2020ರ ಅವಧಿಗೆ ಸಂಪೂರ್ಣವಾಗಿ ಮಾರಾಟಗೊಂಡ Volkswagen Taigun ಎಸ್‌ಯುವಿ

ಹೊಸ ಫೋಕ್ಸ್‌ವ್ಯಾಗನ್ ಟೈಗುನ್(Volkswagen Taigun) ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಬಿಡುಗಡೆಯ ನಂತರ ಉತ್ತಮ ಬೇಡಿಕೆ ಪಡೆದುಕೊಳ್ಳುತ್ತಿದ್ದು, ಹೊಸ ಕಾರು ಮಾದರಿಗಾಗಿ ಕಂಪನಿಯು ಇದುವರೆಗೆ 18 ಸಾವಿರ ಯುನಿಟ್‌ಗಳಿಗೆ ಬುಕ್ಕಿಂಗ್ ಪಡೆದುಕೊಂಡಿದೆ.

2020ರ ಅವಧಿಗೆ ಸಂಪೂರ್ಣವಾಗಿ ಮಾರಾಟಗೊಂಡ Volkswagen Taigun ಎಸ್‌ಯುವಿ

ಟೈಗುನ್ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಫೋಕ್ಸ್‌ವ್ಯಾಗನ್ ಕಂಪನಿಯು ಹಲವಾರು ಹೊಸ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಗೊಳಿಸಿದ್ದು, ಹೊಸ ಕಾರಿನ ಬುಕ್ಕಿಂಗ್ ಈ ವರ್ಷದ ಕೊನೆಯ ತನಕವು ಪೂರ್ಣಗೊಂಡಿದೆ. ಕಂಪನಿಯು ಸದ್ಯ ಬುಕ್ಕಿಂಗ್ ಆಧರಿಸಿ ಹೊಸ ಕಾರಿನ ವಿತರಣೆ ಆರಂಭಿಸಿದ್ದು, ಪ್ರತಿ ತಿಂಗಳು ಕಂಪನಿಯು ಮೂರರಿಂದ ನಾಲ್ಕು ಸಾವಿರ ಯುನಿಟ್ ವಿತರಿಸುವ ಯೋಜನೆಯಲ್ಲಿದೆ.

2020ರ ಅವಧಿಗೆ ಸಂಪೂರ್ಣವಾಗಿ ಮಾರಾಟಗೊಂಡ Volkswagen Taigun ಎಸ್‌ಯುವಿ

ಹೊಸ ಟೈಗುನ್ ಕಾರು ಡೈನಾಮಿಕ್ ಲೈನ್(ಕಂಫರ್ಟ್ ಲೈನ್, ಹೈ ಲೈನ್ ಮತ್ತು ಟಾಪ್ ಲೈನ್) ಮತ್ತು ಜಿಟಿ ಲೈನ್(ಜಿಟಿ ಮತ್ತು ಜಿಟಿ ಪ್ಲಸ್) ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.10.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.50 ಲಕ್ಷ ಬೆಲೆ ಹೊಂದಿದೆ.

2020ರ ಅವಧಿಗೆ ಸಂಪೂರ್ಣವಾಗಿ ಮಾರಾಟಗೊಂಡ Volkswagen Taigun ಎಸ್‌ಯುವಿ

ಹೊಸ ಟೈಗುನ್ ಕಾರನ್ನು ಫೋಕ್ಸ್‌ವ್ಯಾಗನ್ ಕಂಪನಿಯು ಶೇ.95 ರಷ್ಟು ಸ್ಥಳೀಯವಾಗಿ ಉತ್ಪಾದನೆಗೊಂಡಿರುವ ಬಿಡಿಭಾಗಗಳೊಂದಿಗೆ ಅಭಿವೃದ್ದಿಗೊಳಿಸಿದ್ದು, ಹೊಸ ಕಾರನ್ನು ಸಹಭಾಗೀತ್ವ ಸಂಸ್ಥೆಯಾದ ಸ್ಕೋಡಾ ಜೊತೆಗೂಡಿ ಅಭಿವೃದ್ದಿಗೊಳಿಸಿದೆ.

2020ರ ಅವಧಿಗೆ ಸಂಪೂರ್ಣವಾಗಿ ಮಾರಾಟಗೊಂಡ Volkswagen Taigun ಎಸ್‌ಯುವಿ

ಹೊಸ ಕಾರು ಸ್ಕೋಡಾ ಕುಶಾಕ್ ಮಾದರಿಯಲ್ಲಿಯೇ ತಾಂತ್ರಿಕ ಸೌಲಭ್ಯಗಳು, ಎಂಜಿನ್ ಆಯ್ಕೆ ಹೊಂದಿದ್ದು, ಹೊಸ ಕಾರಿನ ಡೈನಾಮಿಕ್ ಮಾದರಿಗಳಲ್ಲಿ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಮತ್ತು ಟಾಪ್ ಎಂಡ್ ಮಾದರಿಯಾದ ಜಿಟಿ ಲೈನ್‌ನಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದೆ.

2020ರ ಅವಧಿಗೆ ಸಂಪೂರ್ಣವಾಗಿ ಮಾರಾಟಗೊಂಡ Volkswagen Taigun ಎಸ್‌ಯುವಿ

ಹೊಸ ಕಾರಿನಲ್ಲಿರುವ ಡೈನಾಮಿಕ್ ಲೈನ್ ಮಾದರಿಗಳು 1.0-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 10.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 15.90 ಲಕ್ಷ ಬೆಲೆ ಹೊಂದಿದೆ.

2020ರ ಅವಧಿಗೆ ಸಂಪೂರ್ಣವಾಗಿ ಮಾರಾಟಗೊಂಡ Volkswagen Taigun ಎಸ್‌ಯುವಿ

ಹಾಗೆಯೇ ಪರ್ಫಾಮೆನ್ಸ್ ಜೊತೆಗೆ ಹೆಚ್ಚುವರಿ ಪ್ರೀಮಿಯಂ ಫೀಚರ್ಸ್ ಹೊಂದಿರುವ ಜಿಟಿ ಲೈನ್ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 14.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.49 ಲಕ್ಷ ಬೆಲೆ ನಿಗದಿಪಡಿಸಲಾಗಿದೆ.

2020ರ ಅವಧಿಗೆ ಸಂಪೂರ್ಣವಾಗಿ ಮಾರಾಟಗೊಂಡ Volkswagen Taigun ಎಸ್‌ಯುವಿ

ಟೈಗುನ್ ಆರಂಭಿಕ ವೆರಿಯೆಂಟ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್‌ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಿದ್ದಲ್ಲಿ ಟಾಪ್ ಎಂಡ್ ವೆರಿಯೆಂಟ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಜಿಎಸ್ ಡ್ಯಯುಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಿದೆ.

2020ರ ಅವಧಿಗೆ ಸಂಪೂರ್ಣವಾಗಿ ಮಾರಾಟಗೊಂಡ Volkswagen Taigun ಎಸ್‌ಯುವಿ

1.0-ಲೀಟರ್ ಟಿಎಸ್ಐ ಪೆಟ್ರೋಲ್ ಮಾದರಿಯು 113-ಬಿಎಚ್‌ಪಿ, 175 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದರೆ 1.5-ಲೀಟರ್ ಪೆಟ್ರೋಲ್ ಮಾದರಿಯು 148-ಬಿಎಚ್‌ಪಿ, 250 ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆ ಹೊಂದಿದ್ದು, 1.0-ಲೀಟರ್ ಟಿಎಸ್ಐ ಮಾದರಿಯು ಪ್ರತಿ ಲೀಟರ್ ಪೆಟ್ರೋಲ್‌ಗೆ 18.47 ಕಿ.ಮೀ ಮೈಲೇಜ್ ಹಿಂದಿರುಗಿಸಿದ್ದಲ್ಲಿ 1.5-ಲೀಟರ್ ಮಾದರಿಯು ಪ್ರತಿ ಲೀಟರ್‌ಗೆ 17.88 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತವೆ.

2020ರ ಅವಧಿಗೆ ಸಂಪೂರ್ಣವಾಗಿ ಮಾರಾಟಗೊಂಡ Volkswagen Taigun ಎಸ್‌ಯುವಿ

ಹೊಸ ಟೈಗುನ್ ಕಾರಿನಲ್ಲಿ ಫೋಕ್ಸ್‌ವ್ಯಾಗನ್ ಕಂಪನಿಯು ಎಲ್‍ಇಡಿ ಮ್ಯಾಟ್ರಿಕ್ಸ್ ಹೆಡ್‌ಲ್ಯಾಂಪ್ಸ್ ಇಂಟ್ರಾಗ್ರೆಟೆಡ್ ಡಿಆರ್‌ಎಲ್ಎಸ್ ಜೋಡಣೆ ಹೊಂದಿದ್ದು, ಫಂಕ್ಷನಲ್ ಟರ್ನ್ ಇಂಡಿಕೇಟರ್, ಎಲ್‍ಇಡಿ ಲೈಟ್ ಬಾರ್‌, ಮುಂಭಾಗದಲ್ಲಿ ಸ್ಕಫ್ ಪ್ಲೇಟ್, 17-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವಿಂಡೋ ಹಾಗೂ ಡೋರ್ ಹ್ಯಾಂಡಲ್ ಮೇಲೆ ಕ್ರೋಮ್ ವಿನ್ಯಾಸ ಮತ್ತು ಕಾರಿನ ಸುತ್ತಲೂ ಬಾಡಿ ಕ್ಲ್ಯಾಡಿಂಗ್ ನೀಡಲಾಗಿದೆ.

2020ರ ಅವಧಿಗೆ ಸಂಪೂರ್ಣವಾಗಿ ಮಾರಾಟಗೊಂಡ Volkswagen Taigun ಎಸ್‌ಯುವಿ

ಹೊಸ ಕಾರಿನ ಒಳಭಾಗದ ವಿನ್ಯಾಸವು ಸಹ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳಿಂದ ಕೂಡಿದ್ದು, ಅಡ್ವಾನ್ಸ್ ಟೆಕ್ನಿಕಲ್ ಫೀಚರ್ಸ್‌ಗಳಾದ 10.1-ಇಂಚಿನ ಟಚ್ ಸ್ಕ್ರೀನ್ ಇನ್ಫೋಟೆನ್‍‍ಮೆಂಟ್ ಸಿಸ್ಟಂ ಹಾಗೂ 8-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌‌, ಅಂಡ್ರಾಯಿಡ್ ಆಟೋ ಮತ್ತು ಕಾರ್‌ಪ್ಲೇಯೊಂದಿಗೆ ಕಾರ್ ಕನೆಕ್ಟ್ ಟೆಕ್ನಾಲಜಿ ಹೊಂದಿದೆ.

2020ರ ಅವಧಿಗೆ ಸಂಪೂರ್ಣವಾಗಿ ಮಾರಾಟಗೊಂಡ Volkswagen Taigun ಎಸ್‌ಯುವಿ

ಹಾಗೆಯೇ ಹೊಸ ಕಾರು ವರ್ಚುವಲ್ ಕಾಕ್‌ಪಿಟ್‌ನೊಂದಿಗೆ ಬ್ಲ್ಯಾಕ್ ಆ್ಯಂಡ್ ಗ್ರೇ ಡ್ಯುಯಲ್ ಕಲರ್ ಡ್ಯಾಶ್‌ಬೋರ್ಡ್ ಹೊಂದಿದ್ದು, ಮುಂಭಾಗದಲ್ಲಿ ವೆಂಟಿಲೆಟೆಡ್ ಸೀಟ್‌ಗಳು, ಎಲೆಕ್ಟ್ರಿಕ್ ಸನ್‌ರೂಫ್, ಸೆಂಟ್ರಲ್ ಆರ್ಮ್ ರೆಸ್ಟ್, ರಿಯರ್ ಎಸಿ ವೆಂಟ್ಸ್, ಕೀ ಲೆಸ್ ಎಂಟ್ರಿ, ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್ ಹೊಂದಿದೆ.

2020ರ ಅವಧಿಗೆ ಸಂಪೂರ್ಣವಾಗಿ ಮಾರಾಟಗೊಂಡ Volkswagen Taigun ಎಸ್‌ಯುವಿ

ಸುರಕ್ಷತೆಗೂ ಹೊಸ ಕಾರಿನಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, ಕಾರ್ ಕನೆಕ್ಟ್ ಟೆಕ್ನಾಲಜಿ ಸೇರಿದಂತೆ ಒಟ್ಟು 40 ಸುರಕ್ಷಾ ಫೀಚರ್ಸ್‌ಗಳು ಟೈಗನ್ ಕಾರಿನಲ್ಲಿವೆ. 6 ಏರ್‌ಬ್ಯಾಗ್(ಟಾಪ್ ಎಂಡ್ ಮಾದರಿಯಲ್ಲಿ) ಎಬಿಎಸ್ ಜೊತೆ ಇಬಿಡಿ, ಮಲ್ಟಿ ಕೂಲಿಷನ್ ಬ್ರೇಕ್ಸ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೋಲ್, ರಿಯರ್ ವ್ಯೂ ಕ್ಯಾಮೆರಾ, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಕ್ರೂಸ್ ಕಂಟ್ರೊಲ್ ಮತ್ತು ಹಿಲ್ ಹೋಲ್ಡ್ ಕಂಟ್ರೋಲ್ ಸೇರಿ ಹಲವು ಸೌಲಭ್ಯಗಳಿವೆ.

2020ರ ಅವಧಿಗೆ ಸಂಪೂರ್ಣವಾಗಿ ಮಾರಾಟಗೊಂಡ Volkswagen Taigun ಎಸ್‌ಯುವಿ

ಜೊತೆಗೆ ಹೊಸ ಕಾರಿನಲ್ಲಿ ಇನ್ನು ಹೆಚ್ಚಿನ ಆಕ್ಸೆಸರಿಸ್ ಬಯಸುವ ಗ್ರಾಹಕರಿಗೆ ಕಂಪನಿಯು ಆರು ವಿನೂತನ ಆಕ್ಸೆಸರಿಸ್ ಪ್ಯಾಕೇಜ್ ಘೋಷಣೆ ಮಾಡಿದ್ದು, ಹೊಸ ಕಾರು ಖರೀದಿ ಮೇಲೆ 4 ವರ್ಷ ಸ್ಟ್ಯಾಂಡರ್ಡ್ ವಾರಂಟಿ ಜೊತೆಗೆ 4 ವರ್ಷಗಳ ರೋಡ್ ಸೈಡ್ ಅಸಿಸ್ಟಂಟ್ ಸೌಲಭ್ಯ ದೊರೆಯಲಿದೆ.

Most Read Articles

Kannada
English summary
Volkswagen taigun suv gets 18000 bookings sold out for 2021
Story first published: Thursday, October 28, 2021, 20:17 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X