ಅನಾವರಣವಾಗಲಿದೆ ಹೊಸ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಜರ್ಮನ್ ಮೂಲದ ವಾಹನ ತಯಾರಕ ಕಂಪನಿಯಾದ ಫೋಕ್ಸ್‌ವ್ಯಾಗನ್ ತನ್ನ ಟಿ-ಕ್ರಾಸ್ ಕಾಂಪ್ಯಾಕ್ಟ್ ಎಸ್‌ಯುವಿಯನ್ನು 2019ರ ಫೆಬ್ರವರಿ ತಿಂಗಳಲ್ಲಿ ಪರಿಚಯಿಸಿತ್ತು. ಕಂಪನಿಯು ಈಗ ಜನಪ್ರಿಯ ಟಿ-ಕ್ರಾಸ್ ಕಾಂಪ್ಯಾಕ್ಟ್ ಎಸ್‌ಯುವಿಯ ಮಿಡ್-ಲೈಫ್ ಫೇಸ್‌ಲಿಫ್ಟ್ ಅನ್ನು ಸಿದ್ಧಪಡಿಸುತ್ತಿದೆ.

ಅನಾವರಣವಾಗಲಿದೆ ಹೊಸ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಈ ಹೊಸ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು 2022ರ ಮಾದರಿಯಾಗಿ ಪರಿಚಯಿಸಲಾಗುವುದು ಮತ್ತು 200 ಟಿಎಸ್‌ಐ ಮತ್ತು 250 ಟಿಎಸ್‌ಐ ಎಂಜಿನ್‌ಗಳನ್ನು ಉಳಿಸಿಕೊಳ್ಳಲಿದೆ. ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಫೇಸ್‌ಲಿಫ್ಟ್ ಹೊಸ ಲೋಗೊದೊಂದಿಗೆ ಬರಲಿದೆ ಇದನ್ನು ಬ್ರೆಜಿಲ್‌ನಲ್ಲಿ ನಿವಸ್‌ನಲ್ಲಿ ಪರಿಚಯಿಸಲಾಯಿತು. ಲೋಗೋ ಮಾತ್ರವಲ್ಲ, ನವೀಕರಿಸಿದವು ನಿವಸ್‌ನಿಂದ ಸ್ಟೀಯರಿಂಗ್ ವ್ಹೀಲ್ ಅನ್ನು ಹಂಚಿಕೊಳ್ಳುತ್ತದೆ.

ಅನಾವರಣವಾಗಲಿದೆ ಹೊಸ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಹೊಸ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ ಸ್ಟೈಲಿಂಗ್ ವಿಷಯದಲ್ಲಿ, ನವೀಕರಿಸಿದ ಟಿ-ಕ್ರಾಸ್ ಪರಿಷ್ಕೃತ ಫ್ರಂಟ್ ಗ್ರಿಲ್ ಮತ್ತು ನವೀಕರಿಸಿದ ಫ್ರಂಟ್ ಬಂಪರ್ ಅನ್ನು ಹೊಂದಿರುತ್ತದೆ. ಆದರೆ ಪ್ರಮುಖ ಬದಲಾವಣೆಗಳನ್ನು ಮಾಡಲಾಗುವುದಿಲ್ಲ.

MOST READ: 2020ರ ಡಿಸೆಂಬರ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಮಹೀಂದ್ರಾ ಎಕ್ಸ್‌ಯುವಿ300

ಅನಾವರಣವಾಗಲಿದೆ ಹೊಸ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಹೊಸ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಫೇಸ್‌ಲಿಫ್ಟ್ ಎಸ್‍ಯುವಿಯಲ್ಲಿ ಅದೇ 1.0-ಲೀಟರ್ ಮತ್ತು 1.4-ಲೀಟರ್ ಟಿಎಸ್‌ಐ ಎಂಜಿನ್‌ ಆಯ್ಕೆಗಳನ್ನು ಹೊಂದಿರುತ್ತದೆ. ಎಂಜಿನ್ ನಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗುವುದಿಲ್ಲ.

ಅನಾವರಣವಾಗಲಿದೆ ಹೊಸ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಇದರಲ್ಲಿ 1.0-ಲೀಟರ್ ಟಿಎಸ್‌ಐ ಎಂಜಿನ್‌ 116 ಬಿಹೆಚ್‌ಪಿ ಪವರ್ ಮತ್ತು 200 ಎನ್ಎಂ ಟಾರ್ಕ್ ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಟಾರ್ಕ್ ಕರ್ನಾವಾಟರ್ ಗೇರ್ ಬಾಕ್ಸ್ ಅನ್ನು ಹೊಂದಿರುತ್ತದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಅನಾವರಣವಾಗಲಿದೆ ಹೊಸ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಇನ್ನು 1.4-ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 50 ಎನ್ಎಂ ಗರಿಷ್ಠ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ ಬಾಕ್ಸ್ ಅನ್ನು ಜೋಡಿಸಲಾಗಿದೆ.

ಅನಾವರಣವಾಗಲಿದೆ ಹೊಸ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಈ ಹೊಸ ವಿಡಬ್ಲ್ಯೂ ಟಿ-ಕ್ರಾಸ್ ಬ್ರ್ಯಾಂಡ್‌ನ ಹೊಸ ಎಂಕ್ಯೂಬಿ ಎಒ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ, , ಅದು ಹೊಸ ಫೋಕ್ಸ್‌ವ್ಯಾಗನ್ ಪೊಲೊ ಮತ್ತು ವರ್ಟಸ್‌ಗೆ ಸಹ ಆಧಾರವಾಗಿದೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಟೈಗನ್ ಮತ್ತು ಸ್ಕೋಡಾ ಕುಶಾಕ್ ಸಹ ಇದೇ ಪ್ಲಾಟ್‌ಫಾರ್ಮ್ ಅನ್ನು ಆಧರಿಸಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಅನಾವರಣವಾಗಲಿದೆ ಹೊಸ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಭಾರತೀಯ ಮಾರುಕಟ್ಟೆಯಲ್ಲಿ ಫೋಕ್ಸ್‌ವ್ಯಾಗನ್ ಕಂಪನಿಯು ಹೊಸ ಟೈಗನ್ ಕಂಪ್ಯಾಕ್ಟ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಫೋಕ್ಸ್‌ವ್ಯಾಗನ್ 2.0 ಯೋಜನೆಯಡಿಯಲ್ಲಿ ಬಿಡುಗಡೆಯಾಗಲಿರುವ ಮೊದಲ ಮಾದರಿ ಟೈಗನ್ ಆಗಿರಲಿದೆ.

ಅನಾವರಣವಾಗಲಿದೆ ಹೊಸ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಫೇಸ್‌ಲಿಫ್ಟ್ ಎಸ್‍ಯುವಿ

ಫೋಕ್ಸ್‌ವ್ಯಾಗನ್ ಟೈಗನ್ ಕಾಂಪ್ಯಾಕ್ಟ್ ಎಸ್‍ಯುವಿ ಎಂಕ್ಯೂಬಿ ಎಒ ಪ್ಲಾಟ್‌ಫಾರ್ಮ್ ನಲ್ಲಿ ಸಿದ್ದವಾದ ಭಾರತದ ಮೊದಲ ವಾಹನವಾಗಲಿದೆ. ಆದರೆ ಈ ಫೋಕ್ಸ್‌ವ್ಯಾಗನ್ ಟಿ-ಕ್ರಾಸ್ ಫೇಸ್‌ಲಿಫ್ಟ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗುವುದಿಲ್ಲ.

Most Read Articles

Kannada
English summary
Volkswagen T-Cross Facelift To Be Unveiled. Read In Kannada.
Story first published: Friday, January 22, 2021, 19:11 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X