ಅಗಸ್ಟ್ ತಿಂಗಳಾಂತ್ಯಕ್ಕೆ ಖರೀದಿಗೆ ಲಭ್ಯವಿರಲಿದೆ ಫೋಕ್ಸ್‌ವ್ಯಾಗನ್ ಟೈಗನ್

ಫೋಕ್ಸ್‌ವ್ಯಾಗನ್ ಇಂಡಿಯಾ ಕಂಪನಿಯು ತನ್ನ ಬಹುನೀರಿಕ್ಷಿತ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿ ಕಾರು ಮಾದರಿಯ ಉತ್ಪಾದನಾ ಮಾದರಿಯನ್ನು ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿದ್ದು, ಹೊಸ ಕಾರು ಮುಂಬರುವ ಅಗಸ್ಟ್ ತಿಂಗಳಾಂತ್ಯಕ್ಕೆ ಖರೀದಿಗೆ ಲಭ್ಯವಿದೆ.

ಅಗಸ್ಟ್ ತಿಂಗಳಾಂತ್ಯಕ್ಕೆ ಖರೀದಿಗೆ ಲಭ್ಯವಿರಲಿದೆ ಫೋಕ್ಸ್‌ವ್ಯಾಗನ್ ಟೈಗನ್

ಹೊಚ್ಚ ಹೊಸ ಟೈಗನ್ ಕಾರು ಮಾದರಿಯು ಪ್ರತಿಸ್ಪರ್ಧಿ ಮಾದರಿಗಳಿಂತಲೂ ಹಲವಾರು ಪ್ರೀಮಿಯಂ ಫೀಚರ್ಸ್‌ಗಳ ಸ್ಟ್ಯಾಂಡರ್ಡ್ ಜೋಡಣೆಯೊಂದಿಗೆ ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ಉತ್ತಮ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದ್ದು, ಸಹಭಾಗಿತ್ವ ಸಂಸ್ಥೆಯಾದ ಸ್ಕೋಡಾ ಕುಶಾಕ್ ಬಿಡುಗಡೆಯ ನಂತವಷ್ಟೇ ಹೊಸ ಟೈಗನ್ ಕಾರು ಮಾರುಕಟ್ಟೆ ಪ್ರವೇಶಿಸಲಿದೆ ಎನ್ನಲಾಗಿದೆ.

ಅಗಸ್ಟ್ ತಿಂಗಳಾಂತ್ಯಕ್ಕೆ ಖರೀದಿಗೆ ಲಭ್ಯವಿರಲಿದೆ ಫೋಕ್ಸ್‌ವ್ಯಾಗನ್ ಟೈಗನ್

ಎಂಕ್ಯೂಬಿ ಎ0 ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಉತ್ಪಾದನೆಗೊಂಡರುವ ಹೊಸ ಕಾರು ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಂ(ಎಡಿಎಎಸ್) ಸೌಲಭ್ಯವು ಕಾರಿನ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸುವ ನೀರಿಕ್ಷೆಯಿದ್ದು, ಶೀಘ್ರದಲ್ಲೇ ಹೊಸ ಕಾರಿನ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆ ಆರಂಭವಾಗಲಿದೆ.

ಅಗಸ್ಟ್ ತಿಂಗಳಾಂತ್ಯಕ್ಕೆ ಖರೀದಿಗೆ ಲಭ್ಯವಿರಲಿದೆ ಫೋಕ್ಸ್‌ವ್ಯಾಗನ್ ಟೈಗನ್

ಹೊಸ ಕಾರಿನಲ್ಲಿ ಅಡ್ವಾನ್ಸ್ ಟೆಕ್ನಿಕಲ್ ಫೀಚರ್ಸ್‌ಗಳಾದ 10-ಇಂಚಿನ ಟಚ್ ಸ್ಕ್ರೀನ್ ಇನ್ಫೋಟೆನ್‍‍ಮೆಂಟ್ ಸಿಸ್ಟಂ ಹಾಗೂ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‍‍ಗಳನ್ನು ಹೊಂದಿದ್ದು, ಬ್ಲ್ಯಾಕ್ ಆ್ಯಂಡ್ ಗ್ರೇ ಡ್ಯುಯಲ್ ಕಲರ್ ಪಡೆದುಕೊಂಡಿದೆ. ಹಾಗೆಯೇ ವೆಂಟಿಲೆಟೆಡ್ ಸೀಟ್, ಎಲೆಕ್ಟ್ರಿಕ್ ಸನ್‌ರೂಫ್, ಬಾಡಿ ಕ್ಲಾಡಿಂಗ್, ರಿಯರ್ ಎಸಿ ವೆಂಟ್ಸ್, ಕೀ ಲೆಸ್ ಎಂಟ್ರಿ, ವೈರ್‌ಲೆಸ್ ಚಾರ್ಜರ್ ಹೊಂದಿದ್ದು, ಹೊಸ ಕಾರಿನ ಒಳಭಾಗದ ವಿನ್ಯಾಸವು ಸಹ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳಿಂದ ಕೂಡಿದೆ.

ಅಗಸ್ಟ್ ತಿಂಗಳಾಂತ್ಯಕ್ಕೆ ಖರೀದಿಗೆ ಲಭ್ಯವಿರಲಿದೆ ಫೋಕ್ಸ್‌ವ್ಯಾಗನ್ ಟೈಗನ್

ಸುರಕ್ಷತೆಗೂ ಹೊಸ ಕಾರಿನಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, ಕಾರ್ ಕನೆಕ್ಟ್ ಟೆಕ್ನಾಲಜಿಯೊಂದಿಗೆ ಎಬಿಎಸ್ ಜೊತೆ ಇಬಿಡಿ, 6 ಏರ್‌ಬ್ಯಾಗ್(ಹೈಎಂಡ್ ಮಾದರಿಯಲ್ಲಿ), 2 ವೀಲ್ಹ್ ಡ್ರೈವ್ ಟೆಕ್ನಾಲಜಿ, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೋಲ್, ಕ್ರೂಸ್ ಕಂಟ್ರೊಲ್ ಮತ್ತು ಹಿಲ್ ಅಸಿಸ್ಟ್ ಸೌಲಭ್ಯಗಳಿವೆ.

ಅಗಸ್ಟ್ ತಿಂಗಳಾಂತ್ಯಕ್ಕೆ ಖರೀದಿಗೆ ಲಭ್ಯವಿರಲಿದೆ ಫೋಕ್ಸ್‌ವ್ಯಾಗನ್ ಟೈಗನ್

ಈ ಮೂಲಕ ಆಕರ್ಷಕ ಹೊರನೋಟವನ್ನು ಪಡೆದುಕೊಂಡಿರುವ ಹೊಸ ಕಾರು ರೂಫ್ ಮೌಂಟೆಡ್, ಸಿಲ್ವರ್ ರೂಫ್ ರೈಲ್ಸ್ ಸೌಲಭ್ಯಗಳನ್ನು ಹೊಂದಿದ್ದು, ಸ್ಥಳೀಯವಾಗಿ ಶೇ.95 ರಷ್ಟು ಬಿಡಿಭಾಗಗಳನ್ನು ಪಡೆದುಕೊಂಡಿರುವ ಟೈಗನ್ ಕಾರು ಮಾದರಿಯು ಬೆಲೆಯಲ್ಲಿ ಪ್ರತಿಸ್ಪರ್ಧಿ ಮಾದರಿಗಳಿಗೆ ಉತ್ತಮ ಪೈಪೋಟಿ ನೀಡಲಿದೆ.

MOST READ: ಲಾಕ್‌ಡೌನ್ ಹಿನ್ನಲೆ ವಾಹನ ದಾಖಲೆಗಳ ಮಾನ್ಯತಾ ಅವಧಿ ಕುರಿತು ಸಾರಿಗೆ ಇಲಾಖೆಯಿಂದ ಹೊಸ ಆದೇಶ

ಅಗಸ್ಟ್ ತಿಂಗಳಾಂತ್ಯಕ್ಕೆ ಖರೀದಿಗೆ ಲಭ್ಯವಿರಲಿದೆ ಫೋಕ್ಸ್‌ವ್ಯಾಗನ್ ಟೈಗನ್

ಇನ್ನು ಟೈಗನ್ ಕಾರಿನಲ್ಲಿ ಎಲ್‍ಇಡಿ ಪೊಜೆಕ್ಟರ್ ಹೆಡ್‌ಲ್ಯಾಂಪ್ಸ್ ಇಂಟ್ರಾಗ್ರೆಟೆಡ್ ಡಿಆರ್‌ಎಲ್ಎಸ್ ಜೋಡಣೆ ಹೊಂದಿದ್ದು, ಫಂಕ್ಷನಲ್ ಟರ್ನ್ ಇಂಡಿಕೇಟರ್, ಎಲ್‍ಇ‍‍ಡಿ ಲೈಟ್ ಬಾರ್‌, ಮುಂಭಾಗದಲ್ಲಿ ಸ್ಕಫ್ ಪ್ಲೇಟ್, 17-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವಿಂಡೋ ಮತ್ತು ಡೋರ್ ಹ್ಯಾಂಡಲ್ ಮೇಲೆ ಕ್ರೋಮ್ ವಿನ್ಯಾಸ ಪಡೆದುಕೊಂಡಿದೆ.

ಅಗಸ್ಟ್ ತಿಂಗಳಾಂತ್ಯಕ್ಕೆ ಖರೀದಿಗೆ ಲಭ್ಯವಿರಲಿದೆ ಫೋಕ್ಸ್‌ವ್ಯಾಗನ್ ಟೈಗನ್

ಎಂಜಿನ್ ಮತ್ತು ಪರ್ಫಾಮೆನ್ಸ್

ಹೊಸ ಕಾರಿನಲ್ಲಿ ಪೊಲೊ ಹ್ಯಾಚ್‌ಬ್ಯಾಕ್‌ನಲ್ಲಿ ಬಳಕೆ ಮಾಡಲಾಗಿರುವ 108-ಬಿಎಚ್‌ಪಿ ಸಾಮರ್ಥ್ಯದ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಮತ್ತು 148-ಬಿಎಚ್‌ಪಿ ಸಾಮರ್ಥ್ಯದ 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಅನ್ನು ಟೈಗನ್‌ನಲ್ಲಿ ಜೋಡಿಸಲಾಗಿದೆ.

MOST READ: ಸೆಕೆಂಡ್ ಹ್ಯಾಂಡ್ ಎಲೆಕ್ಟ್ರಿಕ್ ವಾಹನ ಖರೀದಿಸುವ ಮುನ್ನ ತಿಳಿದಿರಬೇಕಾದ ಪ್ರಮುಖ ಅಂಶಗಳಿವು

ಅಗಸ್ಟ್ ತಿಂಗಳಾಂತ್ಯಕ್ಕೆ ಖರೀದಿಗೆ ಲಭ್ಯವಿರಲಿದೆ ಫೋಕ್ಸ್‌ವ್ಯಾಗನ್ ಟೈಗನ್

ಹೊಸ ಕಾರಿನ ಬೆಲೆಯು ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 10 ಲಕ್ಷದಿಂದ ರೂ .16 ಲಕ್ಷ ಬೆಲೆ ಅಂತರದಲ್ಲಿ ಮಾರಾಟಬಹುದೆಂದು ನೀರಿಕ್ಷಿಸಲಾಗಿದ್ದು, ಕಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಫೋಕ್ಸ್‌ವ್ಯಾಗನ್ ಮೊದಲ ಬಾರಿಗೆ ಎಂಟ್ರಿ ನೀಡುತ್ತಿರುವುದು ವಿಶೇಷವಾಗಿದೆ.

More from DriveSpark

Article Published On: Friday, May 28, 2021, 19:20 [IST]
English summary
Volkswagen Taigun India Launch Timeline Confirmed. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+