸೆಸರಿಸ್ ಬಯಸುವ ಗ್ರಾಹಕರಿಗೆ ಕಂಪನಿಯು ಆರು ವಿನೂತನ ಆಕ್ಸೆಸರಿಸ್ ಪ್ಯಾಕೇಜ್ ಘೋಷಣೆ ಮಾಡಿದ್ದು, ಹೊಸ ಕಾರು ಖರೀದಿ ಮೇಲೆ 4 ವರ್ಷ ಸ್ಟ್ಯಾಂಡರ್ಡ್ ವಾರಂಟಿ ಜೊತೆಗೆ 4 ವರ್ಷಗಳ ರೋಡ್ ಸೈಡ್ ಅಸಿಸ್ಟಂಟ್ ಸೌಲಭ್ಯ ದೊರೆಯಲಿದೆ.
ವಾರಂಟಿ ಅವಧಿಯನ್ನು 4 ವರ್ಷಗಳಿಂದ 7 ವರ್ಷಕ್ಕೆ ವಿಸ್ತರಿಸುವ ಅವಕಾಶ ಸಹ ನೀಡಲಾಗಿದ್ದು, ಮೂರು ಸರ್ವಿಸ್ ಸೇವೆಗಳನ್ನು ಒಳಗೊಂಡಿರಲಿದೆ. ಜೊತೆಗೆ ಹೊಸ ಕಾರು ಕೂರ್ಕುಮಾ ಯೆಲ್ಲೊ, ವೈಲ್ಡ್ ಚೆರ್ರ ರೆಡ್, ಕ್ಯಾಂಡಿ ವೈಟ್, ರೆಫ್ಲೆಕ್ಸ್ ಸಿಲ್ವರ್ ಮತ್ತು ಕಾರ್ಬನ್ ಸ್ಟೀಲ್ ಗ್ರೇ ಬಣ್ಣಗಳ ಆಯ್ಕೆ ಹೊಂದಿದ್ದು, ಹೊಸ ಕಾರು ಅಕ್ಟೋಬರ್ ಮಧ್ಯಂತರದಲ್ಲಿ ಗ್ರಾಹಕರ ಕೈಸೇರಲಿದೆ.