ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಗೊಂಡ ಪ್ರೀಮಿಯಂ ಫೀಚರ್ಸ್ ಹೊಂದಿರುವ Volkswagen Taigun ಎಸ್‌ಯುವಿ

ಫೋಕ್ಸ್‌ವ್ಯಾಗನ್ ಇಂಡಿಯಾ(Volkswagen India) ಕಂಪನಿಯು ತನ್ನ ಹೊಚ್ಚ ಹೊಸ ಟೈಗುನ್(Taigun) ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.10.49 ಲಕ್ಷ ಬೆಲೆ ಹೊಂದಿದೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಗೊಂಡ ಪ್ರೀಮಿಯಂ ಫೀಚರ್ಸ್ ಹೊಂದಿರುವ Volkswagen Taigun ಎಸ್‌ಯುವಿ

ಹೊಸ ಟೈಗುನ್ ಪ್ರೀಮಿಯಂ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಫೋಕ್ಸ್‌ವ್ಯಾಗನ್ ಕಂಪನಿಯು ಸಹ ತನ್ನ ಸಹಭಾಗಿತ್ವ ಸಂಸ್ಥೆಯಾದ ಸ್ಕೋಡಾ ಆಟೋ ಕಂಪನಿ ಜೊತೆಗೂಡಿ ಹೊಸ ಎಂಕ್ಯೂಬಿ-ಎ0-ಇನ್(MQB-AO-IN) ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ದಿಗೊಳಿಸಿ ಬಿಡುಗಡೆ ಮಾಡಿದ್ದು, ಹೊಸ ಟೈಗುನ್ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲೇ ಅತಿ ಹೆಚ್ಚು ಪ್ರೀಮಿಯಂ ಫೀಚರ್ಸ್ ಪಡೆದುಕೊಂಡಿದೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಗೊಂಡ ಪ್ರೀಮಿಯಂ ಫೀಚರ್ಸ್ ಹೊಂದಿರುವ Volkswagen Taigun ಎಸ್‌ಯುವಿ

ಟೈಗುನ್ ಕಾರು ಗ್ರಾಹಕರ ಬೇಡಿಕೆ ಅನುಸಾರವಾಗಿ ಡೈನಾಮಿಕ್ ಲೈನ್(ಹೈ ಲೈನ್ ಮತ್ತು ಟಾಪ್ ಲೈನ್) ಮತ್ತು ಜಿಟಿ ಲೈನ್(ಜಿಟಿ ಮತ್ತು ಜಿಟಿ ಪ್ಲಸ್) ಆವೃತ್ತಿಗಳಲ್ಲಿ ಖರೀದಿಗೆ ಲಭ್ಯವಿರಲಿದ್ದು, ವಿವಿಧ ವೆರಿಯೆಂಟ್‌ಗಳಲ್ಲಿರುವ ತಾಂತ್ರಿಕ ಸೌಲಭ್ಯಕ್ಕೆ ಅನುಗುಣವಾಗಿ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.10.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 17.50 ಲಕ್ಷ ಬೆಲೆ ಹೊಂದಿದೆ.

ಟೈಗುನ್ ವೆರಿಯೆಂಟ್ ಬೆಲೆ
ಕಂಫರ್ಟ್‌ಲೈನ್ ಎಂಟಿ ರೂ. 10,49,900
ಹೈಲೈನ್ ಎಂಟಿ ರೂ. 12,79,900
ಹೈಲೈನ್ ಎಟಿ ರೂ. 14,09,900
ಟಾಪ್‌ಲೈನ್ ಎಂಟಿ ರೂ. 14,56,900
ಟಾಪ್‌ಲೈನ್ ಎಟಿ ರೂ. 15,90,900
ಜಿಟಿ ಎಂಟಿ ರೂ. 14,99,900
ಜಿಟಿ ಪ್ಲಸ್ ಡಿಎಸ್‌ಜಿ ರೂ. 17,49,900
ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಗೊಂಡ ಪ್ರೀಮಿಯಂ ಫೀಚರ್ಸ್ ಹೊಂದಿರುವ Volkswagen Taigun ಎಸ್‌ಯುವಿ

ಹೊಸ ಟೈಗುನ್ ಕಾರಿನಲ್ಲಿ ಫೋಕ್ಸ್‌ವ್ಯಾಗನ್ ಕಂಪನಿಯು ಎಲ್‍ಇಡಿ ಮ್ಯಾಟ್ರಿಕ್ಸ್ ಹೆಡ್‌ಲ್ಯಾಂಪ್ಸ್ ಇಂಟ್ರಾಗ್ರೆಟೆಡ್ ಡಿಆರ್‌ಎಲ್ಎಸ್ ಜೋಡಣೆ ಹೊಂದಿದ್ದು, ಫಂಕ್ಷನಲ್ ಟರ್ನ್ ಇಂಡಿಕೇಟರ್, ಎಲ್‍ಇಡಿ ಲೈಟ್ ಬಾರ್‌, ಮುಂಭಾಗದಲ್ಲಿ ಸ್ಕಫ್ ಪ್ಲೇಟ್, 17-ಇಂಚಿನ ಡ್ಯುಯಲ್ ಟೋನ್ ಅಲಾಯ್ ವೀಲ್ಹ್, ವಿಂಡೋ ಹಾಗೂ ಡೋರ್ ಹ್ಯಾಂಡಲ್ ಮೇಲೆ ಕ್ರೋಮ್ ವಿನ್ಯಾಸ ಮತ್ತು ಕಾರಿನ ಸುತ್ತಲೂ ಬಾಡಿ ಕ್ಲ್ಯಾಡಿಂಗ್ ನೀಡಲಾಗಿದೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಗೊಂಡ ಪ್ರೀಮಿಯಂ ಫೀಚರ್ಸ್ ಹೊಂದಿರುವ Volkswagen Taigun ಎಸ್‌ಯುವಿ

ಹೊಸ ಕಾರಿನ ಒಳಭಾಗದ ವಿನ್ಯಾಸವು ಸಹ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳಿಂದ ಕೂಡಿದ್ದು, ಅಡ್ವಾನ್ಸ್ ಟೆಕ್ನಿಕಲ್ ಫೀಚರ್ಸ್‌ಗಳಾದ 10.1-ಇಂಚಿನ ಟಚ್ ಸ್ಕ್ರೀನ್ ಇನ್ಫೋಟೆನ್‍‍ಮೆಂಟ್ ಸಿಸ್ಟಂ ಹಾಗೂ 8-ಇಂಚಿನ ಡಿಜಿಟಲ್ ಇನ್ಸ್ ಟ್ರೂಮೆಂಟ್ ಕ್ಲಸ್ಟರ್‌‌, ಅಂಡ್ರಾಯಿಡ್ ಆಟೋ ಮತ್ತು ಕಾರ್‌ಪ್ಲೇಯೊಂದಿಗೆ ಕಾರ್ ಕನೆಕ್ಟ್ ಟೆಕ್ನಾಲಜಿ ಹೊಂದಿದೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಗೊಂಡ ಪ್ರೀಮಿಯಂ ಫೀಚರ್ಸ್ ಹೊಂದಿರುವ Volkswagen Taigun ಎಸ್‌ಯುವಿ

ಹಾಗೆಯೇ ಹೊಸ ಕಾರು ವರ್ಚುವಲ್ ಕಾಕ್‌ಪಿಟ್‌ನೊಂದಿಗೆ ಬ್ಲ್ಯಾಕ್ ಆ್ಯಂಡ್ ಗ್ರೇ ಡ್ಯುಯಲ್ ಕಲರ್ ಡ್ಯಾಶ್‌ಬೋರ್ಡ್ ಹೊಂದಿದ್ದು, ಮುಂಭಾಗದಲ್ಲಿ ವೆಂಟಿಲೆಟೆಡ್ ಸೀಟ್‌ಗಳು, ಎಲೆಕ್ಟ್ರಿಕ್ ಸನ್‌ರೂಫ್, ಸೆಂಟ್ರಲ್ ಆರ್ಮ್ ರೆಸ್ಟ್, ರಿಯರ್ ಎಸಿ ವೆಂಟ್ಸ್, ಕೀ ಲೆಸ್ ಎಂಟ್ರಿ, ವೈರ್‌ಲೆಸ್ ಸ್ಮಾರ್ಟ್ ಫೋನ್ ಚಾರ್ಜರ್ ಹೊಂದಿದೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಗೊಂಡ ಪ್ರೀಮಿಯಂ ಫೀಚರ್ಸ್ ಹೊಂದಿರುವ Volkswagen Taigun ಎಸ್‌ಯುವಿ

ಸುರಕ್ಷತೆಗೂ ಹೊಸ ಕಾರಿನಲ್ಲಿ ಹೆಚ್ಚಿನ ಒತ್ತು ನೀಡಲಾಗಿದ್ದು, ಕಾರ್ ಕನೆಕ್ಟ್ ಟೆಕ್ನಾಲಜಿ ಸೇರಿದಂತೆ ಒಟ್ಟು 40 ಸುರಕ್ಷಾ ಫೀಚರ್ಸ್‌ಗಳು ಟೈಗನ್ ಕಾರಿನಲ್ಲಿವೆ. 6 ಏರ್‌ಬ್ಯಾಗ್(ಟಾಪ್ ಎಂಡ್ ಮಾದರಿಯಲ್ಲಿ) ಎಬಿಎಸ್ ಜೊತೆ ಇಬಿಡಿ, ಮಲ್ಟಿ ಕೂಲಿಷನ್ ಬ್ರೇಕ್ಸ್, ಐಸೋಫಿಕ್ಸ್ ಚೈಲ್ಡ್ ಸೀಟ್ ಮೌಂಟ್, ತ್ರಿ ಪಾಯಿಂಟ್ ಸೀಟ್ ಬೆಲ್ಟ್, ತ್ರಿ ಜೋನ್ ಕ್ಲೈಮೆಟ್ ಕಂಟ್ರೋಲ್, ರಿಯರ್ ವ್ಯೂ ಕ್ಯಾಮೆರಾ, ಟೈರ್ ಪ್ರೆಷರ್ ಮಾನಿಟರಿಂಗ್ ಸಿಸ್ಟಂ, ಕ್ರೂಸ್ ಕಂಟ್ರೊಲ್ ಮತ್ತು ಹಿಲ್ ಹೋಲ್ಡ್ ಕಂಟ್ರೋಲ್ ಸೇರಿ ಹಲವು ಸೌಲಭ್ಯಗಳಿವೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಗೊಂಡ ಪ್ರೀಮಿಯಂ ಫೀಚರ್ಸ್ ಹೊಂದಿರುವ Volkswagen Taigun ಎಸ್‌ಯುವಿ

ಎಂಜಿನ್ ಮತ್ತು ಪರ್ಫಾಮೆನ್ಸ್

ಹೊಸ ಟೈಗುನ್ ಕಾರು ಸಹಭಾಗೀತ್ವ ಸಂಸ್ಥೆಯಾದ ಸ್ಕೋಡಾ ಕುಶಾಕ್ ಮಾದರಿಯಲ್ಲಿರುವಂತೆ ಎರಡು ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿದ್ದು, ಆರಂಭಿಕ ಮಾದರಿಗಳಲ್ಲಿ ಪೊಲೊ ಹ್ಯಾಚ್‌ಬ್ಯಾಕ್‌ ಟರ್ಬೊದಲ್ಲಿ ಬಳಕೆ ಮಾಡಲಾಗಿರುವ 113-ಬಿಎಚ್‌ಪಿ ಸಾಮರ್ಥ್ಯದ 1.0-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಜೋಡಣೆ ಮಾಡಲಾಗಿದೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಗೊಂಡ ಪ್ರೀಮಿಯಂ ಫೀಚರ್ಸ್ ಹೊಂದಿರುವ Volkswagen Taigun ಎಸ್‌ಯುವಿ

ಟಾಪ್ ಎಂಡ್ ಮಾದರಿಗಳಲ್ಲಿ 1.5-ಲೀಟರ್ ಟಿಎಸ್ಐ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಾಗಿದ್ದು, ಆರಂಭಿಕ ವೆರಿಯೆಂಟ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್‌ ಕನ್ವರ್ಟರ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಿದ್ದಲ್ಲಿ ಟಾಪ್ ಎಂಡ್ ವೆರಿಯೆಂಟ್‌ಗಳಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 7-ಸ್ಪೀಡ್ ಡಿಜಿಎಸ್ ಡ್ಯಯುಲ್ ಕ್ಲಚ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯಿದೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಗೊಂಡ ಪ್ರೀಮಿಯಂ ಫೀಚರ್ಸ್ ಹೊಂದಿರುವ Volkswagen Taigun ಎಸ್‌ಯುವಿ

1.0-ಲೀಟರ್ ಟಿಎಸ್ಐ ಪೆಟ್ರೋಲ್ ಮಾದರಿಯು 113-ಬಿಎಚ್‌ಪಿ, 175 ಎನ್ಎಂ ಟಾರ್ಕ್ ಉತ್ಪಾದನೆ ಮಾಡಿದರೆ 1.5-ಲೀಟರ್ ಪೆಟ್ರೋಲ್ ಮಾದರಿಯು 148-ಬಿಎಚ್‌ಪಿ, 250 ಎನ್ಎಂ ಟಾರ್ಕ್ ಉತ್ಪಾದನಾ ವೈಶಿಷ್ಟ್ಯತೆ ಹೊಂದಿದ್ದು, ಉತ್ತಮ ಇಂಧನ ದಕ್ಷತೆಯೊಂದಿಗೆ ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯುತ್ತವೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಗೊಂಡ ಪ್ರೀಮಿಯಂ ಫೀಚರ್ಸ್ ಹೊಂದಿರುವ Volkswagen Taigun ಎಸ್‌ಯುವಿ

ಹೊಸ ಕಾರು ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಪ್ರಮುಖ ಐದು ಬಣ್ಣಳ ಆಯ್ಕೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಗ್ರಾಹಕರು ಹೊಸ ಕಾರಿನಲ್ಲಿ ಕೂರ್ಕುಮಾ ಯೆಲ್ಲೊ, ವೈಲ್ಡ್ ಚೆರ್ರ ರೆಡ್, ಕ್ಯಾಂಡಿ ವೈಟ್, ರೆಫ್ಲೆಕ್ಸ್ ಸಿಲ್ವರ್ ಮತ್ತು ಕಾರ್ಬನ್ ಸ್ಟೀಲ್ ಗ್ರೇ ಬಣ್ಣಗಳ ಆಯ್ಕೆ ಹೊಂದಿದೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಗೊಂಡ ಪ್ರೀಮಿಯಂ ಫೀಚರ್ಸ್ ಹೊಂದಿರುವ Volkswagen Taigun ಎಸ್‌ಯುವಿ

ಇನ್ನು ಹೊಸ ಕಾರು ಖರೀದಿಗೆ ಫೋಕ್ಸ್‌ವ್ಯಾಗನ್ ಕಂಪನಿಯು ಕಳೆದ ತಿಂಗಳ ಮಧ್ಯಂತರದಲ್ಲಿ ಬುಕ್ಕಿಂಗ್ ಆರಂಭಿಸಿತ್ತು. ಹೊಸ ಕಾರು ಖರೀದಿಗೆ ಇದುವರೆಗೆ ಸುಮಾರು 12 ಸಾವಿರಕ್ಕೂ ಹೆಚ್ಚು ಗ್ರಾಹಕರು ಬುಕ್ಕಿಂಗ್ ದಾಖಲಿಸಿದ್ದು, ಹೊಸ ಕಾರು ಖರೀದಿಗಾಗಿ ನಿಗದಿತ ಅವಧಿಯಲ್ಲಿ ಬುಕ್ಕಿಂಗ್ ದಾಖಲಿಸುವ ಗ್ರಾಹಕರಿಗೆ ಕಂಪನಿಯು ರೂ. 5 ಸಾವಿರ ಗಿಫ್ಟ್ ವೋಚರ್ ಪ್ರಕಟಿಸಿದೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಗೊಂಡ ಪ್ರೀಮಿಯಂ ಫೀಚರ್ಸ್ ಹೊಂದಿರುವ Volkswagen Taigun ಎಸ್‌ಯುವಿ

ಗಿಫ್ಟ್ ವೋಚರ್ ಮೂಲಕ ಆಕ್ಸೆಸರಿಸ್ ಪ್ಯಾಕೇಜ್ ಖರೀದಿಗಾಗಿ ಇಲ್ಲವೇ ವಿಸ್ತರಿತ ಸರ್ವಿಸ್ ಪ್ಯಾಕೇಜ್ ಖರೀದಿಗಾಗಿ ಬಳಕೆ ಮಾಡಬಹುದಾಗಿದ್ದು, ಹೊಸ ಕಾರಿನ ವಿತರಣೆಯು ಅಕ್ಟೋಬರ್ ಮಧ್ಯಂತರದಲ್ಲಿ ಆರಂಭವಾಗಲಿದೆ.

ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಗೊಂಡ ಪ್ರೀಮಿಯಂ ಫೀಚರ್ಸ್ ಹೊಂದಿರುವ Volkswagen Taigun ಎಸ್‌ಯುವಿ

ದೇಶಿಯ ಮಾರುಕಟ್ಟೆಯಲ್ಲಿನ ಕಂಪ್ಯಾಕ್ಟ್ ಎಸ್‍ಯುವಿ ವಿಭಾಗದಲ್ಲಿ ಫೋಕ್ಸ್‌ವ್ಯಾಗನ್ ಕಂಪನಿಯು ಮೊದಲ ಬಾರಿಗೆ ಎಂಟ್ರಿ ನೀಡುತ್ತಿರುವುದು ಮತ್ತೊಂದು ವಿಶೇಷವಾಗಿದ್ದು, ಹೊಸ ಟೈಗುನ್ ಕಾರನ್ನು ಕಂಪನಿಯು ಸ್ಥಳೀಯವಾಗಿ ಉತ್ಪಾದನೆಗೊಂಡಿರುವ ಶೇ.95 ರಷ್ಟು ಬಿಡಿಭಾಗಗಳೊಂದಿಗೆ ಅಭಿವೃದ್ದಿಗೊಳಿಸಿದೆ.

Most Read Articles

Kannada
English summary
Volkswagen taigun suv launched in india price rs 10 49 lakh details
Story first published: Thursday, September 23, 2021, 12:51 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X