ಭಾರತದಲ್ಲಿ ಐಡಿ ಸರಣಿ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಸಜ್ಜಾದ ಫೋಕ್ಸ್‌ವ್ಯಾಗನ್

ಜರ್ಮನ್ ಕಾರು ಉತ್ಪಾದನಾ ಕಂಪನಿಯಾಗಿರುವ ಫೋಕ್ಸ್‌ವ್ಯಾಗನ್ ಶೀಘ್ರದಲ್ಲೇ ತನ್ನ ಪ್ರಮುಖ ಎಲೆಕ್ಟ್ರಿಕ್ ಕಾರು ಮಾದರಿಗಳ ಮಾರಾಟವನ್ನು ವಿಶ್ವದ ಪ್ರಮುಖ ಮಾರುಕಟ್ಟೆಗಳಿಗೆ ವಿಸ್ತರಣೆ ಮಾಡುತ್ತಿದ್ದು, ಕಂಪನಿಯ ಹೊಸ ಐಡಿ ಸರಣಿಯಲ್ಲಿ ಪ್ರಮುಖ ಇವಿ ಕಾರುಗಳ ಭಾರತದಲ್ಲೂ ಬಿಡುಗಡೆಗೆ ಸಿದ್ದವಾಗಿವೆ.

ಭಾರತದಲ್ಲಿ ಐಡಿ ಸರಣಿ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಸಜ್ಜಾದ ಫೋಕ್ಸ್‌ವ್ಯಾಗನ್

ಮ್ಯಾಡುಲರ್ ಎಲೆಕ್ಟ್ರಿಕ್ ಡ್ರೈವ್ ಮ್ಯಾಟ್ರಿಕ್ಸ್ ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಸಿದ್ದಗೊಂಡಿರುವ ಫೋಕ್ಸ್‌ವ್ಯಾಗನ್ ಕಂಪನಿಯ ಹೊಸ ಇವಿ ಕಾರು ಮಾದರಿಗಳು ಈಗಾಗಲೇ ಯುರೋಪಿನ ಪ್ರಮುಖ ಮಾರುಕಟ್ಟೆಗಳಲ್ಲಿ ಮಾರಾಟ ಮಾಡುತ್ತಿದ್ದು, 2022ರ ಆರಂಭದಲ್ಲಿ ಭಾರತದಲ್ಲೂ ಹೊಸ ಕಾರುಗಳ ಮಾರಾಟವನ್ನು ಅಧಿಕೃತವಾಗಿ ಆರಂಭಿಸುವ ಸಿದ್ದತೆಯಲ್ಲಿದೆ.

ಭಾರತದಲ್ಲಿ ಐಡಿ ಸರಣಿ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಸಜ್ಜಾದ ಫೋಕ್ಸ್‌ವ್ಯಾಗನ್

ಯುರೋಪಿನ್ ಪ್ರಮುಖ ಮಾರುಕಟ್ಟೆಗಳಲ್ಲಿ ಐಡಿ ಸರಣಿಯಲ್ಲಿ ಐಡಿ.3 ಮತ್ತು ಐಡಿ.4 ಮತ್ತು ಮಧ್ಯಮ ಕ್ರಮಾಂಕದಲ್ಲಿ ಇ-ಗಾಲ್ಪ್ ಹಾಗೂ ಇ-ಅಪ್ ಎಲೆಕ್ಟ್ರಿಕ್ ಕಾರುಗಳನ್ನು ಮಾರಾಟ ಮಾಡುತ್ತಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಭಾರತದಲ್ಲಿ ಐಡಿ.4 ಮಾದರಿಯನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಭಾರತದಲ್ಲಿ ಐಡಿ ಸರಣಿ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಸಜ್ಜಾದ ಫೋಕ್ಸ್‌ವ್ಯಾಗನ್

ಸದ್ಯ ಮಾಲಿನ್ಯ ತಗ್ಗಿಸುವ ಉದ್ದೇಶದಿಂದ ವಿಶ್ವದ ಪ್ರಮುಖ ರಾಷ್ಟ್ರಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳನ್ನು ಪರಿಣಾಮಕಾರಿಯಾಗಿ ತಗ್ಗಿಸುವ ಉದ್ದೇಶದಿಂದ ಹಲವಾರು ಕಠಿಣಕ್ರಮಗಳನ್ನು ಜಾರಿಗೆ ತರುತ್ತಿದ್ದು, ಬಹುತೇಕ ಆಟೋ ಉತ್ಪಾದನಾ ಕಂಪನಿಗಳು ಸಂಪೂರ್ಣವಾಗಿ ಎಲೆಕ್ಟ್ರಿಕ್ ಮತ್ತು ಹೈಬ್ರಿಡ್ ವಾಹನ ಉತ್ಪಾದನೆಯತ್ತ ಹೆಚ್ಚು ಗಮಹರಿಸುತ್ತಿವೆ.

ಭಾರತದಲ್ಲಿ ಐಡಿ ಸರಣಿ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಸಜ್ಜಾದ ಫೋಕ್ಸ್‌ವ್ಯಾಗನ್

ಫೋಕ್ಸ್‌ವ್ಯಾಗನ್ ಕೂಡಾ ಡೀಸೆಲ್ ಎಂಜಿನ್ ಹಗರಣದಲ್ಲಿ ಸಿಲುಕಿದ ನಂತರ ಡೀಸೆಲ್ ಎಂಜಿನ್ ಕಾರುಗಳ ಮಾರಾಟವನ್ನೇ ಸ್ಥಗಿತಗೊಳಿಸಿ ಪೆಟ್ರೋಲ್ ಮಾದರಿಗಳ ಜೊತೆಗೆ ಎಲೆಕ್ಟ್ರಿಕ್ ಕಾರು ಮಾದರಿಗಳ ಮಾರಾಟ ಮಾಡುತ್ತಿದ್ದು, ಮುಂಬರುವ ದಿನಗಳಲ್ಲಿ ಪೆಟ್ರೋಲ್ ಕಾರುಗಳ ಮಾರಾಟವನ್ನು ಸಹ ಹಂತ-ಹಂತವಾಗಿ ಸ್ಥಗಿತಗೊಳಿಸಲಿರುವ ಆಟೋ ಉತ್ಪಾದನಾ ಕಂಪನಿಗಳು ಹೈಬ್ರಿಡ್ ಅಥವಾ ಸಂಪೂರ್ಣವಾಗಿ ಎಲೆಕ್ಟ್ರಿಕ್ ಮಾದರಿಗಳನ್ನು ಮಾತ್ರ ಬಿಡುಗಡೆ ಮಾಡಲಿವೆ.

ಭಾರತದಲ್ಲಿ ಐಡಿ ಸರಣಿ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಸಜ್ಜಾದ ಫೋಕ್ಸ್‌ವ್ಯಾಗನ್

ಈ ನಿಟ್ಟಿನಲ್ಲಿ ಮಹತ್ವದ ಮುನ್ನಡೆ ಸಾಧಿಸುತ್ತಿರುವ ಫೋಕ್ಸ್‌ವ್ಯಾಗನ್ ಕಂಪನಿಯು ವಿವಿಧ ಇವಿ ಕಾರು ಮಾದರಿಗಳೊಂದಿಗೆ ಜಾಗತಿಕ ಆಟೋ ಉದ್ಯಮದಲ್ಲಿ ಗಮನಸೆಳೆಯುತ್ತಿದ್ದು, ಭಾರತದಲ್ಲೂ ಉತ್ತಮ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಭಾರತದಲ್ಲಿ ಐಡಿ ಸರಣಿ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಸಜ್ಜಾದ ಫೋಕ್ಸ್‌ವ್ಯಾಗನ್

ಭಾರತದಲ್ಲಿ ಬಿಡುಗಡೆಯಾಗಲಿರುವ ಐಡಿ.4 ಎಲೆಕ್ಟ್ರಿಕ್ ಕಾರು ಮಾದರಿಯು ಹಲವು ವಿಶೇಷತೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಪ್ರತಿ ಚಾರ್ಜ್‌ಗೆ 510ಕಿ.ಮೀ ಗೂ ಅಧಿಕ ಮೈಲೇಜ್ ಹಿಂದಿರುಗಿಸುವ ವೈಶಿಷ್ಟ್ಯತೆ ಹೊಂದಿದೆ.

MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಭಾರತದಲ್ಲಿ ಐಡಿ ಸರಣಿ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಸಜ್ಜಾದ ಫೋಕ್ಸ್‌ವ್ಯಾಗನ್

ಜೊತೆಗೆ ಹೊಸ ಕಾರಿನಲ್ಲಿ ಸಾಮಾನ್ಯ ಕಾರುಗಳಂತೆ ಪರ್ಫಾಮೆನ್ಸ್‌ನಲ್ಲೂ ಗಮನಸೆಳೆಯಲಿದ್ದು, ರಿಯರ್ ವೀಲ್ಹ್ ಡ್ರೈವ್ ಸಿಸ್ಟಂ ಪಡೆದುಕೊಂಡಿರುವ ಹೊಸ ಕಾರಿನಲ್ಲಿ ಕ್ವಿಕ್ ಚಾರ್ಜ್ ಮೂಲಕ 30 ನಿಮಿಷ ಕಾಲ ಚಾರ್ಜ್ ಮಾಡಿದ್ದಲ್ಲಿ 320 ಕಿ.ಮೀ ಮೈಲೇಜ್ ಸುಲಭವಾಗಿ ಪಡೆಯಬಹುದಾಗಿದೆ.

ಭಾರತದಲ್ಲಿ ಐಡಿ ಸರಣಿ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಸಜ್ಜಾದ ಫೋಕ್ಸ್‌ವ್ಯಾಗನ್

ಆರಂಭಿಕ ಹಂತವಾಗಿ ಐಡಿ.4 ಎಲೆಕ್ಟ್ರಿಕ್ ಕಾರಿನಲ್ಲಿ ರಿಯರ್ ಡ್ರೈವ್ ಸಿಸ್ಟಂ ನೀಡಲಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಗ್ರಾಹಕರ ಬೇಡಿಕೆಗೆ ಆಧರಿಸಿ ಆಲ್ ವೀಲ್ಹ್ ಡ್ರೈವ್ ಸಿಸ್ಟಂ ಮಾದರಿಯನ್ನು ನೀಡಲಿದ್ದು, ರಿಯರ್ ಡ್ರೈವ್ ಸಿಸ್ಟಂ ಹೊಂದಿರುವ ಕಾರು ಮಾದರಿಯು 204-ಬಿಎಚ್‌ಪಿ ಮಾಡಿದ್ದಲ್ಲಿ ಆಲ್ ವೀಲ್ಹ್ ಡ್ರೈವ್ ಮಾದರಿಯು 310-ಬಿಎಚ್‌ಪಿ ಉತ್ಪಾದನೆ ಮಾಡಲಿದೆ.

MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಭಾರತದಲ್ಲಿ ಐಡಿ ಸರಣಿ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡಲು ಸಜ್ಜಾದ ಫೋಕ್ಸ್‌ವ್ಯಾಗನ್

ಹೊಸ ಕಾರು 4,592-ಎಂಎಂ ಉದ್ದ, 1,852-ಎಂಎಂ ಅಗಲ ಮತ್ತು 1,629-ಎಂಎಂ ಎತ್ತರದ ವಿನ್ಯಾಸದೊಂದಿಗೆ ಅತ್ಯುತ್ತಮ ಆಸನ ಸೌಲಭ್ಯವನ್ನು ಹೊಂದಿದ್ದು, ತಾಂತ್ರಿಕ ಅಂಶಗಳ ಧ್ವನಿ ಗ್ರಹಿಕೆಯ ಮೂಲಕ ನಿಯಂತ್ರಣ ಮಾಡಬಹುದಾದ ಸೌಲಭ್ಯಗಳ ಜೋಡಣೆಯನ್ನು ಪಡೆದುಕೊಂಡಿದೆ.

Most Read Articles

Kannada
English summary
Volkswagen To Go Electric In India Plan To Launch ID4 EV By 2022. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X